Close Menu
SK Media NewsSK Media News
    What's Hot

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ವಿಧಿವಶ

    July 18, 2026

    ಹೈ ಕೋರ್ಟ್ ಸರಕಾರಿ ವಕೀಲರಾಗಿ “ಚಿದಾನಂದ ಬಂಟ್ವಾಳ್ ” ನೇಮಕ

    July 18, 2026

    ದ.ಕ. ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರೀ ಮಳೆ ಹಿನ್ನೆಲೆ : ದ. ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ 

    July 17, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಸಂಸದ ಕ್ಯಾ. ಚೌಟರನ್ನು ಭೇಟಿ ಮಾಡಿದ ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್‌ಗೀಚಿ: ಅಡ್ವೆಂಚರ್ ವಾಟರ್ ಸ್ಪೋರ್ಟ್ಸ್ , ಪ್ರವಾಸೋದ್ಯಮ ಸೇರಿ ದಕ್ಷಿಣ ಕನ್ನಡದ ಸಮಗ್ರ ಅಭಿವೃದ್ಧಿ ಬಗ್ಗೆ ಚರ್ಚೆ
    ಕರಾವಳಿ

    ಸಂಸದ ಕ್ಯಾ. ಚೌಟರನ್ನು ಭೇಟಿ ಮಾಡಿದ ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್‌ಗೀಚಿ: ಅಡ್ವೆಂಚರ್ ವಾಟರ್ ಸ್ಪೋರ್ಟ್ಸ್ , ಪ್ರವಾಸೋದ್ಯಮ ಸೇರಿ ದಕ್ಷಿಣ ಕನ್ನಡದ ಸಮಗ್ರ ಅಭಿವೃದ್ಧಿ ಬಗ್ಗೆ ಚರ್ಚೆ

    April 21, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು : ಅಡ್ವೆಂಚರ್ ವಾಟರ್ ಸ್ಪೋರ್ಟ್ಸ್ , ಪ್ರವಾಸೋದ್ಯಮ ಸಹಿತ ದಕ್ಷಿಣ ಕನ್ನಡದ ಅಭಿವೃದ್ಧಿಗೆ ಪೂರಕವಾದ ವಿವಿಧ ವಿಚಾರವಾಗಿ ಆಸ್ಟ್ರೇಲಿಯಾದ ಕಾನ್ಸುಲ್ ಜನರಲ್ ಹಿಲರಿ ಮೆಕ್‌ಗೀಚಿ ಅವರನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನಲ್ಲಿ ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ.

    ಸೋಮವಾರದಂದು ಮಂಗಳೂರಿಗೆ ಭೇಟಿ ನೀಡಿದ ಕಾನ್ಸುಲ್ ಜನರಲ್ ಅವರೊಂದಿಗೆ ನಡೆಸಿದ ಚರ್ಚೆಯ ಸಂದರ್ಭದಲ್ಲಿ, ಆಸ್ಟ್ರೇಲಿಯಾ ಹಾಗೂ ದಕ್ಷಿಣ ಕನ್ನಡ ಎರಡೂ ಕಡೆ ವಿಸ್ತಾರವಾದ ಕರಾವಳಿ ಪ್ರದೇಶ ಹೊಂದಿರುವುದರಿಂದ, ಸಾಹಸಮಯ ವಾಟರ್‌ ಸ್ಪೋರ್ಟ್ಸ್‌ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುವ ಕುರಿತು ಸಮಾಲೋಚಿಸಲಾಯಿತು.

    ಪ್ರಮುಖವಾಗಿ, ಆಸ್ಟ್ರೇಲಿಯಾದ ತಾಂತ್ರಿಕ ನೈಪುಣ್ಯತೆ ಮತ್ತು ಈ ಕ್ಷೇತ್ರದಲ್ಲಿ ಅವರಿಗಿರುವ ದಶಕಗಳ ಅನುಭವವನ್ನು ನಮ್ಮ ಕರಾವಳಿಯ ಅಭಿವೃದ್ಧಿಗೆ ಪೂರಕವಾಗಿ ಹೇಗೆ ಬಳಸಿಕೊಳ್ಳಬಹುದು ಎಂಬ ಬಗ್ಗೆ ಪರಸ್ಪರ ಚರ್ಚಿಸಲಾಯಿತು.

