Close Menu
SK Media NewsSK Media News
    What's Hot

    ಡಾ.ಕನ್ಯಾನ ಸದಾಶಿವ ಶೆಟ್ಟಿ ನಿರ್ಮಾಣದ “ಪದ್ಮನಾಭ ಆ್ಯಂಡ್ ಫ್ಯಾಮಿಲಿ” ಸಿನಿಮಾದ ಟೀಸರ್ ಬಿಡುಗಡೆ : ಜನವರಿ 15ಕ್ಕೆ ಸಿನಿಮಾ ಬಿಡುಗಡೆ

    November 24, 2026

    ಮಂಗಳೂರಿನ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುತ್ತಿದ್ದ ವ್ಯಕ್ತಿಗಳಿಗೆ ದಂಡ ವಿಧಿಸಿದ ಅಧಿಕಾರಿಗಳು

    November 23, 2026

    ಫೆಬ್ರವರಿಯಲ್ಲಿ ವಿಶ್ವ ಕೊಂಕಣಿ ನಾಟಕೋತ್ಸವ : “ಡಾ. ಪಿ ದಯಾನಂದ ಪೈ ವಿಶ್ವ ಕೊಂಕಣಿ ರಂಗಶ್ರೇಷ್ಟ ಪುರಸ್ಕಾರ 2027” ಹಾಗೂ “ಡಾ. ಪಿ ದಯಾನಂದ ಪೈ ವಿಶ್ವ ಕೊಂಕಣಿ ಅನುವಾದ ಪುರಸ್ಕಾರ 2027”

    November 23, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಡಾ.ಕನ್ಯಾನ ಸದಾಶಿವ ಶೆಟ್ಟಿ ನಿರ್ಮಾಣದ “ಪದ್ಮನಾಭ ಆ್ಯಂಡ್ ಫ್ಯಾಮಿಲಿ” ಸಿನಿಮಾದ ಟೀಸರ್ ಬಿಡುಗಡೆ : ಜನವರಿ 15ಕ್ಕೆ ಸಿನಿಮಾ ಬಿಡುಗಡೆ
    ಕರಾವಳಿ

    ಡಾ.ಕನ್ಯಾನ ಸದಾಶಿವ ಶೆಟ್ಟಿ ನಿರ್ಮಾಣದ “ಪದ್ಮನಾಭ ಆ್ಯಂಡ್ ಫ್ಯಾಮಿಲಿ” ಸಿನಿಮಾದ ಟೀಸರ್ ಬಿಡುಗಡೆ : ಜನವರಿ 15ಕ್ಕೆ ಸಿನಿಮಾ ಬಿಡುಗಡೆ

    November 24, 20263 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು: ನವದುರ್ಗ ಫಿಲ್ಮ್ಸ್ ಲಾಂಛನದಲ್ಲಿ ಕೊಡುಗೈ ದಾನಿ ಡಾ. ಕನ್ಯಾನ ಸದಾಶಿವ ಶೆಟ್ಟಿ ನಿರ್ಮಾಣದಲ್ಲಿ ಇಸ್ಮಾಯಿಲ್ ಮೂಡುಶೆಡ್ಡೆ ನಿರ್ದೇಶನದ ಪದ್ಮನಾಭ ಆ್ಯಂಡ್ ಫ್ಯಾಮಿಲಿ ಚಲನ ಚಿತ್ರದ ಟೀಸರ್ ಭಾರತ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ನಡೆಯಿತು.

    ಅತಿಥಿಗಳು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.
    ಬಳಿಕ ಟೀಸರ್ ಮತ್ತು ಸಿನಿಮಾದ ಹಾಡಿನ ಪ್ರದರ್ಶನ ನಡೆಯಿತು.

    ಬಳಿಕ ಮಾತನಾಡಿದ ನಿರ್ಮಾಣ ಮೇಲ್ವಿಚಾರಕಿ ಹಾಗೂ ಅಭಿಮತ ಟಿವಿಯ ಮುಖ್ಯಸ್ಥೆ ಡಾ ಮಮತಾ ಪಿ ಶೆಟ್ಟಿ ಅವರು ಸಿನಿಮಾ ಕುಟುಂಬಗಳಿಗೆ ಆಸರೆಯಾಗಿದೆ. ನಿರ್ಮಾಪಕರು ಕಲಾವಿದರಿಗೆ ಅನ್ನದಾತರು. ಪದ್ಮನಾಭ ಆ್ಯಂಡ್ ಫ್ಯಾಮಿಲಿ ಸಿನಿಮಾಕ್ಕೆ 54 ದಿನಗಳ ಕಾಲ ಚಿತ್ರಿಕರಣ ನಡೆದಿದೆ. ನಿರ್ಮಾಪಕರು ಚಿತ್ರತಂಡಕ್ಕೆ ಯಾವುದೇ ರೀತಿಯ ಕೊರತೆ ಬಾರದ ನಿಟ್ಟಿನಲ್ಲಿ ಸಹಕಾರ ನೀಡಿದ್ದಾರೆ.

