Close Menu
SK Media NewsSK Media News
    What's Hot

    ಕ್ರೀಡಾಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಎಂ.ಆರ್. ಪೂವಮ್ಮ ಅವರು ಪ್ರತಿಷ್ಠಿತ ರಾಜ್ಯಮಟ್ಟದ ‘ವಂದನಾ ಪ್ರಶಸ್ತಿ’ಗೆ ಆಯ್ಕೆ

    October 28, 2026

    ನ.3ರಿಂದ 15 : ಮಾಂಡ್ ಸೊಭಾಣ್ ಸಂಘಟನೆಯ ವತಿಯಿಂದ ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮ್ಮೇಳನ -ಸತತ 12 ದಿನ, 12 ಗಂಟೆ ಹಾಗೂ 12 ನಿಮಿಷಗಳ ನಿರಂತರ ಗಾಯನದ ಮೂಲಕ ಗಿನ್ನೆಸ್ ದಾಖಲೆಗೆ ಪ್ರಯತ್ನ

    October 28, 2026

    ಸತತ ಸೋಲುಗಳ ಹತಾಶೆಯಿಂದ ಪ್ರಧಾನಿಗಳ ತಂದೆಯವರನ್ನು ನಿಂದನೆ ಮಾಡಿರುವ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆ ಅವರ ಹಿರಿತನಕ್ಕೆ ಶೋಭೆಯಲ್ಲ: ಶಾಸಕ ಕಾಮತ್ 

    October 27, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್‌ಗೆ ‘ಬಸವಶ್ರೀ’ ರಾಜ್ಯ ಪ್ರಶಸ್ತಿ ಪ್ರದಾನ: ಅಂಚನ್ ಪಡೆದ ಒಟ್ಟು ಪ್ರಶಸ್ತಿಗಳ ವಿವರ 
    ಕರಾವಳಿ

    ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್‌ಗೆ ‘ಬಸವಶ್ರೀ’ ರಾಜ್ಯ ಪ್ರಶಸ್ತಿ ಪ್ರದಾನ: ಅಂಚನ್ ಪಡೆದ ಒಟ್ಟು ಪ್ರಶಸ್ತಿಗಳ ವಿವರ 

    September 1, 20262 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು: ಕ್ರೀಡಾ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕಳೆದ ಮೂರು ದಶಕಗಳಿಂದ ಸಲ್ಲಿಸುತ್ತಿರುವ ಅನುಪಮ ಸೇವೆಯನ್ನು ಗುರುತಿಸಿ ಹಿರಿಯ ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಅವರಿಗೆ  ಪ್ರತಿಷ್ಠಿತ ‘ಬಸವಶ್ರೀ’ ರಾಜ್ಯ ಪ್ರಶಸ್ತಿ ನೀಡಿ ಬೆಂಗಳೂರಿನಲ್ಲಿ ಗೌರವಿಸಲಾಯಿತು.

    ಶ್ರೀ ಜ್ಞಾನ ಮಂದಾರ ಎಜುಕೇಶನಲ್ ಮತ್ತು  ಸಾಂಸ್ಕೃತಿಕ ಟ್ರಸ್ಟ್ (ರಿ.), ಬೆಂಗಳೂರು ಇದರ ರಜತ  ಮಹೋತ್ಸವದ ಅಂಗವಾಗಿ ಬೆಂಗಳೂರಿನ ಬನಶಂಕರಿಯ ಜೆ.ಎಸ್.ಎಸ್. ಪಬ್ಲಿಕ್ ಶಾಲೆಯ ಫಣಲಿಂಗ  ಶಿವಯೋಗಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ  ಮಾಡಲಾಯಿತು.

    ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬೆಂಗಳೂರು  ಆರ್.ಎನ್.ಎಸ್. ಕಾಲೇಜಿನ ಪ್ರಾಂಶುಪಾಲ ಪ್ರೊ. ರವಿಶಂಕರ್ ಬಿ.ವಿ. ಅವರು ಎಸ್. ಜಗದೀಶ್ಚಂದ್ರ  ಅಂಚನ್ ಅವರಿಗೆ ಬೆಳ್ಳಿ ಹಾಗೂ ಚಿನ್ನದ ಪದಕದೊಂದಿಗೆ ‘ಬಸವಶ್ರೀ’ ರಾಜ್ಯ ಪ್ರಶಸ್ತಿ ಪ್ರದಾನ ಮಾಡಿದರು.

