Close Menu
SK Media NewsSK Media News
    What's Hot

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026

    ಮಂಗಳ ಕ್ರೀಡಾಂಗಣಕ್ಕೆ 20 ಕೋಟಿ ಅನುದಾನ : ಅಭಿವೃದ್ಧಿ ಯೋಜನೆ ಅನುಷ್ಠಾನದ ಬಗ್ಗೆ ಮೂಡಾ ಅಧ್ಯಕ್ಷರ ನೇತೃತ್ವದಲ್ಲಿ ಸಭೆ 

    October 25, 2026

    ಪೋಲಿಯೋ ಮುಕ್ತ ಸಮಾಜ ನಿರ್ಮಾಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸೇವೆ ಅನನ್ಯ: ರೋಟರಿ ಜಿಲ್ಲಾ ಗವರ್ನರ್ ಸತೀಶ್ ಬೋಳಾರ್

    October 25, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಭರದಿಂದ ಸಾಗುತ್ತಿರುವ ಕಾವೂರು ಬಂಟರ ಭವನದ ಕಾಮಗಾರಿ: ಉದ್ಘಾಟನೆ ಕಾರ್ಯಕ್ರಮದ ರೂಪುರೇಷೆಯ ಬಗ್ಗೆ ವಿಶೇಷ ಸಭೆ
    ಕರಾವಳಿ

    ಭರದಿಂದ ಸಾಗುತ್ತಿರುವ ಕಾವೂರು ಬಂಟರ ಭವನದ ಕಾಮಗಾರಿ: ಉದ್ಘಾಟನೆ ಕಾರ್ಯಕ್ರಮದ ರೂಪುರೇಷೆಯ ಬಗ್ಗೆ ವಿಶೇಷ ಸಭೆ

    October 13, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು : ಕಾವೂರು ಬಂಟರ ಭವನ ಮುಂದಿನ ಜನವರಿ 29, 30, 31ರಂದು ಉದ್ಘಾಟನೆಗೊಳ್ಳಲಿದ್ದು ಕಾವೂರು ಮಾಲಾಡಿ ಕೋರ್ಟ್ ಮುಖ್ಯ ರಸ್ತೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಭವನದ ಅಂತಿಮ ಕಾಮಗಾರಿಗೆ ಭರದಿಂದ ನಡೆಯುತ್ತಿದೆ. ಉದ್ಘಾಟನಾ ಕಾರ್ಯಕ್ರಮ ಸಮಾರಂಭದ ರೂಪುರೇಷೆ ಬಗ್ಗೆ ಭವನದ ಸಂಕೀರ್ಣದಲ್ಲಿ ಅಧ್ಯಕ್ಷ ಆನಂದ ಶೆಟ್ಟಿ ಅಡ್ಯಾರ್ ಇವರ ನೇತೃತ್ವದಲ್ಲಿ ಸಭೆ ನಡೆಯಿತು.

    ಕಟ್ಟಡ ಸಮಿತಿಯ ಅಧ್ಯಕ್ಷ ಡಿ. ಸುಧಾಕರ ಶೆಟ್ಟಿ ಮಾತನಾಡಿ 13 ಕೋಟಿ ವೆಚ್ಚದ ಕಾಮಗಾರಿಕೆ ಅಂತಿಮ ಹಂತದಲ್ಲಿದ್ದು, ಬಹಳಷ್ಟು ಆರ್ಥಿಕ ಕೊರತೆ ಇದೆ. ಇದನ್ನು ಸರಿದೂಗಿಸುವಲ್ಲಿ ಎಲ್ಲಾ ಬಂಟ ಬಾಂಧವರು ಆರ್ಥಿಕವಾಗಿ ಪ್ರೋತ್ಸಾಹಿಸಬೇಕಾಗಿ ಮನವಿ ಮಾಡಿದರು.

    ಕಟ್ಟಡ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುಧಾಕರ ಆಳ್ವ ಮಾತನಾಡಿ ಉದ್ಘಾಟನಾ ಸಮಾರಂಭದ 3 ದಿನಗಳ ವಿವಿಧ ಕಾರ್ಯಕ್ರಮ ಸಮಾರಂಭಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು.

    ಹೊರೆ ಕಾಣಿಕೆ ಮೆರವಣಿಗೆ : ಕಾವೂರು ಮೈದಾನದಿಂದ ಭವನದವರೆಗೆ ಹೊರೆಕಾಣಿಕೆಯ ಭವ್ಯ ಮೆರವಣಿಗೆಯ ಜವಾಬ್ದಾರಿ ಹೊತ್ತ ಎಂ.ಎಸ್. ಶೆಟ್ಟಿ ಸರಪಾಡಿ ಸಭೆಗೆ ಮಾಹಿತಿ ನೀಡಿದರು. ಸಮಾಜ ಬಾಂಧವರು ಈ ಕಾರ್ಯಕ್ರಮದಲ್ಲಿ ಕೈ ಜೋಡಿಸಲು ವಿನಂತಿಸಿದರು.

