
ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಪ್ರಾಧಿಕಾರದ ಮಾಸಿಕ ಸಭೆಯು ಇಂದು (ನ .19) ಮುಡಾ ಕಚೇರಿಯ ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಮಂಗಳೂರು ನಗರದ ಅಭಿವೃದ್ಧಿ, ಪ್ರಾಧಿಕಾರದ ವ್ಯಾಪ್ತಿಯಲ್ಲಿನ ವಿವಿಧ ಯೋಜನೆಗಳು ಹಾಗೂ ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ವೇದವ್ಯಾಸ ಕಾಮತ್ ಹಾಗೂ ಶ್ರೀ ಭರತ್ ಶೆಟ್ಟಿ , ಮುಡಾ ಆಯುಕ್ತರಾದ ಶ್ರೀ ಮೊಹಮ್ಮದ್ ನಝೀರ್, ಮುಡಾ ಸದಸ್ಯರಾದ ಶ್ರೀ ನೀರಜ್ ಪಾಲ್, ಶ್ರೀ ಸುಮನ್ ದಾಸ್, ಶ್ರೀಮತಿ ಸಬಿತಾ ಮಿಸ್ಕಿತ್ ಸೇರಿದಂತೆ ಮುಡಾ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Sathish Kapikad


