Close Menu
SK Media NewsSK Media News
    What's Hot

    ತಮಿಳುನಾಡು ಮುಖ್ಯಮಂತ್ರಿ ಹಾಗೂ ನಟ ವಿಜಯ್ ಮಂಗಳೂರಿನಲ್ಲಿ..

    June 12, 2026

    ಸ್ಯಾಂಡಲ್‌ವುಡ್‌ನಲ್ಲಿ ದೂಳೆಬ್ಬಿಸಲು ರೆಡಿಯಾಗುತ್ತಿದೆ ರೂಪೇಶ್ ಶೆಟ್ಟಿ ಅಭಿನಯದ ಹೊಸ ಸಿನಿಮಾ “ಹಲ್ಕಾ ಡಾನ್‌”

    June 12, 2026

    ಶಿಕ್ಷಣ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಶ್ರೀನಿವಾಸ ವಿಶ್ವವಿದ್ಯಾಲಯ : ಮೂರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಪ್ರಶಸ್ತಿಗಳ ಗೌರವ

    June 10, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರಾವಳಿ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಸೂರಿಂಜೆ-ಪುಚ್ಚಾಡಿ ಹದಗೆಟ್ಟ ರಸ್ತೆ: ಸಾಮೂಹಿಕ ರಾಜೀನಾಮೆ ಹಾಗೂ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
    ಕರಾವಳಿ

    ಸೂರಿಂಜೆ-ಪುಚ್ಚಾಡಿ ಹದಗೆಟ್ಟ ರಸ್ತೆ: ಸಾಮೂಹಿಕ ರಾಜೀನಾಮೆ ಹಾಗೂ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

    June 8, 20262 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು: ಮೂಲ್ಕಿ-ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸೂರಿಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳು ಸಂಪೂರ್ಣ ನೆನೆಗುದಿಗೆ ಬಿದ್ದಿರುವುದನ್ನು ಖಂಡಿಸಿ ಸ್ಥ;ಳೀಯ ಬಿಜೆಪಿ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡುವುದಾಗಿ ಹಾಗೂ ಮುಂಬರುವ ಚುನಾವಣೆಯನ್ನು ಬಹಿಷ್ಕಾರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

    ಸೂರಿಂಜೆ 159ನೇ ಬೂತ್‌ನ ಭಾರತೀಯ ಜನತಾ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ನೀಡಲು ನಿರ್ಧರಿಸಿದ್ದು, ಮುಂಬರುವ ಚುನಾವಣೆಗಳನ್ನು ಬಹಿಷ್ಕರಿಸುವುದಾಗಿ ಮನವಿ ಪತ್ರ ಸಲ್ಲಿಸಿ ಎಚ್ಚರಿಸಿದ್ದಾರೆ.

    ಸೂರಿಂಜೆ ಹೋಬಳಿಯ ವ್ಯಾಪ್ತಿಗೆ ಬರುವ ಸೂರಿಂಜೆ- ಪುಚ್ಚಾಡಿ ರಸ್ತೆಯು ಕಳೆದ ಹದಿನೈದು ವರ್ಷಗಳಿಂದ ಯಾವುದೇ ಡಾಮರೀಕರಣ ಕಾಣದೆ ಸಂಪೂರ್ಣ ಹದಗೆಟ್ಟು ಹೋಗಿದೆ. ರಸ್ತೆಯ ತುಂಬಾ ಹೊಂಡ-ಗುಂಡಿಗಳು ನಿರ್ಮಾಣವಾಗಿದ್ದು, ವಾಹನ ಸವಾರರು ಹಾಗೂ ಪಾದಚಾರಿಗಳು ದಿನನಿತ್ಯ ಪ್ರಾಣಭಯದಲ್ಲೇ ಸಂಚರಿಸುವಂತಾಗಿದೆ. ಈ ರಸ್ತೆಯ ದುರಸ್ತಿಗಾಗಿ ಕಳೆದ ಐದು ವರ್ಷಗಳಿಂದ ಗ್ರಾಮ ಪಂಚಾಯಿತಿಗೆ ಅನೇಕ ಬಾರಿ ಲಿಖಿತ ಅರ್ಜಿಗಳನ್ನು ಸಲ್ಲಿಸಿದ್ದರೂ, ಸ್ಥಳೀಯ ಆಡಳಿತ ಹಾಗೂ ಜನಪ್ರತಿನಿಧಿಗಳು ಇತ್ತ ಗಮನ ಹರಿಸದೆ ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಕಾರ್ಯಕರ್ತರು ದೂರಿದ್ದಾರೆ.

