Close Menu
SK Media NewsSK Media News
    What's Hot

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026

    ಮಂಗಳ ಕ್ರೀಡಾಂಗಣಕ್ಕೆ 20 ಕೋಟಿ ಅನುದಾನ : ಅಭಿವೃದ್ಧಿ ಯೋಜನೆ ಅನುಷ್ಠಾನದ ಬಗ್ಗೆ ಮೂಡಾ ಅಧ್ಯಕ್ಷರ ನೇತೃತ್ವದಲ್ಲಿ ಸಭೆ 

    October 25, 2026

    ಪೋಲಿಯೋ ಮುಕ್ತ ಸಮಾಜ ನಿರ್ಮಾಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸೇವೆ ಅನನ್ಯ: ರೋಟರಿ ಜಿಲ್ಲಾ ಗವರ್ನರ್ ಸತೀಶ್ ಬೋಳಾರ್

    October 25, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ರಾಜ್ಯ ಹವಾಮಾನ ಮುನ್ಸೂಚನೆ : ಮೇಲ್ಮೈ ಸುಳಿಗಾಳಿಗಳ ಹಿನ್ನೆಲೆಯಲ್ಲಿ ಮಿಂಚು, ಗುಡುಗು ಸಹಿತಾ ಮಳೆಯ ಕಣ್ಣು ಮುಚ್ಚಾಲೆ
    ಕರಾವಳಿ

    ರಾಜ್ಯ ಹವಾಮಾನ ಮುನ್ಸೂಚನೆ : ಮೇಲ್ಮೈ ಸುಳಿಗಾಳಿಗಳ ಹಿನ್ನೆಲೆಯಲ್ಲಿ ಮಿಂಚು, ಗುಡುಗು ಸಹಿತಾ ಮಳೆಯ ಕಣ್ಣು ಮುಚ್ಚಾಲೆ

    October 5, 20262 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು, ಅಕ್ಟೋಬರ್.05:ಕರಾವಳಿಯ ದ.ಕ ಉಡುಪಿ ಕಾಸರಗೋಡು ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ( ಸುಳ್ಯ ತಾಲ್ಲೂಕು ಹೊರತುಪಡಿಸಿ ) ಮುಂಜಾನೆ/ ಬೆಳಿಗ್ಗೆ ಗುಡುಗು ಸಹಿತ ಸಾಧಾರಣ ಮಳೆಯಾಗಿದೆ. ದ.ಕ. ದ ಘಟ್ಟಪ್ರದೇಶಗಳ ಸುತ್ತಮುತ್ತ ನಿನ್ನೆ ಸಂಜೆ ಗುಡುಗು ಮಳೆಯಾಗಿತ್ತು. ಚಿಕ್ಕಮಗಳೂರು ಶಿವಮೊಗ್ಗ ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡಿರುವ ತಾಲ್ಲೂಕುಗಳಲ್ಲಿಯೂ ಸಾಧಾರಣ ಮಳೆಯಾಗಿದೆ.

    ಇವತ್ತಿನ ಮುನ್ಸೂಚನೆ ಪ್ರಕಾರ ಕರಾವಳಿಯ ಜಿಲ್ಲೆಗಳಲ್ಲಿ ಮೇಲ್ಮೈ ಸುಳಿಗಾಳಿಗಳ ಕಾರಣ ಹಗಲು ಮೋಡದ ವಾತಾವರಣ ಇರಲಿದ್ದು ಹಗಲು ಗುಡುಗು ಸಹಿತ ತುಂತುರು ಅಥವಾ ಸಾಮಾನ್ಯ ಮಳೆಯಾಗುವ ಮುನ್ಸೂಚನೆ ಇದೆ. ಕರಾವಳಿ ತೀರದಲ್ಲಿ ಮಳೆ ಪ್ರಮಾಣ ಜಾಸ್ತಿ ಇರಬಹುದು. ಮಧ್ಯಾಹ್ನ ನಂತರ ಮಳೆ ಕಡಿಮೆ ಆಗಬಹುದು.

