Close Menu
SK Media NewsSK Media News
    What's Hot

    ಸಾವಿರದಂಚಿಗೆ ದಾಪುಗಾಲಿಡುತ್ತಿರುವ ತುಳುನಾಡಿನ ದೈವಿಕ ನಂಬಿಕೆಯ ರಂಗರೂಪ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರ ‘ಶಿವಧೂತ ಗುಳಿಗ” ನಾಟಕ

    November 22, 2026

    ರೋಟರಿ ಸಂಸ್ಥೆಯ ಸೇವೆ ದೇವರು ಮೆಚ್ಚುವಂಥ ಕಾರ್ಯ : ರೋಟರಿ 26ನೇ ವಾರ್ಷಿಕ ಚಿಣ್ಣರ ಉತ್ಸವ ಉದ್ಘಾಟಿಸಿ, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

    November 22, 2026

    ನ್ಯಾಯಯುತ ಬೇಡಿಕೆಗಳಿಗಾಗಿ ಆಹೋರಾತ್ರಿ ಧರಣಿ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ಶಾಪ ಕಾಂಗ್ರೆಸ್ ಸರ್ಕಾರಕ್ಕೆ ತಟ್ಟುವುದು ಗ್ಯಾರಂಟಿ : ಸತೀಶ್ ಕುಂಪಲ ಆಕ್ರೋಶ 

    November 21, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಮಾರ್ಚ್ 21ರಂದು ಮಂಗಳೂರಿನಲ್ಲಿ ಆಳ್ವಾಸ್ ನುಡಿಸಿರಿ – ವಿರಾಸತ್ : ಆಳ್ವಾಸ್ ಸಾಂಸ್ಕೃತಿಕ ವೈಭವ
    ಕರಾವಳಿ

    ಮಾರ್ಚ್ 21ರಂದು ಮಂಗಳೂರಿನಲ್ಲಿ ಆಳ್ವಾಸ್ ನುಡಿಸಿರಿ – ವಿರಾಸತ್ : ಆಳ್ವಾಸ್ ಸಾಂಸ್ಕೃತಿಕ ವೈಭವ

    March 18, 20262 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು : ಮಾರ್ಚ್ 21ರಂದು ಮಂಗಳೂರಿನಲ್ಲಿ ಆಳ್ವಾಸ್ ನುಡಿಸಿರಿ – ವಿರಾಸತ್ – ಆಳ್ವಾಸ್ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಎಂ.ಮೋಹನ್ ಆಳ್ವ ತಿಳಿಸಿದರು.

    ನಗರದಲ್ಲಿಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಆಳ್ವಾಸ್ ನುಡಿಸಿರಿ ವಿರಾಸತ್ ಮಂಗಳೂರು ಘಟಕದ ವತಿಯಿಂದ ಮಂಗಳೂರಿನ ಲಾಲ್ ಬಾಗ್ ಕರಾವಳಿ ಉತ್ಸವ ಮೈದಾನದ ಕೀರ್ತಿಶೇಷ ಡಾ.ಎನ್ ವಿನಯ್ ಹೆಗ್ಡೆ ವೇದಿಕೆಯಲ್ಲಿ ಮಾರ್ಚ್ 21ರ ಸಂಜೆ 6.15ಕ್ಕೆ ಆಳ್ವಾಸ್ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ನಡೆಯಲಿದೆ ಎಂದು  ತಿಳಿಸಿದರು.

    ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು ಕಾರ್ಯಕ್ರಮದ ಪೂರ್ವದಲ್ಲಿ 45 ನಿಮಿಷಗಳ ಕಾಲ ಸಭಾ ಕಾರ್ಯಕ್ರಮ ನಡೆಯಲಿದ್ದು, ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

    ಮಂಗಳೂರು ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ವೇದವ್ಯಾಸ ಕಾಮತ್‌ ಅಧ್ಯಕ್ಷತೆ ವಹಿಸಲಿದ್ದು. ಈ ಸಂದರ್ಭದಲ್ಲಿ ಸಮಾಜದ ಪ್ರಮುಖರು ಸಭಾ ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತಿಯನ್ನು ವಹಿಸಲಿದ್ದಾರೆ, ಈ ಸಾಂಸ್ಕೃತಿಕ ಕಾರ್ಯಕ್ರಮವನ್ನು ಕೀರ್ತಿಶೇಷ ಡಾ.ಎನ್.ವಿನಯ್ ಹೆಗ್ಡೆಯವರಿಗೆ ಅರ್ಪಿಸಲಾಗಿದೆ ಎಂದರು.

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 500ಕ್ಕೂ ಅಧಿಕ ವಿದ್ಯಾರ್ಥಿ ಕಲಾವಿದರಿಂದ ಭಾರತೀಯ ಕಲಾಪ್ರಕಾರಗಳಾದ ಯೋಗ ದೀಪಿಕಾ, ಶಾಸ್ತ್ರೀಯ ನೃತ್ಯ-ಅಷ್ಟಲಕ್ಷ್ಮಿ, ಬಡಗುತಿಟ್ಟು ಯಕ್ಷಗಾನ, ಶಂಕರಾರ್ಧ ಶರೀರಿಣಿ, ಗುಜರಾತಿನ ದಾಂಡಿಯ ನೃತ್ಯ, ಮಣಿಪುರಿ ಸ್ಟಿಕ್ ಡಾನ್ಸ್, ಮಲ್ಲಕಂಬ ಹಾಗೂ ಕಸರತ್ತು, ಸೃಜನಾತ್ಮಕ ನೃತ್ಯ, ಡೊಳ್ಳು ಕುಣಿತ, ಕಥಕ್ ವರ್ಷಧಾರೆ, ಪುರುಲಿಯಾ ಸಿಂಹ ನೃತ್ಯ, ತೆಂಕುತಿಟ್ಟು ಯಕ್ಷಗಾನ ಹಿರಣ್ಯಾಕ್ಷ ವಧೆ, ಬೊಂಬೆ ವಿನೋದಾವಳಿಯ ಪ್ರದರ್ಶನ ನಡೆಯಲಿದೆ ಎಂದರು .

    ಪ್ರೇಕ್ಷಕರಿಗಾಗಿ 8,000ಕ್ಕೂ ಅಧಿಕ ಆಸನದ ವ್ಯವಸ್ಥೆ ಮಾಡಲಾಗಿದ್ದು, ಎಲ್ಲರಿಗೂ ಉಚಿತ ಪ್ರವೇಶವಿರಲಿದೆ. ಸಾಂಸ್ಕೃತಿಕ ಕರ್ಯಮವು ಕ್ಲಪ್ತ ಸಮಯಕ್ಕೆ ಆರಂಭವಾಗಿ ನಿಗದಿತ ಸಮಯಕ್ಕೆ ಮುಕ್ತಾಯಗೊಳ್ಳಲಿದೆ ಎಂದರು.

    ಆಳ್ವಾಸ್ ಸಾಂಸ್ಕೃತಿಕ ವೈಭವವು ಕರ್ನಾಟಕದ ಅತ್ಯಂತ ಪ್ರಸಿದ್ಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಒಂದಾಗಿದೆ. ಇದು ಕೇವಲ ಒಂದು ಕಾರ್ಯಕ್ರಮವಲ್ಲ, ನಮ್ಮ ದೇಶದ ಸಂಸ್ಕೃತಿ, ಪರಂಪರೆ ಮತ್ತು ವೈವಿಧ್ಯತೆಯ ಸೊಬಗನ್ನು ಒಂದೇ ವೇದಿಕೆಯಲ್ಲಿ ಕಣ್ಣುತುಂಬಿಸಿಕೊಳ್ಳಲು ಇರುವ ಸುಂದರ ಅವಕಾಶ. ಈ ಕಾರ್ಯಕ್ರಮದ ಮೂಲಕ ನೂರು ಸಂದೇಶಗಳು ಸಮಾಜಕ್ಕೆ ತಲುಪಿಸುವ ಉದ್ದೇಶ ಹೊಂದಿದೆ ಎಂದರು.

    ಪತ್ರಿಕಾಗೋಷ್ಠಿಯಲ್ಲಿ ಆಳ್ವಾಸ್ ನುಡಿಸಿರಿ-ವಿರಾಸತ್ ಮಂಗಳೂರು ಘಟಕದ ಸಂಘಟನಾ ಕಾರ್ಯದರ್ಶಿಗಳಾದ ಪ್ರಸಾದ್ ಕಲ್ಲಿಮಾರ್, ಖಾಜಂಜಿ ಶಶಿರಾಜ್ ರಾವ್ ಕಾವೂರು, ಪ್ರಮುಖರಾದ ಎಸ್.ಪ್ರದೀಪ್ ಕುಮಾರ್ ಕಲ್ಕೂರ, ಲೀಲಾಕ್ಷ ಕರ್ಕೇರ ಮುಂತಾದವರು ಉಪಸ್ಥಿತರಿದ್ದರು.

    __Sathish Kapikad 

    Share. Facebook Twitter Pinterest LinkedIn Email WhatsApp
    Previous Articleರೋಗಿಗಳ ಜೊತೆಗಾರರಿಗೆ ಊಟ ನೀಡುವ ಕಾರುಣ್ಯ ಯೋಜನೆಗೂ ತಟ್ಟಿದ ವಾಣಿಜ್ಯ ಅನಿಲದ ಬಿಸಿ : ಕಟ್ಟಿಗೆ ಒಲೆಯ ಮೊರೆ ಹೋದ ‘ಕಾರುಣ್ಯ’
    Next Article ಮಾರ್ಚ್ 24ರಿಂದ 28: ಮಂಗಳೂರಿನಲ್ಲಿ  ʻರಾಷ್ಟ್ರ ಮಟ್ಟದ ಸೀನಿಯರ್ ಕ್ಲಾಸಿಕ್ ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್

    Related Posts

    ಕರಾವಳಿ

    ಸಾವಿರದಂಚಿಗೆ ದಾಪುಗಾಲಿಡುತ್ತಿರುವ ತುಳುನಾಡಿನ ದೈವಿಕ ನಂಬಿಕೆಯ ರಂಗರೂಪ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರ ‘ಶಿವಧೂತ ಗುಳಿಗ” ನಾಟಕ

    November 22, 2026
    ಕರಾವಳಿ

    ರೋಟರಿ ಸಂಸ್ಥೆಯ ಸೇವೆ ದೇವರು ಮೆಚ್ಚುವಂಥ ಕಾರ್ಯ : ರೋಟರಿ 26ನೇ ವಾರ್ಷಿಕ ಚಿಣ್ಣರ ಉತ್ಸವ ಉದ್ಘಾಟಿಸಿ, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

    November 22, 2026
    ಕರಾವಳಿ

    ನ್ಯಾಯಯುತ ಬೇಡಿಕೆಗಳಿಗಾಗಿ ಆಹೋರಾತ್ರಿ ಧರಣಿ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ಶಾಪ ಕಾಂಗ್ರೆಸ್ ಸರ್ಕಾರಕ್ಕೆ ತಟ್ಟುವುದು ಗ್ಯಾರಂಟಿ : ಸತೀಶ್ ಕುಂಪಲ ಆಕ್ರೋಶ 

    November 21, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.