Close Menu
SK Media NewsSK Media News
    What's Hot

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ವಿಧಿವಶ

    July 18, 2026

    ಹೈ ಕೋರ್ಟ್ ಸರಕಾರಿ ವಕೀಲರಾಗಿ “ಚಿದಾನಂದ ಬಂಟ್ವಾಳ್ ” ನೇಮಕ

    July 18, 2026

    ದ.ಕ. ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರೀ ಮಳೆ ಹಿನ್ನೆಲೆ : ದ. ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ 

    July 17, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಮಾರ್ಚ್ 24ರಿಂದ 28: ಮಂಗಳೂರಿನಲ್ಲಿ  ʻರಾಷ್ಟ್ರ ಮಟ್ಟದ ಸೀನಿಯರ್ ಕ್ಲಾಸಿಕ್ ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್
    ಕರಾವಳಿ

    ಮಾರ್ಚ್ 24ರಿಂದ 28: ಮಂಗಳೂರಿನಲ್ಲಿ  ʻರಾಷ್ಟ್ರ ಮಟ್ಟದ ಸೀನಿಯರ್ ಕ್ಲಾಸಿಕ್ ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್

    March 21, 20262 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು, ಮಾರ್ಚ್.21: ಕರಾವಳಿಯ ಕ್ರೀಡಾ ಇತಿಹಾಸದಲ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪಿಸಲು ಮಂಗಳೂರು ಸಜ್ಜಾಗಿದೆ. ಕರ್ನಾಟಕ ಪವರ್‌ಲಿಫ್ಟಿಂಗ್ ಅಸೋಸಿಯೇಶನ್ ಆಶ್ರಯದಲ್ಲಿ ಮತ್ತು ಕಶಾರ್ಪ್ ಫಿಟ್ನೆಸ್ ವತಿಯಿಂದ ʻರಾಷ್ಟ್ರ ಮಟ್ಟದ ಸೀನಿಯರ್ ಕ್ಲಾಸಿಕ್ ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್ 2026′ ಮಾರ್ಚ್ 24 ರಿಂದ 28 ರವರೆಗೆ ನಗರದ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ಅದ್ಧೂರಿಯಾಗಿ ನಡೆಯಲಿದೆ ಎಂದು ಅಂತಾರಾಷ್ಟ್ರೀಯ ಪವರ್ ಲಿಫ್ಟರ್ ಸತೀಶ್ ಕುಮಾರ್ ಕುದ್ರೋಳಿ ತಿಳಿಸಿದರು.

    ನಗರದ ಕಶಾರ್ಪ್ ಫಿಟ್ನೆಸ್ ಸೆಂಟರ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕ್ರೀಡಾಕೂಟದ ಮಹತ್ವ ಮತ್ತು ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದರು.

    ಐದು ದಿನಗಳ ಕಾಲ ನಡೆಯುವ ಈ ಬೃಹತ್ ಕ್ರೀಡಾಕೂಟದಲ್ಲಿ ದೇಶದ ವಿವಿಧ ರಾಜ್ಯಗಳಿಂದ 300ಕ್ಕೂ ಹೆಚ್ಚು ನುರಿತ ಪುರುಷ ಮತ್ತು ಮಹಿಳಾ ಪವರ್‌ಲಿಫ್ಟರ್‌ಗಳು ಪಾಲ್ಗೊಳ್ಳಲಿದ್ದಾರೆ. ಸ್ಕ್ವಾಟ್, ಬೆಂಚ್ ಪ್ರೆಸ್ ಮತ್ತು ಡೆಡ್‌ಲಿಫ್ಟ್ ವಿಭಾಗಗಳಲ್ಲಿ ಕ್ರೀಡಾಪಟುಗಳು ತಮ್ಮ ಶಕ್ತಿ ಹಾಗೂ ತಾಂತ್ರಿಕ ಕೌಶಲ್ಯವನ್ನು ಪ್ರದರ್ಶಿಸಲಿದ್ದಾರೆ. ಮಂಗಳೂರಿನಲ್ಲಿ ಇಂತಹ ಉನ್ನತ ಮಟ್ಟದ ಸ್ಪರ್ಧೆ ನಡೆಯುತ್ತಿರುವುದು ಜಿಲ್ಲೆಯ ಕ್ರೀಡಾ ಪ್ರೇಮಿಗಳಲ್ಲಿ ಕುತೂಹಲ ಮೂಡಿಸಿದೆ ಎಂದವರು ತಿಳಿಸಿದರು.