    ಉ.ಕ. ಜಿಲ್ಲೆಯ ಕರಾವಳಿ ತೀರದ ತಾಲ್ಲೂಕುಗಳಲ್ಲಿಯೂ ಹಗಲು ಮಳೆಯಾಗುವ ಸಾಧ್ಯತೆ ಇದೆ. ಸಂಜೆ ದ.ಕ ಉಡುಪಿ ಜಿಲ್ಲೆಯ ಘಟ್ಟಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ಇದ್ದರೂ ಪಶ್ಚಿಮದ ಗಾಳಿ ಇದ್ದಾಗ ಪೂರ್ವದ ಮೋಡದ ಮಳೆಯ ಸಾಧ್ಯತೆಗಳು ಕಡಿಮೆ ಆಗಬಹುದು. ಅಕ್ಟೋಬರ್ 10 ತನಕ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಂಜೆಯ ಗುಡುಗು ಮಳೆ ಮುಂದುವರೆಯಬಹುದು.

    ಮಲೆನಾಡಿನ ಶಿವಮೊಗ್ಗ ಚಿಕ್ಕಮಗಳೂರು ಕೊಡಗು ಹಾಸನ ಜಿಲ್ಲೆಗಳಲ್ಲಿ ಇವತ್ತು ಸಾಧಾರಣ ಮಳೆ ಮುನ್ಸೂಚನೆ ಇದೆ. ಶಿವಮೊಗ್ಗ ಚಿಕ್ಕಮಗಳೂರು ಜಿಲ್ಲೆಗಳ ಸಾಗರ ಹೊಸನಗರ ತೀರ್ಥಹಳ್ಳಿ ಶೃಂಗೇರಿ ಮೂಡಿಗೆರೆ ಸಕಲೇಶಪುರ ಮಡಿಕೇರಿ ತಾಲ್ಲೂಕುಗಳಲ್ಲಿ ಮಳೆ ಪ್ರಮಾಣ ಜಾಸ್ತಿ ಇರಲಿದ್ದು ಉತ್ತಮ ಮಳೆಯಾಗಬಹುದು. ಮಲೆನಾಡಿನಲ್ಲಿ ಒಂದೆರಡು ದಿನ ಸಾಧಾರಣ ಮಳೆ ನಂತರ ಅಕ್ಟೋಬರ್ 10 ತನಕ ಅಲ್ಲಲ್ಲಿ ಮಳೆ ಮುಂದುವರೆದು ನಂತರ ಮಳೆ ಪೂರ್ತಿ ಕಡಿಮೆ ಆಗಬಹುದು.

    ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು ಚಾಮರಾಜನಗರ ಮೈಸೂರು ಮಂಡ್ಯ ರಾಮನಗರ ಕೋಲಾರ ಚಿಕ್ಕಬಳ್ಳಾಪುರ ಬೆಂಗಳೂರು – ಗ್ರಾಮಾಂತರ ತುಮಕೂರು ಚಿತ್ರದುರ್ಗ ದಾವಣಗೆರೆ ವಿಜಯನಗರ ಜಿಲ್ಲೆಗಳಲ್ಲಿ ಸಂಜೆ – ರಾತ್ರಿ ಹೆಚ್ಚಿನ ಪ್ರದೇಶಗಳಲ್ಲಿ (ತುಂತುರು – ಸಾಮಾನ್ಯ – ಸಾಧಾರಣ) ಮಳೆಯ ಮುನ್ಸೂಚನೆ ಇದೆ. ನಾಳೆ ನಾಡಿದ್ದು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ ಆ 8 ರಿಂದ ಮಳೆ ಪೂರ್ತಿ ಕಡಿಮೆ ಆಗಬಹುದು.

    ಉತ್ತರ ಒಳನಾಡಿನ ಬೆಳಗಾವಿ ಧಾರವಾಡ ಬಾಗಲಕೋಟೆ ಗದಗ ಹಾವೇರಿ ಕೊಪ್ಪಳ ಬಳ್ಳಾರಿ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು – ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ ಸಮೀಪ ಅರಬ್ಬೀಸಮುದ್ರದಲ್ಲಿ ಸಣ್ಣ ಪ್ರಮಾಣದ ಸರ್ಕ್ಯುಲೇಷನ್ ಇರುವ ಕಾರಣ ಇವತ್ತು ಮಳೆಯಾಗುವ ಸಾಧ್ಯತೆ ಇದೆ.

