Close Menu
SK Media NewsSK Media News
    What's Hot

    ಕ್ರೀಡಾಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಎಂ.ಆರ್. ಪೂವಮ್ಮ ಅವರು ಪ್ರತಿಷ್ಠಿತ ರಾಜ್ಯಮಟ್ಟದ ‘ವಂದನಾ ಪ್ರಶಸ್ತಿ’ಗೆ ಆಯ್ಕೆ

    October 28, 2026

    ನ.3ರಿಂದ 15 : ಮಾಂಡ್ ಸೊಭಾಣ್ ಸಂಘಟನೆಯ ವತಿಯಿಂದ ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮ್ಮೇಳನ -ಸತತ 12 ದಿನ, 12 ಗಂಟೆ ಹಾಗೂ 12 ನಿಮಿಷಗಳ ನಿರಂತರ ಗಾಯನದ ಮೂಲಕ ಗಿನ್ನೆಸ್ ದಾಖಲೆಗೆ ಪ್ರಯತ್ನ

    October 28, 2026

    ಸತತ ಸೋಲುಗಳ ಹತಾಶೆಯಿಂದ ಪ್ರಧಾನಿಗಳ ತಂದೆಯವರನ್ನು ನಿಂದನೆ ಮಾಡಿರುವ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆ ಅವರ ಹಿರಿತನಕ್ಕೆ ಶೋಭೆಯಲ್ಲ: ಶಾಸಕ ಕಾಮತ್ 

    October 27, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ದೇವದಾಸ್ ಕಾಪಿಕಾಡ್ ಅವರು ಮುಟ್ಟಿದ್ದೆಲ್ಲಾ ಚಿನ್ನ, “ಕಾಂತರ”ದಂತೆ “ಟಾಸ್” ಸಿನಿಮಾ ಕೂಡ ರಾಜ್ಯಾದ್ಯಂತ ಯಶಸ್ಸು ಕಾಣಲಿ : ಬಹುನಿರೀಕ್ಷಿತ “ಟಾಸ್” ಸಿನಿಮಾಕ್ಕೆ ಚಾಲನೆ ನೀಡಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್
    ಕರಾವಳಿ

    ದೇವದಾಸ್ ಕಾಪಿಕಾಡ್ ಅವರು ಮುಟ್ಟಿದ್ದೆಲ್ಲಾ ಚಿನ್ನ, “ಕಾಂತರ”ದಂತೆ “ಟಾಸ್” ಸಿನಿಮಾ ಕೂಡ ರಾಜ್ಯಾದ್ಯಂತ ಯಶಸ್ಸು ಕಾಣಲಿ : ಬಹುನಿರೀಕ್ಷಿತ “ಟಾಸ್” ಸಿನಿಮಾಕ್ಕೆ ಚಾಲನೆ ನೀಡಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

    September 18, 20263 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು, ಸೆಪ್ಟೆಂಬರ್.18: ಅವಿಕಾ ಪ್ರೊಡಕ್ಷನ್ ಮತ್ತು ಬಿ.ಆರ್ ಬಿ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾಗಿರುವ ಅರ್ಜುನ್ ದೇವ್ ನಿರ್ದೇಶನ, ನಟನೆಯ “ಟಾಸ್” ತುಳು ಸಿನಿಮಾ ಇಂದು ರಾಜ್ಯಾದ್ಯಂತ ಬಿಡುಗಡೆಗೊಂಡಿತು.

    ಬಿಗ್ ಸಿನೆಮಾಸ್ ನಲ್ಲಿ ಇಂದು ಬೆಳಗ್ಗೆ ನಡೆದ ಸರಳ ಸಮಾರಂಭದಲ್ಲಿ  ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ದೀಪ ಬೆಳಗಿಸುವ ಮೂಲಕ ಸಿನಿಮಾಕ್ಕೆ ಚಾಲನೆ ನೀಡಿದರು.

