Close Menu
SK Media NewsSK Media News
    What's Hot

    ಸತತ ಸೋಲುಗಳ ಹತಾಶೆಯಿಂದ ಪ್ರಧಾನಿಗಳ ತಂದೆಯವರನ್ನು ನಿಂದನೆ ಮಾಡಿರುವ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆ ಅವರ ಹಿರಿತನಕ್ಕೆ ಶೋಭೆಯಲ್ಲ: ಶಾಸಕ ಕಾಮತ್ 

    October 27, 2026

    ನವಂಬರ್ 1ರಂದು ಸುರತ್ಕಲ್ ಬಂಟರ ಭವನದಲ್ಲಿ ರಂಗುರಂಗಿನ ರಂಗೋತ್ಸವ – ಸಂಗೀತ ಗಾನಸುಧೆ – ಶ್ರೀಮತಿ ಸತ್ಯಭಾಮ ನಾಟಕ : ಲಕ್ಷ್ಮಣ್ ಕುಮಾರ್ ಮಲ್ಲೂರ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ

    October 27, 2026

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಸೌಜನ್ಯ ಪ್ರಕರಣದ ಮರುತನಿಖೆಗೆ ಎಸ್‌ಐಟಿ ರಚನೆ ಸ್ವಾಗತ: ತಂಡದ ನೇತೃತ್ವ ಎನ್.ಶಶಿಕುಮಾರ್ ಬದಲಿಗೆ ಡಿ.ರೂಪಾ ಅವರನ್ನು ನೇಮಕಗೊಳಿಸಲು ವಿಮೆನ್ ಇಂಡಿಯಾ ಮೂವ್ಮೆಂಟ್ ಒತ್ತಾಯ
    ಕರಾವಳಿ

    ಸೌಜನ್ಯ ಪ್ರಕರಣದ ಮರುತನಿಖೆಗೆ ಎಸ್‌ಐಟಿ ರಚನೆ ಸ್ವಾಗತ: ತಂಡದ ನೇತೃತ್ವ ಎನ್.ಶಶಿಕುಮಾರ್ ಬದಲಿಗೆ ಡಿ.ರೂಪಾ ಅವರನ್ನು ನೇಮಕಗೊಳಿಸಲು ವಿಮೆನ್ ಇಂಡಿಯಾ ಮೂವ್ಮೆಂಟ್ ಒತ್ತಾಯ

    September 25, 20262 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು: 14 ವರ್ಷಗಳ ಸುದೀರ್ಘ ಕಾಯುವಿಕೆಯ ಬಳಿಕ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶದಂತೆ ವಿಶೇಷ ತನಿಖಾ ತಂಡವನ್ನು (SIT) ಸರ್ಕಾರ ರಚಿಸಿರುವುದು ಸ್ವಾಗತಾರ್ಹ.

    ಆದರೇ ಈ ತಂಡಕ್ಕೆ ಈ ಹಿಂದೆ ಮಂಗಳೂರು ಪೋಲಿಸ್ ಆಯುಕ್ತರಾಗಿದ್ದ ಶಶಿಕುಮಾರ್ ಬದಲಿಗೆ ನಿರ್ಬೀತ ಹಾಗೂ ದಕ್ಷ ಅಧಿಕಾರಿ ಡಿ.ರೂಪಾ ದಿವಾಕರ್ ಮೌದ್ಗಿಲ್ ಸೇರ್ಪಡೆಗೊಳಿಸಿ ತಂಡದ ಮುಖ್ಯಸ್ಥರಾಗಿ ಮಾಡಬೇಕೆಂದು ವಿಮೆನ್ ಇಂಡಿಯಾ ಮೂವ್ಮೆಂಟ್ ಮಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಝರೀನಾ ಉಪ್ಪಿನಂಗಡಿ ಆಗ್ರಹಿಸಿದ್ದಾರೆ

    ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆಗೊಳಿಸಿರುವ ಅವರು
    ಪ್ರಕರಣದ ಹಿಂದಿನ ತನಿಖೆಯಲ್ಲಿ ನಡೆದಿರುವ ಲೋಪಗಳು ಹಾಗೂ ಕಡೆಗಣಿಸಲ್ಪಟ್ಟ ಸಾಕ್ಷ್ಯಗಳ ಕುರಿತು ನ್ಯಾಯಾಲಯ ವ್ಯಕ್ತಪಡಿಸಿರುವ ಗಂಭೀರ ಅಭಿಪ್ರಾಯಗಳನ್ನು ಗಮನದಲ್ಲಿಟ್ಟುಕೊಂಡು, ನಿಷ್ಪಕ್ಷಪಾತ ಹಾಗೂ ಸ್ವತಂತ್ರ ಮರುತನಿಖೆ ನಡೆಸಿ ಸತ್ಯಾಂಶವನ್ನು ಹೊರತರುವ ನಿಟ್ಟಿನಲ್ಲಿ ಈ ಹೊಸ ತನಿಖಾ ತಂಡದ ರಚನೆ ಅನಿವಾರ್ಯವಾಗಿತ್ತು.

    ಆದರೆ ಹೊಸ ತನಿಖಾ ತಂಡಕ್ಕೆ ದಕ್ಷತೆ ಮತ್ತು ನಿರ್ಭೀತ ಕಾರ್ಯವೈಖರಿಗೆ ಹೆಸರಾಗಿರುವ ಹಿರಿಯ ಐಪಿಎಸ್ ಅಧಿಕಾರಿ ಡಿ. ರೂಪಾ ದಿವಾಕರ್ ಮೌದ್ಗಿಲ್ ರವರನ್ನು ತನಿಖಾ ತಂಡದ ಮುಖ್ಯಸ್ಥರಾಗಿ ನೇಮಿಸಬೇಕೆಂದು ಸಾರ್ವಜನಿಕ ಬೇಡಿಕೆಯಾಗಿತ್ತು.

    ಈ ಬೇಡಿಕೆಯನ್ನು ಪರಿಗಣಿಸಿ , ಸರ್ಕಾರವು ಈಗಾಗಲೇ ನಿರ್ದೇಶಿಸಿರುವ ಎಸ್‌ಐಟಿ ತನಿಖಾ ತಂಡದ ಮುಖ್ಯಸ್ಥರಾಗಿರುವ ಹಿರಿಯ ಐಪಿಎಸ್ ಅಧಿಕಾರಿ ಹಾಗೂ ಈ ಹಿಂದೆ ಮಂಗಳೂರು ಪೋಲಿಸ್ ಆಯುಕ್ತರಾದ ಶ್ರೀ .ಎನ್. ಶಶಿಕುಮಾರ್ ಹಾಗೂ ಪ್ರಸ್ತುತ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೋಲಿಸ್ ಅಧೀಕ್ಷಕರಾದ ಶ್ರೀ ವೆಂಕಟೇಶ್ ಪ್ರಸನ್ನ ರವರ ಬಗ್ಗೆ ಭ್ರಷ್ಟಾಚಾರ ಹಾಗೂ ಪ್ರಭಾವಿಗಳ ಒತ್ತಡಕ್ಕೆ ಮಣಿಯುವ ಅಧಿಕಾರಿ ಮತ್ತು ಹಲವಾರು ಆರೋಪಗಳಿರುವ ಅಧಿಕಾರಿಗಳು ಎಂಬುದರ ಕುರಿತು ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ, ಸರ್ಕಾರವು ತನ್ನ ಆದೇಶವನ್ನು ಮರುಪರಿಶೀಲಿಸಬೇಕು. ಹೊಸ ತನಿಖಾ ತಂಡದ ನೇತೃತ್ವವನ್ನು ಡಿ. ರೂಪಾ ಮೌದ್ಗಿಲ್ ಅವರಿಗೆ ವಹಿಸಬೇಕೆಂದು ವಿಮೆನ್ ಇಂಡಿಯಾ ಮೂವ್‌ಮೆಂಟ್ ಆಗ್ರಹಿಸುತ್ತದೆ.

    ಯಾವುದೇ ರಾಜಕೀಯ, ಧಾರ್ಮಿಕ ಅಥವಾ ಸಾಮಾಜಿಕ ಒತ್ತಡಗಳಿಗೆ ಹಾಗೂ ಬಾಹ್ಯ ಪ್ರಭಾವಗಳಿಗೆ ಮಣಿಯದೆ, ಲಭ್ಯವಿರುವ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಹಾಗೂ ಪ್ರಮುಖ ಸಾಕ್ಷಿಯಾಧರಗಳನ್ನು ನಾಶ ಮಾಡಿದ ಅಧಿಕಾರಿಗಳ ವಿರುದ್ಧ ಸಂಪೂರ್ಣ ಸ್ವಾತಂತ್ರ್ಯದೊಂದಿಗೆ ಈ ಎಸ್‌ಐಟಿ ತಂಡವು ತನಿಖೆ ನಡೆಸಬೇಕು. ನಿಜವಾದ ಅಪರಾಧಿಗಳನ್ನು ಪತ್ತೆಹಚ್ಚಿ ಶಿಕ್ಷೆಗೆ ಒಳಪಡಿಸುವುದರೊಂದಿಗೆ, ದೀರ್ಘಕಾಲದಿಂದ ನ್ಯಾಯಕ್ಕಾಗಿ ಕಾಯುತ್ತಿರುವ ಸೌಜನ್ಯಳ ಕುಟುಂಬಕ್ಕೆ ಕೂಡಲೇ ನ್ಯಾಯ ಒದಗಿಸಬೇಕು .

    ಸೌಜನ್ಯಳ ಕುಟುಂಬಕ್ಕೆ ಸಂಪೂರ್ಣ ನ್ಯಾಯ ದೊರಕುವವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

    _Sathish Kapikad 

    Share. Facebook Twitter Pinterest LinkedIn Email WhatsApp
    Previous Articleಸಮಾನತೆ ಸಂವಿಧಾನದ ಮೂಲ ಆಶಯ : ಭಾರತ ಸಂವಿಧಾನದ ಪೀಠಿಕೆ ಫಲಕ ಅನಾವರಣಗೊಳಿಸಿ ಶಾಸಕ ಅಶೋಕ್ ಕುಮಾರ್ ರೈ
    Next Article ಪ್ರೊ. ಅಮೃತ ಸೋಮೇಶ್ವರ ನೆನಪಿನಲ್ಲಿ ರಾಜ್ಯಮಟ್ಟದ ‘ಅಮೃತ ಮಂಥನ’ ಕಾರ್ಯಕ್ರಮ: ಸೆಪ್ಟೆಂಬರ್ 27ರಂದು ಮಂಗಳೂರಿನಲ್ಲಿ..

    Related Posts

    ಕರಾವಳಿ

    ಸತತ ಸೋಲುಗಳ ಹತಾಶೆಯಿಂದ ಪ್ರಧಾನಿಗಳ ತಂದೆಯವರನ್ನು ನಿಂದನೆ ಮಾಡಿರುವ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆ ಅವರ ಹಿರಿತನಕ್ಕೆ ಶೋಭೆಯಲ್ಲ: ಶಾಸಕ ಕಾಮತ್ 

    October 27, 2026
    ಕರಾವಳಿ

    ನವಂಬರ್ 1ರಂದು ಸುರತ್ಕಲ್ ಬಂಟರ ಭವನದಲ್ಲಿ ರಂಗುರಂಗಿನ ರಂಗೋತ್ಸವ – ಸಂಗೀತ ಗಾನಸುಧೆ – ಶ್ರೀಮತಿ ಸತ್ಯಭಾಮ ನಾಟಕ : ಲಕ್ಷ್ಮಣ್ ಕುಮಾರ್ ಮಲ್ಲೂರ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ

    October 27, 2026
    ಕರಾವಳಿ

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.