Close Menu
SK Media NewsSK Media News
    What's Hot

    ಕ್ರೀಡಾಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಎಂ.ಆರ್. ಪೂವಮ್ಮ ಅವರು ಪ್ರತಿಷ್ಠಿತ ರಾಜ್ಯಮಟ್ಟದ ‘ವಂದನಾ ಪ್ರಶಸ್ತಿ’ಗೆ ಆಯ್ಕೆ

    October 28, 2026

    ನ.3ರಿಂದ 15 : ಮಾಂಡ್ ಸೊಭಾಣ್ ಸಂಘಟನೆಯ ವತಿಯಿಂದ ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮ್ಮೇಳನ -ಸತತ 12 ದಿನ, 12 ಗಂಟೆ ಹಾಗೂ 12 ನಿಮಿಷಗಳ ನಿರಂತರ ಗಾಯನದ ಮೂಲಕ ಗಿನ್ನೆಸ್ ದಾಖಲೆಗೆ ಪ್ರಯತ್ನ

    October 28, 2026

    ಸತತ ಸೋಲುಗಳ ಹತಾಶೆಯಿಂದ ಪ್ರಧಾನಿಗಳ ತಂದೆಯವರನ್ನು ನಿಂದನೆ ಮಾಡಿರುವ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆ ಅವರ ಹಿರಿತನಕ್ಕೆ ಶೋಭೆಯಲ್ಲ: ಶಾಸಕ ಕಾಮತ್ 

    October 27, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಹಿರಿಯ ನಾಗರಿಕರ (ಸೀನಿಯರ್ ಸಿಟಿಜನ್) ಸಂಘ ಸ್ಥಾಪಿಸಲುಸರ್ಕಾರ ಚಿಂತನೆ : ಉಸ್ತುವಾರಿ ಸಚಿವ ಯು.ಟಿ.ಖಾದರ್
    ಕರಾವಳಿ

    ಹಿರಿಯ ನಾಗರಿಕರ (ಸೀನಿಯರ್ ಸಿಟಿಜನ್) ಸಂಘ ಸ್ಥಾಪಿಸಲುಸರ್ಕಾರ ಚಿಂತನೆ : ಉಸ್ತುವಾರಿ ಸಚಿವ ಯು.ಟಿ.ಖಾದರ್

    August 30, 20262 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು,ಆಗಸ್ಟ್. 30 : ಯುವಜನರನ್ನು ಬೆಸೆಯಲು ರಾಜ್ಯ ಸರ್ಕಾರ ರೂಪಿಸಿರುವ ಭಾರತ್ ಜೋಡೋ ಯುವ ಸಂಘದ ಮಾದರಿಯಲ್ಲಿ ಪ್ರತೀ ಊರಿನಲ್ಲಿ ಹಿರಿಯ ನಾಗರಿಕರನ್ನು ಒಗ್ಗೂಡಿಸಲು ಸೀನಿಯರ್ ಸಿಟಿಜನ್ ಸಂಘಟನೆ ಸ್ಥಾಪಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಲಿದೆ. ಮಂಗಳೂರು ನಗರದಲ್ಲೇ ಪ್ರಾಯೋಗಿಕವಾಗಿ ಈ ಯೋಜನೆ ಜಾರಿ ಮಾಡಲು ಪ್ರಯತ್ನಿಸಲಾಗುವುದೆಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ತಿಳಿಸಿದರು.

    ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕ, ರೋಟರಿ ಇಂಟರ್‌ನ್ಯಾಶನಲ್ ಜಿಲ್ಲೆ 3182, ದ.ಕ.ಜಿಲ್ಲಾ ಮಾಜಿ ಸೈನಿಕರ ಸಂಘ, ಮಂಥನ ಓಜಸ್ ಟ್ರಸ್ಟ್ ಮತ್ತು ದ.ಕ. ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಭಾನುವಾರ ರೆಡ್‌ಕ್ರಾಸ್ ಶತಮಾನೋತ್ಸವ ಭವನದ ಪ್ರೇರಣಾ ಸಭಾಂಗಣದಲ್ಲಿ ನಡೆದ “ಧನ್ಯತಾ” ಹಿರಿಯ ನಾಗರಿಕರ ದಿನಾಚರಣೆಯಲ್ಲಿ ಸಾಧಕರನ್ನು ಸನ್ಮಾನಿಸಿ ಅವರು ಮಾತನಾಡಿದರು.

    ನಮ್ಮ ಹಿರಿಯರ ತ್ಯಾಗ, ತಾಳ್ಮೆ, ಬದ್ಧತೆಯಿಂದಾಗಿ ಇಂದು ಉತ್ತಮ ಸಮಾಜ ನಿರ್ಮಾಣವಾಗಿದೆ. ಇದನ್ನು ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಮಹತ್ತರ ಜವಾಬ್ದಾರಿ ನಮ್ಮ ಮೇಲಿದೆ. ಹಿರಿಯರ ಅನುಭವ ಹಾಗೂ ಆದರ್ಶಗಳಿಂದ ಯುವ ಜನಾಂಗ ಪ್ರೇರಣೆ ಪಡೆಯಬೇಕು ಎಂದು ಸಚಿವರು ಹೇಳಿದರು.

