Close Menu
SK Media NewsSK Media News
    What's Hot

    ಸತತ ಸೋಲುಗಳ ಹತಾಶೆಯಿಂದ ಪ್ರಧಾನಿಗಳ ತಂದೆಯವರನ್ನು ನಿಂದನೆ ಮಾಡಿರುವ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆ ಅವರ ಹಿರಿತನಕ್ಕೆ ಶೋಭೆಯಲ್ಲ: ಶಾಸಕ ಕಾಮತ್ 

    October 27, 2026

    ನವಂಬರ್ 1ರಂದು ಸುರತ್ಕಲ್ ಬಂಟರ ಭವನದಲ್ಲಿ ರಂಗುರಂಗಿನ ರಂಗೋತ್ಸವ – ಸಂಗೀತ ಗಾನಸುಧೆ – ಶ್ರೀಮತಿ ಸತ್ಯಭಾಮ ನಾಟಕ : ಲಕ್ಷ್ಮಣ್ ಕುಮಾರ್ ಮಲ್ಲೂರ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ

    October 27, 2026

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಮಂಗಳೂರು ಕರಾವಳಿಯ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆಯಲ್ಲಿ ಗಮನಸೆಳೆದ ಸಂಸದ ಕ್ಯಾ. ಚೌಟ
    ಕರಾವಳಿ

    ಮಂಗಳೂರು ಕರಾವಳಿಯ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆಯಲ್ಲಿ ಗಮನಸೆಳೆದ ಸಂಸದ ಕ್ಯಾ. ಚೌಟ

    February 3, 2026Updated:February 3, 20262 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು ಕರಾವಳಿಯನ್ನು ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

    ನವದೆಹಲಿ: ಭಾರತದ ಗ್ರೀನ್‌ ಎನರ್ಜಿ ಸ್ವಾವಲಂಬನೆ ಮತ್ತು ಬಂದರು ಆಧಾರಿತ ಅಭಿವೃದ್ಧಿ ಕಾರ್ಯತಂತ್ರವನ್ನು ದೃಷ್ಟಿಯಲ್ಲಿಟ್ಟುಕೊಂಡು ಮಂಗಳೂರು ಕಡಲ ತೀರದಲ್ಲಿ ‘ಕಡಲ ಪವನ ಶಕ್ತಿ’ (‘ಸಮುದ್ರ ತೀರದ ಪವನ ಶಕ್ತಿ’ Offshore Wind Energy) ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

    ಲೋಕಸಭೆಯಲ್ಲಿ ನಿಯಮ 377ರ ಅಡಿಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಸಂಸದ ಕ್ಯಾ. ಚೌಟ ಅವರು, ಕಡಲನಗರಿ ಮಂಗಳೂರು ಸಮುದ್ರ ತೀರದ ಪವನ ಶಕ್ತಿ ಉತ್ಪಾದನೆಗೆ ವಿಪುಲ ಅವಕಾಶವಿದೆ. ನ್ಯಾಷನಲ್ ಇನ್‌ಸ್ಟಿಟ್ಯೂಟ್‌ ಆಫ್ ಓಷಿಯಾನೋಗ್ರಫಿ (NIO) ವರದಿಯನ್ನು ಉಲ್ಲೇಖಿಸಿ, ಭಾರತದ ಭರವಸೆಯ ಕಡಲ ಪವನ ಇಂಧನ ‘ವಲಯ-2ರಲ್ಲಿ ಮಂಗಳೂರು ಕರಾವಳಿ’ ಗುರುತಿಸಿಕೊಂಡಿದ್ದು, ಮಂಗಳೂರು ಕರಾವಳಿಯು ಸುಮಾರು 6,490 ಚ.ಕಿಮೀ. ಪ್ರದೇಶವು ಪವನ ಇಂಧನ ಉತ್ಪಾದನೆಗೆ ಹೆಚ್ಚು ಪೂರಕವಾಗಿದೆ. ಇಲ್ಲಿ ಭೂಕಂಪನ, ಚಂಡಮಾರುತ ಮುಂತಾದ ನೈಸರ್ಗಿಕ ವಿಕೋಪಗಳ ಅಪಾಯ ಕಡಿಮೆ ಇರುವುದರಿಂದ ದೀರ್ಘಕಾಲದ ಪವನ ಇಂಧನ ಯೋಜನೆಗಳ ಸ್ಥಾಪನೆಗೆ ಅತ್ಯಂತ ಸೂಕ್ತ ಹಾಗೂ ಸುರಕ್ಷಿತ ಪ್ರದೇಶವಾಗಿದೆ. ಹೀಗಾಗಿ, ಮಂಗಳೂರು ಕಡಲ ತೀರವನ್ನು ಪವನ ಶಕ್ತಿ ಉತ್ಪಾದನೆ ತಾಣವಾಗಿ ಅಭಿವೃದ್ಧಿಪಡಿಸಬೇಕೆಂದು ಕ್ಯಾ. ಚೌಟ ಅವರು ಹೇಳಿದ್ದಾರೆ.

