Close Menu
SK Media NewsSK Media News
    What's Hot

    ದುಬೈಯಲ್ಲಿ ‘ದುಬೈ ಯಕ್ಷೋತ್ಸವ–2026’ – ಶ್ರೀ ಹರಿಲೀಲಾಮೃತಂ” ಯಕ್ಷಗಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಹಾಗೂ ಟಿಕೆಟ್ ಬಿಡುಗಡೆ

    November 17, 2026

    ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಾರ್ಯಕಾರಣಿ ಸಮಿತಿ ಸಭೆ :ಅಸೋಸಿಯೇಷನ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿಯವರಿಂದ ಮುಂದಿನ ವರ್ಷದ ಕ್ರೀಡಾಕೂಟಗಳ ಬಗ್ಗೆ ಚರ್ಚೆ 

    November 17, 2026

    ಮಂಗಳೂರಿನಲ್ಲಿ ಯುವವಾಹಿನಿಯ ನೂತನ ಆಡಳಿತ ಕಚೇರಿ ಲೋಕಾರ್ಪಣೆ : ನಾಲ್ಕು ದಶಕಗಳ ಸಂಘಟನಾ ಪಯಣದಲ್ಲಿ ಐತಿಹಾಸಿಕ ಮೈಲಿಗಲ್ಲು 

    November 17, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಮಂಗಳೂರು- ಬೆಂಗಳೂರು ನಡುವೆ ವಂದೇ ಭಾರತ್ ರೈಲಿಗೆ ಇಂದು ಚಾಲನೆ : ಮಂಗಳೂರಿಗೆ ಆಗಮಿಸಿದ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್  -ಸಚಿವರ ಪ್ರವಾಸದ ಸಂಪೂರ್ಣ ವಿವರ
    ಕರಾವಳಿ

    ಮಂಗಳೂರು- ಬೆಂಗಳೂರು ನಡುವೆ ವಂದೇ ಭಾರತ್ ರೈಲಿಗೆ ಇಂದು ಚಾಲನೆ : ಮಂಗಳೂರಿಗೆ ಆಗಮಿಸಿದ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್  -ಸಚಿವರ ಪ್ರವಾಸದ ಸಂಪೂರ್ಣ ವಿವರ

    November 13, 2026Updated:November 13, 20263 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು, ನವೆಂಬರ್.13: ಮಂಗಳೂರು- ಬೆಂಗಳೂರು ನಡುವೆ ವಂದೇ ಭಾರತ್ ರೈಲಿಗೆ ಚಾಲನೆ ನೀಡಲು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಗುರುವಾರ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

    ಅವರನ್ನು ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರು ಸ್ವಾಗತಿಸಿದರು. ಮಂಗಳೂರು ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಚಿವರಿಗೆ ಸಾಂಪ್ರದಾಯಿಕ ಚಂಡೆ ವಾದ್ಯ ಸ್ವಾಗತ ನೀಡಲಾಯಿತು.

    ಮಂಗಳೂರಿನಿಂದ ಬೆಂಗಳೂರಿಗೆ ನೂತನವಾಗಿ ಆರಂಭವಾಗಲಿರುವ ‘ವಂದೇ ಭಾರತ್ ಎಕ್ಸ್‌ಪ್ರೆಸ್’ ರೈಲಿಗೆ ಚಾಲನೆ ನೀಡುವ ಕಾರ್ಯಕ್ರಮವು ನವೆಂಬರ್ 13ರಂದು ಮಧ್ಯಾಹ್ನ 12 ಗಂಟೆಗೆ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ನಡೆಯಲಿದೆ.

    ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರು ಈ ಅವಧಿಯಲ್ಲಿ ಇದೇ ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವಾಸ ಕೈಗೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಕರಾವಳಿ ಮತ್ತು ಮಲೆನಾಡು ಭಾಗದ ಜನರ ಬಹುದಿನಗಳ ಬೇಡಿಕೆಯಾದ ಮೂರು ಮಹತ್ವದ ರೈಲ್ವೆ ಯೋಜನೆಗಳು ಲೋಕಾರ್ಪಣೆಗೊಳ್ಳಲಿವೆ. ಅವರ ಜತೆ ದಕ್ಷಿಣ ಕನ್ನಡ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳು ಉಪಸ್ಥಿತರಿರಲಿದ್ದಾರೆ. ಈ ರೈಲು ಯೋಜನೆಗಳು ದಕ್ಷಿಣ ಕನ್ನಡ ಜಿಲ್ಲೆಗೆ ಮಹತ್ವದ ಮೈಲುಗಲ್ಲಾಗಿದ್ದು, ಪ್ರವಾಸೋದ್ಯಮ, ವಾಣಿಜ್ಯ ಮತ್ತು ದೈನಂದಿನ ಪ್ರಯಾಣಿಕರಿಗೆ ಹೊಸ ವೇಗ ನೀಡಲಿವೆ.

