Close Menu
SK Media NewsSK Media News
    What's Hot

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ವಿಧಿವಶ

    July 18, 2026

    ಹೈ ಕೋರ್ಟ್ ಸರಕಾರಿ ವಕೀಲರಾಗಿ “ಚಿದಾನಂದ ಬಂಟ್ವಾಳ್ ” ನೇಮಕ

    July 18, 2026

    ದ.ಕ. ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರೀ ಮಳೆ ಹಿನ್ನೆಲೆ : ದ. ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ 

    July 17, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಅಂತರರಾಷ್ಟ್ರೀಯ ಯೋಗ ದಿನ :ಬ್ರಹ್ಮಕುಮಾರೀಸ್ ಮಂಗಳೂರಿನಲ್ಲಿ ಅರ್ಥಪೂರ್ಣ ಅಂತರರಾಷ್ಟ್ರೀಯ ಯೋಗ ದಿನಾಚರಣೆ
    ಕರಾವಳಿ

    ಅಂತರರಾಷ್ಟ್ರೀಯ ಯೋಗ ದಿನ :ಬ್ರಹ್ಮಕುಮಾರೀಸ್ ಮಂಗಳೂರಿನಲ್ಲಿ ಅರ್ಥಪೂರ್ಣ ಅಂತರರಾಷ್ಟ್ರೀಯ ಯೋಗ ದಿನಾಚರಣೆ

    June 22, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು, ಜೂನ್ 22: ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ಪ್ರಜಾಪಿತ ಬ್ರಹ್ಮಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯ, ಮಂಗಳೂರು ವಿಶ್ವಶಾಂತಿ ಮಂದಿರದಲ್ಲಿ ಭಾನುವಾರ ಬೆಳಿಗ್ಗೆ ಯೋಗಾಭ್ಯಾಸ ಹಾಗೂ ರಾಜಯೋಗ ಧ್ಯಾನದ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

    ಕಾರ್ಯಕ್ರಮದಲ್ಲಿ ಯೋಗಗುರು ಶ್ರೀ ಮಂಜುನಾಥ್ ಹಾಗೂ ಶ್ರೀ ರೋಹಿತ್ ಅವರು ವಿವಿಧ ಯೋಗಾಸನಗಳು, ಸೂರ್ಯ ನಮಸ್ಕಾರ ಮತ್ತು ಪ್ರಾಣಾಯಾಮಗಳನ್ನು ಪ್ರಾತ್ಯಕ್ಷಿಕೆಯೊಂದಿಗೆ ನಡೆಸಿಕೊಟ್ಟರು.

    ನಿಯಮಿತ ಯೋಗಾಭ್ಯಾಸವು ದೈಹಿಕ ಆರೋಗ್ಯವನ್ನು ವೃದ್ಧಿಸುವುದರ ಜೊತೆಗೆ ಮಾನಸಿಕ ಒತ್ತಡವನ್ನು ನಿವಾರಿಸಿ ಜೀವನದಲ್ಲಿ ಉತ್ಸಾಹ ಮತ್ತು ಚೈತನ್ಯವನ್ನು ಹೆಚ್ಚಿಸುತ್ತದೆ ಎಂದು ಅವರು ತಿಳಿಸಿದರು.

    ಬ್ರಹ್ಮಕುಮಾರಿ ವಿಶ್ವೇಶ್ವರಿ ಅವರು ತಮ್ಮ ಆಧ್ಯಾತ್ಮಿಕ ಸಂದೇಶದಲ್ಲಿ, “ಯೋಗವು ಕೇವಲ ದೇಹದ ವ್ಯಾಯಾಮವಲ್ಲ. ರಾಜಯೋಗ ಧ್ಯಾನದ ಮೂಲಕ ಆತ್ಮವು ಪರಮಾತ್ಮನೊಂದಿಗೆ ಸಂಬಂಧ ಬೆಳೆಸಿದಾಗ ಮನಸ್ಸಿಗೆ ಶಾಂತಿ, ಆತ್ಮಬಲ ಮತ್ತು ಸಂತೋಷ ದೊರೆಯುತ್ತದೆ. ಯೋಗಾಸನ ಮತ್ತು ರಾಜಯೋಗದ ಸಮನ್ವಯದಿಂದ ದೇಹ, ಮನಸ್ಸು ಮತ್ತು ಆತ್ಮದ ಸಮಗ್ರ ಆರೋಗ್ಯವನ್ನು ಸಾಧಿಸಬಹುದು. ಇಂದಿನ ವೇಗದ ಜೀವನದಲ್ಲಿ ಪ್ರತಿಯೊಬ್ಬರೂ ಪ್ರತಿದಿನ ಸ್ವಲ್ಪ ಸಮಯ ಯೋಗ ಮತ್ತು ಧ್ಯಾನಕ್ಕೆ ಮೀಸಲಿಡಬೇಕು” ಎಂದು ಕರೆ ನೀಡಿದರು.

    ಬಳಿಕ ಎಲ್ಲರಿಗೂ ರಾಜಯೋಗ ಧ್ಯಾನದ ಅನುಭವವನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಬ್ರಹ್ಮಕುಮಾರೀಸ್ ಸದಸ್ಯರು, ಯೋಗಾಸಕ್ತರು ಹಾಗೂ ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಿದರು.

    ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಯೋಗ ಮತ್ತು ಆಧ್ಯಾತ್ಮಿಕತೆಯ ಮಹತ್ವವನ್ನು ಸಾರಿದ ಈ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

    _Sathish Kapikad 

    Share. Facebook Twitter Pinterest LinkedIn Email WhatsApp
    Previous Articleಕೆ. ಪ್ರಕಾಶ್ ಶೆಟ್ಟಿ ಅವರ ಸಾಧನೆಯ ಪಯಣದಲ್ಲಿ ಮತ್ತೊಂದು ಸ್ಮರಣೀಯ ಅಧ್ಯಾಯ :ಎಂಆರ್‌ಜಿ ಕುಟುಂಬಕ್ಕೆ ಎಂಬ್ರೇಯರ್ ಲೆಗಸಿ 650 ಖಾಸಗಿ ವಿಮಾನ ಸೇರ್ಪಡೆ
    Next Article ಜೂನ್ 25ರಂದು ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮ: ಬಾಲಿವುಡ್‌ನ ಖ್ಯಾತ ನಟ ಶಾರುಖ್ ಖಾನ್ ಮಂಗಳೂರಿಗೆ..

    Related Posts

    ಕರಾವಳಿ

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ವಿಧಿವಶ

    July 18, 2026
    ಕರಾವಳಿ

    ಹೈ ಕೋರ್ಟ್ ಸರಕಾರಿ ವಕೀಲರಾಗಿ “ಚಿದಾನಂದ ಬಂಟ್ವಾಳ್ ” ನೇಮಕ

    July 18, 2026
    ಕರಾವಳಿ

    ದ.ಕ. ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರೀ ಮಳೆ ಹಿನ್ನೆಲೆ : ದ. ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ 

    July 17, 2026
    Add A Comment
    Leave A Reply Cancel Reply

    Top Posts

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.