Close Menu
SK Media NewsSK Media News
    What's Hot

    ಮಂಗಳೂರಿನ ಪತ್ರಕರ್ತರಾದ ರೋನ್ಸ್ ಬಂಟ್ವಾಳ, ರಾಜೇಶ್ ದಡ್ಡಂಗಡಿ, ಶಂಶೀರ್ ಬುಡೋಳಿಯವರಿಗೆ ‘ಕೇರಳ – ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿ’

    November 18, 2026

    ನ.20ರಂದು ಮಂಗಳೂರಿನಲ್ಲಿ  ಅಪ್ರತಿಮ ಸಾಮಾಜ ಸುಧಾರಕ, *ಕುದ್ಮುಲ್ ರಂಗರಾಯರ* ಬದುಕು ಮತ್ತು ಸಾಧನೆಗಳನ್ನು ಬಿಂಬಿಸುವ ತುಳು ನಾಟಕ “*ಮಹಾತ್ಮ ಕುದ್ಮುಲ್*”

    November 18, 2026

    ದುಬೈಯಲ್ಲಿ ‘ದುಬೈ ಯಕ್ಷೋತ್ಸವ–2026’ – ಶ್ರೀ ಹರಿಲೀಲಾಮೃತಂ” ಯಕ್ಷಗಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಹಾಗೂ ಟಿಕೆಟ್ ಬಿಡುಗಡೆ

    November 17, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ವಿಧಾನ ಪರಿಷತ್‌ ಚುನಾವಣೆ ಫಲಿತಾಂಶ – ಕಾಂಗ್ರೆಸ್‌ ಸರ್ಕಾರದ ದುರಾಡಳಿತಕ್ಕೆ ಪ್ರಜ್ಞಾವಂತ ಮತದಾರರು ತಕ್ಕ ಪಾಠ ಕಲಿಸಿದ್ದಾರೆ : ಸಂಸದ ಕ್ಯಾ. ಬ್ರಿಜೇಶ್‌ ಚೌಟ
    ಕರಾವಳಿ

    ವಿಧಾನ ಪರಿಷತ್‌ ಚುನಾವಣೆ ಫಲಿತಾಂಶ – ಕಾಂಗ್ರೆಸ್‌ ಸರ್ಕಾರದ ದುರಾಡಳಿತಕ್ಕೆ ಪ್ರಜ್ಞಾವಂತ ಮತದಾರರು ತಕ್ಕ ಪಾಠ ಕಲಿಸಿದ್ದಾರೆ : ಸಂಸದ ಕ್ಯಾ. ಬ್ರಿಜೇಶ್‌ ಚೌಟ

    October 30, 20262 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು: ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಎನ್.ಡಿ.ಎ. ಮೈತ್ರಿಕೂಟದ ಅಭ್ಯರ್ಥಿಗಳನ್ನು ಅಭೂತಪೂರ್ವವಾಗಿ ಗೆಲ್ಲಿಸುವ ಮೂಲಕ ರಾಜ್ಯದ ಶಿಕ್ಷಕರು ಹಾಗೂ ಪದವೀಧರ ಮತದಾರರು ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಜನವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಪಾಠ ಕಲಿಸಿದ್ದಾರೆ ಎಂದು ದಕ್ಷಿಣ ಕನ್ನಡ ಸಂಸದ ಹಾಗೂ ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದ್ದಾರೆ.