    ನಾವು ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ ಈ ರಸ್ತೆಯ ದುರವಸ್ಥೆಯ ಬಗ್ಗೆ ಪಕ್ಷದ ಹಿರಿಯ ಮುಖಂಡರ ಗಮನಕ್ಕೆ ಹಲವು ಬಾರಿ ತಂದಿದ್ದೆವು. ಆದರೆ ಪ್ರತಿ ಬಾರಿಯೂ ನಮಗೆ ಬರೀ ಭರವಸೆಗಳೇ ಸಿಕ್ಕಿವೆಯೇ ಹೊರತು ಯಾವುದೇ ಕಾಮಗಾರಿ ನಡೆದಿಲ್ಲ. ಇದರಿಂದಾಗಿ ಈ ಭಾಗದ ಬಿಜೆಪಿ ಬೆಂಬಲಿತ ಗ್ರಾಮಸ್ಥರು ಹಾಗೂ ಸಾರ್ವಜನಿಕರು ಕನಿಷ್ಠ ಮೂಲಭೂತ ಸೌಕರ್ಯಗಳೂ ಇಲ್ಲದೆ ತೀವ್ರ ಸಂಕಷ್ಟ ಅನುಭವಿಸುವಂತಾಗಿದೆ. ಕ್ಷೇತ್ರದ ಜನರ ನ್ಯಾಯಯುತ ಬೇಡಿಕೆಗೆ ಸ್ಪಂದಿಸಲು ನಮ್ಮದೇ ಪಕ್ಷದ ಜನಪ್ರತಿನಿಧಿಗಳು ಮತ್ತು ಮುಖಂಡರು ವಿಫಲರಾಗಿದ್ದಾರೆ ಎಂದು ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಲಾಗಿದೆ.

    ಗ್ರಾಮಸ್ಥರ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ರಸ್ತೆ ಅಭಿವೃದ್ಧಿಯಾಗದ ಹಿನ್ನೆಲೆಯಲ್ಲಿ, ಇನ್ನು ಮುಂದಕ್ಕೆ ಪಕ್ಷದಲ್ಲಿ ಮುಂದುವರಿಯಲು ನಮಗೆ ಮುಜುಗರವಾಗುತ್ತಿದೆ. ಈ ಕಾರಣಕ್ಕಾಗಿ 159ನೇ ಪುಚ್ಚಾಡಿ ಸೂರಿಂಜೆ ಬೂತ್‌ ನ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸ್ವಇಚ್ಛೆಯಿಂದ ಸಾಮೂಹಿಕ ರಾಜೀನಾಮೆ ನೀಡುತ್ತಿದ್ದು, ರಸ್ತೆ ಸರಿಪಡಿಸದಿದ್ದರೆ ಮುಂಬರುವ ಯಾವುದೇ ಚುನಾವಣೆಗಳಲ್ಲೂ ಮತದಾನ ಮಾಡದೆ ಬಹಿಷ್ಕರಿಸಲು ಅನಿವಾರ್ಯವಾಗಿ ನಿರ್ಧರಿಸಿದ್ದೇವೆ ಎಂದು ಎಚ್ಚರಿಸಿದ್ದಾರೆ.

    ಈ ಪತ್ರಕ್ಕೆ ಸೂರಿಂಜೆ 159ನೇ ಬೂತ್ ಅಧ್ಯಕ್ಷರಾದ ಸುರೇಶ್ ಶೆಟ್ಟಿ, ಕಾರ್ಯದರ್ಶಿ ಮಾಧವ ಸೂರಿಂಜೆ ಹಾಗೂ ಬೂತ್ ಸಮಿತಿಯ ಎಲ್ಲಾ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸಹಿ ಹಾಕಿದ್ದು, ಸಂಬಂಧಪಟ್ಟ ಇಲಾಖೆಗಳು ಹಾಗೂ ಹಿರಿಯ ಮುಖಂಡರು ತಕ್ಷಣವೇ ಮಧ್ಯಪ್ರವೇಶಿಸಿ ರಸ್ತೆ ಡಾಮರೀಕರಣ ಅಥವಾ ಕಾಂಕ್ರೀಟೀಕರಣ ಕಾಮಗಾರಿಯನ್ನು ಶೀಘ್ರವಾಗಿ ಆರಂಭಿಸಬೇಕೆಂದು ಒತ್ತಾಯಿಸಿದ್ದಾರೆ.

