Close Menu
SK Media NewsSK Media News
    What's Hot

    ಮಂಗಳೂರಿನ ಪತ್ರಕರ್ತರಾದ ರೋನ್ಸ್ ಬಂಟ್ವಾಳ, ರಾಜೇಶ್ ದಡ್ಡಂಗಡಿ, ಶಂಶೀರ್ ಬುಡೋಳಿಯವರಿಗೆ ‘ಕೇರಳ – ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿ’

    November 18, 2026

    ನ.20ರಂದು ಮಂಗಳೂರಿನಲ್ಲಿ  ಅಪ್ರತಿಮ ಸಾಮಾಜ ಸುಧಾರಕ, *ಕುದ್ಮುಲ್ ರಂಗರಾಯರ* ಬದುಕು ಮತ್ತು ಸಾಧನೆಗಳನ್ನು ಬಿಂಬಿಸುವ ತುಳು ನಾಟಕ “*ಮಹಾತ್ಮ ಕುದ್ಮುಲ್*”

    November 18, 2026

    ದುಬೈಯಲ್ಲಿ ‘ದುಬೈ ಯಕ್ಷೋತ್ಸವ–2026’ – ಶ್ರೀ ಹರಿಲೀಲಾಮೃತಂ” ಯಕ್ಷಗಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಹಾಗೂ ಟಿಕೆಟ್ ಬಿಡುಗಡೆ

    November 17, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಕ್ರೀಡಾಕ್ಷೇತ್ರದಲ್ಲಿ ಸುಧೀರ್ಘ ಸೇವೆ ಸಲ್ಲಿಸಿರುವ ಎಂ.ಆರ್. ಪೂವಮ್ಮರಿಗೆ ರೋಟರಿ ವಂದನಾ ಪ್ರಶಸ್ತಿ ಪ್ರದಾನ – ಪೂವಮ್ಮ ಅವರ ಕ್ರೀಡಾ ಸಾಧನೆ ಯುವ ಕ್ರೀಡಾಪಟುಗಳಿಗೆ ಸ್ಫೂರ್ತಿ : ಮಾಜಿ ಒಲಂಪಿಯನ್ ವಂದನಾ ಪೈ
    ಕರಾವಳಿ

    ಕ್ರೀಡಾಕ್ಷೇತ್ರದಲ್ಲಿ ಸುಧೀರ್ಘ ಸೇವೆ ಸಲ್ಲಿಸಿರುವ ಎಂ.ಆರ್. ಪೂವಮ್ಮರಿಗೆ ರೋಟರಿ ವಂದನಾ ಪ್ರಶಸ್ತಿ ಪ್ರದಾನ – ಪೂವಮ್ಮ ಅವರ ಕ್ರೀಡಾ ಸಾಧನೆ ಯುವ ಕ್ರೀಡಾಪಟುಗಳಿಗೆ ಸ್ಫೂರ್ತಿ : ಮಾಜಿ ಒಲಂಪಿಯನ್ ವಂದನಾ ಪೈ

    October 31, 20262 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು, ಅ. 31: ಎಂ.ಆರ್. ಪೂವಮ್ಮ ಅವರು ನಿರಂತರ ಪರಿಶ್ರಮದಿಂದ ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಯಶಸ್ಸು ಸಾಧಿಸಿದ್ದು, ಇವರ ಸಾಧನೆ ಯುವ ಕ್ರೀಡಾಪಟುಗಳಿಗೆ ಸ್ಫೂರ್ತಿಯಾಗಲಿದೆ ಎಂದು ಮಾಜಿ ಒಲಂಪಿಯನ್ ಹಾಗೂ ಅರ್ಜುನ ಪ್ರಶಸ್ತಿ ವಿಜೇತ ಕ್ರೀಡಾಪಟು ವಂದನಾ ಪೈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ

    ಅವರು, ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಹಾಗೂ ರೋಟರಾಕ್ಟ್ ಕ್ಲಬ್ ಮಂಗಳೂರು ಸಿಟಿ ಸಂಸ್ಥೆಯ ಜಂಟಿ ಆಶ್ರಯದಲ್ಲಿ ದಿನಾಂಕ 30.10.2026ರಂದು ನಗರದ ಹೊಟೇಲ್ ಸೀ ವ್ಯೂ ಸಭಾಂಗಣದಲ್ಲಿ ಜರುಗಿದ ವಂದನಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು, ಪೂವಮ್ಮ ಅವರಿಗೆ ಪ್ರಶಸ್ತಿ ಪ್ರದಾನ ನೆರವೇರಿಸಿ ಅಭಿನಂದಿಸಿದರು. ಮತ್ತು ಭವಿಷ್ಯದಲ್ಲಿ ಇನ್ನಷ್ಟು ಯಶಸ್ಸು ಸಾಧಿಸುವಂತೆ ಆಶಯ ವ್ಯಕ್ತಪಡಿಸಿದರು.

