Close Menu
SK Media NewsSK Media News
    What's Hot

    ನವಂಬರ್ 1ರಂದು ಸುರತ್ಕಲ್ ಬಂಟರ ಭವನದಲ್ಲಿ ರಂಗುರಂಗಿನ ರಂಗೋತ್ಸವ – ಸಂಗೀತ ಗಾನಸುಧೆ – ಶ್ರೀಮತಿ ಸತ್ಯಭಾಮ ನಾಟಕ : ಲಕ್ಷ್ಮಣ್ ಕುಮಾರ್ ಮಲ್ಲೂರ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ

    October 27, 2026

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026

    ಮಂಗಳ ಕ್ರೀಡಾಂಗಣಕ್ಕೆ 20 ಕೋಟಿ ಅನುದಾನ : ಅಭಿವೃದ್ಧಿ ಯೋಜನೆ ಅನುಷ್ಠಾನದ ಬಗ್ಗೆ ಮೂಡಾ ಅಧ್ಯಕ್ಷರ ನೇತೃತ್ವದಲ್ಲಿ ಸಭೆ 

    October 25, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಅಕ್ಟೋಬರ್ 18ರಂದು ಮಂಗಳೂರಿನಲ್ಲಿ ಹುಲಿಗಳ ಅಬ್ಬರ: ಕುಡ್ಲದ ಪಿಲಿಪರ್ಬ- 5ನೇ ಆವೃತ್ತಿಯಲ್ಲಿ 11 ಹುಲಿವೇಷ ತಂಡಗಳಿಂದ ಅದ್ಧೂರಿ ಪ್ರದರ್ಶನ
    ಕರಾವಳಿ

    ಅಕ್ಟೋಬರ್ 18ರಂದು ಮಂಗಳೂರಿನಲ್ಲಿ ಹುಲಿಗಳ ಅಬ್ಬರ: ಕುಡ್ಲದ ಪಿಲಿಪರ್ಬ- 5ನೇ ಆವೃತ್ತಿಯಲ್ಲಿ 11 ಹುಲಿವೇಷ ತಂಡಗಳಿಂದ ಅದ್ಧೂರಿ ಪ್ರದರ್ಶನ

    October 16, 20262 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಮಾಜಿ ಸಂಸದ ಶ್ರೀ ನಳಿನ್ ಕುಮಾ‌ರ್ ಕಟೀಲ್ ಮಾರ್ಗದರ್ಶನದಲ್ಲಿ ಕುಡ್ಲದ ಪಿಲಿಪರ್ಬ ಐದನೇ ಆವೃತ್ತಿಯ ಸ್ಪರ್ಧಾಕೂಟವು ಇದೇ ಅಕ್ಟೋಬರ್ 18 ರಂದು ಮಂಗಳೂರಿನ ಕೇಂದ್ರ ಮೈದಾನದಲ್ಲಿ ಬೆಳಗ್ಗೆ 9.30 ಕ್ಕೆ ಉದ್ಘಾಟನೆಗೊಳ್ಳಲಿದೆ ಎಂದು ಶಾಸಕ ಶ್ರೀ ಡಿ. ವೇದವ್ಯಾಸ್ ಕಾಮತ್ ರವರು ಹೇಳಿದರು.

    ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ಭವ್ಯ ವಿಶಾಲ ವೇದಿಕೆಯಲ್ಲಿ ಆರಂಭಗೊಳ್ಳಲಿರುವ ಸ್ಪರ್ಧಾಕೂಟದಲ್ಲಿ ಕರಾವಳಿ ಭಾಗದ ಅತ್ಯಂತ ಜನಪ್ರಿಯ ಎಂಬ ಹೆಗ್ಗಳಿಕೆ ಹೊಂದಿರುವ 11 ಹುಲಿವೇಷ ತಂಡಗಳು ಭಾಗವಹಿಸಲಿವೆ.

    ಪ್ರತಿ ತಂಡವೂ ವೈಭವದ ಮೆರವಣಿಗೆ ಮೂಲಕ ವೇದಿಕೆಗೆ ಪ್ರವೇಶ ಮಾಡಲಿದ್ದು, 20 ನಿಮಿಷಗಳ ಪ್ರದರ್ಶನ ನೀಡಲಿವೆ. ಅಕ್ಕಿಮುಡಿ ಹಾರಿಸುವುದು ಕಡ್ಡಾಯವಾಗಿದ್ದು ಕರಿಹುಲಿಗಳು, ಮರಿಹುಲಿಗಳು, ಹಿಮ್ಮೇಳ, ಧರಣಿ ಮಂಡಲ ಹೀಗೆ ಇಡೀ ಕೂಟವು ವೈವಿಧ್ಯತೆಯಿಂದ ಕೂಡಿರಲಿವೆ ಎಂದರು.