    ಕ್ರೀಡಾ ಕ್ಷೇತ್ರದ ಬೆಳವಣಿಗೆ, ಕ್ರೀಡಾಪಟುಗಳ ಸಾಧನೆ ಹಾಗೂ ಕ್ರೀಡೆಗೆ ಸಂಬಂಧಿಸಿದ ವಿವಿಧ ವಿಚಾರಗಳನ್ನು ತಮ್ಮ ಅಂಕಣ ಬರಹಗಳ ಮೂಲಕ ನಿರಂತರವಾಗಿ ದಾಖಲಿಸುತ್ತಿರುವ ಎಸ್. ಜಗದೀಶ್ಚಂದ್ರ ಅಂಚನ್  ಅವರ ಸೇವೆಯನ್ನು ಸಮಾರಂಭದಲ್ಲಿ ಶ್ಲಾಘಿಸಲಾಯಿತು.

    ಇದೇ ಸಂದರ್ಭದಲ್ಲಿ ಬೆಂಗಳೂರು ಆರ್.ಎನ್.ಎಸ್. ಕಾಲೇಜು ಹಾಗೂ ಮುಡಿಪುವಿನ ಜ್ಞಾನಶ್ರೀ ವಿದ್ಯಾಲಯದ ವತಿಯಿಂದಲೂ ಎಸ್. ಜಗದೀಶ್ಚಂದ್ರ ಅಂಚನ್  ಅವರಿಗೆ ವಿಶೇಷ ಗೌರವ ಸಲ್ಲಿಸಲಾಯಿತು.

    ಬಸವ ವೇದಿಕೆ (ರಿ.), ಬೆಂಗಳೂರು ಹಾಗೂ ಕನ್ನಡ  ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ನಡೆದ  ಕಾರ್ಯಕ್ರಮದಲ್ಲಿ ಬೆಂಗಳೂರು ಶ್ರೀ ವಚನ ಜ್ಯೋತಿ  ಸಹಕಾರಿ ಬ್ಯಾಂಕ್ ಅಧ್ಯಕ್ಷ ದಾನಪ್ರಕಾಶ ಎನ್. ತಿಮ್ಮಪ್ಪ, ಬೆಂಗಳೂರು ಎಂ.ಎನ್.ಆರ್. ಕಾಲೇಜಿನ ಪ್ರಾಂಶುಪಾಲ ಪ್ರೊ. ಮೋಹನ್ ಕುಮಾರ್ ಆರ್., ಸಾರ್ವಜನಿಕ  ಶಿಕ್ಷಣ ಇಲಾಖೆಯ ಅಧಿಕಾರಿ ಚಂದ್ರಶೇಖರ, ಜ್ಞಾನ  ಮಂದಾರ ಟ್ರಸ್ಟ್‌ನ ಸಂಸ್ಥಾಪಕ ಸೋಮಶೇಖರ್,  ಅಂತಾರಾಷ್ಟ್ರೀಯ ನೃತ್ಯ ಕಲಾವಿದೆ ಹಾಗೂ ಚಲನಚಿತ್ರ ನಟಿ ಎಂ.ಎಸ್. ಆರತಿ ಸುರೇಶ್, ಪ್ರೊ. ಕಾಂತಪ್ಪ,  ಸಾಹಿತಿ ವಿಜಯಲಕ್ಷ್ಮಿ ಕೌಟಗೆ ಹಾಗೂ ರಂಗ ಸಮಾಜ ಸಾಂಸ್ಕೃತಿಕ ಸಂಸ್ಥೆ, ಬೆಂಗಳೂರು ಇದರ ಕಾರ್ಯದರ್ಶಿ ತಿಲಕ್ ರಾಜ್ ಎಸ್. ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

    ಅಂಚನ್ ಪಡೆದ ಒಟ್ಟು ಪ್ರಶಸ್ತಿಗಳು:

    ಇವರ  ಕ್ರೀಡಾ ಬರವಣಿಗೆಗಾಗಿ 2013ರಲ್ಲಿ ‘ಮೀಡಿಯಾ ಅವಾರ್ಡ್’, 2014ರಲ್ಲಿ ‘ಸಮಾಜ ರತ್ನ ‘ ರಾಜ್ಯ ಪ್ರಶಸ್ತಿ , 2016ರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ , ಲಯನ್ಸ್ ರಾಜ್ಯೋತ್ಸವ ಪ್ರಶಸ್ತಿ ,2018ರಲ್ಲಿ ಗಡಿನಾಡ ರಾಜ್ಯೋತ್ಸವ ಪ್ರಶಸ್ತಿ ; 2019ರಲ್ಲಿ ಜಾನಪದ ಲೋಕ ರಾಜ್ಯ ಪ್ರಶಸ್ತಿ  ; ನಮ್ಮ ಕುಡ್ಲ ಸಾಧಕ ಪ್ರಶಸ್ತಿ, 2020ರಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮ್ಮೇಳನದಲ್ಲಿ  ಕೆ.ಎ.ನೆಟ್ಟಕಲ್ಲಪ್ಪ ರಾಜ್ಯ ಪ್ರಶಸ್ತಿ , 2021ರಲ್ಲಿ ಸಿದ್ಧಗಂಗಾಶ್ರೀ ರಾಜ್ಯ ಪ್ರಶಸ್ತಿ , 2022ರಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕಾಸರಗೋಡು ಘಟಕದಿಂದ ಕೆ.ಆರ್.ಟ್ಯಾಗೋರ್ ದತ್ತಿ ನಿಧಿ ಪ್ರಶಸ್ತಿ, 2023ರಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಪುರಸ್ಕಾರ,  ಸಾಧನ ಪ್ರಶಸ್ತಿ -2023,  2024ರಲ್ಲಿ ಕರ್ನಾಟಕ ಕಲಾಶ್ರೀ ಪ್ರಶಸ್ತಿ, 2026ರಲ್ಲಿ ಜಾನಪದ ರತ್ನ ಪ್ರಶಸ್ತಿ, ಹಾಗೂ ಕನ್ನಡ ಪಯಸ್ವಿನಿ ಅವಾರ್ಡ್ -2026 ಅಂತರ್ ರಾಜ್ಯ ಪ್ರಶಸ್ತಿಗಳು ಸೇರಿದಂತೆ ಹಲವು ಸನ್ಮಾನ ಪುರಸ್ಕಾರವನ್ನು ಇವರು ಪಡೆದಿದ್ದಾರೆ.

    _Sathish Kapikad 

    Share. Facebook Twitter Pinterest LinkedIn Email WhatsApp
    Previous Articleಮಂಗಳೂರಿನಲ್ಲಿ ‘ಹಲ್ಕಾ ಡಾನ್’ ಚಿತ್ರೀಕರಣ ಬಹುತೇಕ ಪೂರ್ಣ ಕುತ್ತಾರು ಕೊರಗಜ್ಜ ಆದಿಸ್ಥಳಕ್ಕೆ ಚಿತ್ರತಂಡ ಭೇಟಿ; ತುಳು ಭಾಷೆಯಲ್ಲೂ ಚಿತ್ರ ಬಿಡುಗಡೆಗೆ ನಿರ್ಧಾರ
    Next Article ಸೆಪ್ಟೆಂಬರ್ 3 ಮತ್ತು 4 : ಇಸ್ಕಾನ್ ಮಂಗಳೂರಿನಿಂದ ಪಿಲಿಕುಳದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ – ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ವಿಶೇಷ ಅನ್ನ ಪ್ರಸಾದ ವ್ಯವಸ್ಥೆ 

    Related Posts

    ಕರಾವಳಿ

    ಕ್ರೀಡಾಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಎಂ.ಆರ್. ಪೂವಮ್ಮ ಅವರು ಪ್ರತಿಷ್ಠಿತ ರಾಜ್ಯಮಟ್ಟದ ‘ವಂದನಾ ಪ್ರಶಸ್ತಿ’ಗೆ ಆಯ್ಕೆ

    October 28, 2026
    ಕರಾವಳಿ

    ನ.3ರಿಂದ 15 : ಮಾಂಡ್ ಸೊಭಾಣ್ ಸಂಘಟನೆಯ ವತಿಯಿಂದ ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮ್ಮೇಳನ -ಸತತ 12 ದಿನ, 12 ಗಂಟೆ ಹಾಗೂ 12 ನಿಮಿಷಗಳ ನಿರಂತರ ಗಾಯನದ ಮೂಲಕ ಗಿನ್ನೆಸ್ ದಾಖಲೆಗೆ ಪ್ರಯತ್ನ

    October 28, 2026
    ಕರಾವಳಿ

    ಸತತ ಸೋಲುಗಳ ಹತಾಶೆಯಿಂದ ಪ್ರಧಾನಿಗಳ ತಂದೆಯವರನ್ನು ನಿಂದನೆ ಮಾಡಿರುವ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆ ಅವರ ಹಿರಿತನಕ್ಕೆ ಶೋಭೆಯಲ್ಲ: ಶಾಸಕ ಕಾಮತ್ 

    October 27, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.