    ಈ ಬಾರಿಯ ರಾಷ್ಟ್ರೀಯ ಚಾಂಪಿಯನ್‌ಶಿಪ್‌ಗೆ ವಿಶೇಷ ಪ್ರಾಮುಖ್ಯತೆ ಇದೆ. ಇಲ್ಲಿ ಚಿನ್ನದ ಪದಕ ಗೆಲ್ಲುವ ಕ್ರೀಡಾಪಟುಗಳು ಜೂನ್ ತಿಂಗಳಲ್ಲಿ ಲಿಥುವೇನಿಯಾದಲ್ಲಿ ನಡೆಯಲಿರುವ ʻವಿಶ್ವ ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್’ನಲ್ಲಿ ಭಾರತವನ್ನು ಪ್ರತಿನಿಧಿಸುವ ಸುವರ್ಣ ಅವಕಾಶ ಪಡೆಯಲಿದ್ದಾರೆ. ಈ ಕಾರಣದಿಂದಾಗಿ ದೇಶದ ಶ್ರೇಷ್ಠ ಕ್ರೀಡಾಪಟುಗಳ ನಡುವೆ ಕಠಿಣ ಪೈಪೋಟಿ ನಿರೀಕ್ಷಿಸಲಾಗಿದೆ.

    ಅಂತಾರಾಷ್ಟ್ರೀಯ ಪವರ್ ಲಿಫ್ಟರ್ ಪ್ರದೀಪ್ ಕುಮಾರ್ ಆಚಾರ್ಯ ಮಾತನಾಡಿ, ಮಾರ್ಚ್ 24ರಂದು ಬೆಳಿಗ್ಗೆ 10 ಗಂಟೆಗೆ ಚಾಂಪಿಯನ್‌ಶಿಪ್‌ನ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಮಂಗಳೂರು ಜಿಲ್ಲಾಧಿಕಾರಿಗಳು ಮುಖ್ಯ ಅತಿಥಿಯಾಗಿ ಆಗಮಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ವಿವಿಧ ಗಣ್ಯರು, ಕ್ರೀಡಾ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಪ್ರಾಯೋಜಕರು ಉಪಸ್ಥಿತರಿರಲಿದ್ದಾರೆ. ಕ್ರೀಡಾಕೂಟವನ್ನು ಅಂತಾರಾಷ್ಟ್ರೀಯ ಮಾನದಂಡಗಳನ್ವಯ ಆಯೋಜಿಸಲಾಗುತ್ತಿದ್ದು, ಅತ್ಯಾಧುನಿಕ ಸ್ಪರ್ಧಾ ಸಾಧನಗಳು, ಅನುಭವೀ ತಾಂತ್ರಿಕ ಅಧಿಕಾರಿಗಳು ಮತ್ತು ಕಟ್ಟುನಿಟ್ಟಿನ ಡೋಪಿಂಗ್ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕ್ರೀಡಾಪಟುಗಳಿಗೆ ಅಗತ್ಯವಿರುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ ಎಂದರು.

    ಸುದ್ದಿಗೋಷ್ಠಿಯಲ್ಲಿ ಮೆಸ್ಕಾಂ ಅಧಿಕಾರಿಗಳಾದ ಎ. ಉಮೇಶ್ ಗಟ್ಟಿ ಮತ್ತು ಮಧುಚಂದ್ರ ಎಂ.ಎಂ., ಹಾಗೂ ಕರ್ನಾಟಕ ಪವರ್‌ಲಿಫ್ಟಿಂಗ್ ಅಸೋಸಿಯೇಶನ್ ಕೋಶಾಧಿಕಾರಿ ಜಯರಾಮ್ ಶೆಟ್ಟಿಗಾರ್ ಉಪಸ್ಥಿತರಿದ್ದರು.

    __Sathish Kapikad 

    Share. Facebook Twitter Pinterest LinkedIn Email WhatsApp
    Previous Articleಮಾರ್ಚ್ 21ರಂದು ಮಂಗಳೂರಿನಲ್ಲಿ ಆಳ್ವಾಸ್ ನುಡಿಸಿರಿ – ವಿರಾಸತ್ : ಆಳ್ವಾಸ್ ಸಾಂಸ್ಕೃತಿಕ ವೈಭವ
    Next Article ಮಂಗಳೂರಿಗೆ ಎಂ.ಟಿ. ಅಪೋಲೋ ಓಶನ್ ಆಗಮನ: ನವ ಮಂಗಳೂರು ಬಂದರು ಪ್ರಾಧಿಕಾರಕ್ಕೆ ಆಗಮಿಸಿದ 40,000ನೇ ಹಡಗು

    Related Posts

    ಕರಾವಳಿ

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ವಿಧಿವಶ

    July 18, 2026
    ಕರಾವಳಿ

    ಹೈ ಕೋರ್ಟ್ ಸರಕಾರಿ ವಕೀಲರಾಗಿ “ಚಿದಾನಂದ ಬಂಟ್ವಾಳ್ ” ನೇಮಕ

    July 18, 2026
    ಕರಾವಳಿ

    ದ.ಕ. ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರೀ ಮಳೆ ಹಿನ್ನೆಲೆ : ದ. ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ 

    July 17, 2026
    Add A Comment
    Leave A Reply Cancel Reply

    Top Posts

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.