    ಇಸ್ಮಾಯಿಲ್ ಮೂಡುಶೆಡ್ಡೆ ಅವರು ನಿರ್ಮಾಪಕರಿಗೆ ಒಳ್ಳೆಯ ಕತೆ ಹೇಳಿದರು. ಸಮಾಜ ಸೇವೆಯ ಜೊತೆಗೆ ಸಿನಿಮಾದ ಬಗ್ಗೆ ಕಾಳಜಿ ವಹಿಸಿ, ಕಲಾವಿದರ ಕಷ್ಟಸುಖಗಳಿಗೆ ಸ್ಪಂದಿಸ ಬೇಕು ಎಂಬ ನಿಟ್ಟಿನಲ್ಲಿ ಉದ್ಯಮಿ ಸದಾಶಿವ ಶೆಟ್ಟಿ ಕನ್ಯಾನ ಅವರು ಸಿನಿಮಾಕ್ಕೆ ಬಂಡವಾಳ ಹೂಡಿದರು ಎಂದರು.

    ಸಿನಿಮಾ ಚಿತ್ರೀಕರಣದ ವೇಳೆ ಬಹಳಷ್ಟು ಮಂದಿ ತೆರೆಯ ಹಿಂದೆ ಕೆಲಸ ಮಾಡಿದ್ದಾರೆ. ಈ ಚಿತ್ರದಿಂದ ನಿರ್ದೇಶಕ ಇಸ್ಮಾಯಿಲ್ ಮೂಡುಶೆಡ್ಡೆ ಅವರ ಅದೃಷ್ಟ ಬದಲಾಗಲಿದೆ. ಅವರು ಸತತ ನಾಲ್ಕು ವರ್ಷಗಳಿಂದ ನಿರ್ಮಾಪಕರಿಗಾಗಿ ಕಾದು ಕುಳಿತಿದ್ದರು. ಅವರ ಕಾಯುವಿಕೆಗೆ ಇಲ್ಲಿ ಫಲ ದೊರೆಯಲಿದೆ ಎಂದು ಡಾ ಮಮತಾ ಪಿ ಶೆಟ್ಟಿ ತಿಳಿಸಿದರು.

    ಡಾ ಕನ್ಯಾನ ಸದಾಶಿವ ಶೆಟ್ಟಿ

    ನಿರ್ದೇಶಕ ಇಸ್ಮಾಯಿಲ್ ಮೂಡುಶೆಡ್ಡೆ ಮಾತನಾಡಿ ಈವರೆಗೆ ನಾಲ್ಕು ಸಿನಿಮಾ ಮಾಡಿದ್ದೇನೆ. ಒಳ್ಳೆಯ ಕತೆಯನ್ನು ಸಿನಿಮಾ ಮಾಡಲು ಪ್ರಯತ್ನಿಸಿದಾಗ ಆಕಸ್ಮಿಕವಾಗಿ ಡಾ ಕನ್ಯಾನ ಸದಾಶಿವ ಶೆಟ್ಟಿಯವರ ಪರಿಚಯ ಆಯಿತು. ಅವರಿಗೆ ಕಥೆ ಇಷ್ಟ ಆಯಿತು. ಸಿನಿಮಾನೂ ಆಯಿತು. ಜನವರಿ 15 ಕ್ಕೆ ಸಿನಿಮಾ ತೆರೆಗೆ ಬರಲಿದೆ. ಕುಟುಂಬ ಸಮೇತ ನೋಡುವಂತಹ ಹಾಸ್ಯ ಸಿನಿಮಾವನ್ನು ನಿರ್ಮಿಸಿದ್ದೇವೆ. ಎಲ್ಲರ ಪ್ರೋತ್ಸಾಹ ಅಗತ್ಯ ಎಂದರು.