    ಈ ವೇಳೆ ಮಾತನಾಡಿದ ಅವರು, “ಇಂದು ಎರಡು ವಿಶೇಷ ದಿನವಾಗಿದೆ. ಒಂದೆಡೆ ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಯುತ್ತಿದ್ದರೆ ಇನ್ನೊಂದೆಡೆ ತುಳು ಭಾಷೆಯ ಬಹು ನಿರೀಕ್ಷಿತ ಸಿನಿಮಾ “ಟಾಸ್” ಬಿಡುಗಡೆಯಾಗುತ್ತಿದೆ. ಡಾ ದೇವದಾಸ್ ಕಾಪಿಕಾಡ್ ಅವರು ನಮಗೆಲ್ಲ ಹೀರೋ ಇದ್ದಂತೆ. ಅವರು ಮುಟ್ಟಿದ್ದೆಲ್ಲಾ ಬಂಗಾರವಾಗುತ್ತದೆ, ಹಾಗೆಯೇ ಈ ಸಿನಿಮಾ ಕೂಡ ಕಾಂತಾರದಂತೆ ಯಶಸ್ಸು ಕಾಣಲಿ“ ಎಂದರು.

    ಇನ್ನೋರ್ವ ಅಥಿತಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾತಾಡಿ, ”ಇಂದು ರಂಗಭೂಮಿಯ ಹಿರಿಯ ಕಲಾವಿದ ಡಾ ದೇವದಾಸ್ ಕಾಪಿಕಾಡ್ ಅವರ “ಟಾಸ್” ಸಿನಿಮಾ ಬಿಡುಗಡೆಯಾಗುತ್ತಿದೆ. ತುಳುವರು ಎಲ್ಲರೂ ಥಿಯೇಟರ್ ಗೆ ಬಂದು ಸಿನಿಮಾ ನೋಡಿದರೆ ಒಂದೊಳ್ಳೆ ಸಿನಿಮಾ ಗೆಲ್ಲುತ್ತದೆ“ ಎಂದರು.

    ಖ್ಯಾತ ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಮಾತಾಡಿ, “ಟಾಸ್ ಸಿನಿಮಾ ಕಾಪಿಕಾಡ್ ರವರಿಗೆ ಕಾಸ್ ಮಾಡಿಕೊಡಲಿ.ತುಳುನಾಡಿಗೆ ಹಾಗೂ ಸಮಸ್ತ  ತುಳುವರಿಗೆ ಈ ಸಿನಿಮಾ ಹೆಸರು ತರಲಿ. ಅರ್ಜುನ್ ದೇವ್ ನಟನೆ ನಿರ್ದೇಶನದ ಈ ಸಿನಿಮಾ ಕನ್ನಡ ಮತ್ತು ತುಳುಭಾಷೆಯಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿರುವುದು ಹೆಮ್ಮೆಯ ವಿಚಾರ” ಎಂದರು.

    ಚಲನ ಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್ ಮಾತಾಡಿ, “ಸಿನಿಮಾದ ಪ್ರೀಮಿಯರ್ ಶೋ ನೋಡಿದವರೆಲ್ಲ ಸಿನಿಮಾವನ್ನು ಹೊಗಳುತ್ತಿದ್ದಾರೆ. ಸಿನಿಮಾ ಒಳ್ಳೆಯ ಹೆಸರು ಮಾಡಲಿ” ಎಂದು ಶುಭ ಹಾರೈಸಿದರು.

    ಡಾ ಶಿವಶರಣ್ ಶೆಟ್ಟಿ ಮಾತಾಡಿ, “ಅರ್ಜುನ್ ಕಾಪಿಕಾಡ್ ಈ ಸಿನಿಮಾಕ್ಕಾಗಿ ಸಾಕಷ್ಟು ದುಡಿದಿದ್ದಾರೆ. ಅವರಿಗೆ ಯಶಸ್ಸು ಸಿಗಲಿ” ಎಂದರು.

    ಡಾ.ದೇವದಾಸ್ ಕಾಪಿಕಾಡ್, ಕದ್ರಿ ಮಣಿಕಾಂತ್, ಭೋಜರಾಜ ವಾಮಂಜೂರು, ಶರ್ಮಿಳಾ ಡಿ ಕಾಪಿಕಾಡ್, ವೀರೇಂದ್ರ ಶೆಟ್ಟಿ ಕಾವೂರು, ಗಿರೀಶ್ ಎಂ ಶೆಟ್ಟಿ ಕಟೀಲು, ಪ್ರಕಾಶ್ ತೂಮಿನಾಡ್, ಪುಷ್ಪರಾಜದ ಬೊಳ್ಳಾರ್, ಕಿಶೋರ್ ಕೊಟ್ಡಾರಿ, ರಾಕೇಶ್ ಶೆಟ್ಟಿ, ಅಶ್ವಿತ್ ಕೊಟ್ಟಾರಿ, ಮುಖೇಶ್ ಹೆಗ್ಡೆ, ಚಂದ್ರಹಾಸ ಶೆಟ್ಟಿ ರಂಗೋಲಿ, ಬಾಳ ಜಗನ್ನಾಥ ಶೆಟ್ಟಿ, ದಿನೇಶ್ ಶೆಟ್ಟಿ, ಫಯಾಜ್ ಅಭ್ದುಲ್ ರಝಾಕ್ ದುಬಾಯಿ, ಇಝಾಕ್ ಚೈತ್ರ ಶೆಟ್ಟಿ, ಸದಾಶಿವ ಅಮೀನ್, ಜೋಯಲ್ ಡಿ ಸೋಜ, ರೋಶನ್ ಶೆಟ್ಟಿ, ಚೈತ್ರಾ ಶೆಟ್ಟಿ, ಶೈಲಶ್ರೀ ಮುಲ್ಕಿ ಮತ್ತಿತರರು ಉಪಸ್ಥಿತರಿದ್ದರು. ಜಿತೇಶ್ ಉಳಿಯ ಕಾರ್ಯಕ್ರಮ‌ ನಿರ್ವಹಿಸಿದರು.

    ಸಿನಿಮಾ ಕುರಿತು:

    ರಾಜ್ಯ ಪ್ರಶಸ್ತಿ ಪುರಸ್ಕೃತ ತೆಲಿಕೆದ ಬೊಳ್ಳಿ ಡಾ|| ದೇವದಾಸ್ ಕಾಪಿಕಾಡ್ ರಚನೆ ಸಂಭಾಷಣೆ, ಅರ್ಜುನ್ ದೇವ್ ನಿರ್ದೇಶನ ಮತ್ತು ಅಭಿನಯದ “ಟಾಸ್” ಸಿನಿಮಾದ ಚಿತ್ರೀಕರಣ ಎರಡು ಹಂತಗಳಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಸಿನಿಮಾದ ಚಿತ್ರೀಕರಣ ನಡೆದಿದೆ.

