Close Menu
SK Media NewsSK Media News
    What's Hot

    Sheikh Ammar bin Humaid Al Nuaimi Witnesses Graduation of 606 Students at Gulf Medical University's 23rd Convocation

    November 19, 2026

    ಮಂಗಳ ಕ್ರೀಡಾಂಗಣ ಸಮಗ್ರ ಅಭಿವೃದ್ಧಿಗೆ ಸಚಿವ ಯು.ಟಿ. ಖಾದರ್ ಹಾಗೂ ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಅವರಿಂದ ಸ್ಥಳ ಪರಿಶೀಲನೆ ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚನೆ

    November 18, 2026

    ಮಂಗಳೂರಿನ ಪತ್ರಕರ್ತರಾದ ರೋನ್ಸ್ ಬಂಟ್ವಾಳ, ರಾಜೇಶ್ ದಡ್ಡಂಗಡಿ, ಶಂಶೀರ್ ಬುಡೋಳಿಯವರಿಗೆ ‘ಕೇರಳ – ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿ’

    November 18, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ದುಬೈಯಲ್ಲಿ ‘ದುಬೈ ಯಕ್ಷೋತ್ಸವ–2026’ – ಶ್ರೀ ಹರಿಲೀಲಾಮೃತಂ” ಯಕ್ಷಗಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಹಾಗೂ ಟಿಕೆಟ್ ಬಿಡುಗಡೆ
    ಅಂತಾರಾಷ್ಟ್ರೀಯ

    ದುಬೈಯಲ್ಲಿ ‘ದುಬೈ ಯಕ್ಷೋತ್ಸವ–2026’ – ಶ್ರೀ ಹರಿಲೀಲಾಮೃತಂ” ಯಕ್ಷಗಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಹಾಗೂ ಟಿಕೆಟ್ ಬಿಡುಗಡೆ

    November 17, 20262 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ದುಬೈ: : ಯುಎಇಯ ಏಕೈಕ ಹಾಗೂ ಪ್ರಪ್ರಥಮ ಸಮಗ್ರ ಯಕ್ಷಗಾನ ಕಲಿಕಾ ಕೇಂದ್ರವೆಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇಯ ಹನ್ನೊಂದನೇ ವರ್ಷದ ಸಂಭ್ರಮದ ಅಂಗವಾಗಿ ಆಯೋಜಿಸಿರುವ ‘ದುಬೈ ಯಕ್ಷೋತ್ಸವ–2026’ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಹಾಗೂ ಟಿಕೆಟ್ ಬಿಡುಗಡೆ ಸಮಾರಂಭವು ನವೆಂಬರ್ 15ರಂದು ದುಬೈಯ ಮ್ಯಾಂಚೆಸ್ಟರ್ ಪ್ಲಾಜಾ ಬ್ಯಾಂಕ್ವೆಟ್ ಸಭಾಂಗಣದಲ್ಲಿ ನಡೆಯಿತು.

    ಯಕ್ಷಧ್ರುವ ಪಟ್ಲ ಫೌಂಡೇಶನ್ ಯುಎಇ ಘಟಕದ ಸಹಯೋಗದೊಂದಿಗೆ ಡಿಸೆಂಬರ್ 20ರಂದು ನಡೆಯಲಿರುವ ಈ ಯಕ್ಷೋತ್ಸವದ ಪೂರ್ವಭಾವಿಯಾಗಿ ಆಯೋಜಿಸಿದ್ದ ಸಮಾರಂಭದಲ್ಲಿ ಯುಎಇಯ ವಿವಿಧ ಕನ್ನಡ ಹಾಗೂ ತುಳು ಸಂಘ-ಸಂಸ್ಥೆಗಳ ಪದಾಧಿಕಾರಿಗಳು,ಗಣ್ಯರು ಮತ್ತು ಕಲಾಭಿಮಾನಿಗಳು ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಮಾತನಾಡಿದ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಯಕ್ಷೋತ್ಸವಕ್ಕೆ ಸಂಪೂರ್ಣ ಸಹಕಾರ ಹಾಗೂ ಬೆಂಬಲ ನೀಡುವ ಭರವಸೆ ವ್ಯಕ್ತಪಡಿಸಿದರು.

