Close Menu
SK Media NewsSK Media News
    What's Hot

    ನವಂಬರ್ 1ರಂದು ಸುರತ್ಕಲ್ ಬಂಟರ ಭವನದಲ್ಲಿ ರಂಗುರಂಗಿನ ರಂಗೋತ್ಸವ – ಸಂಗೀತ ಗಾನಸುಧೆ – ಶ್ರೀಮತಿ ಸತ್ಯಭಾಮ ನಾಟಕ : ಲಕ್ಷ್ಮಣ್ ಕುಮಾರ್ ಮಲ್ಲೂರ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ

    October 27, 2026

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026

    ಮಂಗಳ ಕ್ರೀಡಾಂಗಣಕ್ಕೆ 20 ಕೋಟಿ ಅನುದಾನ : ಅಭಿವೃದ್ಧಿ ಯೋಜನೆ ಅನುಷ್ಠಾನದ ಬಗ್ಗೆ ಮೂಡಾ ಅಧ್ಯಕ್ಷರ ನೇತೃತ್ವದಲ್ಲಿ ಸಭೆ 

    October 25, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಅಥ್ಲೀಟ್ ಎಂ.ಆರ್. ಪೂವಮ್ಮ ಅವರಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ; ರಾಜ್ಯ ಸರ್ಕಾರದಿಂದ ಸೂಕ್ತ ಗೌರವಧನ ನೀಡಲು ಜೆಡಿಎಸ್ ಯುವ ನಾಯಕ ಅಕ್ಷಿತ್ ಸುವರ್ಣ ಆಗ್ರಹ
    ಕರಾವಳಿ

    ಅಥ್ಲೀಟ್ ಎಂ.ಆರ್. ಪೂವಮ್ಮ ಅವರಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ; ರಾಜ್ಯ ಸರ್ಕಾರದಿಂದ ಸೂಕ್ತ ಗೌರವಧನ ನೀಡಲು ಜೆಡಿಎಸ್ ಯುವ ನಾಯಕ ಅಕ್ಷಿತ್ ಸುವರ್ಣ ಆಗ್ರಹ

    October 2, 20262 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು, ಅಕ್ಟೋಬರ್.2: ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ಇಂದು ಸಂಜೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಜನತಾದಳ (ಜಾತ್ಯತೀತ) ಅಧ್ಯಕ್ಷ ಅಕ್ಷಿತ್ ಸುವರ್ಣ ಅವರು ಆತ್ಮೀಯವಾಗಿ ಸ್ವಾಗತಿಸಿದರು.

    ಈ ಸಂದರ್ಭದಲ್ಲಿ ಎಂ.ಆರ್. ಪೂವಮ್ಮ ಅವರಿಗೆ ಪುಷ್ಪಗುಚ್ಛ ನೀಡಿ ಗೌರವಿಸಲಾಯಿತು. ಅವರ ಕ್ರೀಡಾ ಸಾಧನೆ, ಪರಿಶ್ರಮ ಹಾಗೂ ಸಮರ್ಪಣಾ ಮನೋಭಾವವನ್ನು ಅಕ್ಷಿತ್ ಸುವರ್ಣ ಅವರು ಶ್ಲಾಘಿಸಿದರು.

    ಈ ಸಂದರ್ಭದಲ್ಲಿ ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆಯ ಸಚಿವರು ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರು ಎಂ.ಆರ್. ಪೂವಮ್ಮ ಅವರ ಕ್ರೀಡಾ ಸಾಧನೆಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿ, ಅವರಿಗೆ ಶುಭ ಹಾರೈಸಿದ್ದಾರೆ ಎಂದು ಅಕ್ಷಿತ್ ಸುವರ್ಣ ಅವರು ತಿಳಿಸಿದರು.

    ಎಂ.ಆರ್. ಪೂವಮ್ಮ ಅವರ ಕ್ರೀಡಾ ಸಾಧನೆಗೆ ರಾಜ್ಯ ಸರ್ಕಾರ ಸೂಕ್ತ ಗೌರವಧನ ನೀಡಬೇಕು ಅಂತರರಾಷ್ಟ್ರೀಯ ಮಟ್ಟದಲ್ಲಿ ದೇಶವನ್ನು ಪ್ರತಿನಿಧಿಸಿ ಸಾಧನೆ ಮಾಡಿರುವ ಎಂ.ಆರ್. ಪೂವಮ್ಮ ಅವರಂತಹ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ಸೂಕ್ತ ಗೌರವಧನ ಹಾಗೂ ಅಗತ್ಯ ಪ್ರೋತ್ಸಾಹ ನೀಡಬೇಕು. ಕ್ರೀಡಾಪಟುಗಳು ತಮ್ಮ ಜೀವನದ ಅಮೂಲ್ಯ ಸಮಯವನ್ನು ದೇಶದ ಕೀರ್ತಿಗಾಗಿ ಮೀಸಲಿಟ್ಟು ಕಠಿಣ ಪರಿಶ್ರಮ ಪಡುತ್ತಾರೆ. ಇಂತಹ ಸಾಧಕರನ್ನು ಗುರುತಿಸಿ ಗೌರವಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಅಕ್ಷಿತ್ ಸುವರ್ಣ ಅವರು ಅಭಿಪ್ರಾಯಪಟ್ಟರು.

    ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪ್ರತಿಭೆಗಳಿಗೆ ಕೇವಲ ಪ್ರಶಂಸೆ ಮಾತ್ರವಲ್ಲದೆ, ಅವರ ಸಾಧನೆಗೆ ತಕ್ಕ ಆರ್ಥಿಕ ಗೌರವ, ಪ್ರೋತ್ಸಾಹ ಮತ್ತು ಅಗತ್ಯ ಸೌಲಭ್ಯಗಳನ್ನೂ ಒದಗಿಸಬೇಕು. ಇದರಿಂದ ಮುಂದಿನ ಪೀಳಿಗೆಯ ಯುವ ಕ್ರೀಡಾಪಟುಗಳಿಗೆ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಹೆಚ್ಚಿನ ಪ್ರೇರಣೆ ದೊರೆಯಲಿದೆ ಎಂದು ಅವರು ಹೇಳಿದರು.

    ರಾಜ್ಯ ಸರ್ಕಾರವು ಎಂ.ಆರ್. ಪೂವಮ್ಮ ಅವರ ಕ್ರೀಡಾ ಸಾಧನೆಯನ್ನು ಪರಿಗಣಿಸಿ, ಅವರಿಗೆ ಸೂಕ್ತ ಗೌರವಧನ ಘೋಷಿಸುವ ಮೂಲಕ ಕ್ರೀಡಾಪಟುಗಳಿಗೆ ಗೌರವ ನೀಡುವ ಮಾದರಿಯಾಗಬೇಕು. ಕ್ರೀಡಾಪಟುಗಳ ಸಾಧನೆಗೆ ಸರ್ಕಾರದ ಮಾನ್ಯತೆ ಮತ್ತು ಪ್ರೋತ್ಸಾಹ ದೊರೆಯುವುದು ಅತ್ಯಂತ ಅಗತ್ಯ ಎಂದು ಅಕ್ಷಿತ್ ಸುವರ್ಣ ಅವರು ಆಗ್ರಹಿಸಿದರು.

    ಈ ಸಂದರ್ಭದಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರ ಅಧ್ಯಕ್ಷ ಸತ್ತಾರ್ ಬಂದರು, ಯುವ ಪಧಾದಿಕಾರಿಗಳಾದ ಆದರ್ಶ ಪೂಜಾರಿ,ನಿಶಾಂತ್,ಸುಶಾಂತ್ ,ವಿನೀತ್ ಮುಂತಾದವರು ಪಾಲ್ಗೊಂಡಿದ್ದರು.

    _Sathish Kapikad

    Share. Facebook Twitter Pinterest LinkedIn Email WhatsApp
    Previous Articleಜಿಲ್ಲಾಡಳಿತದಿಂದ ಗಾಂಧಿ ಜಯಂತಿ ಆಚರಣೆ : ಮಹಾತ್ಮ ಗಾಂಧೀಜಿ ಪ್ರತಿಮೆಗೆ ಖಾದಿ ಹಾರ ಮತ್ತು ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ
    Next Article ನಾಡಿನಾದ್ಯಂತ ದಸರಾ ಸಂಭ್ರಮ : ಶಾಲಾ ಮಕ್ಕಳಿಗೆ ನೀಡುವ ದಸರಾ ರಜೆಯನ್ನು ಹೆಚ್ಚುವರಿಯಾಗಿ ಎರಡು ದಿನ ವಿಸ್ತರಿಸುವಂತೆ ಶಾಸಕ ವೇದವ್ಯಾಸ ಕಾಮತ್ ಆಗ್ರಹ 

    Related Posts

    ಕರಾವಳಿ

    ನವಂಬರ್ 1ರಂದು ಸುರತ್ಕಲ್ ಬಂಟರ ಭವನದಲ್ಲಿ ರಂಗುರಂಗಿನ ರಂಗೋತ್ಸವ – ಸಂಗೀತ ಗಾನಸುಧೆ – ಶ್ರೀಮತಿ ಸತ್ಯಭಾಮ ನಾಟಕ : ಲಕ್ಷ್ಮಣ್ ಕುಮಾರ್ ಮಲ್ಲೂರ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ

    October 27, 2026
    ಕರಾವಳಿ

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026
    ಕರಾವಳಿ

    ಮಂಗಳ ಕ್ರೀಡಾಂಗಣಕ್ಕೆ 20 ಕೋಟಿ ಅನುದಾನ : ಅಭಿವೃದ್ಧಿ ಯೋಜನೆ ಅನುಷ್ಠಾನದ ಬಗ್ಗೆ ಮೂಡಾ ಅಧ್ಯಕ್ಷರ ನೇತೃತ್ವದಲ್ಲಿ ಸಭೆ 

    October 25, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.