Close Menu
SK Media NewsSK Media News
    What's Hot

    Sheikh Ammar bin Humaid Al Nuaimi Witnesses Graduation of 606 Students at Gulf Medical University's 23rd Convocation

    November 19, 2026

    ಮಂಗಳ ಕ್ರೀಡಾಂಗಣ ಸಮಗ್ರ ಅಭಿವೃದ್ಧಿಗೆ ಸಚಿವ ಯು.ಟಿ. ಖಾದರ್ ಹಾಗೂ ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಅವರಿಂದ ಸ್ಥಳ ಪರಿಶೀಲನೆ ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚನೆ

    November 18, 2026

    ಮಂಗಳೂರಿನ ಪತ್ರಕರ್ತರಾದ ರೋನ್ಸ್ ಬಂಟ್ವಾಳ, ರಾಜೇಶ್ ದಡ್ಡಂಗಡಿ, ಶಂಶೀರ್ ಬುಡೋಳಿಯವರಿಗೆ ‘ಕೇರಳ – ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿ’

    November 18, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ನ.17ರಂದು ಮಂಗಳೂರಿನಲ್ಲಿ ‘ಜಾಗೃತ ಸಂತ, ಉದ್ಭವ ಭಾರತ’ ಘೋಷವಾಕ್ಯದೊಂದಿಗೆ ಸಂತ ಸಂಸ್ಮರಣಾ ಕಾರ್ಯಕ್ರಮ ಹಾಗೂ ಗೋಪಾಷ್ಟಮಿ ಪ್ರಯುಕ್ತ ಸಾರ್ವಜನಿಕ ಗೋ ಪೂಜೆ
    ಕರಾವಳಿ

    ನ.17ರಂದು ಮಂಗಳೂರಿನಲ್ಲಿ ‘ಜಾಗೃತ ಸಂತ, ಉದ್ಭವ ಭಾರತ’ ಘೋಷವಾಕ್ಯದೊಂದಿಗೆ ಸಂತ ಸಂಸ್ಮರಣಾ ಕಾರ್ಯಕ್ರಮ ಹಾಗೂ ಗೋಪಾಷ್ಟಮಿ ಪ್ರಯುಕ್ತ ಸಾರ್ವಜನಿಕ ಗೋ ಪೂಜೆ

    November 15, 2026Updated:November 15, 20262 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು, ನವೆಂಬರ್.15: ಸಂತ ಸಂಸ್ಮರಣಾ ಕಾರ್ಯಕ್ರಮ ಹಾಗೂ ಗೋಪಾಷ್ಟಮಿ ಪ್ರಯುಕ್ತ ಸಾರ್ವಜನಿಕ ಗೋ ಪೂಜೆ ಕಾರ್ಯಕ್ರಮವು ನವೆಂಬರ್ 17ರಂದು ಸಂಜೆ 4 ಗಂಟೆಗೆ ನಗರದ ಕದ್ರಿ ಮೈದಾನದಲ್ಲಿ ನಡೆಯಲಿದೆ ಎಂದು ದ ಸಾಫ್ರನ್ ಫ್ರಂಟ್ ಕೇಸರಿ ಒಕ್ಕೂಟದ ಕಾನೂನು ಸಲಹೆಗಾರ ದಿನಕರ ಶೆಟ್ಟಿ ತಿಳಿಸಿದರು.

    ಶನಿವಾರ ನಗರದ ಖಾಸಗಿ ಹೋಟೆಲ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದ ಸಾಫ್ರನ್ ಫ್ರಂಟ್ ಕೇಸರಿ ಒಕ್ಕೂಟದ ನೇತೃತ್ವದಲ್ಲಿ ‘ಜಾಗೃತ ಸಂತ, ಉದ್ಭವ ಭಾರತ’ ಎಂಬ ಘೋಷವಾಕ್ಯದೊಂದಿಗೆ ಆಯೋಜಿಸಲಾಗುತ್ತಿರುವ ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಸುಮಾರು 33 ಮಂದಿ ಸ್ವಾಮೀಜಿಗಳು ಭಾಗವಹಿಸಲಿದ್ದಾರೆ ಎಂದರು.

    ಕಾರ್ಯಕ್ರಮಕ್ಕೂ ಮುನ್ನ ಕದ್ರಿ ದೇವಸ್ಥಾನದಿಂದ ಕದ್ರಿ ಮೈದಾನದವರೆಗೆ ಮೆರವಣಿಗೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಐದು ಸಾವಿರಕ್ಕು ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆಯಿದೆ.

