
ಮಂಗಳೂರು: ಇತಿಹಾಸ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಗಣೇಶ ಚತುರ್ಥಿಯ ಅಂಗವಾಗಿ ಸೆಪ್ಟೆಂಬರ್ 14, ಸೋಮವಾರದಂದು ಶ್ರೀ ಮಹಾಗಣಪತಿ ದೇವರ ಸನ್ನಿಧಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಭಕ್ತಿಭಾವದಿಂದ ಆಯೋಜಿಸಲಾಗಿದೆ.
ಗಣೇಶ ಚತುರ್ಥಿಯ ಪ್ರಯುಕ್ತ ಅಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ 108 ತೆಂಗಿನಕಾಯಿಗಳ ಮಹಾಗಣಪತಿ ಹೋಮ ಜರುಗಲಿದೆ. ಬಳಿಕ ಮಧ್ಯಾಹ್ನ 12 ಗಂಟೆಗೆ ಶ್ರೀ ಮಹಾಗಣಪತಿ ದೇವರಿಗೆ ಮಹಾಪೂಜೆ ನೆರವೇರಲಿದೆ.
ಸಂಜೆ 7 ಗಂಟೆಗೆ ಶ್ರೀ ಮಹಾಗಣಪತಿ ದೇವರಿಗೆ ವೈಭವದ ಸಾಮೂಹಿಕ ರಂಗಪೂಜೆ ನಡೆಯಲಿದೆ.
ವಿಘ್ನವಿನಾಯಕ ಶ್ರೀ ಮಹಾಗಣಪತಿಯ ವಿಶೇಷ ಆರಾಧನೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಗಣೇಶ ಚತುರ್ಥಿ ಮಹೋತ್ಸವವನ್ನು ಕದ್ರಿ ಶ್ರೀ ದೇವಳದಲ್ಲಿ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಲಾಗುತ್ತಿದೆ.
ಗಣೇಶ ಚತುರ್ಥಿಯ ಈ ಪವಿತ್ರ ಸಂದರ್ಭದಲ್ಲಿ ಭಕ್ತಾದಿಗಳು ಕುಟುಂಬ ಸಮೇತರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ಮಹಾಗಣಪತಿ ದೇವರ ದರ್ಶನ ಪಡೆದು, ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ದೇವರ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
_Sathish Kapikad


