Close Menu
SK Media NewsSK Media News
    What's Hot

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಸಂಭ್ರಮ : 108 ತೆಂಗಿನಕಾಯಿಗಳ ಮಹಾಗಣಪತಿ ಹೋಮ, ವೈಭವದ ಸಾಮೂಹಿಕ ರಂಗಪೂಜೆ

    September 11, 2026

    ಡಿ.ಫಾರ್ಮಾ, ಬಿ.ಫಾರ್ಮಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉದ್ಯೋಗಾವಕಾಶ : ಸೆ.15 ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    September 11, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಜೂನ್ 25ರಂದು ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮ: ಬಾಲಿವುಡ್‌ನ ಖ್ಯಾತ ನಟ ಶಾರುಖ್ ಖಾನ್ ಮಂಗಳೂರಿಗೆ..
    ಕರಾವಳಿ

    ಜೂನ್ 25ರಂದು ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮ: ಬಾಲಿವುಡ್‌ನ ಖ್ಯಾತ ನಟ ಶಾರುಖ್ ಖಾನ್ ಮಂಗಳೂರಿಗೆ..

    June 23, 2026Updated:June 26, 20262 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು: ಕರಾವಳಿಯ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆಯಾದ ರೋಹನ್ ಕಾರ್ಪೊರೇಶನ್ ಆಯೋಜಿಸಿರುವ ‘ಆನ್ ಈವಿನಿಂಗ್ ವಿತ್ ಶಾರುಖ್ ಖಾನ್’ ಕಾರ್ಯಕ್ರಮದಲ್ಲಿ ಬಾಲಿವುಡ್‌ನ ಖ್ಯಾತ ನಟ ಹಾಗೂ ಜಾಗತಿಕ ಮಟ್ಟದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಶಾರುಖ್ ಖಾನ್ ಅವರು ವಿಶೇಷ ಅತಿಥಿಯಾಗಿ ಭಾಗವಹಿಸಲಿದ್ದಾರೆ.

    ಈ ಹಿನ್ನೆಲೆಯಲ್ಲಿ ಶಾರುಖ್ ಖಾನ್ ಅವರು ಜೂನ್ 25ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.

    ಕರಾವಳಿಯ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆಯಾದ ರೋಹನ್ ಕಾರ್ಪೊರೇಶನ್ ಆಯೋಜಿಸಿರುವ ‘ಆನ್ ಈವಿನಿಂಗ್ ವಿತ್ ಶಾರುಖ್ ಖಾನ್’ ಕಾರ್ಯಕ್ರಮದಲ್ಲಿ ಅವರು ವಿಶೇಷ ಅತಿಥಿಯಾಗಿ ಭಾಗವಹಿಸಲಿದ್ದಾರೆ.

    ಮಂಗಳೂರಿನ ಅಡ್ಯಾ‌ರ್ ಗಾರ್ಡನ್‌ನಲ್ಲಿ ನಡೆಯಲಿರುವ ಈ ವಿಶೇಷ ಕಾರ್ಯಕ್ರಮಕ್ಕೆ ಸಂಜೆ 4 ಗಂಟೆಯಿಂದ ಪ್ರವೇಶ ಆರಂಭವಾಗಲಿದ್ದು, ವಿವಿಧ ಕ್ಷೇತ್ರಗಳ ಗಣ್ಯರು, ಉದ್ಯಮಿಗಳು, ಸಾರ್ವಜನಿಕ ಪ್ರತಿನಿಧಿಗಳು ಹಾಗೂ ಪೂರ್ವ ನೋಂದಣಿ ಮಾಡಿಕೊಂಡಿರುವ ಅತಿಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

    ಈ ಕುರಿತು ಮಾತನಾಡಿದ ರೋಹನ್ ಕಾರ್ಪೊರೇಶನ್ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಡಾ. ರೋಹನ್ ಮೊಂತೇರೊ, “ಭಾರತದ ಅತ್ಯಂತ ಜನಪ್ರಿಯ ಕಲಾವಿದರಲ್ಲಿ ಒಬ್ಬರಾದ ಶಾರುಖ್ ಖಾನ್ ಅವರನ್ನು ಮಂಗಳೂರಿನ ನೆಲದಲ್ಲಿ ಸ್ವಾಗತಿಸುವ ಅವಕಾಶ ದೊರೆತಿರುವುದು ನಮಗೆ ಹೆಮ್ಮೆಯ ವಿಷಯ. ಈ ಕಾರ್ಯಕ್ರಮವು ರೋಹನ್ ಕಾರ್ಪೊರೇಶನ್ ಸಂಸ್ಥೆಯ ಬೆಳವಣಿಗೆಯಲ್ಲಿ ಮಹತ್ವದ ಕ್ಷಣವಾಗಿದ್ದು, ಭಾಗವಹಿಸುವ ಪ್ರತಿಯೊಬ್ಬರಿಗೂ ವಿಶಿಷ್ಟ ಅನುಭವವನ್ನು ನೀಡಲಿದೆ” ಎಂದು ಹೇಳಿದರು.

    ಕಾರ್ಯಕ್ರಮದ ಸಿದ್ದತೆಗಳ ಕುರಿತು ಮಾಹಿತಿ ನೀಡಿದ ಸಂಸ್ಥೆಯ ನಿರ್ದೇಶಕರಾದ ಶ್ರೀ ಡಿಯಾನ್ ಮೊಂತೇರೊ, “ಇದು ಮಂಗಳೂರಿನಲ್ಲಿ ನಡೆಯಲಿರುವ ಅತಿದೊಡ್ಡ ಕಾರ್ಪೊರೇಟ್ ಕಾರ್ಯಕ್ರಮಗಳಲ್ಲಿ ಒಂದಾಗಲಿದೆ. ನಮ್ಮ ಸಂಸ್ಥೆಗೆ ಮತ್ತು ನಗರಕ್ಕೆ ಮಹತ್ವದ ಕ್ಷಣವಾಗಿರುವ ಈ ಕಾರ್ಯಕ್ರಮವು ಸುರಕ್ಷಿತವಾಗಿ ಹಾಗೂ ಯಶಸ್ವಿಯಾಗಿ ನೆರವೇರಲು ಎಲ್ಲಾ ಇಲಾಖೆಗಳು ಮತ್ತು ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ’ ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ಭಾಗವಹಿಸಲು ಪೂರ್ವ ನೋಂದಣಿ ