
ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೇಲ್ ನಲ್ಲಿ ಮೂರು ದಿನಗಳ ಕಾಲ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಾರಂಭ ಬುಧವಾರ ಸಂಪನ್ನಗೊಂಡಿತು.
ಶೋಭಾಯಾತ್ರೆಗೆ ಚಾಲನೆ:
ಬುಧವಾರ ಸಂಜೆ 5 ಗಂಟೆಗೆ ಗಣ್ಯರ ಉಪಸ್ಥಿತಿಯಲ್ಲಿ ವಿಸರ್ಜನ ಪೂಜೆ ನಡೆಯಿತು. ಸಂಜೆ ಆರಂಭಗೊಂಡ ಶೋಭಾಯಾತ್ರೆಗೆ ಉದ್ಯಮಿ ಸುಯೋಗ್ ಶೆಟ್ಟಿ ಚಾಲನೆ ನೀಡಿದರು.

ಶೋಭಾಯಾತ್ರೆಯು ಓಂಕಾರ ನಗರದಿಂದ ಶ್ರದ್ಧಾಭಕ್ತಿಯಿಂದ ಜಿಲ್ಲೆಯ ವಿವಿಧ ಭಜನಾ ತಂಡಗಳ ಸೇವೆಯೊಂದಿಗೆ ಬಂಟ್ಸ್ ಹಾಸ್ಟೇಲ್ ಸರ್ಕಲ್, ಪಿವಿಎಸ್ ವೃತ್ತ, ನ್ಯೂಚಿತ್ರಾ ಟಾಕೀಸ್, ರಥಬೀದಿ, ವೆಂಕಟರಮಣ ದೇವಸ್ಥಾನದ ರಸ್ತೆಯಲ್ಲಿ ಸಾಗಿ ಶ್ರೀ ಮಹಮ್ಮಾಯಿ ದೇವಸ್ಥಾನದ ಕೆರೆಯಲ್ಲಿ ವಿಸರ್ಜಿಸಲಾಯಿತು.







ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಕೆ ಅಜಿತ್ ಕುಮಾರ್ ರೈ ಮಾಲಾಡಿ, ಇವರ ನೇತೃತ್ವದಲ್ಲಿ ಆರಂಭಗೊಂಡ ಶೋಭಾಯಾತ್ರೆಯ ಮೆರವಣಿಗೆಯಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಜಯಶೀಲ ಅಡ್ಯಂತಾಯ ಅಡ್ಯಾರ್ ಗುತ್ತು, ಸಂಘದ ಉಪಾಧ್ಯಕ್ಷ ಹೇಮನಾಥ ಶೆಟ್ಟಿ ಕಾವು, ಪ್ರಧಾನ ಕಾರ್ಯದರ್ಶಿ ಎಂ ಕರುಣಾಕರ ಶೆಟ್ಟಿ, ಕೋಶಾಧಿಕಾರಿ ಸಿಎ ರಾಮ್ ಮೋಹನ್ ರೈ, ಜೊತೆ ಕಾರ್ಯದರ್ಶಿ ಪದ್ಮನಾಭ ಶೆಟ್ಟಿ ಪುಂಚಮೆ, ಉದ್ಯಮಿ ಸುಯೋಗ್ ಶೆಟ್ಟಿ, ಮಾಜಿ ಸಚಿವ ಬಿ ನಾಗರಾಜ ಶೆಟ್ಟಿ, ಡಾ ಸತ್ಯ ಕೃಷ್ಣ ಭಟ್, ರಘುರಾಮ ಭಟ್, ಪ್ರದೀಪದ ಕುಮಾರ್ ಕಲ್ಕೂರ,ವಿವಿಧ ಬಂಟರ ಸಂಘಗಳ ಪದಾಧಿಕಾರಿಗಳಾದ ರತ್ನಾಕರ್ ಶೆಟ್ಡಿ ಎಕ್ಕಾರ್, ಅಶೊಕ್ ಶೆಟ್ಟಿ ಮುಲ್ಕಿ, ಜಯರಾಮ ಬೆಳ್ತಂಗಡಿ, ಮಹಾಬಲ ಚೌಟ,
ವಿಜಯ ಶೆಟ್ಟಿ ಕಾರ್ಕಳ, ಶ್ರೀ ಗಣೇಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಸದಾಶಿವ ಶೆಟ್ಟಿ ಬಿಜೈ ಮೊದಲಾದವರು ಉಪಸ್ಥಿತರಿದ್ದರು.
_Sathish Kapikad