    ಮುಖ್ಯ ಅತಿಥಿ ಪ್ರಕಾಶ್ ಪಾಂಡೇಶ್ವರ್ ಮಾತನಾಡಿ ಟೀಸರ್ ಚೆನ್ನಾಗಿದೆ. ಹಾಡೂ ಚೆನ್ನಾಗಿತ್ತು. ಇಸ್ಮಾಯಿಲ್ ಕನ್ನಡದಲ್ಲಿ ನಿರ್ದೇಶಿಸುತ್ತಿರುವ ಎರಡನೆ ಸಿನಿಮಾ ಕೂಡಾ ಜನರ ಮನಗೆಲ್ಲಲಿ ಎಂದರು.

    ಪಣಂಬೂರು ಠಾಣಾ ಇನ್ಸ್ ಪೆಕ್ಟರ್ ಸಲೀಮ್ ಅಬ್ಬಾಸ್ ವಲಾಲ್ ಮಾತನಾಡಿ ಸಿನಿಮಾದ ಟೀಸರ್ ನ ಗುಣಮಟ್ಟ ಚೆನ್ನಾಗಿದೆ. ನಿರ್ದೇಶಕ, ನಿರ್ಮಾಪಕರು ಪ್ರೇಕ್ಷಕರಿಗೆ ಒಂದು ಒಳ್ಳೆಯ ಸಿನಿಮಾ ನೀಡಿದ್ದಾರೆ ಎಂದರು. ಟೀಸರ್ ಇಷ್ಟ ಆಯಿತು ಸಿನಿಮಾ ಯಶಸ್ವಿಯಾಗಲಿ ಎಂದು ನ್ಯಾಯವಾದಿ ಅರುಣ್ ಬಂಗೇರ ತಿಳಿಸಿದರು.

    ಸಮಾರಂಭದಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು, ತಮ್ಮ ಲಕ್ಷ್ಮಣ್, ಅಡ್ಯಾರ್ ಮಾಧವ ನಾಯ್ಕ್, ಸತೀಶ್ ಬಂದಲೆ, ಪಮ್ಮಿ ಕೊಡಿಯಾಲ್ ಬೈಲ್, ಡಾ ಅಬೂಬಕರ್ ಸಿದ್ದಿಕ್ ಅಡ್ಡೂರು, ಡಾ ಕಿರಣ್ ಕುಮಾರ್, ಎನ್ ನಾಗರಾಜ್, ಶರಣ್ ರಾಜ್ ಕಾಸರಗೋಡು, ನಿತಿನ್ ರೈ ಕುಕ್ಕುವಳ್ಳಿ, ಪತ್ರಕರ್ತರಾದ ಶ್ರೀನಿವಾಸ್ ನಾಯಕ್, ಬಾಳ ಜಗನ್ನಾಥ ಶೆಟ್ಟಿ, ಶಮೀರ್ ಮುಡಿಪು ಎ.ಕೆ ಕಾರ್ಲ ಮೊದಲಾದವರು ಉಪಸ್ಥಿತರಿದ್ದರು.

    ಸಿನಿಮಾಕ್ಕೆ ಎ ಕೆ ಕಾರ್ಲ ಸಂಪೂರ್ಣ ಸಹಕಾರ ನೀಡಿದ್ದಾರೆ. ಸಿನಿಮಾದಲ್ಲಿ ನಾಲ್ಕು ಹಾಡುಗಳಿವೆ. ಸಿನಿಮಾದ ಹಾಡು ಇತಿಹಾಸ ಬರೆಯಲಿದೆ. ಹಾಡಿನ ಚಿತ್ರೀಕರಣಕ್ಕಾಗಿ ಒಂದು ಕೋಟಿ ಖರ್ಚು ಮಾಡಲಾಗಿದೆ. ಹೊಸ ಕಲಾವಿದರಿಗೆ ಅವಕಾಶ ನೀಡಲಾಗಿದೆ. ರಿಕ್ಷಾ ಚಾಲಕರು ಅಸಹಾಯಕರಲ್ಲ ಅವರು ಸ್ವಾಭಿಮಾನಿಗಳು ಎಂಬ ಕಥಾ ಹಂದರವನ್ನು ಹೊಂದಿರುವ ಪದ್ಮನಾಭ ಆ್ಯಂಡ್ ಫ್ಯಾಮಿಲಿ ಜನವರಿ 15ಕ್ಕೆ ರಾಜ್ಯಾದ್ಯಂತ ತೆರೆ ಕಾಣಲಿದೆ ಮತ್ತು ಕಾಸರಗೋಡು ಜಿಲ್ಲೆಯಲ್ಲೂ ತೆರೆಕಾಣಲಿದೆ ಎಂದು ಚಿತ್ರತಂಡ ತಿಳಿಸಿದೆ.