    ಪ್ರಶಸ್ತಿ ಸ್ವೀಕರಿಸಿ ಪ್ರತಿಕ್ರಿಯಿಸಿದ ಎಂ.ಆರ್. ಪೂವಮ್ಮ ಅವರು, ತಮ್ಮ ಕ್ರೀಡಾ ಸಾಧನೆ ಮತ್ತು ಯಶಸ್ಸಿಗೆ ಪೋಷಕರ ಆಶೀರ್ವಾದ, ಬಂಧು ಮಿತ್ರರ ಬೆಂಬಲ ಹಾಗೂ ಕ್ರೀಡಾಭಿಮಾನಿಗಳ ಪ್ರೋತ್ಸಾಹ ಕಾರಣ. ಈ ಪ್ರಶಸ್ತಿ ಸ್ವೀಕರಿಸಿದ ಬಳಿಕ ಇನ್ನಷ್ಟು ಸಾಧಿಸಲು ಪ್ರೇರಣೆಯಾಗಿದೆ ಎಂದು ನುಡಿದು ರೋಟರಿ ಸಂಸ್ಥೆಗೆ ಕೃತಜ್ಞತೆ ಸಲ್ಲಿಸಿದರು.

    ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾದ ಡಾ. ದೇವದಾಸ್ ರೈ ಅವರು, ಈ 24ನೇ ವಾರ್ಷಿಕ ವಂದನಾ ಪ್ರಶಸ್ತಿಯು ತಮ್ಮ ಸಂಸ್ಥೆಯ ವೃತ್ತಿಪರ ಸೇವಾ ಯೋಜನೆಯ ಅಂಗವಾಗಿದ್ದು, ವಿವಿಧ ಕ್ಷೇತ್ರದಲ್ಲಿ ಸಾಧಿಸಿದ ಸಾಧಕರನ್ನು ಪರಿಗಣಿಸಿ ಆಯ್ಕೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿ, ಪ್ರಸ್ತುತ ಸಾಲಿನ ಪ್ರಶಸ್ತಿ ವಿಜೇತರಾದ ಪೂವಮ್ಮ ಅವರ ಸುದೀರ್ಘ ಕ್ರೀಡಾ ಸಾಧನೆಯನ್ನು ಅಭಿನಂದಿಸಿದರು.

    ರೋಟರಾಕ್ಟ್ ಮಂಗಳೂರು ಸಿಟಿ ಸಂಸ್ಥೆಯ ಅಧ್ಯಕ್ಷ ರಕ್ಷಣ್ ಟಿ.ಆರ್. ಅವರು ಪ್ರಶಸ್ತಿ ವಿಜೇತರ ಪರಿಚಯ ಮತ್ತು ಸಾಧನೆಗಳ ಮಾಹಿತಿ ನೀಡಿದರು. ರೋಟರಿ ವಲಯ ಸಹಾಯಕ ಗವರ್ನರ್ ಪ್ರವೀಣ್ ಕುಮಾರ್ ಶರ್ಮಾ ಅವರು ಗೌರವ ಅತಿಥಿಯಾಗಿ ಪಾಲ್ಗೊಂಡು ಸಂಸ್ಥೆಯ ಗೃಹವಾರ್ತಾ ಪತ್ರಿಕೆ ಸೆಂಟೋರ್‌ನ್ನು ಬಿಡುಗಡೆಗೊಳಿಸಿ, ಪೂವಮ್ಮ ಅವರು ಜಿಲ್ಲೆಗೆ ಕೀರ್ತಿ ಸಂಪಾದಿಸಿದ್ದಾರೆ ಎಂದು ನುಡಿದರು.

    ರೋಟರಿ ಸಂಸ್ಥೆಯ ಅಧ್ಯಕ್ಷ ರವೀಂದ್ರ ಸ್ವಾಗತಿಸಿದರು. ಕಾರ್ಯದರ್ಶಿ ಜಾಕ್ಸನ್ ಸಲ್ದಾನಾ ವರದಿ ಮಂಡಿಸಿದರು. ಈ ಸಂದರ್ಭದಲ್ಲಿ ಮಹೇಶ್ ಮತ್ತು ಶ್ರೀಕಾಂತ್ ಅವರನ್ನು ನೂತನ ಸದಸ್ಯರಾಗಿ ಸಂಸ್ಥೆಗೆ ಸೇರ್ಪಡೆಗೊಳಿಸಲಾಯಿತು.

