Close Menu
SK Media NewsSK Media News
    What's Hot

    ಬಂಟ್ಸ್ ಹಾಸ್ಟೇಲ್ ಸಿದ್ದಿವಿನಾಯಕ ಪ್ರತಿಷ್ಠಾನದ ಸಾರ್ವಜನಿಕ ಶ್ರೀ ಗಣೇಶೋತ್ಸವ: ವಿಶೇಷ ಮೆರವಣಿಗೆಯೊಂದಿಗೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ ಆಗಮನ

    September 13, 2026

    ತುಳು ಹಾಗೂ ಕನ್ನಡ ಎರಡು ಭಾಷೆಗಳಲ್ಲಿ ನಿರ್ಮಾಣಗೊಂಡಿರುವ, ಅರ್ಜುನ್ ದೇವ್ ನಿರ್ದೇಶನದ “ಟಾಸ್” ಸಿನಿಮಾ ಸೆಪ್ಟಂಬರ್ 18 ರಂದು ರಾಜ್ಯಾದ್ಯಂತ ತೆರೆಗೆ

    September 13, 2026

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ದೇಶವನ್ನೇ ಬೆಚ್ಚಿಬೀಳಿಸಿದ್ದ ಮಹಾ ದುರಂತಕ್ಕೆ ಇಂದು 16 ವರ್ಷ – ಇಲ್ಲಿದೆ ವಿವರ
    ಅಂತಾರಾಷ್ಟ್ರೀಯ

    ದೇಶವನ್ನೇ ಬೆಚ್ಚಿಬೀಳಿಸಿದ್ದ ಮಹಾ ದುರಂತಕ್ಕೆ ಇಂದು 16 ವರ್ಷ – ಇಲ್ಲಿದೆ ವಿವರ

    May 22, 20262 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು, ಮೇ.22 : ಮಂಗಳೂರಿನಲ್ಲಿ 2010ರ ಮೇ 22ರ ಮುಂಜಾನೆ ಏರ್‌ ಇಂಡಿಯಾ ವಿಮಾನ ರನ್‌ವೇಯಿಂದ ಜಾರಿ ಕೆಳಕ್ಕೆ ಬಿದ್ದು ಸಂಭವಿಸಿದ ಮಹಾ ದುರಂತಕ್ಕೆ ಇಂದು 16 ವರ್ಷ ಪೂರ್ಣವಾಗುತ್ತದೆ. 2010ರ ಮೇ 22ರ ಇಂದಿನ ದಿನ ಎಂದೂ ಮರೆಯದ ಘಟನೆಯೊಂದು ನಡೆದಿತ್ತು.

    ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2010ರ ಮೇ 22ರ ಮುಂಜಾನೆ ಏರ್‌ ಇಂಡಿಯಾ ವಿಮಾನ ರನ್‌ವೇಯಿಂದ ಜಾರಿ ಕೆಳಕ್ಕೆ ಬಿದ್ದು ಮಹಾ ದುರಂತ ಸಂಭವಿಸಿತು. ಘಟನೆ ನಡೆದು 16 ವರ್ಷವಾದರೂ ಈ ಕಹಿ ಘಟನೆ ಮಾತ್ರ ಎಲ್ಲರ ಮನದಲ್ಲಿ ಜೀವಂತವಾಗಿದೆ.

    ದುಬೈಯಿಂದ ಮರಳುತ್ತಿದ್ದ ವಿಮಾನ ಬಜ್ಪೆ ವಿಮಾನ ನಿಲ್ದಾಣದ ತೀರಾ ಸಮೀಪ ಇನ್ನೇನು ಇಳಿಬೇಕು ಅನ್ನುವಷ್ಟರಲ್ಲಿ ಮಹಾ ದುರಂತ ಸಂಭವಿಯೇ ಬಿಟ್ಟಿತ್ತು. ದೇಶವನ್ನೇ ಬೆಚ್ಚಿಬೀಳಿಸಿದ್ದ, ಈ ಘಟನೆ ಜಾಗತಿಕ ಮಟ್ಟದಲ್ಲಿ ಭಾರೀ ಸುದ್ದಿಗೆ ಕಾರಣವಾಯಿತು.

