Close Menu
SK Media NewsSK Media News
    What's Hot

    ಯುಪಿಎಸ್‌ಸಿ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 42ನೇ ರ‍್ಯಾಂಕ್ ಗಳಿಸಿದ ರಫೇಲ್ ಯುದ್ಧವಿಮಾನದ ಪೈಲಟ್ ಫ್ಲೈಟ್ ಲೆಫ್ಟಿನೆಂಟ್ ಪ್ರಜ್ವಲ್ ಆರ್. ಶೆಟ್ಟಿ ಅವರ ಪಯಣ

    October 28, 2026

    ಮಂಗಳೂರಿನ ಅಭಿವೃದ್ಧಿಗೆ ನಿಮ್ಮ ಕೊಡುಗೆ ಏನು? ಎಷ್ಟು ಅನುದಾನ ತಂದಿದ್ದೀರಿ? ಶ್ವೇತಪತ್ರ ಹೊರಡಿಸಿ ನೇರಾನೇರ ಚರ್ಚೆಗೆ ಸಿದ್ಧ : ಶಾಸಕ ಕಾಮತ್ ಅವರಿಗೆ ಕಾಂಗ್ರೆಸ್ ಮುಖಂಡ ಎಸಿ ವಿನಯ್ ರಾಜ್ ಸವಾಲು 

    October 28, 2026

    ಕ್ರೀಡಾಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಎಂ.ಆರ್. ಪೂವಮ್ಮ ಅವರು ಪ್ರತಿಷ್ಠಿತ ರಾಜ್ಯಮಟ್ಟದ ‘ವಂದನಾ ಪ್ರಶಸ್ತಿ’ಗೆ ಆಯ್ಕೆ

    October 28, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಪ್ರೊ. ಅಮೃತ ಸೋಮೇಶ್ವರ ನೆನಪಿನಲ್ಲಿ ರಾಜ್ಯಮಟ್ಟದ ‘ಅಮೃತ ಮಂಥನ’ ಕಾರ್ಯಕ್ರಮ: ಸೆಪ್ಟೆಂಬರ್ 27ರಂದು ಮಂಗಳೂರಿನಲ್ಲಿ..
    ಕರಾವಳಿ

    ಪ್ರೊ. ಅಮೃತ ಸೋಮೇಶ್ವರ ನೆನಪಿನಲ್ಲಿ ರಾಜ್ಯಮಟ್ಟದ ‘ಅಮೃತ ಮಂಥನ’ ಕಾರ್ಯಕ್ರಮ: ಸೆಪ್ಟೆಂಬರ್ 27ರಂದು ಮಂಗಳೂರಿನಲ್ಲಿ..

    September 25, 20262 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು: ಬಹುಶ್ರುತ ವಿದ್ವಾಂಸ, ಸಾರಸ್ವತ ಲೋಕದ ಅಚ್ಚಳಿಯದ ಮೇರು ವ್ಯಕ್ತಿತ್ವ ಪ್ರೊ. ಅಮೃತ ಸೋಮೇಶ್ವರ ಅವರ ಕುರಿತು ಒಂದು ದಿನದ ರಾಜ್ಯಮಟ್ಟದ ‘ಅಮೃತ ಮಂಥನ’ ಕಾರ್ಯಕ್ರಮವನ್ನು ಮಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ.

    ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಹಾಗೂ ಸಂತ ಆಲೋಶಿಯಸ್ ವಿಶ್ವವಿದ್ಯಾಲಯ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿವೆ. ಕಲಾಗಂಗೋತ್ರಿ, ರಂಗಸಂಗಾತಿ, ಬಹುರೂಪಿ ಫೌಂಡೇಷನ್ ಹಾಗೂ ನಿಟ್ಟೆ ವಿವಿಯ ತುಳು ಅಧ್ಯಯನ ಕೇಂದ್ರ ಕಾರ್ಯಕ್ರಮಕ್ಕೆ ಸಹಕಾರ ನೀಡಿವೆ.

    ಸೆಪ್ಟೆಂಬರ್ 27 ರಂದು ಭಾನುವಾರ ಸಂತ ಆಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಜರಗುವ ಈ ಕಾರ್ಯಕ್ರಮವನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಎಲ್.ಎನ್. ಮುಕುಂದರಾಜ್ ಅವರು ಉದ್ಘಾಟಿಸಲಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಅವರು ಪ್ರಧಾನ ಭಾಷಣವನ್ನು ಮಾಡಲಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ ಕಾಪಿಕಾಡ್ ಹಾಗೂ ಸಂತ ಆಲೋಶಿಯಸ್ ವಿಶ್ವವಿದ್ಯಾಲಯದ ಕುಲಪತಿಗಳಾದ ರೆ. ಡಾ. ಪ್ರವೀಣ್ ಮಾರ್ಟಿಸ್ ಎಸ್. ಜೆ. ಅವರು ಅಮೃತ ನಮನವನ್ನು ಸಲ್ಲಿಸಲಿದ್ದಾರೆ. ಹಿರಿಯ ವಿದ್ವಾಂಸ ಪ್ರೊ ಬಿ.ಎ. ವಿವೇಕ ರೈ ಅವರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರೊ ಅಮೃತ ಸೋಮೇಶ್ವರ ಕುಟುಂಬಸ್ಥರ ಪರವಾಗಿ ಡಾ. ಚೇತನ ಸೋಮೇಶ್ವರ ಹಾಗೂ ಜೀವನ್ ಸೋಮೇಶ್ವರ ಅವರು ತಿಳಿಸಿದ್ದಾರೆ.

