Close Menu
SK Media NewsSK Media News
    What's Hot

    ದುಬೈಯಲ್ಲಿ ‘ದುಬೈ ಯಕ್ಷೋತ್ಸವ–2026’ – ಶ್ರೀ ಹರಿಲೀಲಾಮೃತಂ” ಯಕ್ಷಗಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಹಾಗೂ ಟಿಕೆಟ್ ಬಿಡುಗಡೆ

    November 17, 2026

    ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಾರ್ಯಕಾರಣಿ ಸಮಿತಿ ಸಭೆ :ಅಸೋಸಿಯೇಷನ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿಯವರಿಂದ ಮುಂದಿನ ವರ್ಷದ ಕ್ರೀಡಾಕೂಟಗಳ ಬಗ್ಗೆ ಚರ್ಚೆ 

    November 17, 2026

    ಮಂಗಳೂರಿನಲ್ಲಿ ಯುವವಾಹಿನಿಯ ನೂತನ ಆಡಳಿತ ಕಚೇರಿ ಲೋಕಾರ್ಪಣೆ : ನಾಲ್ಕು ದಶಕಗಳ ಸಂಘಟನಾ ಪಯಣದಲ್ಲಿ ಐತಿಹಾಸಿಕ ಮೈಲಿಗಲ್ಲು 

    November 17, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದ ಅಭಿವೃದ್ಧಿಗೆ 94 ಕೋಟಿ ರೂಪಾಯಿ ಅನುದಾನ ಮಂಜೂರು: ಮಂಗಳೂರು ಬೆಂಗಳೂರು – ಗೋವಾಕ್ಕೆ ಸಂಪರ್ಕ ಕಲ್ಪಿಸುವ  ಬಹುನಿರೀಕ್ಷಿತ ‘ವಂದೇ ಭಾರತ್’ ಎಕ್ಸ್‌ಪ್ರೆಸ್ ರೈಲು ಸೇವೆಗೆ ಮಂಗಳೂರು ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ ಚಾಲನೆ ನೀಡಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್  
    ಕರಾವಳಿ

    ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದ ಅಭಿವೃದ್ಧಿಗೆ 94 ಕೋಟಿ ರೂಪಾಯಿ ಅನುದಾನ ಮಂಜೂರು: ಮಂಗಳೂರು ಬೆಂಗಳೂರು – ಗೋವಾಕ್ಕೆ ಸಂಪರ್ಕ ಕಲ್ಪಿಸುವ  ಬಹುನಿರೀಕ್ಷಿತ ‘ವಂದೇ ಭಾರತ್’ ಎಕ್ಸ್‌ಪ್ರೆಸ್ ರೈಲು ಸೇವೆಗೆ ಮಂಗಳೂರು ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ ಚಾಲನೆ ನೀಡಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್  

    November 13, 20262 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು, ನವೆಂಬರ್.13 : ಕೇಂದ್ರ ರೈಲ್ವೇ ಹಾಗೂ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರು ರಾಜಧಾನಿ ಬೆಂಗಳೂರನ್ನು ಕರಾವಳಿಯ ಮಂಗಳೂರು, ಉಡುಪಿ, ಕಾರವಾರ ಮೂಲಕ ಗೋವಾದ ಮಡಗಾಂವ್‌ನೊಂದಿಗೆ ಸಂಪರ್ಕಿಸುವ ಬಹುನಿರೀಕ್ಷಿತ ‘ವಂದೇ ಭಾರತ್’ ಎಕ್ಸ್‌ಪ್ರೆಸ್ ರೈಲು ಸೇವೆಗೆ ಮಂಗಳೂರು ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿಂದು ಚಾಲನೆ ನೀಡಿದರು.

    ಈ ವೇಳೆ ಮಾತನಾಡಿದ ಅವರು, ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದ ಅಭಿವೃದ್ಧಿಗೆ 94 ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.

    ಮಂಗಳೂರು ಸೆಂಟ್ರಲ್ ಮತ್ತು ಮಂಗಳೂರು ಜಂಕ್ಷನ್ ರೈಲು ನಿಲ್ದಾಣಗಳನ್ನು ಅಮೃತ ಭಾರತ್ ನಿಲ್ದಾಣ ಯೋಜನೆಯಡಿ ಅಭಿವೃದ್ಧಿಪಡಿಸಲಾಗುವುದು. ಈ ಭಾಗದ ರೈಲ್ವೆ ಅಭಿವೃದ್ಧಿಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದರು.