    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಯುಎಇ ಘಟಕದ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ,ಯುಎಇ ಬಂಟ್ಸ್ ಮತ್ತು ಕರ್ನಾಟಕ ಎನ್‌ಆರ್‌ಐ ವೇದಿಕೆಯ ಅಧ್ಯಕ್ಷ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ,ಉದ್ಯಮಿ ಹಾಗೂ ಕಲಾಪೋಷಕ ವಾಸುದೇವ ಭಟ್ ಪುತ್ತಿಗೆ,ಚಿತ್ರನಟ ವಿನೀತ್ ಕುಮಾರ್,ಉದ್ಯಮಿ ಸುಂದರ್ ಶೆಟ್ಟಿ ಅಬುಧಾಬಿ,ಸಾಹಿತಿ ಹಾಗೂ ಬಿಲ್ಲವಾಸ್ ಅಬುಧಾಬಿಯ ಪ್ರತಿನಿಧಿ ಮನೋಹರ್ ತೋನ್ಸೆ,ಉದ್ಯಮಿ ಕಾರ್ತಿಕ್ ಶೆಟ್ಟಿ,ಕರ್ನಾಟಕ ಸಂಘ ದುಬೈಯ ನಾಗರಾಜ್ ರಾವ್ ಉಡುಪಿ,ಮನೋಹರ ಹೆಗ್ಡೆ,ಸಂಘದ ಗೌರವ ಸಲಹೆಗಾರ ಜಯಂತ್ ಶೆಟ್ಟಿ, ಗಮ್ಮತ್ ಕಲಾವಿದೆರ್ ದುಬೈಯ ಅಧ್ಯಕ್ಷ ವಾಸುಕುಮಾರ್ ಶೆಟ್ಟಿ,ಹಿರಿಯ ಯಕ್ಷಗಾನ ಕಲಾವಿದ ಪ್ರಭಾಕರ ಸುವರ್ಣ ಕರ್ನಿರೆ,ವೀರಶೈವ ಲಿಂಗಾಯತ ಸಮಾಜ ದುಬೈಯ ಮಲ್ಲಿಕಾರ್ಜುನ ಗೌಡ,ಹಿರಿಯ ಹಿಮ್ಮೇಳ ವಾದಕ ವೆಂಕಟೇಶ ಶಾಸ್ತ್ರಿ, ಯಕ್ಷಗಾನ ಅಭ್ಯಾಸ ಕೇಂದ್ರದ ಸಂಚಾಲಕ ದಿನೇಶ್ ಶೆಟ್ಟಿ ಕೊಟ್ಟಿಂಜ ಹಾಗೂ ಯಕ್ಷಗಾನ ಗುರು ಶೇಖರ್ ಡಿ. ಶೆಟ್ಟಿಗಾರ್ ಕಿನ್ನಿಗೋಳಿ ಉಪಸ್ಥಿತರಿದ್ದರು.

    ಗಣ್ಯರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಬಳಿಕ ಆಮಂತ್ರಣ ಪತ್ರಿಕೆ ಹಾಗೂ ಟಿಕೆಟ್ ಬಿಡುಗಡೆಗೊಳಿಸಿ ಮಾತನಾಡಿದ ಸರ್ವೋತ್ತಮ ಶೆಟ್ಟಿಯವರು,ಕಳೆದ ಹತ್ತು ವರ್ಷಗಳಿಂದ ಯಕ್ಷಗಾನ ಅಭ್ಯಾಸ ಕೇಂದ್ರದ ಕಾರ್ಯಕ್ರಮಗಳನ್ನು ಗಮನಿಸುತ್ತಾ ಬಂದಿದ್ದು, ಕೇಂದ್ರವು ನಿರಂತರವಾಗಿ ಉತ್ತಮ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ಕಾರ್ಯಕ್ರಮಗಳ ಯಶಸ್ಸಿನ ಹಿಂದೆ ಶ್ರಮಿಸುತ್ತಿರುವ ಯಕ್ಷಗಾನ ಗುರುಗಳಾದ ಶೇಖರ್ ಡಿ. ಶೆಟ್ಟಿಗಾರ್ ಹಾಗೂ ಶರತ್ ಕುಡ್ಲ ಅವರನ್ನು ಅಭಿನಂದಿಸಿ, ಡಿಸೆಂಬರ್ 20ರಂದು ನಡೆಯಲಿರುವ ಯಕ್ಷೋತ್ಸವಕ್ಕೆ ಶುಭ ಹಾರೈಸಿದರು.