    ಲೋಕಾರ್ಪಣೆಗೊಳ್ಳಲಿರುವ ಪ್ರಮುಖ ಯೋಜನೆಗಳು:

    • ಬೆಂಗಳೂರು – ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್: ರಾಜಧಾನಿ ಬೆಂಗಳೂರು ಮತ್ತು ಕರಾವಳಿ ನಗರಿ ಮಂಗಳೂರು ನಡುವಿನ ಪ್ರಯಾಣದ ಅವಧಿಯನ್ನು ಕಡಿತಗೊಳಿಸಿ, ಆಧುನಿಕ ಹಾಗೂ ವೇಗದ ಪ್ರಯಾಣದ ಅನುಭವ ನೀಡುವ ನೂತನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ ದೊರೆಯಲಿದೆ. ಈ ಹೈಸ್ಪೀಡ್‌ ರೈಲು ಸೇವೆಯಿಂದ ವಾಣಿಜ್ಯ ನಗರಿಯಾಗಿರುವ ಮಂಗಳೂರು ಹಾಗೂ ರಾಜಧಾನಿ ಬೆಂಗಳೂರು ನಡುವೆ ಜನರ ಪ್ರಯಾಣದ ಅವಧಿಯಲ್ಲಿ ಇಳಿಕೆಯಾಗಲಿದ್ದು, ಇದು ಇಲ್ಲಿನ ಔದ್ಯೋಗಿಕ, ಪ್ರವಾಸೋದ್ಯಮ ಹಾಗೂ ವಾಣಿಜ್ಯ ಚಟುವಟಿಕೆಗಳಿಗೂ ಹೆಚ್ಚಿನ ಅನುಕೂಲ ಕಲ್ಪಿಸಲಿದೆ.

    • ಸಕಲೇಶಪುರ – ಸುಬ್ರಹ್ಮಣ್ಯ ರಸ್ತೆ ವಿದ್ಯುದ್ದೀಕರಣ

    ಘಾಟ್ ಸೆಕ್ಷನ್‌ನ ಅತ್ಯಂತ ಸವಾಲಿನ ಮಾರ್ಗವಾದ ಸುಬ್ರಹ್ಮಣ್ಯ ರಸ್ತೆ ಮತ್ತು ಸಕಲೇಶಪುರ ನಡುವಿನ ರೈಲ್ವೆ ಹಳಿ ವಿದ್ಯುದ್ದೀಕರಣ ಕಾಮಗಾರಿ ಪೂರ್ಣಗೊಂಡಿದ್ದು, ಲೋಕಾರ್ಪಣೆಗೊಳ್ಳಲಿದೆ. ಇದರಿಂದ ಪಶ್ಚಿಮ ಘಟ್ಟದ ಅತ್ಯಂತ ಸವಾಲಿನ ಮಾರ್ಗಗಳಲ್ಲಿ ರೈಲುಗಳ ಸಂಚಾರ ವೇಗ ಮತ್ತು ಸಾಮರ್ಥ್ಯ ಹೆಚ್ಚಾಗಲಿದೆ.

    • ಸುಬ್ರಹ್ಮಣ್ಯ ರಸ್ತೆ ‘ಅಮೃತ್ ಭಾರತ್’ ರೈಲ್ವೆ ನಿಲ್ದಾಣ

    ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಅಮೃತ್ ಭಾರತ್ ನಿಲ್ದಾಣ’ ಯೋಜನೆಯಡಿ ಆಧುನಿಕ ಸೌಲಭ್ಯಗಳೊಂದಿಗೆ ನವೀಕರಣಗೊಂಡಿರುವ ಸುಬ್ರಹ್ಮಣ್ಯ ರಸ್ತೆ ರೈಲ್ವೆ ನಿಲ್ದಾಣವನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸಲಾಗುವುದು.

    ಸಚಿವರ ಪ್ರವಾಸದ ಸಂಪೂರ್ಣ ವೇಳಾಪಟ್ಟಿ:

    • ಬೆಳಗ್ಗೆ 8:00 ಗಂಟೆಗೆ: ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ, ನಿಲ್ದಾಣದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ.
    • ಬೆಳಗ್ಗೆ 10:30 ಗಂಟೆಗೆ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲೆಯ ಹಿರಿಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಮಹತ್ವದ ಪ್ರಗತಿ ಪರಿಶೀಲನಾ ಸಭೆ ನಡೆಸುವರು.
    • ಬೆಳಗ್ಗೆ 11:30 ಗಂಟೆಗೆ: ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಧ್ಯಾಹ್ನ 12:00 ಗಂಟೆಗೆ ಪ್ರಧಾನಮಂತ್ರಿಗಳ ವೀಡಿಯೋ ಕಾನ್ಫರೆನ್ಸ್ ಸಮ್ಮುಖದಲ್ಲಿ ಬೆಂಗಳೂರು – ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಫ್ಲ್ಯಾಗ್ ಆಫ್ ಮಾಡಲಿದ್ದಾರೆ.
    • ಮಧ್ಯಾಹ್ನ 1:30 ಗಂಟೆಗೆ: ಮಂಗಳೂರು ಜಂಕ್ಷನ್‌ನಿಂದ ನೂತನ ವಂದೇ ಭಾರತ್ ರೈಲಿನ ಮೂಲಕವೇ ಸಚಿವರು ಸುಬ್ರಹ್ಮಣ್ಯದತ್ತ ಪ್ರಯಾಣ ಬೆಳೆಸಲಿದ್ದಾರೆ.