    ಕರಾವಳಿ ಕರ್ನಾಟಕವನ್ನು ರಾಜ್ಯದ ರಾಜಧಾನಿ ಬೆಂಗಳೂರಿನೊಂದಿಗೆ ಬೆಸೆಯುವ ಬಹುಕಾಲದ ಕನಸು ಇಂದು ನನಸಾಗಿದೆ. ಪಶ್ಚಿಮ ಘಟ್ಟದ ವಿದ್ಯುದ್ದೀಕರಣದಲ್ಲಿದ್ದ ಹಲವಾರು ತಾಂತ್ರಿಕ ಅಡಚಣೆಗಳನ್ನು ಮೆಟ್ಟಿನಿಂತು ಇಂದು ಯಶಸ್ವಿಯಾಗಿ ರೈಲು ಸಂಚಾರ ಆರಂಭಿಸಿದ್ದೇವೆ. ಮಂಗಳೂರನ್ನು ನೈಋತ್ಯ ರೈಲ್ವೆ ವ್ಯಾಪ್ತಿಗೆ ತರುವಲ್ಲಿ ಶ್ರಮಿಸಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಕುಂದಾಪುರ ನಿಲ್ದಾಣದ ಅಭಿವೃದ್ಧಿಗಾಗಿ ನಿರಂತರವಾಗಿ ಒತ್ತಡ ಹೇರಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಕಾರ್ಯವನ್ನು ಸಚಿವರು ವಿಶೇಷವಾಗಿ ಅಭಿನಂದಿಸಿದರು.

    ಕರ್ನಾಟಕ ಹಾಗೂ ಗೋವಾ ರಾಜ್ಯಗಳ ನಡುವೆ ಆಧುನಿಕ, ವೇಗದ ಮತ್ತು ಆರಾಮದಾಯಕ ರೈಲು :850 ಕಿ.ಮೀ ದೂರ

    850 ಕಿ.ಮೀ ದೂರ ನೂತನ ರೈಲ್ವೇ ಸೇವೆಯು ಕರಾವಳಿ ಕರ್ನಾಟಕ ಹಾಗೂ ಗೋವಾ ರಾಜ್ಯಗಳ ನಡುವೆ ಆಧುನಿಕ, ವೇಗದ ಮತ್ತು ಆರಾಮದಾಯಕ ರೈಲು ಸಂಪರ್ಕವನ್ನು ಒದಗಿಸಲಿದೆ.

    ಯಶವಂತಪುರದಿಂದ ಸಂಚರಿಸುವ ಈ ರೈಲು, ಮಡಗಾಂವ್ ತಲುಪುವ ಮಾರ್ಗದಲ್ಲಿ ಹಾಸನ, ಸಕಲೇಶಪುರ, ಮಂಗಳೂರು, ಉಡುಪಿ, ಮುರ್ಡೇಶ್ವರ, ಗೋಕರ್ಣ ಮತ್ತು ಕಾರವಾರ ಸೇರಿದಂತೆ ಪ್ರಮುಖ ನಗರಗಳು ಹಾಗೂ ಪ್ರವಾಸಿ ತಾಣಗಳನ್ನು ಸಂಪರ್ಕಿಸಲಿದೆ. ಸುಮಾರು 850 ಕಿ.ಮೀ. ದೂರವನ್ನು ಕ್ರಮಿಸುವ ಈ ರೈಲು, ಇತ್ತೀಚೆಗೆ ವಿದ್ಯುದ್ದೀಕರಣಗೊಂಡ ಸಕಲೇಶಪುರ-ಸುಬ್ರಹ್ಮಣ್ಯರಸ್ತೆ ಘಾಟ್ ವಿಭಾಗದ ಮೂಲಕವೂ ಸಂಚರಿಸಲಿದೆ.