    ದುರಂತದಲ್ಲಿ ಪೈಲಟ್‌, ಸಿಬಂದಿ ಸೇರಿ 158 ಮಂದಿ ಮೃತಪಟ್ಟಿದ್ದರು. ಆ ವಿಮಾನದಲ್ಲಿ ಒಟ್ಟು 135 ಮಂದಿ ವಯ ಸ್ಕರು, 19 ಮಕ್ಕಳು ಹಾಗೂ 4 ಶಿಶುಗಳು, 6 ಮಂದಿ ವಿಮಾನ ಸಿಬಂದಿ ಸೇರಿ ಒಟ್ಟು 166 ಮಂದಿ ಪ್ರಯಾಣಿಸುತ್ತಿದ್ದರು. 8 ಮಂದಿ ಬದುಕುಳಿದಿದ್ದರು. ಮೃತಪಟ್ಟವ ರಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೇರಳದವರಿದ್ದರು.

    ದುರಂತದಲ್ಲಿ ಮೃತಪಟ್ಟವರ ಬಹುತೇಕ ಶವಗಳು ಸುಟ್ಟುಕರಕಲಾಗಿದ್ದ ಕಾರಣ ಗುರುತು ಪತ್ತೆ ಅಸಾಧ್ಯವಾಗಿತ್ತು. ಕರಾವಳಿಯಾದ್ಯಂತದ ವಿವಿಧ ಸ್ವಯಂ ಸೇವಾ ಸಂಘಟನೆಗಳು ಈ ಸಂದರ್ಭ ಕೂಡಲೇ ಧಾವಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದವು.

    ಅಂದು ನಡೆದ ದುರ್ಘಟನೆಯಲ್ಲಿ ಬದುಕಿ ಉಳಿದವರೆಂದರೆ ತಣ್ಣೀರುಬಾವಿಯ ಪ್ರದೀಪ್‌ (ಅಂದಿನ ಪ್ರಾಯ 28), ಹಂಪನ ಕಟ್ಟೆಯ ಮಹಮ್ಮದ್‌ ಉಸ್ಮಾನ್‌ (49), ವಾಮಂಜೂರಿನ ಜ್ಯೂಯೆಲ್‌ ಡಿ’ಸೋಜಾ (24), ಕೇರಳ ಕಣ್ಣೂರು ಕಂಬಿಲ್‌ನ ಮಾಹಿನ್‌ ಕುಟ್ಟಿ (49), ಕಾಸರಗೋಡು ಉದುಮ ಕುಲಿಕುನ್ನು ನಿವಾಸಿ ಕೃಷ್ಣನ್‌ (37), ಉಳ್ಳಾಲದ ಉಮ್ಮರ್‌ ಫಾರೂಕ್‌ (26), ಪುತ್ತೂರು ಸಾಮೆತ್ತಡ್ಕದ ಅಬ್ದುಲ್ಲಾ (37), ಮಂಗಳೂರು ಕೆಎಂಸಿ ವಿದ್ಯಾರ್ಥಿನಿ ಬಾಂಗ್ಲಾದ ಸಬ್ರಿನಾ (23) ಪವಾಡಸದೃಶರಾಗಿ ಬದುಕುಳಿದ ಅದೃಷ್ಟವಂತರು. ಇವರಲ್ಲಿ ಸಬ್ರಿನಾ ಮಾತ್ರ ಗಂಭೀರ ಗಾಯಗೊಂಡಿದ್ದರು.

    ದುಬಾೖಯಿಂದ ಬಂದ ವಿಮಾನ ಎಲ್ಲ ಸುರಕ್ಷಾ ಸಂಕೇತಗಳ ವಿನಿಮಯದೊಂದಿಗೆ ಇಳಿದಿತ್ತು. ಆದರೆ ರನ್‌ವೇಯಲ್ಲಿ ನಿಲ್ಲದೆ ಮುಂದಕ್ಕೆ ಚಲಿಸುತ್ತಲೇ ಸೂಚನಾ ಗೋಪುರದ ಕಂಬಗಳಿಗೆ ಢಿಕ್ಕಿಯಾಗಿ, ಅದನ್ನು ತುಂಡರಿಸಿ ಆಳ ಪ್ರದೇಶಕ್ಕೆ ಉರುಳಿ ಬಿತ್ತು. ಮುಖ್ಯ ಪೈಲಟ್‌ನ ನಿರ್ಲಕ್ಷ್ಯ, ಸಹ ಪೈಲಟ್‌ನ ಸಲಹೆ ಪಾಲಿಸದೆ ಇದ್ದದ್ದೇ ಈ ದುರ್ಘ‌ಟನೆಗೆ ಕಾರಣ ಎಂದು ಬಳಿಕ ತನಿಖೆಯಲ್ಲಿ ತಿಳಿದುಬಂತು.