    ಸ್ಪರ್ಧಾಕೂಟದಲ್ಲಿ 6 ತೀರ್ಪುಗಾರರು ಇರಲಿದ್ದು, ನಾಲ್ವರು ವೇದಿಕೆಯಲ್ಲಿ ಮತ್ತು ಇಬ್ಬರು ಒಳಗೆ ವಿಡಿಯೋ ವೀಕ್ಷಿಸುತ್ತಾ ಥರ್ಡ್ ಅಂಪಾಯರ್ ರೂಪದಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ. ಹುಲಿವೇಷ ತಂಡ ವೇದಿಕೆಗೆ ಆಗಮಿಸಿ, ಪ್ರದರ್ಶನ ನೀಡಿ ನಿರ್ಗಮಿಸುವವರೆಗಿನ ಎಲ್ಲವನ್ನೂ ವಿಡಿಯೋ ದಾಖಲಿಸಿ, ಅಗತ್ಯ ಬಿದ್ದರೆ ರೀಪ್ಲೇ ವೀಕ್ಷಿಸಿ ಬಳಿಕವೇ ಫಲಿತಾಂಶ ಘೋಷಣೆ ಮಾಡಲಾಗುತ್ತದೆ.

    ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ. ಅತ್ಯುತ್ತಮ ಪ್ರದರ್ಶನ ನೀಡಿದ ತಂಡಗಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ನೀಡಿ ಗೌರವಿಸಲಾಗುವುದು. ಅಲ್ಲದೆ ಶಿಸ್ತಿನ ತಂಡ, ಅತ್ಯುತ್ತಮ ಹುಲಿ ಮೆರವಣಿಗೆ ತಂಡ, ಪರ್ಬದ ಪಿಲಿ, ಕಪ್ಪು ಪಿಲಿ, ಮರಿ ಹುಲಿ, ಮುಡಿ, ಶಾಸೆ, ಬಣ್ಣಗಾರಿಕೆ, ಧರಣಿ ಮಂಡಲ ವಿಭಾಗಗಳಿಗೆ ಪ್ರತ್ಯೇಕ ಬಹುಮಾನ ನೀಡಿ, ಪ್ರತಿ ಹುಲಿವೇಷ ತಂಡಕ್ಕೆ ಗೌರವ ಮೊತ್ತ ನೀಡಲಾಗುವುದು.

    ಕಾರ್ಯಕ್ರಮಕ್ಕೆ ಜಿಲ್ಲೆಯ ಹಾಗೂ ನಾಡಿನ ಖ್ಯಾತನಾಮರು ಆಗಮಿಸಿ ವಿಶೇಷ ಮೆರುಗು ನೀಡಲಿದ್ದು, ಗಣ್ಯರಿಗೆ ವಿಶೇಷ ಆಸನದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಸ್ಪರ್ಧಾಕೂಟ ನಡೆಯುವ ಮೈದಾನದಲ್ಲಿ 5 ಸಾವಿರ ಮಂದಿ ಕುಳಿತು ವೀಕ್ಷಿಸಬಹುದಾದ ಸುಸಜ್ಜಿತ ಪ್ರೇಕ್ಷಕ ಗ್ಯಾಲರಿ ನಿರ್ಮಿಸಲಾಗಿದ್ದು, ಅಲ್ಲಿಯೇ ದೊಡ್ಡ ಪರದೆಯ ವ್ಯವಸ್ಥೆಯನ್ನೂ ಮಾಡಲಾಗಿದೆ. ಮನೆಯಲ್ಲಿಯೇ ಕುಳಿತು ಕಾರ್ಯಕ್ರಮ ವೀಕ್ಷಿಸಲು ಸಹ ನೇರ ಪ್ರಸಾರದ ವ್ಯವಸ್ಥೆಯನ್ನು ಮಾಡಲಾಗಿದೆ.

    ಮೈದಾನದಲ್ಲಿ ಅಚ್ಚುಕಟ್ಟಾದ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದ್ದು, ಸ್ವಚ್ಛತೆಗೆ ವಿಶೇಷ ಆದ್ಯತೆ ನೀಡಲಾಗಿದೆ. ಕಾರ್ಯಕ್ರಮವು ನಿಗದಿತ ಸಮಯಕ್ಕೆ ಸರಿಯಾಗಿ ಆರಂಭವಾಗಿ ರಾತ್ರಿ 10 ಗಂಟೆಯೊಳಗೆ ಮುಗಿಯಲಿದೆ ಎಂದರು.

    ಪ್ರದರ್ಶನ ನೀಡಲಿರುವ ತಂಡಗಳು ಕ್ರಮವಾಗಿ ಹೀಗಿವೆ:

    ಮೊದಲನೆಯದಾಗಿ ಹನುಮಾನ್ ಟೈಗರ್ಸ್ ಉಪ್ಪಳ, ಪಾಂಡೇಶ್ವರ ಶಾರದಾ ಹುಲಿ, ಶಿವಶಕ್ತಿ ಟೈಗರ್ಸ್ ಕುಂಜತ್ತೂರು ಮಂಜೇಶ್ವರ, ಕೊಡಿಯಾಲ್ ಬೈಲ್ ಫ್ರೆಂಡ್ಸ್ ಲೆಜೆಂಡ್ ಟೈಗರ್ಸ್, ಪೊಳಲಿ ದ ಕಿಂಗ್ ಟೈಗರ್ಸ್ ರಾಜ್ ಫ್ರೆಂಡ್ಸ್, ಫ್ರೆಂಡ್ಸ್ ಬಪ್ಪಲ್ ಶ್ರೀ ದುರ್ಗಾಪರಮೇಶ್ವರಿ ಹುಲಿ, ಟ್ಯಾಲೆಂಟ್ ಟೈಗರ್ಸ್ MYB ಕಚ್ಚೂರು ಮಾಲ್ತಿದೇವಿ ಅಪ್ಪೆನ ಮೋಕೆದ ಜೋಕುಲು, ಫ್ರೆಂಡ್ಸ್ ಅಂಗಾರಗುಡ್ಡೆ ಟೈಗರ್ಸ್ ಮುಲ್ಕಿ, ಪುರಲ್ದ ಅಪ್ಪೆನ ಮೋಕೆದ ಬೊಳ್ಳಿಲು ಪೊಳಲಿ ಟೈಗರ್ಸ್, ನಂದಿಗುಡ್ಡ ಫ್ರೆಂಡ್ಸ್ ಹುಲಿ ಬಾಬುಗುಡ್ಡ ಹಾಗೂ ಅಂತಿಮವಾಗಿ ಕಾರ್ಕಳ ಟೈಗರ್ಸ್ ಪ್ರಶಾಂತ್ ಕಾಮತ್ ಅಭಿಮಾನಿ ಬಳಗ.

    ಪತ್ರಿಕಾಗೋಷ್ಠಿಯಲ್ಲಿ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಗಿರಿಧರ್ ಶೆಟ್ಟಿ, ಅಧ್ಯಕ್ಷರಾದ ದಿವಾಕರ್ ಪಾಂಡೇಶ್ವರ, ಪ್ರಮುಖರಾದ ನರೇಶ್ ಶೆಣೈ, ನವನೀತ್ ಶೆಟ್ಟಿ ಕದ್ರಿ, ಕಿರಣ್ ಶೆಣೈ, ಯತೀಶ್ ಬೈಕಂಪಾಡಿ, ಅಶ್ವಿತ್ ಕೊಟ್ಟಾರಿ, ಲಲಿತ್ ಮೆಂಡನ್, ಜಗದೀಶ್ ಕದ್ರಿ, ಚೇತನ್ ಕಾಮತ್, ಉಪಸ್ಥಿತರಿದ್ದರು.

    _Sathish Kapikad

    Share. Facebook Twitter Pinterest LinkedIn Email WhatsApp
    Previous Articleಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ ಆರೋಗ್ಯದ ಹಾರೈಕೆಯೊಂದಿಗೆ ಸಮಾಜಮುಖಿ ಸೇವಾ ಕಾರ್ಯಗಳ ಉದ್ಘಾಟನೆ : ಅಶಕ್ತರಿಗೆ ನೆರವು ವಿತರಣೆ ಹಾಗೂ ಉಡುಪಿ ಜಿಲ್ಲಾಡಳಿತಕ್ಕೆ ವಾಹನ ಹಸ್ತಾಂತರ 
    Next Article ಪುರಾತನ ದೇವಾಲಯ ಕುದ್ರೋಳಿ ದಳವಾಯಿ ದೋಟ ಶ್ರೀ ಭದ್ರಕಾಳಿ ಧೂಮಾವತಿ ಕ್ಷೇತ್ರದಲ್ಲಿ ನವರಾತ್ರಿ ಅಂಗವಾಗಿ ವಿಶೇಷ ದುರ್ಗಾ ನಮಸ್ಕಾರ ಪೂಜೆ : ಕ್ಷೇತ್ರಕ್ಕೆ ಹರಿದು ಬರುತ್ತಿರುವ ಭಕ್ತರ ಮಹಾಪೂರ

    Related Posts

    ಕರಾವಳಿ

    ನವಂಬರ್ 1ರಂದು ಸುರತ್ಕಲ್ ಬಂಟರ ಭವನದಲ್ಲಿ ರಂಗುರಂಗಿನ ರಂಗೋತ್ಸವ – ಸಂಗೀತ ಗಾನಸುಧೆ – ಶ್ರೀಮತಿ ಸತ್ಯಭಾಮ ನಾಟಕ : ಲಕ್ಷ್ಮಣ್ ಕುಮಾರ್ ಮಲ್ಲೂರ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ

    October 27, 2026
    ಕರಾವಳಿ

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026
    ಕರಾವಳಿ

    ಮಂಗಳ ಕ್ರೀಡಾಂಗಣಕ್ಕೆ 20 ಕೋಟಿ ಅನುದಾನ : ಅಭಿವೃದ್ಧಿ ಯೋಜನೆ ಅನುಷ್ಠಾನದ ಬಗ್ಗೆ ಮೂಡಾ ಅಧ್ಯಕ್ಷರ ನೇತೃತ್ವದಲ್ಲಿ ಸಭೆ 

    October 25, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.