    ನಿರ್ಮಾಪಕರು ಪಿ ಆ್ಯಂಡ್ ವೈ ವಲ್ಡ್ ಟೂರ್ಸ್ ಎಲ್ ಎಲ್ ಪಿ ಸಾಗರ್ ಪೂಜಾರಿ, ಕಥೆ–ಚಿತ್ರಕಥೆ–ಸಂಭಾಷಣೆ ಗೀತೆಗಳು, ಡಾ. ದೇವದಾಸ್ ಕಾಪಿಕಾಡ್, ನಿರ್ದೇಶಕರು ಅರ್ಜುನ್ ದೇವ್, ಸಹ ನಿರ್ದೇಶಕರು ಯಶಾಂತ್ ಕಲ್ಲಡ್ಕ, ರಾಕೇಶ್ ಬಿ.ಜೆ. ವಿಕ್ರಮ್ ದೇವಾಡಿಗ, ಸಹಾಯಕ ನಿರ್ದೇಶಕರು ಸೌರವ್ ರಾಮ್ ಸುಜಿತ್ ವಿನೋದ್ ಆಶಿಷ್ ರಾವ್ ಛಾಯಾಗ್ರಹಣ ಜೋಯೆಲ್ ಶಮನ್ ಡಿ’ಸೋಜಾ, ಸಹಾಯಕ ಛಾಯಾಗ್ರಾಹಕರು ಅಮನ್ ಪ್ರಖ್ಯಾತ್, ಕಲಾ ನಿರ್ದೇಶನ ರಾಜೇಶ್ ಕೊಳಕೆ ರಾಜೇಶ್ ಬಾಂಧ್ಯೋಡ್, ಸಂಕಲನ ಯಶ್ವಿನ್ ಕೆ. ಶೆಟ್ಟಿಗಾರ್, ಸಂಗೀತ ಮಣಿಕಾಂತ್ ಕದ್ರಿ, ಕಾರ್ಯಕಾರಿ ನಿರ್ಮಾಪಕರು ಸಂದೀಪ್ ಶೆಟ್ಟಿ, ವಸ್ತ್ರ ವಿನ್ಯಾಸ ಅನುಪ್ ಸಾಗರ್. ವಿತರಕರು ಸಚಿನ್ ಎಎಸ್ ಉಪ್ಪಿನಂಗಡಿ.

    ತಾರಾಗಣದಲ್ಲಿ ಡಾ ||ದೇವದಾಸ್ ಕಾಪಿಕಾಡ್, ಅರ್ಜುನ್ ದೇವ್, ನವೀನ್ ಡಿ ಪಡೀಲ್, ಭೋಜರಾಜ್ ವಾಮಂಜೂರ್, ಅರವಿಂದ್ ಬೋಳಾರ್, ಪ್ರಕಾಶ್ ತುಮಿನಾಡು, ದೀಪಕ್ ರೈ ಪಾಣಾಜೆ, ಪುಷ್ಪರಾಜ್ ಬೊಳ್ಳಾರ್, ಸುತೇಜ್ ಶೆಟ್ಟಿ, ಸಂಗೀತಾ ಶೆಟ್ಟಿ, ಶೋಭರಾಜ್ ಪಾವೂರ್, ಚೈತ್ರಾ ಶೆಟ್ಟಿ, ಕೃತಿ ಶೆಟ್ಟಿ ಅಭಿನಯಿಸಿದ್ದಾರೆ.

    ಟಾಸ್ ತುಳು ಹಾಗೂ ಕನ್ನಡ ಭಾಷೆಯಲ್ಲಿ ತಯಾರಾಗಿದೆ. ಈ ಸಿನಿಮಾಗಳಿಗೆ ನಟ ಗಣೇಶ್ ಮತ್ತು ಶಿಲ್ಪಾ ಗಣೇಶ್ ಸಾಥ್ ನೀಡಿದ್ದಾರೆ.

    ಟಾಸ್ ಸಿನಿಮಾ ಮಂಗಳೂರು, ಸುರತ್ಕಲ್, ಪಡುಬಿದ್ರೆ, ಉಡುಪಿ, ಮಣಿಪಾಲ, ಕುಂದಾಪುರ, ಕಾರ್ಕಳ, ದೇರಳಕಟ್ಟೆ, ಸುಳ್ಯ ಬೆಳ್ತಂಗಡಿ, ಪುತ್ರೂರು, ಸುಳ್ಯ ಸಹಿತ ಬೇರೆ ಬೇರೆ ಕಡೆಗಳಲ್ಲಿ ಬಿಡುಗಡೆಗೊಂಡಿದೆ. ಬೆಂಗಳೂರು, ಮೈಸೂರು ಮೊದಲಾದ ಕಡೆಗಳಲ್ಲೂ ಸಿನಿಮಾ ಬಿಡುಗಡೆಯಾಗಿದೆ.

    ಇದೊಂದು ಪಕ್ಕಾ ಕಾಮಿಡಿ ಸಿನಿಮಾ, ಸೆಂಟಿಮೆಂಟ್, ಆ್ಯಕ್ಷನ್, ಥ್ರಿಲ್ಲರ್ ಹೀಗೆ ಎಲ್ಲಾ ಅಂಶಗಳನ್ನು ಒಳಗೊಂಡಿರುವ ಪಕ್ಕಾ ಫ್ಯಾಮಿಲಿ ಪ್ಯಾಕೇಜ್, ಎಲ್ಲಾ ಚಿಂತೆಗಳನ್ನು ಬಿಟ್ಟು ಎಂಜಾಯ್ ಮಾಡಬೇಕೆಂದು ರೆಡಿ ಮಾಡಿರುವ ಸಿನಿಮಾ ಇದು. ಹಣ ಕೊಟ್ಟು ಬರುವ ಪ್ರೇಕ್ಷಕರಿಗೆ ಏನೇನು ಬೇಕೋ ಎಲ್ಲವೂ “ಟಾಸ್” ಸಿನಿಮಾದಲ್ಲಿದೆ ಎಂದು ನಿರ್ದೇಶಕ ಅರ್ಜುನ್ ದೇವ್ ತಿಳಿಸಿದ್ದಾರೆ.

    _Sathish Kapikad 

    Share. Facebook Twitter Pinterest LinkedIn Email WhatsApp
    Previous Articleಪ್ರಧಾನಿ ನರೇಂದ್ರ ಮೋದಿ ಜನ್ಮದಿನ ಹಿನ್ನೆಲೆ: ಶ್ರೀ ಕ್ಷೇತ್ರ ಕದ್ರಿಯಲ್ಲಿ ಸಂಸದರು ಹಾಗೂ ಬಿಜೆಪಿ ಜಿಲ್ಲಾ ನೇತೃತ್ವದಲ್ಲಿ ವಿಶೇಷ ರುದ್ರಾಭಿಷೇಕ ಪೂಜೆ
    Next Article ನಾವು ಜನರ ಭಾವನೆ ಮೇಲೆ ರಾಜಕೀಯ ಮಾಡಲ್ಲ -ನಮಗೆ ರಾಜಕೀಯಕ್ಕಿಂತ ಜನರ ಬದುಕು ಮುಖ್ಯ: ಮಣ್ಣಗುಡ್ಡೆಯಲ್ಲಿ ಉಪಾಹಾರ ಸೇವಿಸಿ ಸಿಎಂ ಡಿ.ಕೆ.ಶಿವಕುಮಾರ್

    Related Posts

    ಕರಾವಳಿ

    ಕ್ರೀಡಾಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಎಂ.ಆರ್. ಪೂವಮ್ಮ ಅವರು ಪ್ರತಿಷ್ಠಿತ ರಾಜ್ಯಮಟ್ಟದ ‘ವಂದನಾ ಪ್ರಶಸ್ತಿ’ಗೆ ಆಯ್ಕೆ

    October 28, 2026
    ಕರಾವಳಿ

    ನ.3ರಿಂದ 15 : ಮಾಂಡ್ ಸೊಭಾಣ್ ಸಂಘಟನೆಯ ವತಿಯಿಂದ ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮ್ಮೇಳನ -ಸತತ 12 ದಿನ, 12 ಗಂಟೆ ಹಾಗೂ 12 ನಿಮಿಷಗಳ ನಿರಂತರ ಗಾಯನದ ಮೂಲಕ ಗಿನ್ನೆಸ್ ದಾಖಲೆಗೆ ಪ್ರಯತ್ನ

    October 28, 2026
    ಕರಾವಳಿ

    ಸತತ ಸೋಲುಗಳ ಹತಾಶೆಯಿಂದ ಪ್ರಧಾನಿಗಳ ತಂದೆಯವರನ್ನು ನಿಂದನೆ ಮಾಡಿರುವ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆ ಅವರ ಹಿರಿತನಕ್ಕೆ ಶೋಭೆಯಲ್ಲ: ಶಾಸಕ ಕಾಮತ್ 

    October 27, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.