    ವಿಮಾನ ಅಪಘಾತದಲ್ಲಿ ಮಡಿದವರಿಗೆ ಇಂದು ಶ್ರದ್ಧಾಂಜಲಿ :

    ಬಜ್ಜೆ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅಪಘಾತವಾದ ಹಿನ್ನಲೆಯಲ್ಲಿ, ಜಿಲ್ಲಾಡಳಿತವು ಮಡಿದವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಜರಗಿಸುತ್ತಾ ಬಂದಿದೆ. ವಿಮಾನ ಅಪಘಾತದಲ್ಲಿ ಮಡಿದ 158 ಜನರ ನೆನಪಿಗಾಗಿ ಕೂಳೂರು ಸೇತುವೆಯಿಂದ ತಣ್ಣೀರು ಬಾವಿ ರಸ್ತೆಗೆ ತಿರುಗುವಲ್ಲಿ ಪಾರ್ಕ್ ನಿರ್ಮಾಣ ಮಾಡಲಾಗಿರುತ್ತದೆ

    ವಿಮಾನ ಅಪಘಾತದಲ್ಲಿ ಮರಣ ಹೊಂದಿ ಗುರುತಿಸಲಾಗದ 12 ಮಂದಿಯ ಮೃತದೇಹಗಳನ್ನು ಸಮಾಧಿ ಮಾಡಿದ ಜಾಗದ (ಕೂಳೂರು ಸೇತುವೆಯಿಂದ ತಣ್ಣೀರು ಬಾವಿ ರಸ್ತೆಗೆ ತಿರುಗುವಲ್ಲಿ)ಲ್ಲಿ ಪ್ರತೀ ವರ್ಷದಂತೆ ಈ ಬಾರಿಯೂ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಮೇ 22 ರಂದು ಬೆಳಿಗ್ಗೆ ಹಮ್ಮಿಕೊಳ್ಳಲಾಗಿದೆ.

    _Sathish Kapikad

    Share. Facebook Twitter Pinterest LinkedIn Email WhatsApp
    Previous Articleಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ 
    Next Article ಫರಂಗಿಪೇಟೆ ಕುಲಾಲ ಸುಧಾರಕ ಸಂಘದ ವಾರ್ಷಿಕೋತ್ಸವ -ಸಾಧಕರಿಗೆ ಸನ್ಮಾನ :ಸಮಾಜ ಬಲಿಷ್ಠ ಗೊಳಿಸುವ ನಿಟ್ಟಿನಲ್ಲಿ ಒಗ್ಗಟ್ಟಾಗಬೇಕಾಗಿದೆ : ಕಮಲ ರಮೇಶ್.

    Related Posts

    ಕರಾವಳಿ

    ಪುಣೆಯಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಡಾ| ಜೇಷಾ ರಿಮಿನ್‌ರವರ ಚತುರ್ಥ ಪುಣ್ಯಸ್ಮರಣೆ ಪ್ರಯುಕ್ತ ಮಂಗಳೂರಿನಲ್ಲಿ ರಕ್ತದಾನ ಶಿಬಿರ

    September 11, 2026
    ಕರಾವಳಿ

    ಬಂಟ್ಸ್ ಹಾಸ್ಟೆಲ್ ನಲ್ಲಿ ಸೆ. 14ರಿಂದ 16ರವರೆಗೆ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ – ತೆನೆಹಬ್ಬ, ಅಷ್ಟೋತ್ತರ ಸಹಸ್ರ ನಾರಿಕೇಳ ಮಹಾಗಣಯಾಗ – ಸಾಧಕರಿಗೆ ಸನ್ಮಾನ

    September 8, 2026
    ಅಂತಾರಾಷ್ಟ್ರೀಯ

    Gulf Medical University Commences 2026–2027 Academic Year, Reinforcing Its Commitment to Excellence in Health Professions Education

    September 7, 2026
    Add A Comment
    Leave A Reply Cancel Reply

    Top Posts

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.