    ನವ ಮಂಗಳೂರು ಬಂದರಿನ ಕಾರ್ಯತಂತ್ರದ ಪ್ರಯೋಜನವನ್ನು ಒತ್ತಿ ಹೇಳಿದ ಕ್ಯಾ. ಚೌಟ ಅವರು, ಅತ್ಯುತ್ತಮ ಮೂಲಸೌಕರ್ಯ, ಬಹು ಬರ್ತ್‌ಗಳು, ಹೆಚ್ಚಿನ ಸರಕು ನಿರ್ವಹಣಾ ಸಾಮರ್ಥ್ಯ ಸೇರಿದಂತೆ ಅತ್ಯಾಧುನಿಕ ಸೌಲಭ್ಯಗಳು ಈ ಬಂದರಿನಲ್ಲಿದೆ. ವಿಂಡ್ ಟರ್ಬೈನ್‌ಗಳಂತಹ ಬೃಹತ್ ಯಂತ್ರೋಪಕರಣಗಳ ಸಾಗಣೆ ಮತ್ತು ಜೋಡಣೆಗೆ ಇಲ್ಲಿ ಪೂರಕ ವ್ಯವಸ್ಥೆಯಿದೆ. ಇದು ಕಡಲ ಪವನ ಇಂಧನ ಯೋಜನೆಗಳ ನಿರ್ವಹಣೆಗೆ ಒಂದು ಪ್ರಮುಖ ಲಾಜಿಸ್ಟಿಕ್‌ ನೆಲೆಯನ್ನಾಗಿ ಪರಿವರ್ತಿಸಬಹುದು ಎಂದು ಅಭಿಪ್ರಾಯಪಟ್ಟರು.

    ಎಂಆರ್ ಪಿಎಲ್, ಒಎಂಪಿಎಲ್ , ಯುಪಿಸಿಎಲ್ ಮತ್ತು ಮಂಗಳೂರು ಎಸ್‌ಇಝಡ್ (MSEZ) ನಂತಹ ಬೃಹತ್ ಕೈಗಾರಿಕೆಗಳ ಕೇಂದ್ರವಾಗಿರುವುದರಿಂದ, ಇಲ್ಲಿ ತಯಾರಾಗುವ ಗ್ರೀನ್ ಎನರ್ಜಿಗೂ ಸ್ಥಳೀಯವಾಗಿಯೇ ದೊಡ್ಡ ಮಟ್ಟದ ಮಾರುಕಟ್ಟೆ ಲಭ್ಯವಿದೆ. ಹೀಗಾಗಿ ಕಡಲ ಪವನ ಶಕ್ತಿಯ ಉತ್ಪಾದನೆಯಾಗುವ ವಿದ್ಯುತ್‌ನ್ನು ನೇರವಾಗಿ ಮಾರಾಟ ಮಾಡಲು ಸುಲಭವಾಗುತ್ತದೆ. ಇವುಗಳೊಂದಿಗೆ ನೇರ ವಿದ್ಯುತ್ ಖರೀದಿ ಒಪ್ಪಂದಗಳನ್ನು ಮಾಡಿಕೊಳ್ಳುವ ಮೂಲಕ ಯೋಜನೆಯ ಆರ್ಥಿಕ ಸುಸ್ಥಿರತೆಯನ್ನು ಕಾಪಾಡಿಕೊಳ್ಳಬಹುದು ಮತ್ತು ತ್ವರಿತ ಅನುಷ್ಠಾನಕ್ಕೂ ಇದು ಸಹಕಾರಿ ಎಂದು ಕ್ಯಾ. ಚೌಟ ಪ್ರತಿಪಾದಿಸಿದ್ದಾರೆ.