    ಕ್ರೀಡಾ ಕ್ಷೇತ್ರದಲ್ಲಿ ಯುವಜನತೆಗೆ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ, ಆಸ್ಟ್ರೇಲಿಯಾದ ವಿಶ್ವವಿದ್ಯಾಲಯಗಳೊಂದಿಗೆ ಕ್ರೀಡಾ ಪಠ್ಯಕ್ರಮ ಅಭಿವೃದ್ಧಿಗಾಗಿ ಸಹಭಾಗಿತ್ವ ಹೊಂದುವ ಕುರಿತು ಕೂಡ ಇದೇವೇಳೆ ಚರ್ಚಿಸಲಾಯಿತು.

    ಈ ಸೌಹಾರ್ದಯುತ ಭೇಟಿಯ ಸಂದರ್ಭದಲ್ಲಿ ಕಾನ್ಸಲ್ ಜನರಲ್ ಅವರು ಸಂಸದ ಕ್ಯಾ. ಚೌಟ ಅವರಿಗೆ ಸ್ಮರಣಿಕೆಯಾಗಿ ಲೆದರ್ ಬಾಲ್ ಅನ್ನು ಉಡುಗೊರೆಯಾಗಿ ನೀಡಿದ್ದು ವಿಶೇಷವಾಗಿತ್ತು.

    ಭೇಟಿ ಬಳಿಕ ಪ್ರತಿಕ್ರಿಯಿಸಿದ ಕ್ಯಾ. ಚೌಟ ಅವರು ಇಂತಹ ಉಪಕ್ರಮಗಳು ಎರಡು ದೇಶಗಳ ನಡುವಿನ ಸಂಬಂಧ ಗಟ್ಟಿಗೊಳಿಸುವುದಲ್ಲದೆ ನಮ್ಮ ಯುವಜನತೆಗೆ ಜಾಗತಿಕ ಮಟ್ಟದ ಕೌಶಲ್ಯ ಮತ್ತು ಮಾನ್ಯತೆಯನ್ನು ಒದಗಿಸುವ ಮೂಲಕ ಹೊಸ ಹಾದಿ ತೆರೆಯಲಿವೆ. ಅಲ್ಲದೆ ಇದು ಆರ್ಥಿಕ ಪ್ರಗತಿಯ ಜೊತೆಗೆ ‘ವಿಕಸಿತ ಭಾರತ’ದ ದೃಷ್ಟಿಕೋನಕ್ಕೆ ಮಹತ್ವದ ಕೊಡುಗೆ ನೀಡಲಿದೆ ಎಂದು ಆಶಯ ವ್ಯಕ್ತಪಡಿಸಿದರು.

    _Sathish Kapikad 

    Share. Facebook Twitter Pinterest LinkedIn Email WhatsApp
    Previous Articleಮಹಾಸತಿ ಶ್ರೀ ಭಗವತಿ ಅಮ್ಮನ ಸಾನಿಧ್ಯದಲ್ಲಿ 12 ತೆಂಗಿನಕಾಯಿಯ ಗಣ ಹೋಮ, ಅಭಿಷೇಕ, ಪುಷ್ಪಾಲಂಕಾರ ಹಾಗೂ ದೀಪಾಲಂಕಾರ ಸೇವೆ.
    Next Article ಡಾ|ಆರ್. ಧನರಾಜ್ ನಿರ್ದೇಶನದ ಕೊರಗ್ಲಾ ತನಿಯಾ” ಮತ್ತು “ಕನ” ಸಿನಿಮಾಕ್ಕೆ ನಾಳೆ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಮುಹೂರ್ತ

    Related Posts

    ಕರಾವಳಿ

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ವಿಧಿವಶ

    July 18, 2026
    ಕರಾವಳಿ

    ಹೈ ಕೋರ್ಟ್ ಸರಕಾರಿ ವಕೀಲರಾಗಿ “ಚಿದಾನಂದ ಬಂಟ್ವಾಳ್ ” ನೇಮಕ

    July 18, 2026
    ಕರಾವಳಿ

    ದ.ಕ. ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರೀ ಮಳೆ ಹಿನ್ನೆಲೆ : ದ. ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ 

    July 17, 2026
    Add A Comment
    Leave A Reply Cancel Reply

    Top Posts

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.