    ಕಬಕ ಪುತ್ತೂರು ರೈಲ್ವೆ ನಿಲ್ದಾಣದಲ್ಲಿ ಸಾರ್ವಜನಿಕರೊಂದಿಗೆ ಸಂವಾದ
    ಮಂಗಳೂರಿನಿಂದ ಸುಬ್ರಹ್ಮಣ್ಯಕ್ಕೆ ತೆರಳುವ ಮಾರ್ಗಮಧ್ಯೆ ಮಧ್ಯಾಹ್ನ 2:00 ಗಂಟೆ ಸುಮಾರಿಗೆ ಸಚಿವರು ಕಬಕ ಪುತ್ತೂರು ರೈಲ್ವೆ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ನಿಲ್ದಾಣದಲ್ಲಿ ಕೆಲಕಾಲ ಸ್ಥಳೀಯರು, ರೈಲ್ವೆ ಪ್ರಯಾಣಿಕರು ಮತ್ತು ಸಾರ್ವಜನಿಕರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.

    ಸುಬ್ರಹ್ಮಣ್ಯ ರಸ್ತೆ ನಿಲ್ದಾಣದ ವೀಕ್ಷಣೆ

    ಪುತ್ತೂರಿನಿಂದ ಮುಂದುವರಿದು ಸುಬ್ರಹ್ಮಣ್ಯ ರಸ್ತೆ ರೈಲ್ವೆ ನಿಲ್ದಾಣಕ್ಕೆ ತಲುಪಲಿರುವ ಸಚಿವರು, ನೂತನವಾಗಿ ಲೋಕಾರ್ಪಣೆಗೊಂಡ ‘ಅಮೃತ್ ಭಾರತ್’ ರೈಲ್ವೆ ನಿಲ್ದಾಣದ ಕಟ್ಟಡ ಹಾಗೂ ಪ್ರಯಾಣಿಕರ ಸೌಲಭ್ಯಗಳನ್ನು ಖುದ್ದು ವೀಕ್ಷಣೆ ಮಾಡಲಿದ್ದಾರೆ.

    ಶ್ರೀ ಮಂಗಳಾದೇವಿ ದೇವಸ್ಥಾನಕ್ಕೆ ಭೇಟಿ

    ಸುಬ್ರಹ್ಮಣ್ಯ ರಸ್ತೆ ನಿಲ್ದಾಣದ ವೀಕ್ಷಣೆ ಬಳಿಕ ಮಂಗಳೂರಿಗೆ ವಾಪಸಾಗಲಿರುವ ಸಚಿವ ಅಶ್ವಿನಿ ವೈಷ್ಣವ್ ಅವರು, ಸಂಜೆ 4:00 ಗಂಟೆಗೆ ಮಂಗಳೂರಿನ ಐತಿಹಾಸಿಕ ಶ್ರೀ ಮಂಗಳಾದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ. ತದನಂತರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ನವದೆಹಲಿಗೆ ಹಿಂತಿರುಗಲಿದ್ದಾರೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

    Sathish Kapikad 

    Share. Facebook Twitter Pinterest LinkedIn Email WhatsApp
    Previous Articleನಾಳೆ ಪ್ರಧಾನಮಂತ್ರಿಗಳಿಂದ ಬೆಂಗಳೂರು– ಮಂಗಳೂರು– ಮಡಗಾಂವ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ ಹಾಗೂ ವಿವಿಧ ರೈಲ್ವೆ ಯೋಜನೆಗಳ ಲೋಕಾರ್ಪಣೆ
    Next Article Gulf Medical University Celebrates 28 Years: Born in Thumbay, Built at GMU

    Related Posts

    ಅಂತಾರಾಷ್ಟ್ರೀಯ

    ದುಬೈಯಲ್ಲಿ ‘ದುಬೈ ಯಕ್ಷೋತ್ಸವ–2026’ – ಶ್ರೀ ಹರಿಲೀಲಾಮೃತಂ” ಯಕ್ಷಗಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಹಾಗೂ ಟಿಕೆಟ್ ಬಿಡುಗಡೆ

    November 17, 2026
    ಕರಾವಳಿ

    ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಾರ್ಯಕಾರಣಿ ಸಮಿತಿ ಸಭೆ :ಅಸೋಸಿಯೇಷನ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿಯವರಿಂದ ಮುಂದಿನ ವರ್ಷದ ಕ್ರೀಡಾಕೂಟಗಳ ಬಗ್ಗೆ ಚರ್ಚೆ 

    November 17, 2026
    ಕರಾವಳಿ

    ಮಂಗಳೂರಿನಲ್ಲಿ ಯುವವಾಹಿನಿಯ ನೂತನ ಆಡಳಿತ ಕಚೇರಿ ಲೋಕಾರ್ಪಣೆ : ನಾಲ್ಕು ದಶಕಗಳ ಸಂಘಟನಾ ಪಯಣದಲ್ಲಿ ಐತಿಹಾಸಿಕ ಮೈಲಿಗಲ್ಲು 

    November 17, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.