    ಪ್ರಾಸ್ತಾವಿಕವಾಗಿ ಮಾತನಾಡಿದ ಯಕ್ಷಗಾನ ಅಭ್ಯಾಸ ಕೇಂದ್ರದ ಸಂಚಾಲಕ ದಿನೇಶ್ ಶೆಟ್ಟಿ ಕೊಟ್ಟಿಂಜ ಹಾಗೂ ಗುರು ಶೇಖರ್ ಡಿ. ಶೆಟ್ಟಿಗಾರ್ ಅವರು, ‘ದುಬೈ ಯಕ್ಷೋತ್ಸವ–2026’ರ ರೂಪುರೇಷೆ,ಕಾರ್ಯಕ್ರಮಗಳ ವಿವರ ಹಾಗೂ ಯಕ್ಷಗಾನದ ವಿವಿಧ ವೇಷ ವೈವಿಧ್ಯಗಳ ಕುರಿತು ಸಮಗ್ರ ಮಾಹಿತಿಯನ್ನು ನೀಡಿದರು.

    ಡಿಸೆಂಬರ್ 20ರಂದು ದುಬೈ ಅಲ್ ಗಿಸೈಸ್‌ನ ಜೇಮ್ಸ್ ಕ್ಯಾಂಬ್ರಿಡ್ಜ್ ಇಂಟರ್‌ನ್ಯಾಷನಲ್ ಸ್ಕೂಲ್ ಸಭಾಂಗಣ ( ದುಬಾಯಿ Airport Free zone Metro station ಹತ್ತಿರ) ದಲ್ಲಿ ಮಧ್ಯಾಹ್ನ 1.30ರಿಂದ ಯಕ್ಷೋತ್ಸವ ನಡೆಯಲಿದ್ದು, ಯಕ್ಷಗಾನ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

    ಈ ಸಂದರ್ಭದಲ್ಲಿ ಹಿಮ್ಮೇಳದಲ್ಲಿ ಪ್ರಖ್ಯಾತ ಭಾಗವತರಾದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ,ಡಾ. ಪ್ರಖ್ಯಾತ್ ಶೆಟ್ಟಿ ಹಾಗೂ ಮದ್ದಳೆಗಾರರಾದ ಆನಂದ ಪಡ್ರೆಯವರು ಭಾಗವಹಿಸಲಿದ್ದಾರೆ. ಜೊತೆಗೆ ಕೇಂದ್ರದ ಕಲಾವಿದರಾದ ಸರ್ವಶ್ರೀಗಳಾದ ಸವಿನಯ ನೆಲ್ಲಿತೀರ್ಥ,ಭವಾನಿ ಶಂಕರ ಶರ್ಮ ಹಾಗೂ ಪುತ್ತಿಗೆ ವೆಂಕಟೇಶ ಶಾಸ್ತ್ರಿ ರಿತೇಶ್ ಆಚಾರ್ಯ ಬಾರ್ಕೂರು, ಸಂದೇಶ್ ಆಚಾರ್ಯ ಬ್ರಹ್ಮಾವರ,ಆದಿತ್ಯ ದಿನೇಶ್ ಶೆಟ್ಟಿ ಮೊದಲಾದವರು ಚೆಂಡೆ-ಮದ್ದಳೆ ಮತ್ತು ಚಕ್ರತಾಳದಲ್ಲಿ ಸಹಕರಿಸಲಿದ್ದಾರೆ. ಸಂಗೀತದಲ್ಲಿ ಕೃಷ್ಣ ಪ್ರಸಾದ್ ರಾವ್ ಸುರತ್ಕಲ್,ಕುಮಾರಿ ಶ್ರೀಶ ಪ್ರಭಾಕರ ಪೂಜಾರಿ,ಕುಮಾರಿ ಐಶಾನಿ ದೀಪಕ್ ಸುಳ್ಯ,ಕುಮಾರಿ ನ್ಯೋಮಿ ಸಾಯಿನಾಥ ಶೆಟ್ಟಿ ಮೊದಲಾದವರ ಸುಶ್ರಾವ್ಯ ಕಂಠದಲ್ಲಿ ಕೇಂದ್ರದ ಕಲಾವಿದರು “ಶ್ರೀ ಹರಿ ಲೀಲಾಮೃತಂ” ಎಂಬ ಯಕ್ಷಗಾನ ಪ್ರಸಂಗವನ್ನು ಪ್ರಸ್ತುತಪಡಿಸಲಿದ್ದಾರೆ.