    ದೇಶದಲ್ಲಿ ಇವಿಎಂ ಮೇಲೆ ಸದಾ ಗೂಬೆ ಕೂರಿಸುವ ಕಾಂಗ್ರೆಸ್ ಪಕ್ಷ ಮತ್ತು ರಾಹುಲ್ ಗಾಂಧಿಯವರಿಗೆ ಈ ಫಲಿತಾಂಶವು ಕಣ್ಣು ತೆರೆಸಬೇಕಾಗಿದೆ. ಈ ಚುನಾವಣೆ ನಡೆದಿರುವುದು ಬ್ಯಾಲಟ್ ಪೇಪರ್ ಮೂಲಕ ಎನ್ನುವುದನ್ನು ಕಾಂಗ್ರೆಸ್‌ನವರು ಮರೆಯಬಾರದು. ಈ ಚುನಾವಣೆಯಲ್ಲಿ ಕಾಂಗ್ರೆಸ್ ಶೂನ್ಯ ಸಾಧನೆ ಮಾಡಿದ್ದು, ಆಡಳಿತಾರೂಢ ಕಾಂಗ್ರೆಸ್‌ನ ದುರಾಡಳಿತದ ಬಗ್ಗೆ ರಾಜ್ಯದ ಜನತೆ ಎಷ್ಟೊಂದು ಬೇಸತ್ತು ಹೋಗಿದ್ದಾರೆ ಎನ್ನುವುದಕ್ಕೆ ನೇರ ಸಾಕ್ಷಿ. ಇಷ್ಟಾದ ಮೇಲೆಯೂ ರಾಹುಲ್ ಗಾಂಧಿ ಮತಪತ್ರಗಳನ್ನು ಅಥವಾ ಪ್ರಜ್ಞಾವಂತ ಮತದಾರರನ್ನೇ ನಿಂದಿಸುತ್ತಾರೆಯೇ? ನಾಟಕೀಯ ರಾಜಕೀಯದ ಮೂಲಕ ಕಾಂಗ್ರೆಸ್ ತನ್ನ ಪತನವನ್ನು ಮುಚ್ಚಿಡಲು ಸಾಧ್ಯವಿಲ್ಲ. ರಾಹುಲ್ ಗಾಂಧಿಯವರ ಅಸ್ತಿತ್ವ ರಾಜ್ಯದಲ್ಲಾಗಲಿ, ದೇಶದಲ್ಲಾಗಲಿ ಎಲ್ಲೂ ಇಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ” ಎಂದು ಹೇಳಿದ್ದಾರೆ.

    ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವ ಹಾಗೂ ‘ವಿಕಸಿತ ಭಾರತ- 2047’ರ ಕನಸನ್ನು ಸಾಕಾರಗೊಳಿಸುವಲ್ಲಿ ನಂಬಿಕೆಯಿಟ್ಟು, ರಾಜ್ಯದ ಪ್ರಬುದ್ಧ ಮತದಾರರು, ಚಿಂತಕರ ಚಾವಡಿಯಾದ ವಿಧಾನ ಪರಿಷತ್ತಿಗೆ ಸೂಕ್ತ ಹಾಗೂ ಅರ್ಹರಾದ ಎನ್.ಡಿ.ಎ ಅಭ್ಯರ್ಥಿಗಳನ್ನು ಆರಿಸಿ ಕಳುಹಿಸಿದ್ದಾರೆ.

    “ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಬರೀ ಗ್ಯಾರಂಟಿಗಳ ನೆಪ ಹೇಳಿ ರಾಜ್ಯದ ಖಜಾನೆಯನ್ನು ಸಂಪೂರ್ಣವಾಗಿ ಖಾಲಿ ಮಾಡಲಾಗಿದೆ. ಕಷ್ಟದಲ್ಲಿರುವ ರೈತರಿಗೆ ಸ್ಪಂದಿಸಲು ‘ಸರ್ಕಾರದಲ್ಲಿ ದುಡ್ಡೇ ಇಲ್ಲ’ ಎಂದು ಕೈಚೆಲ್ಲಿ ಕುಳಿತುಕೊಳ್ಳುವ ಶೋಚನೀಯ ಪರಿಸ್ಥಿತಿಗೆ ಸಿಎಂ ಡಿಕೆ ಶಿವಕುಮಾರ್‌ ಅವರು ತಲುಪಿದ್ದಾರೆ. ದೇಶದ ಆರ್ಥಿಕ ಪ್ರಗತಿಯ ಎಂಜಿನ್ ಆಗಿದ್ದ ಕರ್ನಾಟಕವನ್ನು ಕಾಂಗ್ರೆಸ್ ತನ್ನ ಭ್ರಷ್ಟಾಚಾರ ಮತ್ತು ದುರಾಡಳಿತದಿಂದ ಆರ್ಥಿಕ ಅರಾಜಕತೆಗೆ ತಳ್ಳಿದೆ. ಕಾಂಗ್ರೆಸ್ಸಿನ ಅಪಪ್ರಚಾರ, ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಿರಂತರ ದಾಳಿ ಹಾಗೂ ರಾಜ್ಯದ ಬೊಕ್ಕಸ ಲೂಟಿ ಹೊಡೆದಿದ್ದಕ್ಕೆ ಶಿಕ್ಷಿತ ಸಮಾಜ ನೀಡಿರುವ ಸರಿಯಾದ ಉತ್ತರವೇ ಈ ಚುನಾವಣಾ ಫಲಿತಾಂಶ” ಎಂದು ಕ್ಯಾ.ಚೌಟ ಅಭಿಪ್ರಾಯಪಟ್ಟಿದ್ದಾರೆ.

