Close Menu
SK Media NewsSK Media News
    What's Hot

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಸಂಭ್ರಮ : 108 ತೆಂಗಿನಕಾಯಿಗಳ ಮಹಾಗಣಪತಿ ಹೋಮ, ವೈಭವದ ಸಾಮೂಹಿಕ ರಂಗಪೂಜೆ

    September 11, 2026

    ಡಿ.ಫಾರ್ಮಾ, ಬಿ.ಫಾರ್ಮಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉದ್ಯೋಗಾವಕಾಶ : ಸೆ.15 ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    September 11, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಮುಲ್ಕಿಯಲ್ಲಿ ಮಹಾದಾನಿ “ಡಾ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ” : ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಭೆಯಲ್ಲಿ ಐಕಳ ಹರೀಶ್ ಶೆಟ್ಟಿ ಘೋಷಣೆ
    ರಾಷ್ಟ್ರೀಯ

    ಮುಲ್ಕಿಯಲ್ಲಿ ಮಹಾದಾನಿ “ಡಾ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ” : ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಭೆಯಲ್ಲಿ ಐಕಳ ಹರೀಶ್ ಶೆಟ್ಟಿ ಘೋಷಣೆ

    March 3, 20262 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು: ನಿರಂತರ ಸಮಾಜ ಕಾರ್ಯಗಳಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ತೊಡಗಿಸಿಕೊಂಡಿದೆ. ಮುಲ್ಕಿಯಲ್ಲಿ ಡಾ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದ ಕೆಲಸ ತ್ವರಿತವಾಗಿ ನಡೆಯುತ್ತಿದೆ.

    ಮಹಾದಾನಿ ಡಾ ಕನ್ಯಾನ ಸದಾಶಿವ ಶೆಟ್ಟಿಯವರ ಆಶಯ, ಆಶೀರ್ವಾದಿಂದ ಸಂಕೀರ್ಣದ ಕೆಲಸ ಪ್ರಗತಿಯಲ್ಲಿದೆ. ಸಂಕೀರ್ಣದಲ್ಲಿ ಶ್ರೀಮತಿ ಶಶಿರೇಖಾ ಆನಂದ ಶೆಟ್ಟಿ ಅವರ ಹೆಸರಿನಲ್ಲಿ ವೇದಿಕೆ ಇದೆ. ಇದರ ಜೊತೆಗೆ ಕಿರು ಸಭಾಂಗಣ, ಧರ್ಮಚಾವಡಿ, ಪ್ರವೀಣ್ ಭೋಜ ಶೆಟ್ಟಿ ಆಡಳಿತ ಕಚೇರಿಯೂ ಇದೆ. ಡಿಸೆಂಬರ್ ತಿಂಗಳಲ್ಲಿ “ಡಾ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ” ಲೋಕಾರ್ಪಣೆಗೊಳ್ಳಲಿದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟ ಅವರು ತಿಳಿಸಿದರು.

    ಅವರು ಬಂಟ್ಸ್ ಹಾಸ್ಟೆಲ್ ನ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಒಕ್ಕೂಟದ ಮಹಾ ನಿರ್ದೇಶಕ ತೋನ್ಸೆ ಆನಂದ ಶೆಟ್ಟಿ ಅವರು ಸಭೆಯನ್ನು ಉದ್ಘಾಟಿಸಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟ ಬಡವರ ಮಧ್ಯಮವರ್ಗದವರ ಕಣ್ಣೀರನ್ನು ಒರೆಸುವ ಕೆಲಸ ಮಾಡುತ್ತಿದೆ. 40 ವರ್ಷಗಳ ಇತಿಹಾಸ ಇರುವ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಐಕಳ ಹರೀಶ್ ಶೆಟ್ಟಿ ಅವರು ಒಕ್ಕೂಟದ ಅಧ್ಯಕ್ಷರಾದ ಬಳಿಕ‌ ಒಕ್ಕೂಟದ ಚಿತ್ರಣವನ್ನೇ ಬದಲಾಯಿಸಿದರು ಎಂದರು.

    ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಮಾತನಾಡಿ, ಐಕಳರ ಸಂಘಟನಾ ಚತುರತೆ, ದಿನನಿತ್ಯ ಓಡಾಟ, ದಾನಿಗಳ ಸಂಪರ್ಕದಿಂದ ಒಕ್ಕೂಟ ಎತ್ತರಕ್ಕೆ ಬೆಳೆದಿದೆ ಎಂದರು.

    ಯುವ ವಿಭಾಗದ ಸಂಚಾಲಕ ಗಿರೀಶ್ ಶೆಟ್ಟಿ ತೆಳ್ಳಾರ್ ಮಾತನಾಡಿ ಒಕ್ಕೂಟಕ್ಕೆ ಯುವಕರನ್ನು ಸೆಳೆಯುವ ಅಗತ್ಯ ಇದೆ. ಈ ನಿಟ್ಟಿನಲ್ಲಿ ಒಕ್ಕೂಟದ ಅಧ್ಯಕ್ಷರೊಂದಿಗೆ ಚರ್ಚಿಸಿ ಯುವ ಸಮಾವೇಶ ಮಾಡುವ ಕುರಿತು ಚಿಂತನೆ ನಡೆಸಲಾಗುವುದು ಎಂದರು.