    ಅಮೃತರ ಕುರಿತ ವಿಚಾರ ಸಂಕಿರಣದಲ್ಲಿ ಡಾ ಸಾಯಿಗೀತಾ, ಸುನಿಲ್ ಪಲ್ಲಮಜಲು, ಡಾ ಕೆ. ಮಹಾಲಿಂಗ ಅವರು ಪ್ರಬಂಧಗಳನ್ನು ಮಂಡಿಸಲಿದ್ದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯರಾದ ಡಾ.ಹೆಚ್. ಜಯಪ್ರಕಾಶ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

    ಅಮೃತರ ಜೊತೆಗಿನ ಒಡನಾಟವನ್ನು ನೆನಪಿಸಿಕೊಳ್ಳುವ ಸಂವಾದದಲ್ಲಿ ಡಾ ನಾ. ದಾಮೋದರ ಶೆಟ್ಟಿ, ಚಂದ್ರಕಲಾ ನಂದಾವರ, ಡಾ ನರೇಂದ್ರ ರೈ ದೇರ್ಲ, ಬೇ.ಸೀ ಗೋಪಾಲಕೃಷ್ಣ ಅವರು ಭಾಗವಹಿಸಲಿದ್ದಾರೆ.

    ‘ಜರ್ನಿ ಥಿಯೇಟರ್’ ತಂಡ ಅಮೃತ ಸೋಮೇಶ್ವರ ಅವರು ರಚಿಸಿದ ತುಳು ಹಾಗೂ ಕನ್ನಡ ಭಾಷೆಯಲ್ಲಿನ ರಂಗ ಹಾಗೂ ಭಾವಗೀತೆಗಳ ಗಾಯನ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ.

    ಸಮಾರೋಪ ಭಾಷಣವನ್ನು ಹಿರಿಯ ಜಾನಪದ ವಿದ್ವಾಂಸ ಡಾ.ಕೆ. ಚಿನ್ನಪ್ಪ ಗೌಡ ಆವರು ಮಾಡಲಿದ್ದು. ಹಿರಿಯ ವಿದ್ವಾಂಸರಾದ ಡಾ ತಾಳ್ತಜೆ ವಸಂತಕುಮಾರ್ ಅವರು ಅಧ್ಯಕ್ಷತೆ ವಹಿಸುತ್ತಾರೆ.

    _Sathish Kapikad 

    Share. Facebook Twitter Pinterest LinkedIn Email WhatsApp
    Previous Articleಸೌಜನ್ಯ ಪ್ರಕರಣದ ಮರುತನಿಖೆಗೆ ಎಸ್‌ಐಟಿ ರಚನೆ ಸ್ವಾಗತ: ತಂಡದ ನೇತೃತ್ವ ಎನ್.ಶಶಿಕುಮಾರ್ ಬದಲಿಗೆ ಡಿ.ರೂಪಾ ಅವರನ್ನು ನೇಮಕಗೊಳಿಸಲು ವಿಮೆನ್ ಇಂಡಿಯಾ ಮೂವ್ಮೆಂಟ್ ಒತ್ತಾಯ
    Next Article ಮಾದಕ ಮುಕ್ತ ಸಮಾಜ ನಮ್ಮೆಲ್ಲರ ದಿವ್ಯ ಸಂಕಲ್ಪ ಆಗಬೇಕು : ಮಾದಕ ದ್ರವ್ಯ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ  ಪಿ.ಎಸ್. ಐ. ಪ್ರತಿಭಾ 

    Related Posts

    ಕರಾವಳಿ

    ಯುಪಿಎಸ್‌ಸಿ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 42ನೇ ರ‍್ಯಾಂಕ್ ಗಳಿಸಿದ ರಫೇಲ್ ಯುದ್ಧವಿಮಾನದ ಪೈಲಟ್ ಫ್ಲೈಟ್ ಲೆಫ್ಟಿನೆಂಟ್ ಪ್ರಜ್ವಲ್ ಆರ್. ಶೆಟ್ಟಿ ಅವರ ಪಯಣ

    October 28, 2026
    ಕರಾವಳಿ

    ಮಂಗಳೂರಿನ ಅಭಿವೃದ್ಧಿಗೆ ನಿಮ್ಮ ಕೊಡುಗೆ ಏನು? ಎಷ್ಟು ಅನುದಾನ ತಂದಿದ್ದೀರಿ? ಶ್ವೇತಪತ್ರ ಹೊರಡಿಸಿ ನೇರಾನೇರ ಚರ್ಚೆಗೆ ಸಿದ್ಧ : ಶಾಸಕ ಕಾಮತ್ ಅವರಿಗೆ ಕಾಂಗ್ರೆಸ್ ಮುಖಂಡ ಎಸಿ ವಿನಯ್ ರಾಜ್ ಸವಾಲು 

    October 28, 2026
    ಕರಾವಳಿ

    ಕ್ರೀಡಾಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಎಂ.ಆರ್. ಪೂವಮ್ಮ ಅವರು ಪ್ರತಿಷ್ಠಿತ ರಾಜ್ಯಮಟ್ಟದ ‘ವಂದನಾ ಪ್ರಶಸ್ತಿ’ಗೆ ಆಯ್ಕೆ

    October 28, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.