
ಮಂಗಳೂರು: ಸೆಪ್ಟೆಂಬರ್ 18 ರಂದು ಮಂಗಳೂರಿನಲ್ಲಿ ನಿಗದಿಯಾಗಿರುವ ರಾಜ್ಯ ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಯು ಟಿ ಖಾದರ್ ಅವರು ಭಾನುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಥಳ ಪರಿಶೀಲನೆ ನಡೆಸಿದರು.


ಸಭೆ ನಡೆಸಲು ಬೇಕಾದ ಅಗತ್ಯ ಸ್ಥಳಾವಕಾಶ, ಪಾರ್ಕಿಂಗ್ ವ್ಯವಸ್ಥೆ, ಭದ್ರತೆ ಮತ್ತು ಸಂಚಾರ ನಿಯಂತ್ರಣ ಮತ್ತಿತರ ಸೌಲಭ್ಯಗಳ ಬಗ್ಗೆ ಸಚಿವರು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ, ಎಡಿಸಿ ರಾಜು ಮತ್ತಿತರರು ಇದ್ದರು.
_Sathish Kapikad