    ರೋಟರಿ ಜಿಲ್ಲೆ 3181 ಗವರ್ನರ್ ಸತೀಶ್ ಬೋಳಾರ್ ಕಾರ್ಯಕ್ರಮ ಉದ್ಘಾಟಿಸಿದರು. ದ.ಕ.ಜಿಲ್ಲಾ ರೆಡ್‌ಕ್ರಾಸ್ ಸೊಸೈಟಿಯ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಮಾಜಿ ಸೈನಿಕರ ಸಂಘದ ಉಪಾಧ್ಯಕ್ಷ ಕರ್ನಲ್ ಎ.ಕೆ.ಜಯಚಂದ್ರನ್, ಮಂಥನ ಓಜಸ್ ಟ್ರಸ್ಟ್ ನ ಅಧ್ಯಕ್ಷೆ ಮಂಗಳಾ ನಂದಕುಮಾರ್,ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್., ರೋಟರಿ ಸಂಧ್ಯಾ ಸುರಕ್ಷಾ ಯೋಜನೆಯ ಚೇರ್ಮನ್ ಅನಿಲ್ ರಾವ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

    ಸಾಧಕರಿಗೆ ಸನ್ಮಾನ:

    ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಜ್ರ ರಾವ್, ಕರ್ನಲ್ ನಿಟ್ಟೆಗುತ್ತು ಶರತ್ ಭಂಡಾರಿ, ರಾಧಾಕೃಷ್ಣ, ಟಿ.ಜಿ.ಶೆಣೈ, ರಾಬರ್ಟ್ ಫ್ರಾಂಕ್ಲಿನ್ ರೇಗೊ, ಕಟ್ಟ ಭಾಸ್ಕರ ರೈ, ಸುಮಂಗಲಾ ಪ್ರಭಾಕರ್, ಪಕ್ರುದ್ದೀನ್ ಕುಣಿಲ್, ಅರುವ ಕೊರಗಪ್ಪ ಶೆಟ್ಟಿ, ಉಷಾ ವಿಶ್ವನಾಥ್, ಸತೀಶ್ ರಾವ್ ಇಡ್ಯಾ ಇವರುಗಳನ್ನು ಸನ್ಮಾನಿಸಲಾಯಿತು.

    ಡಾ.ಶಿಲ್ಪಾ ದಿನೇಶ್ ಸಾಧಕರ ವಿವರ ನೀಡಿದರು. ಗೋಪಾಲಕೃಷ್ಣ ಶೆಟ್ಟಿ ಸ್ವಾಗತಿಸಿದರು. ಧೀರಜ್.ಬಿ.ಉದ್ಯಾವರ ಕಾರ್ಯಕ್ರಮ ನಿರೂಪಿಸಿದರು.

    ಮಾಹಿತಿ ಶಿಬಿರ :

    ಬಾಯಿಯ ಆರೋಗ್ಯದ ಬಗ್ಗೆ ಡಾ.ಚಾಂದಿನಿ.ಎಸ್. ಹಾಗೂ ಸೈಬರ್ ಕ್ರೈಂ ಜಾಗೃತಿ ಬಗ್ಗೆ ಪ್ರವೀಣ್ ಉಡುಪ ಅವರು ಹಿರಿಯ ನಾಗರಿಕರಿಗೆ ಮಾಹಿತಿ ನೀಡಿದರು. ಇದೇ ಸಂದರ್ಭ ಹಿರಿಯ ನಾಗರಿಕರಿಗಾಗಿ ಯೇನೆಪೊಯ ಆಯುರ್ವೇದ ವೈದ್ಯಕೀಯ ಕಾಲೇಜಿನ ಸಹಯೋಗದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ಶ್ರೀನಿವಾಸ್ ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್ ಸಹಯೋಗದಲ್ಲಿ ಉಚಿತ ದಂತ ತಪಾಸಣಾ ಶಿಬಿರ ನಡೆಯಿತು.

    _Sathish Kapikad

    Share. Facebook Twitter Pinterest LinkedIn Email WhatsApp
    Previous Articleಮೆಸ್ಕಾಂ ವ್ಯಾಪ್ತಿಯಲ್ಲಿರುವ ಸಮಸ್ಯೆಗಳ ನಿವಾರಣೆಗೆ ಕ್ರಮ – ಖಾಲಿ ಇರುವ  ಪವರ್ ಮ್ಯಾನ್ ಹುದ್ದೆಗಳ ಶೀಘ್ರ ನೇಮಕ  : ಅಧ್ಯಕ್ಷ ಹರೀಶ್ ಕುಮಾರ್
    Next Article ಎಸ್ಐಆರ್ ನಲ್ಲಿ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಿದ ಬಿಎಲ್ಎ-2 ಗಳು ಹಾಗೂ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದ ಶಾಸಕ ಕಾಮತ್

    Related Posts

    ಕರಾವಳಿ

    ಕ್ರೀಡಾಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಎಂ.ಆರ್. ಪೂವಮ್ಮ ಅವರು ಪ್ರತಿಷ್ಠಿತ ರಾಜ್ಯಮಟ್ಟದ ‘ವಂದನಾ ಪ್ರಶಸ್ತಿ’ಗೆ ಆಯ್ಕೆ

    October 28, 2026
    ಕರಾವಳಿ

    ನ.3ರಿಂದ 15 : ಮಾಂಡ್ ಸೊಭಾಣ್ ಸಂಘಟನೆಯ ವತಿಯಿಂದ ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮ್ಮೇಳನ -ಸತತ 12 ದಿನ, 12 ಗಂಟೆ ಹಾಗೂ 12 ನಿಮಿಷಗಳ ನಿರಂತರ ಗಾಯನದ ಮೂಲಕ ಗಿನ್ನೆಸ್ ದಾಖಲೆಗೆ ಪ್ರಯತ್ನ

    October 28, 2026
    ಕರಾವಳಿ

    ಸತತ ಸೋಲುಗಳ ಹತಾಶೆಯಿಂದ ಪ್ರಧಾನಿಗಳ ತಂದೆಯವರನ್ನು ನಿಂದನೆ ಮಾಡಿರುವ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆ ಅವರ ಹಿರಿತನಕ್ಕೆ ಶೋಭೆಯಲ್ಲ: ಶಾಸಕ ಕಾಮತ್ 

    October 27, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.