    ಸಭೆಯಲ್ಲಿ ಉದ್ಯಮಿ, ದಾನಿಗಳಾದ ರಾಜೇಂದ್ರ ವಿ ಶೆಟ್ಟಿ ಪಂಜುರ್ಲಿ ಗ್ರೂಪ್ಸ್, ಶಶಿಧರ್ ಶೆಟ್ಟಿ ಇನ್ನಂಜೆ, ರಾಜೇಶ್ ಶೆಟ್ಟಿ ರಾಕ್ಷಿ ಡೆವಲಪರ್ಸ್, ಬೆಳ್ಳಾಡಿ ಅಶೋಕ್ ಶೆಟ್ಟಿ, ಅರವಿಂದ್ ಆನಂದ್ ಶೆಟ್ಟಿ, ಮುನಿಯಾಲ್ ಉದಯಕುಮಾರ್ ಶೆಟ್ಟಿ, ಹರೀಶ್ ಶೆಟ್ಟಿ ಪಡುಕುದೂರು, ವಸಂತ ಶೆಟ್ಟಿ, ರತ್ನಾಕರ ಶೆಟ್ಟಿ ಎಕ್ಕಾರ್, ಸಂತೋಷ್ ಕುಮಾರ್ ಹೆಗ್ಡೆ, ರತ್ನ ಪಿ. ಶೆಟ್ಟಿ, ಚಿತ್ರ ಆರ್. ಶೆಟ್ಟಿ, ಆರತಿ ಆಳ್ವ, ಹುಂತ್ರಿಕೆ ಸುಧಾಕರ್ ಶೆಟ್ಟಿ, ಅಕ್ಕುಂಜೆ ಸತೀಶಚಂದ್ರ ಶೆಟ್ಟಿ, ಸನ್ಮಿತ್ ಬಾಬು ಶೆಟ್ಟಿ, ಸುದೇಶ್ ವಿ.ಶೆಟ್ಟಿ, ರಾಜೇಶ್ ಶೆಟ್ಟಿ ತೆಳ್ಳಾರ್, ಹರಿಪ್ರಸಾದ್ ರೈ, ಮಂಜುನಾಥ್ ಶೆಟ್ಟಿ ಕೊಡ್ಲಾಡಿ, ಅಶೋಕ್ ಕುಮಾರ್ ಶೆಟ್ಟಿ ಮೈರ್ಮಾಡಿ, ಶ್ರೀಧರ್ ಶೆಟ್ಟಿ ಆರೂರು, ಆನಂದ್ ಶೆಟ್ಟಿ ಕಾವೂರು ಸೇರಿದಂತೆ ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ್ ಶೆಟ್ಟಿ, ಕಾರ್ಯದರ್ಶಿ ಜಯಕರ್ ಶೆಟ್ಟಿ ಇಂದ್ರಾಳಿ, ಕೋಶಾಧಿಕಾರಿ ಉಳ್ತೂರು ಮೋಹನದಾಸ್ ಶೆಟ್ಟಿ, ಜೊತೆ ಕಾರ್ಯದರ್ಶಿ ಚಂದ್ರಹಾಸ್ ಡಿ. ಶೆಟ್ಟಿ ರಂಗೋಲಿ ಉಪಸ್ಥಿತರಿದ್ದರು.

    ಸಭೆಯಲ್ಲಿ ವಿವಿಧ ಬಂಟರ ಸಂಘಗಳ ಅಧ್ಯಕ್ಷರು ಪದಾಧಿಕಾರು ಉಪಸ್ಥಿತರಿದ್ದರು. ಸುರೇಶ್ ಶೆಟ್ಟಿ ಶಿಬರೂರು ಪ್ರಾರ್ಥನೆಗೈದರು. ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ ಕಾರ್ಯಕ್ರಮ‌ ನಿರ್ವಹಿಸಿದರು.

    __Sathish Kapikad

    Share. Facebook Twitter Pinterest LinkedIn Email WhatsApp
    Previous Articleಹಿರಿಯ ಆರ್‌ಎಸ್‌ಎಸ್ ಕಾರ್ಯಕರ್ತ, ಬಿಜೆಪಿಯ ಹಿರಿಯ ನಾಯಕ ಸತೀಶ್ ಪ್ರಭು ವಿಧಿವಶ
    Next Article ಬಿಜೆಪಿ ಮುಖಂಡ ಸತೀಶ್ ಪ್ರಭು ಅವರ ಅಕಾಲಿಕ ನಿಧನಕ್ಕೆ ಸಂಸದ ಕ್ಯಾ. ಚೌಟ ತೀವ್ರ ಸಂತಾಪ

    Related Posts

    ಕರಾವಳಿ

    ಪುಣೆಯಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಡಾ| ಜೇಷಾ ರಿಮಿನ್‌ರವರ ಚತುರ್ಥ ಪುಣ್ಯಸ್ಮರಣೆ ಪ್ರಯುಕ್ತ ಮಂಗಳೂರಿನಲ್ಲಿ ರಕ್ತದಾನ ಶಿಬಿರ

    September 11, 2026
    ಕರಾವಳಿ

    ಬಂಟ್ಸ್ ಹಾಸ್ಟೆಲ್ ನಲ್ಲಿ ಸೆ. 14ರಿಂದ 16ರವರೆಗೆ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ – ತೆನೆಹಬ್ಬ, ಅಷ್ಟೋತ್ತರ ಸಹಸ್ರ ನಾರಿಕೇಳ ಮಹಾಗಣಯಾಗ – ಸಾಧಕರಿಗೆ ಸನ್ಮಾನ

    September 8, 2026
    ಅಂತಾರಾಷ್ಟ್ರೀಯ

    Gulf Medical University Commences 2026–2027 Academic Year, Reinforcing Its Commitment to Excellence in Health Professions Education

    September 7, 2026
    Add A Comment
    Leave A Reply Cancel Reply

    Top Posts

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.