    ಈ ಹೊಸ ರೈಲು ಸೇವೆಯಿಂದ ಬೆಂಗಳೂರು ನಗರ, ಹಾಸನ, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲದೆ, ದಕ್ಷಿಣ ಗೋವಾದ ಪ್ರಯಾಣಿಕರಿಗೂ ಹೆಚ್ಚಿನ ಅನುಕೂಲವಾಗಲಿದೆ. ವಿದ್ಯಾರ್ಥಿಗಳು, ಯುವ ವೃತ್ತಿಪರರು, ಉದ್ಯಮಿಗಳು ಹಾಗೂ ವಾಣಿಜ್ಯ ಉದ್ದೇಶಗಳಿಗಾಗಿ ಪ್ರಯಾಣಿಸುವವರಿಗೆ ವೇಗದ ಮತ್ತು ಅನುಕೂಲಕರ ಪ್ರಯಾಣದ ಆಯ್ಕೆ ಲಭ್ಯವಾಗಲಿದೆ. ಜೊತೆಗೆ, ಕರಾವಳಿ ಕರ್ನಾಟಕ ಮತ್ತು ಗೋವಾದ ಪ್ರಮುಖ ಪ್ರವಾಸಿ ತಾಣಗಳಿಗೆ ಸಂಪರ್ಕ ಸುಧಾರಿಸುವ ಮೂಲಕ ಪ್ರವಾಸೋದ್ಯಮದ ಬೆಳವಣಿಗೆಗೂ ಉತ್ತೇಜನ ದೊರೆಯಲಿದೆ.

    ಕಾರ್ಯಕ್ರಮದಲ್ಲಿ ಮಂಗಳೂರು  ಸಂಸದರಾದ ಕ್ಯಾ.ಬ್ರಿಜೇಶ್ ಚೌಟ, ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಸುರತ್ಕಲ್ ಶಾಸಕ ಡಾ.ಭರತ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

    Sathish Kapikad 

    Share. Facebook Twitter Pinterest LinkedIn Email WhatsApp
    Previous Articleನವೆಂಬರ್ 20ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಸಹಕಾರ ಸಪ್ತಾಹ : ಕಾರ್ಯಕ್ರಮದಲ್ಲಿ ಸಹಕಾರ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ವಿವಿಧ ಸಹಕಾರಿ ಸಂಘಗಳಿಗೆ ಸನ್ಮಾನ
    Next Article ಅತೀ ಪುರಾತನ ಬಬ್ಬುಸ್ವಾಮಿ ಕ್ಷೇತ್ರಗಳಲ್ಲಿ ಒಂದಾಗಿರುವ ಸೂಟರ್‌ಪೇಟೆ ಶ್ರೀ ಕೋರ್ದಬ್ಬು ದೈವಸ್ಥಾನದಲ್ಲಿ ವಿಶಿಷ್ಟ ರೀತಿಯಲ್ಲಿ ನಡೆದ ಬಲೀಂದ್ರ ಪೂಜೆ

    Related Posts

    ಅಂತಾರಾಷ್ಟ್ರೀಯ

    ದುಬೈಯಲ್ಲಿ ‘ದುಬೈ ಯಕ್ಷೋತ್ಸವ–2026’ – ಶ್ರೀ ಹರಿಲೀಲಾಮೃತಂ” ಯಕ್ಷಗಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಹಾಗೂ ಟಿಕೆಟ್ ಬಿಡುಗಡೆ

    November 17, 2026
    ಕರಾವಳಿ

    ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಾರ್ಯಕಾರಣಿ ಸಮಿತಿ ಸಭೆ :ಅಸೋಸಿಯೇಷನ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿಯವರಿಂದ ಮುಂದಿನ ವರ್ಷದ ಕ್ರೀಡಾಕೂಟಗಳ ಬಗ್ಗೆ ಚರ್ಚೆ 

    November 17, 2026
    ಕರಾವಳಿ

    ಮಂಗಳೂರಿನಲ್ಲಿ ಯುವವಾಹಿನಿಯ ನೂತನ ಆಡಳಿತ ಕಚೇರಿ ಲೋಕಾರ್ಪಣೆ : ನಾಲ್ಕು ದಶಕಗಳ ಸಂಘಟನಾ ಪಯಣದಲ್ಲಿ ಐತಿಹಾಸಿಕ ಮೈಲಿಗಲ್ಲು 

    November 17, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.