    1966ರ ನವೆಂಬರ್ 6ರಂದು ದೆಹಲಿಯ ಸಂಸತ್ ಭವನದ ಎದುರು ಗೋಪಾಷ್ಟಮಿಯ ಸಂದರ್ಭದಲ್ಲಿ ಸ್ವಾಮಿ ಕರಪಾತ್ರಿ ಮಹಾರಾಜ್ ಅವರ ನೇತೃತ್ವದಲ್ಲಿ ಗೋಹತ್ಯೆ ನಿಷೇಧಕ್ಕೆ ಆಗ್ರಹಿಸಿ ರಾಷ್ಟ್ರವ್ಯಾಪಿ ಚಳವಳಿ ನಡೆದಿತ್ತು. ಈ ಹೋರಾಟದಲ್ಲಿ ಪಾಲ್ಗೊಂಡಿದ್ದ ಲಕ್ಷಾಂತರ ಸಂತರ ಪೈಕಿ ಅನೇಕರು ಮಾರಣಹೋಮಕ್ಕೆ ಬಲಿಯಾಗಿದ್ದರು. ಈ ದುರಂತಕ್ಕೆ ಇದೀಗ 60 ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸನಾತನ ಧರ್ಮದ ಪುನರುತ್ಥಾನಕ್ಕಾಗಿ ತಮ್ಮ ಬದುಕನ್ನೇ ಸಮರ್ಪಿಸಿಕೊಂಡ ಸಂತ ಮಹಾತ್ಮರನ್ನು ಸ್ಮರಿಸಿ ಗೌರವ ಸಲ್ಲಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದಿನಕರ್ ಶೆಟ್ಟಿ ವಿವರ ನೀಡಿದರು.

    ಒಕ್ಕೂಟದ ರಾಷ್ಟ್ರೀಯ ಅಧ್ಯಕ್ಷ ರಾಜೇಶ್ ಪವಿತ್ರನ್ ಅವರು ಮಾತನಾಡಿ, ಶ್ರೀ ರಾಮ ಕ್ಷೇತ್ರ ಕನ್ಯಾಡಿಯ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ನಡೆಯಲಿದೆ.

     

    ಈಗಾಗಲೇ ವಿವಿಧ ಹಿಂದೂಪರ ಸಂಘಟನೆಗಳಿಗೆ ಆಹ್ವಾನ ನೀಡಲಾಗಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರಿಗೆ ಗೋ ಪೂಜೆಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

    ಸಮಿತಿಯ ಪ್ರಮುಖರಾದ ಭಕ್ತಿ ಭೂಷಣ್ ದಾಸ್ ಗುರೂಜಿ, ಡಾ.ಎಲ್.ಕೆ. ಸುವರ್ಣ, ಇ.ಎಸ್ ಮುನಿರತ್ನ, ತುಷಾರ್ ಕದ್ರಿ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

    Sathish Kapikad 

    Share. Facebook Twitter Pinterest LinkedIn Email WhatsApp
    Previous ArticleOver 10,000 Young Minds Attend Gulf Medical University’s Medical and Science Exhibition 2026
    Next Article 12 ದಿನ, 12 ಗಂಟೆ, 12 ನಿಮಿಷಗಳ ಕಾಲ ನಿರಂತರ ಗಾಯನ ಪ್ರಸ್ತುತಪಡಿಸುವ ಮೂಲಕ ಸಾಂಸ್ಕೃತಿಕ ಮಾಂಡ್ ಸೊಭಾಣ್‌ನಿಂದ ಐತಿಹಾಸಿಕ ನಿರಂತರ ಗಾಯನ ವಿಶ್ವದಾಖಲೆ – 300 ತಂಡಗಳು, 7,235 ಗಾಯಕರು ಮತ್ತು 4,596 ಹಾಡುಗಳು.: ಕೊಂಕಣಿ ಸಂಸ್ಕೃತಿಯ ವಿಜಯವೆಂದು ಬಣ್ಣಿಸಿದ ಡಾ. ರೊನಾಲ್ಡ್ ಕೊಲಾಸೊ : ಕಾರ್ಯಕ್ರಮಕ್ಕೆ ರೂ. 3 ಕೋಟಿಖರ್ಚು- ರೂ.1 ಕೋಟಿ ಅನುದಾನ- ಯಾರು ನೀಡಿದರು.. ಇಲ್ಲಿದೆ ಸಂಪೂರ್ಣ ವಿವರ..

    Related Posts

    ಅಂತಾರಾಷ್ಟ್ರೀಯ

    Sheikh Ammar bin Humaid Al Nuaimi Witnesses Graduation of 606 Students at Gulf Medical University's 23rd Convocation

    November 19, 2026
    ಕರಾವಳಿ

    ಮಂಗಳ ಕ್ರೀಡಾಂಗಣ ಸಮಗ್ರ ಅಭಿವೃದ್ಧಿಗೆ ಸಚಿವ ಯು.ಟಿ. ಖಾದರ್ ಹಾಗೂ ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಅವರಿಂದ ಸ್ಥಳ ಪರಿಶೀಲನೆ ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚನೆ

    November 18, 2026
    ಕರಾವಳಿ

    ಮಂಗಳೂರಿನ ಪತ್ರಕರ್ತರಾದ ರೋನ್ಸ್ ಬಂಟ್ವಾಳ, ರಾಜೇಶ್ ದಡ್ಡಂಗಡಿ, ಶಂಶೀರ್ ಬುಡೋಳಿಯವರಿಗೆ ‘ಕೇರಳ – ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿ’

    November 18, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.