    ಕರ್ನಾಟಕಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಿದ್ದು, 2025ರ ಆರಂಭದಲ್ಲಿ ರಾಜ್ಯದ ಗರಿಷ್ಠ ವಿದ್ಯುತ್ ಬೇಡಿಕೆಯು 18,000 ಮೆಗಾವ್ಯಾಟ್ ದಾಟಿದ್ದು, ಇಂಥಹ ಸಂದರ್ಭದಲ್ಲಿ ಪರ್ಯಾಯ ಇಂಧನ ಉತ್ಪಾದಿಸುವ ಪವನ ಶಕ್ತಿಯನ್ನು ಉತ್ತೇಜಿಸುವ ಅಗತ್ಯವಿದೆ. ಕರ್ನಾಟಕದ ಕರಾವಳಿಯಲ್ಲಿ ಗಾಳಿಯ ವೇಗವು ತುಲನಾತ್ಮಕವಾಗಿ ಕಡಿಮೆ ಇದ್ದರೂ, ಅರಬ್ಬಿ ಸಮುದ್ರದಲ್ಲಿ ಕಡಲಾಚೆಯ ಗಾಳಿ ಇಂಧನ ಅಭಿವೃದ್ಧಿಪಡಿಸುವುದು ದಕ್ಷಿಣ ಭಾರತದ ಇಂಧನ ಭದ್ರತೆಗೆ ಅತ್ಯಗತ್ಯವಾಗಿದೆ. ಜೊತೆಗೆ ಬಂಗಾಳ ಕೊಲ್ಲಿಯು ಸದಾ ಚಂಡಮಾರುತದ ಭೀತಿ ಎದುರಿಸುತ್ತಿರುವುದರಿಂದ, ಅರಬ್ಬಿ ಸಮುದ್ರದ ಈ ವಲಯವು ಪವನ ಶಕ್ತಿಯ ಬಲವರ್ಧನೆಗೆ ಹೆಚ್ಚು ಸುರಕ್ಷಿತವಾಗಿದೆ ಎಂದು ಹೇಳಿದ್ದಾರೆ.

    2030ರ ವೇಳೆಗೆ 500 GW ನವೀಕರಿಸಬಹುದಾದ ಇಂಧನ ಉತ್ಪಾದಿಸುವ ಭಾರತದ ಗುರಿಯನ್ನು ತಲುಪಲು ಮಂಗಳೂರು ಪವನ ಶಕ್ತಿ ಉತ್ಪಾದನಾ ವಲಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ತಕ್ಷಣವೇ ಸಂಪನ್ಮೂಲಗಳ ಮೌಲ್ಯಮಾಪನ, ಯೋಜನೆಗಳ ಪ್ರಾಯೋಗಿಕ ಅನುಷ್ಠಾನ ಮತ್ತು ಕೈಗಾರಿಕಾ ಸಮಾಲೋಚನೆಗಳನ್ನು ನಡೆಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ನವೀಕರಿಸಬಹುದಾದ ಇಂಧನ ಸಚಿವಾಲಯವನ್ನು ಸಂಸದ ಕ್ಯಾ. ಚೌಟ ಅವರು ಸದನದಲ್ಲಿ ಆಗ್ರಹಿಸಿದ್ದಾರೆ.

    Share. Facebook Twitter Pinterest LinkedIn Email WhatsApp
    Previous Articleಮಾಣೂರು ಶ್ರೀ ಸುಬ್ರಾಯ ದೇವಸ್ಥಾನ 2 ಕೋಟಿ ರೂ. ವೆಚ್ಚದಲ್ಲಿ ಜೀರ್ಣೋದ್ದಾರ : ಫೆ. 2ರಿಂದ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ
    Next Article ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನದ ರಾಜ್ಯ ಮಾಧ್ಯಮ ವಕ್ತಾರರಾಗಿ ಹಿರಿಯ ಪತ್ರಕರ್ತ ಸುದೇಶ್ ಕುಮಾರ್ ಆಯ್ಕೆ

    Related Posts

    ಕರಾವಳಿ

    ಸತತ ಸೋಲುಗಳ ಹತಾಶೆಯಿಂದ ಪ್ರಧಾನಿಗಳ ತಂದೆಯವರನ್ನು ನಿಂದನೆ ಮಾಡಿರುವ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆ ಅವರ ಹಿರಿತನಕ್ಕೆ ಶೋಭೆಯಲ್ಲ: ಶಾಸಕ ಕಾಮತ್ 

    October 27, 2026
    ಕರಾವಳಿ

    ನವಂಬರ್ 1ರಂದು ಸುರತ್ಕಲ್ ಬಂಟರ ಭವನದಲ್ಲಿ ರಂಗುರಂಗಿನ ರಂಗೋತ್ಸವ – ಸಂಗೀತ ಗಾನಸುಧೆ – ಶ್ರೀಮತಿ ಸತ್ಯಭಾಮ ನಾಟಕ : ಲಕ್ಷ್ಮಣ್ ಕುಮಾರ್ ಮಲ್ಲೂರ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ

    October 27, 2026
    ಕರಾವಳಿ

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.