    ಪ್ರಸಾಧನ ಮತ್ತು ವೇಷಭೂಷಣದ ಜವಾಬ್ದಾರಿಯನ್ನು ಶ್ರೀಯುತರುಗಳಾದ ಗಂಗಾಧರ ಡಿ. ಶೆಟ್ಟಿಗಾರ್ ಕಿನ್ನಿಗೋಳಿ,ನಿತಿನ್ ಕುಂಪಲ ಹಾಗೂ ಸಾತ್ವಿಕ್ ಅಂಚನ್ ಕಾರ್ಕಳ ನಿರ್ವಹಿಸಲಿದ್ದಾರೆ.

    ಯಕ್ಷೋತ್ಸವದ ಪ್ರವೇಶ ಟಿಕೆಟ್ ದರ 25 ದಿರ್ಹಂ (AED 25) ಆಗಿದ್ದು, ಟಿಕೆಟ್ ಕಾಯ್ದಿರಿಸಲು ಆಸಕ್ತರು 0529157825, 0566182239 ಅಥವಾ 0552656900 ಈ ದೂರವಾಣಿ ಸಂಖ್ಯೆಗಳ ಮೂಲಕ ಸಂಪರ್ಕಿಸಬಹುದು ಎಂದು ಸಂಘಟಕರು ತಿಳಿಸಿದ್ದಾರೆ.

    ಈ ಬಾರಿಯ ಕಾರ್ಯಕ್ರಮ ಹೊಸ ಲೊಕೇಶನ್ ನಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಕೇಂದ್ರದ ಸದಸ್ಯ ಗಿರೀಶ್ ನಾರಾಯಣ್ ನಿರೂಪಿಸಿದರು.ದಿನೇಶ್ ಶೆಟ್ಟಿ ಕೊಟ್ಟಿಂಜ ಸ್ವಾಗತಿಸಿ, ವಂದಿಸಿದರು.

    Sathish Kapikad 

    Share. Facebook Twitter Pinterest LinkedIn Email WhatsApp
    Previous Articleದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಾರ್ಯಕಾರಣಿ ಸಮಿತಿ ಸಭೆ :ಅಸೋಸಿಯೇಷನ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿಯವರಿಂದ ಮುಂದಿನ ವರ್ಷದ ಕ್ರೀಡಾಕೂಟಗಳ ಬಗ್ಗೆ ಚರ್ಚೆ 
    Next Article ನ.20ರಂದು ಮಂಗಳೂರಿನಲ್ಲಿ  ಅಪ್ರತಿಮ ಸಾಮಾಜ ಸುಧಾರಕ, *ಕುದ್ಮುಲ್ ರಂಗರಾಯರ* ಬದುಕು ಮತ್ತು ಸಾಧನೆಗಳನ್ನು ಬಿಂಬಿಸುವ ತುಳು ನಾಟಕ “*ಮಹಾತ್ಮ ಕುದ್ಮುಲ್*”

    Related Posts

    ಅಂತಾರಾಷ್ಟ್ರೀಯ

    Sheikh Ammar bin Humaid Al Nuaimi Witnesses Graduation of 606 Students at Gulf Medical University's 23rd Convocation

    November 19, 2026
    ಕರಾವಳಿ

    ಮಂಗಳ ಕ್ರೀಡಾಂಗಣ ಸಮಗ್ರ ಅಭಿವೃದ್ಧಿಗೆ ಸಚಿವ ಯು.ಟಿ. ಖಾದರ್ ಹಾಗೂ ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಅವರಿಂದ ಸ್ಥಳ ಪರಿಶೀಲನೆ ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚನೆ

    November 18, 2026
    ಕರಾವಳಿ

    ಮಂಗಳೂರಿನ ಪತ್ರಕರ್ತರಾದ ರೋನ್ಸ್ ಬಂಟ್ವಾಳ, ರಾಜೇಶ್ ದಡ್ಡಂಗಡಿ, ಶಂಶೀರ್ ಬುಡೋಳಿಯವರಿಗೆ ‘ಕೇರಳ – ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿ’

    November 18, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.