    ಸಾಮಾನ್ಯವಾಗಿ ಅಕ್ಟೋಬರ್ ತಿಂಗಳಿನಲ್ಲಿ ಮುಂಗಾರು ಹಿಂತೆಗೆತವಾಗುವ ಸಂದರ್ಭದಲ್ಲಿ ಹಿಂಗಾರು ಆಗಮನದ ಮೊದಲು ಬಂಗಾಳ ಕೊಲ್ಲಿ ಮತ್ತು ಅರಬ್ಬೀಸಮುದ್ರದಲ್ಲಿ ಸಣ್ಣ ಸಣ್ಣ ಸೈಕ್ಲೋನಿಕ್ ಸರ್ಕ್ಯುಲೇಷನ್ ಗಳು ಸಂಭವಿಸುತ್ತದೆ. ಈ ಮೇಲ್ಮೈ ಸುಳಿಗಾಳಿಗಾಳಿಗಳ ಕಾರಣದಿಂದ ಉಂಟಾಗುವ ತೇವಾಂಶಯುಕ್ತ ಮೋಡ ಮತ್ತು ಗಾಳಿಯು ದಕ್ಷಿಣದಲ್ಲಿ ಕೇರಳ ತಮಿಳುನಾಡು ಮೂಲಕ ಪ್ರವೇಶಿಸಿ ಕೇರಳ ಕರ್ನಾಟಕ ತಮಿಳುನಾಡಿನ ಅಲ್ಲಲ್ಲಿ ಮಳೆಯಾಗುತ್ತಿದೆ.

    ಈ ಗಾಳಿಯ ತಿರುಗುವಿಕೆ ಕಾರಣ ನಿನ್ನೆಯಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾದರೂ ನಾಳೆ ಮೋಡ ಕಡಿಮೆ ಆಗಬಹುದು. ಸಂಜೆಯ ಗುಡುಗು 3-4 ದಿನ ಮುಂದುವರೆಯಬಹುದು.

    _Sathish Kapikad

    Share. Facebook Twitter Pinterest LinkedIn Email WhatsApp
    Previous Articleಬಸವಶ್ರೀ’ ಹಾಗೂ ‘ಸಾಧಕ ರತ್ನ’ ಪ್ರಶಸ್ತಿ ಪುರಸ್ಕೃತ ಕ್ರೀಡಾ ಅಂಕಣಕಾರ ಎಸ್.ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಅವರಿಗೆ ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘದ ವತಿಯಿಂದ ಗೌರವ – ಸನ್ಮಾನ
    Next Article ಸ್ವಿಸ್ ಅಧ್ಯಕ್ಷರ ಮೋದಿ ಔತಣಕೂಟದಲ್ಲಿ ವಿಆರ್‌ಎಲ್ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಡಾ.ಆನಂದ ಸಂಕೇಶ್ವರ ಭಾಗಿ

    Related Posts

    ಕರಾವಳಿ

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026
    ಕರಾವಳಿ

    ಮಂಗಳ ಕ್ರೀಡಾಂಗಣಕ್ಕೆ 20 ಕೋಟಿ ಅನುದಾನ : ಅಭಿವೃದ್ಧಿ ಯೋಜನೆ ಅನುಷ್ಠಾನದ ಬಗ್ಗೆ ಮೂಡಾ ಅಧ್ಯಕ್ಷರ ನೇತೃತ್ವದಲ್ಲಿ ಸಭೆ 

    October 25, 2026
    ಕರಾವಳಿ

    ಪೋಲಿಯೋ ಮುಕ್ತ ಸಮಾಜ ನಿರ್ಮಾಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸೇವೆ ಅನನ್ಯ: ರೋಟರಿ ಜಿಲ್ಲಾ ಗವರ್ನರ್ ಸತೀಶ್ ಬೋಳಾರ್

    October 25, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.