    ವೇದಿಕೆಯಲ್ಲಿ ವಲಯ ಪ್ರತಿನಿಧಿ ರಾಜೇಶ್ ಶೆಟ್ಟಿ ಮತ್ತು ಸಂಸ್ಥೆಯ ಮಾಜಿ ಅಧ್ಯಕ್ಷ ಭಾಸ್ಕರ್ ರೈ ಉಪಸ್ಥಿತರಿದ್ದರು.

    ಡೆರಿಕ್ ಸ್ಟೀವನ್ ಡಿಸೋಜ ನಿರೂಪಿಸಿದ ಕಾರ್ಯಕ್ರಮದಲ್ಲಿ ರೋಟರಾಕ್ಟ್ ಸಂಸ್ಥೆಯ ಕಾರ್ಯದರ್ಶಿ ಮುಕೇಶ್ ವಂದಿಸಿದರು. ಶೇಕ್ ಮಹಮ್ಮದ್ ಶರೀಫ್, ಬ್ರಿಯಾನ್ ಪಿಂಟೊ, ಮುರಳಿ ನಾಯರ್ ಈ ಕಾರ್ಯಕ್ರಮವನ್ನು ಪ್ರಾಯೋಜಿಸಿದ್ದರು.

    Sathish Kapikad 

    Share. Facebook Twitter Pinterest LinkedIn Email WhatsApp
    Previous Articleರಾಷ್ಟ್ರೀಯ CBSE ಈಜುಸ್ಪರ್ಧೆಯಲ್ಲಿ ದಕ್ಷಿಣ ವಲಯವನ್ನು ಪ್ರತಿನಿಧಿಸಿ ಎರಡು ಚಿನ್ನದ ಪದಕಗಳನ್ನು ಗೆದ್ದ ಮಂಗಳಾ ಈಜು ಕ್ಲಬ್ನ ಸದಸ್ಯೆ ಆರಾಧ್ಯ ಆಚಾರ್
    Next Article ಮಂಗಳೂರಿನ ಸರಕಾರಿ ಲೇಡಿಗೋಷನ್ ಆಸ್ಪತ್ರೆಯು ರಾಜ್ಯ ಮಟ್ಟದ ಅತ್ಯುತ್ತಮ ಜಿಲ್ಲಾಸ್ಪತ್ರೆ ಪ್ರಶಸ್ತಿಗೆ ಆಯ್ಕೆ : ಗರ್ಭಪಾತಾ ನಂತರದ ತಾಯಿ ಮರಣವನ್ನು ಶೂನ್ಯಕ್ಕೆ ತಂದ ಸಾಧನೆ 

    Related Posts

    ಕರಾವಳಿ

    ಮಂಗಳೂರಿನ ಪತ್ರಕರ್ತರಾದ ರೋನ್ಸ್ ಬಂಟ್ವಾಳ, ರಾಜೇಶ್ ದಡ್ಡಂಗಡಿ, ಶಂಶೀರ್ ಬುಡೋಳಿಯವರಿಗೆ ‘ಕೇರಳ – ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿ’

    November 18, 2026
    ಕರಾವಳಿ

    ನ.20ರಂದು ಮಂಗಳೂರಿನಲ್ಲಿ  ಅಪ್ರತಿಮ ಸಾಮಾಜ ಸುಧಾರಕ, *ಕುದ್ಮುಲ್ ರಂಗರಾಯರ* ಬದುಕು ಮತ್ತು ಸಾಧನೆಗಳನ್ನು ಬಿಂಬಿಸುವ ತುಳು ನಾಟಕ “*ಮಹಾತ್ಮ ಕುದ್ಮುಲ್*”

    November 18, 2026
    ಅಂತಾರಾಷ್ಟ್ರೀಯ

    ದುಬೈಯಲ್ಲಿ ‘ದುಬೈ ಯಕ್ಷೋತ್ಸವ–2026’ – ಶ್ರೀ ಹರಿಲೀಲಾಮೃತಂ” ಯಕ್ಷಗಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಹಾಗೂ ಟಿಕೆಟ್ ಬಿಡುಗಡೆ

    November 17, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.