    “ಈ ಜನವಿರೋಧಿ, ಅಸಮರ್ಥ ಹಾಗೂ ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ರಾಜ್ಯದಿಂದ ಕಿತ್ತೊಗೆಯುವುದೊಂದೇ ಕರ್ನಾಟಕವನ್ನು ಮರಳಿ ಅಭಿವೃದ್ಧಿಯ ಹಾದಿಗೆ ತರಲು ಇರುವ ಏಕೈಕ ಮಾರ್ಗವಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯದ ಎಲ್ಲ ಪ್ರಜ್ಞಾವಂತ ಮತದಾರರು ಈಗಲೇ ಎಚ್ಚೆತ್ತುಕೊಂಡು ಮುಂದಿನ ಚುನಾವಣೆಗಳಲ್ಲಿ ಅಧಿಕಾರದಲ್ಲಿ ಮುಂದುವರಿಯಲು ನೈತಿಕತೆ ಕಳೆದುಕೊಂಡಿರುವ ಈ ಭ್ರಷ್ಟ ಕಾಂಗ್ರೆಸ್‌ ಸರ್ಕಾರಕ್ಕೆ ಸರಿಯಾದ ಪಾಠ ಕಲಿಸಬೇಕು ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಎಂದು ತಿಳಿಸಿದ್ದಾರೆ.

    Sathish Kapikad 

    Share. Facebook Twitter Pinterest LinkedIn Email WhatsApp
    Previous ArticleNahyan bin Mubarak Honours UAE Healthcare Leaders at the Sixth Annual Health Awards 2026
    Next Article 2026ನೇ ಸಾಲಿನ ಪ್ರತಿಷ್ಠಿತ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ ; ದ. ಕ. ಜಿಲ್ಲೆಯ ಮೂವರು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ 71 ಸಾಧಕರ ಆಯ್ಕೆ – ಆಯ್ಕೆಯಾದವರಲ್ಲಿ 12 ಮಂದಿ ಮಹಿಳಾ ಸಾಧಕರು.- ಇಲ್ಲಿದೆ ಪ್ರಶಸ್ತಿ ಪುರಸ್ಕೃತರ ಸಂಪೂರ್ಣ ಪಟ್ಟಿ

    Related Posts

    ಕರಾವಳಿ

    ಮಂಗಳೂರಿನ ಪತ್ರಕರ್ತರಾದ ರೋನ್ಸ್ ಬಂಟ್ವಾಳ, ರಾಜೇಶ್ ದಡ್ಡಂಗಡಿ, ಶಂಶೀರ್ ಬುಡೋಳಿಯವರಿಗೆ ‘ಕೇರಳ – ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿ’

    November 18, 2026
    ಕರಾವಳಿ

    ನ.20ರಂದು ಮಂಗಳೂರಿನಲ್ಲಿ  ಅಪ್ರತಿಮ ಸಾಮಾಜ ಸುಧಾರಕ, *ಕುದ್ಮುಲ್ ರಂಗರಾಯರ* ಬದುಕು ಮತ್ತು ಸಾಧನೆಗಳನ್ನು ಬಿಂಬಿಸುವ ತುಳು ನಾಟಕ “*ಮಹಾತ್ಮ ಕುದ್ಮುಲ್*”

    November 18, 2026
    ಅಂತಾರಾಷ್ಟ್ರೀಯ

    ದುಬೈಯಲ್ಲಿ ‘ದುಬೈ ಯಕ್ಷೋತ್ಸವ–2026’ – ಶ್ರೀ ಹರಿಲೀಲಾಮೃತಂ” ಯಕ್ಷಗಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಹಾಗೂ ಟಿಕೆಟ್ ಬಿಡುಗಡೆ

    November 17, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.