Close Menu
SK Media NewsSK Media News
    What's Hot

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ವಿಧಿವಶ

    July 18, 2026

    ಹೈ ಕೋರ್ಟ್ ಸರಕಾರಿ ವಕೀಲರಾಗಿ “ಚಿದಾನಂದ ಬಂಟ್ವಾಳ್ ” ನೇಮಕ

    July 18, 2026

    ದ.ಕ. ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರೀ ಮಳೆ ಹಿನ್ನೆಲೆ : ದ. ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ 

    July 17, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಎಂಸಿಸಿ ಬ್ಯಾಂಕ್ 2025-26 ವಿತ್ತೀಯ ವರ್ಷದಲ್ಲಿ ರೂ.1525 ಕೋಟಿ ವ್ಯವಹಾರ – ರೂ. 13 ಕೋಟಿ ಲಾಭ: ಅಧ್ಯಕ್ಷ ಅನಿಲ್ ಲೋಬೊ
    ಕರಾವಳಿ

    ಎಂಸಿಸಿ ಬ್ಯಾಂಕ್ 2025-26 ವಿತ್ತೀಯ ವರ್ಷದಲ್ಲಿ ರೂ.1525 ಕೋಟಿ ವ್ಯವಹಾರ – ರೂ. 13 ಕೋಟಿ ಲಾಭ: ಅಧ್ಯಕ್ಷ ಅನಿಲ್ ಲೋಬೊ

    April 7, 2026Updated:April 7, 20262 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು, ಏಪ್ರಿಲ್.7: ಎಂಸಿಸಿ ಬ್ಯಾಂಕ್ 2025-26 ವಿತ್ತೀಯ ವರ್ಷದಲ್ಲಿ ರೂ. 13 ಕೋಟಿ ಲಾಭವನ್ನು ಗಳಿಸಿದೆ , ನಿವ್ವಳ ಎನ್‌ಪಿಎ ಇಳಿಕೆಗೆ ನಿರಂತರ ಪ್ರಯತ್ನ ನಡೆಸಿ, ಅದನ್ನು ಒಟ್ಟು ಮುಂಗಡಗಳ 1.25% ಮಟ್ಟಕ್ಕೆ ತಗ್ಗಿಸಲು ಯಶಸ್ವಿಯಾಗಿದೆ. ಒಟ್ಟು ವ್ಯವಹಾರ ರೂ.1525 ಕೋಟಿಗೆ ತಲುಪಿದ್ದು, 23% ವೃದ್ಧಿ ಸಾಧಿಸಿದೆ ಎಂದು ಎಂಸಿಸಿ ಬ್ಯಾಂಕ್ ಇದರ ಅಧ್ಯಕ್ಷರಾದ ಅನಿಲ್ ಲೋಬೊ ತಿಳಿಸಿದರು .

    ಇಂದು ಬ್ಯಾಂಕ್ ಸಭಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಈ  ಬಾರಿ ಮಂಗಳೂರಿನ ದೇರಳಕಟ್ಟೆಯಲ್ಲಿ 22ನೇ ಶಾಖೆ ಹಾಗೂ ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿ 23ನೇ ಶಾಖೆ ಆರಂಭಿಸಲು ಸಿದ್ಧತೆ. ಮುಂದಿನ ವರ್ಷಾಂತ್ಯಕ್ಕೆ ಶಾಖೆಗಳ ಸಂಖ್ಯೆ 25ಕ್ಕೆ ತಲಪುವ ಗುರಿಯ ಕಾರ್ಯ ಯೋಜನೆಯನ್ನು ಬ್ಯಾಂಕ್ ಈಗಾಗಲೇ ಹಾಕಿದೆ ಎಂದರು.

    2018ರಲ್ಲಿ ನಾನು ಅಧಿಕಾರ ವಹಿಸಿಕೊಂಡ ಬಳಿಕ ಎಂಸಿಸಿ ಬ್ಯಾಂಕಿನ ಒಟ್ಟು ವ್ಯವಹಾರ ರೂ.500 ಕೋಟಿಯಿಂದ ಮೂರು ಪಟ್ಟು ಹೆಚ್ಚಳವನ್ನು ಕಂಡು ದಾಖಲೆ ನಿರ್ಮಿಸಿದೆ. 114 ವರ್ಷದ ಇತಿಹಾಸದಲ್ಲಿಯೇ ಇದು ಮಹತ್ವದ ಸಾಧನೆ ಎಂದು ತಿಳಿಸಿದರು.