    ಷಷ್ಠೀಶ್ ಪಿ ಶೆಟ್ಟಿ ಸ್ವಾಗತಿಸಿದರು. ವಿ‌ಜೆ ವಿಖ್ಯಾತ್ ಕಾರ್ಯಕ್ರಮ ನಿರೂಪಿಸಿದರು. ತಾರಾಗಣದಲ್ಲಿ ದೀಪಕ್ ರೈ ಪಾಣಾಜೆ, ಬಿಗ್ ಬಾಸ್ ಖ್ಯಾತಿಯ ಸಂಗೀತ ಶೃಂಗೇರಿ, ಹೃದನ್ ಶೆಟ್ಟಿ, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ರವಿರಾಮಕುಂಜ, ಪುಷ್ಪರಾಜ ಬೊಳ್ಳಾರ್, ಪ್ರಸನ್ನ ಶೆಟ್ಟಿ ಬೈಲೂರು, ಮೈಮ್ ರಾಮ್ ದಾಸ್, ಉಮೇಶ್ ಮಿಜಾರ್, ಅನಿಲ್ ರಾಜ್ ಉಪ್ಪಳ, ಮಾನಸಿ ಸುಧೀರ್, ಸಾಯಿಕೃಷ್ಣ, ಸತೀಶ್ ಬಂದಲೆ ಮುಖ್ಯ ತಾರಾಗಾಣದ ಈ ಚಿತ್ರದಲ್ಲಿ ಕರಾವಳಿಯ ಹೆಸರಾಂತ ಹಾಸ್ಯ ಕಲಾವಿದರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.

    ಮಣಿಕಾಂತ್ ಕದ್ರಿ ಮತ್ತು ಸಮೀರ್ ಮುಡಿಪು ಸಂಗೀತ ನೀಡಿದ್ದಾರೆ.
    ಈ ಚಿತ್ರವನ್ನು ಅಖಿಲ ಕರ್ನಾಟಕ ಆಟೋ ರಿಕ್ಷಾ ಚಾಲಕರಿಗೆ ಅರ್ಪಣೆ ಮಾಡಲಾಗಿದೆ ಎಂದು ಸಿನಿಮಾ ನಿರ್ದೇಶಕ ಇಸ್ಮಾಯಿಲ್ ಮೂಡುಶೆಡ್ಡೆ ತಿಳಿಸಿದ್ದಾರೆ.

    Sathish Kapikad

    Share. Facebook Twitter Pinterest LinkedIn Email WhatsApp
    Previous Articleಮಂಗಳೂರಿನ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುತ್ತಿದ್ದ ವ್ಯಕ್ತಿಗಳಿಗೆ ದಂಡ ವಿಧಿಸಿದ ಅಧಿಕಾರಿಗಳು

    Related Posts

    ಕರಾವಳಿ

    ಮಂಗಳೂರಿನ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುತ್ತಿದ್ದ ವ್ಯಕ್ತಿಗಳಿಗೆ ದಂಡ ವಿಧಿಸಿದ ಅಧಿಕಾರಿಗಳು

    November 23, 2026
    ಕರಾವಳಿ

    ಫೆಬ್ರವರಿಯಲ್ಲಿ ವಿಶ್ವ ಕೊಂಕಣಿ ನಾಟಕೋತ್ಸವ : “ಡಾ. ಪಿ ದಯಾನಂದ ಪೈ ವಿಶ್ವ ಕೊಂಕಣಿ ರಂಗಶ್ರೇಷ್ಟ ಪುರಸ್ಕಾರ 2027” ಹಾಗೂ “ಡಾ. ಪಿ ದಯಾನಂದ ಪೈ ವಿಶ್ವ ಕೊಂಕಣಿ ಅನುವಾದ ಪುರಸ್ಕಾರ 2027”

    November 23, 2026
    ಕರಾವಳಿ

    ಮಂಗಳೂರಿನಲ್ಲಿ ವಿಜ್ರಂಭಣೆಯಿಂದ ನಡೆದ “ಪ್ರಕೃತಿ ಸಂಭ್ರಮ 2026” ಹಾಗೂ “ಪ್ರಕೃತಿ ಪ್ರಶಸ್ತಿ 2026” ಕಾರ್ಯಕ್ರಮ

    November 23, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.