    ಅಧ್ಯಕ್ಷ ಆನಂದ್ ಶೆಟ್ಟಿ ಅಡ್ಯಾರ್ ಮಾತನಾಡಿ ಕಟ್ಟಡ ಸಮಿತಿಯ ಅಧ್ಯಕ್ಷ ಡಿ. ಸುಧಾಕರ್ ಶೆಟ್ಟಿ ಅವರ ನಿರಂತರ ಕೆಲಸಗಾರಿಕೆ ನಡೆದಿದ್ದರಿಂದ ಭವನ ಅಂತಿಮ ಹಂತಕ್ಕೆ ತಲುಪಿದೆ. ಆದರೆ ಇನ್ನೂ ಅವರಿಗೆ ನೀಡಬೇಕಾದ ಹಣ ಬಹಳಷ್ಟಿದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ತುರ್ತಾಗಿ ಕಾರ್ಯನಿರ್ವಹಿಸಿ ಋಣಮುಕ್ತರಾಗಬೇಕಾಗಿದೆ ಎಂದರು.

    ಬಂಟ ಬೆಳಕು : ಉದ್ಘಾಟನಾ ಸಮಾರಂಭದಲ್ಲಿ ಕಳೆದ 25 ವರ್ಷಗಳಲ್ಲಿ ಕಾವೂರು ಬಂಟರ ಸಂಘ ಬೆಳೆದು ಬಂದ ರೀತಿ ನೀತಿಯ ಸಮಗ್ರ ಮಾಹಿತಿಯೊಂದಿಗೆ ಬಂಟ ಬೆಳಕು ಸ್ಮರಣ ಸಂಚಿಕೆ ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಬಿಡುಗಡೆ ಆಗಲಿದೆ ಎಂದರು.

    ವೇದಿಕೆಯಲ್ಲಿ ಸಂಘ ಮತ್ತು ಕಟ್ಟಡ ಸಮಿತಿಯ ಪದಾಧಿಕಾರಿಗಳಾದ ಅವಿನಾಶ್ ನಾಯಕ್, ವಿಠಲ ಆಳ್ವ, ಶಂಭು ಶೆಟ್ಟಿ, ಲಕ್ಷ್ಮೀನಾರಾಯಣ ಶೆಟ್ಟಿ, ಸುಜಯ ಎಸ್. ಶೆಟ್ಟಿ, ರೇಖಾ ವಿ. ಶೆಟ್ಟಿ, ಶ್ಯಾಮಲಾ ಶೆಟ್ಟಿ ಮತ್ತು ಮಾಧ್ಯಮ ವಕ್ತಾರ ಮುಲ್ಕಿ ಕರುಣಾಕರ ಶೆಟ್ಟಿ ಉಪಸ್ಥಿತರಿದ್ದರು.

    _Sathish Kapikad

    Share. Facebook Twitter Pinterest LinkedIn Email WhatsApp
    Previous Articleಮಂಗಳೂರು ದಸರಾ ಉದ್ಘಾಟನೆಗೆ ನಿಗದಿಯಾಗಿದ್ದ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ಪ್ರವಾಸ ದಿಢೀರ್ ರದ್ದು : ಜೆಡಿಎಸ್ ಜಿಲ್ಲಾ ಅಧ್ಯಕ್ಷ ಅಕ್ಷಿತ್ ಸುವರ್ಣ ತೀವ್ರ ಆಕ್ರೋಶ
    Next Article ದಸರಾ ಕಾರ್ಯಕ್ರಮ ಹಿನ್ನೆಲೆ : ಅಕ್ಟೋಬರ್ 15ರಂದು ಮಂಗಳೂರು, ಉಡುಪಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ – ಎಲ್ಲಿಗೆ.. ಎಷ್ಟು ಗಂಟೆಗೆ.. ಇಲ್ಲಿದೆ ವಿವರ

    Related Posts

    ಕರಾವಳಿ

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026
    ಕರಾವಳಿ

    ಮಂಗಳ ಕ್ರೀಡಾಂಗಣಕ್ಕೆ 20 ಕೋಟಿ ಅನುದಾನ : ಅಭಿವೃದ್ಧಿ ಯೋಜನೆ ಅನುಷ್ಠಾನದ ಬಗ್ಗೆ ಮೂಡಾ ಅಧ್ಯಕ್ಷರ ನೇತೃತ್ವದಲ್ಲಿ ಸಭೆ 

    October 25, 2026
    ಕರಾವಳಿ

    ಪೋಲಿಯೋ ಮುಕ್ತ ಸಮಾಜ ನಿರ್ಮಾಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸೇವೆ ಅನನ್ಯ: ರೋಟರಿ ಜಿಲ್ಲಾ ಗವರ್ನರ್ ಸತೀಶ್ ಬೋಳಾರ್

    October 25, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.