    ಬ್ಯಾಂಕಿನ ನೆಟ್ ವರ್ತ್ ರೂ.83.76 ಕೋಟಿಯಿಂದ ರೂ.91.80 ಕೋಟಿಗೆ ಏರಿಕೆಯಾಗಿ, ಠೇವಣಿಗಳು ಹಾಗೂ ಸಾಲಗಳ ಗುರಿಗಳನ್ನು ಯಶಸ್ವಿಯಾಗಿ ಸಾಧಿಸಲಾಗಿದೆ. ರೂ.285 ಕೋಟಿಗಳ ಹೆಚ್ಚುವರಿ ವ್ಯವಹಾರ ವಹಿವಾಟು ದೃಢ ಬೆಳವಣಿಗೆ ಮತ್ತು ಪರಿಣಾಮಕಾರಿ ತಂತ್ರಗಳ ಪ್ರತಿಫಲವಾಗಿದೆ. ಎನ್‌ಆರ್‌ಐ ಗ್ರಾಹಕರ ಬೆಂಬಲವೂ ಬೆಳವಣಿಗೆಗೆ ಕಾರಣವಾಗಿದೆ ಎಂದರು

    ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ವ್ಯಾಪ್ತಿಯಿಂದ ಆರಂಭವಾದ ಬ್ಯಾಂಕ್ ಇದೀಗ ರಾಜ್ಯದಾದ್ಯಂತ ವಿಸ್ತರಿಸಿದೆ. ಪ್ರಸ್ತುತ ವರ್ಷದಲ್ಲಿ ಬೈಂದೂರು ಹಾಗೂ ಸಂತೆಕಟ್ಟೆಯಲ್ಲಿ ಹೊಸ ಶಾಖೆಗಳು ಆರಂಭವಾಗಿದ್ದು, ಕುಲಶೇಖರ ಶಾಖೆಯನ್ನು ಸ್ವಂತ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. ವಿವಿಧ ಪ್ರದೇಶಗಳಲ್ಲಿ 7 ಹೊಸ ಎಟಿಎಂಗಳ ಸ್ಥಾಪನೆಯೊಂದಿಗೆ ಒಟ್ಟು ಎಟಿಎಂಗಳ ಸಂಖ್ಯೆ 15ಕ್ಕೆ ಏರಿಕೆಯಾಗಿದೆ ಎಂದರು.

    ಮುಂದಿನ 2026-27ನೇ ಸಾಲಿನಲ್ಲಿ 4 ಹೊಸ ಶಾಖೆಗಳನ್ನು ತೆರೆಯಲು ಯೋಜನೆ ರೂಪಿಸಲಾಗಿದ್ದು, ದೇರಳಕಟ್ಟೆ ಮತ್ತು ಕಟಪಾಡಿಯಲ್ಲಿ ಹೊಸ ಶಾಖೆಗಳಿಗೆ ಈಗಾಗಲೇ ಅನುಮತಿ ದೊರೆತಿದೆ. ಶಾಖೆಗಳ ಸಂಖ್ಯೆ ಶೀಘ್ರದಲ್ಲೇ 25ಕ್ಕೆ ಏರಿಕೆಯಾಗುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ಜೆರಾಲ್ಡ್ ಜೂಡ್ ಡಿಸಿಲ್ವ , ನಿರ್ದೇಶಕರಾದ ಆಂಡ್ರೂ ಡಿಸೋಜಾ , ಡಾ| ಜೆರಾಲ್ಡ್ ಪಿಂಟೊ, ಅನಿಲ್ ಪತ್ರಾವೊ , ಜೆ.ಪಿ. ರೊಡ್ರಿಗಸ್, ಡೇವಿಡ್ ಡಿಸೊಜಾ, ಎಲೊಯ್ ಕಿರಣ್ ಕ್ರಾಸ್ಟೋ , ಹೆರಾಲ್ಡ್ ಮೊಂತೇರೊ, ರೋಶನ್ ಡಿಸೋಜಾ, ಮೆಲ್ವಿನ್ ವಾಸ್, ವಿನ್ಸೆಂಟ್ ಲಸ್ರಾದೊ, ಸುಶಾಂತ್ ಸಲ್ಡಾನಾ ಸಹಿತ ಮತ್ತಿತ್ತರು ಉಪಸ್ಥಿತರಿದ್ದರು.

    __Sathish Kapikad 

    Share. Facebook Twitter Pinterest LinkedIn Email WhatsApp
    Previous Articleಎಸ್‌ಸಿಡಿಸಿಸಿ ಬ್ಯಾಂಕ್ ಹೊಸ ಇತಿಹಾಸ : ರೂ.20,226.19 ಕೋಟಿಗಳ ದಾಖಲೆ ವ್ಯವಹಾರ -ಸಾರ್ವಕಾಲಿಕ ದಾಖಲೆಯ ರೂ.131.14 ಕೋಟಿಗಳ ನಿವ್ವಳ ಲಾಭ 
    Next Article ಕುದ್ರೋಳಿಯಲ್ಲಿ 18ನೇ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ : ಸಾಧಕರಿಗೆ ಗೌರವ ಸನ್ಮಾನ 

    Related Posts

    ಕರಾವಳಿ

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ವಿಧಿವಶ

    July 18, 2026
    ಕರಾವಳಿ

    ಹೈ ಕೋರ್ಟ್ ಸರಕಾರಿ ವಕೀಲರಾಗಿ “ಚಿದಾನಂದ ಬಂಟ್ವಾಳ್ ” ನೇಮಕ

    July 18, 2026
    ಕರಾವಳಿ

    ದ.ಕ. ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರೀ ಮಳೆ ಹಿನ್ನೆಲೆ : ದ. ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ 

    July 17, 2026
    Add A Comment
    Leave A Reply Cancel Reply

    Top Posts

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.