    _Sathish Kapikad

    Share. Facebook Twitter Pinterest LinkedIn Email WhatsApp
    Previous Articleರಮೀಝಾ ನಾಸೀರ್ ಅವರಿಗೆ ತಮ್ಮ ಅತೀವ ಸಾಧನೆಗಾಗಿ ಒಲಿದ ದ.ಕ. ಜಿಲ್ಲಾ ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ಪಟ್ಟ
    Next Article ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    Related Posts

    ಕರಾವಳಿ

    ತಮಿಳುನಾಡು ಮುಖ್ಯಮಂತ್ರಿ ಹಾಗೂ ನಟ ವಿಜಯ್ ಮಂಗಳೂರಿನಲ್ಲಿ..

    June 12, 2026
    ಕರಾವಳಿ

    ಸ್ಯಾಂಡಲ್‌ವುಡ್‌ನಲ್ಲಿ ದೂಳೆಬ್ಬಿಸಲು ರೆಡಿಯಾಗುತ್ತಿದೆ ರೂಪೇಶ್ ಶೆಟ್ಟಿ ಅಭಿನಯದ ಹೊಸ ಸಿನಿಮಾ “ಹಲ್ಕಾ ಡಾನ್‌”

    June 12, 2026
    ಕರಾವಳಿ

    ಶಿಕ್ಷಣ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಶ್ರೀನಿವಾಸ ವಿಶ್ವವಿದ್ಯಾಲಯ : ಮೂರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಪ್ರಶಸ್ತಿಗಳ ಗೌರವ

    June 10, 2026
    Add A Comment
    Leave A Reply Cancel Reply

    Top Posts

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ನಾಲ್ಕನೇ ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿ ಅದ್ಯಪಾಡಿ ಶ್ರೀ ನೀಲಕಂಠ ಉಮಾಮಹೇಶ್ವರ ದೇವಸ್ಥಾನ : ಬ್ರಹ್ಮಕಲಶಾಭಿಷೇಕಕ್ಕೆ ಕ್ಷಣಗಣನೆ

    March 11, 2026

    ನಡೆದಾಡುವ, ಮಾತನಾಡುವ ದೇವರು ಅಮ್ಮ :ಅಮ್ಮ ಮಂಗಳೂರಿಗೆ ಆಗಮನ ಹಿನ್ನೆಲೆ ಚಪ್ಪರ ಮುಹೂರ್ತ ನೆರವೇರಿಸಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

    May 6, 2026
    About Us
    About Us

    Lorem Ipsum is simply dummy text of the printing and typesetting industry. Lorem Ipsum has been the industry's standard dummy text ever since the 1500s,

    Email : skmedianews@gmail.com
    Phone : +91 95914 89084

    Most Popular

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ನಾಲ್ಕನೇ ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿ ಅದ್ಯಪಾಡಿ ಶ್ರೀ ನೀಲಕಂಠ ಉಮಾಮಹೇಶ್ವರ ದೇವಸ್ಥಾನ : ಬ್ರಹ್ಮಕಲಶಾಭಿಷೇಕಕ್ಕೆ ಕ್ಷಣಗಣನೆ

    March 11, 2026

    ನಡೆದಾಡುವ, ಮಾತನಾಡುವ ದೇವರು ಅಮ್ಮ :ಅಮ್ಮ ಮಂಗಳೂರಿಗೆ ಆಗಮನ ಹಿನ್ನೆಲೆ ಚಪ್ಪರ ಮುಹೂರ್ತ ನೆರವೇರಿಸಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

    May 6, 2026
    Our Picks

    ತಮಿಳುನಾಡು ಮುಖ್ಯಮಂತ್ರಿ ಹಾಗೂ ನಟ ವಿಜಯ್ ಮಂಗಳೂರಿನಲ್ಲಿ..

    June 12, 2026

    ಸ್ಯಾಂಡಲ್‌ವುಡ್‌ನಲ್ಲಿ ದೂಳೆಬ್ಬಿಸಲು ರೆಡಿಯಾಗುತ್ತಿದೆ ರೂಪೇಶ್ ಶೆಟ್ಟಿ ಅಭಿನಯದ ಹೊಸ ಸಿನಿಮಾ “ಹಲ್ಕಾ ಡಾನ್‌”

    June 12, 2026

    ಶಿಕ್ಷಣ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಶ್ರೀನಿವಾಸ ವಿಶ್ವವಿದ್ಯಾಲಯ : ಮೂರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಪ್ರಶಸ್ತಿಗಳ ಗೌರವ

    June 10, 2026
    Facebook X (Twitter) Instagram Pinterest
    • ಮುಖಪುಟ
    • ಕರಾವಳಿ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.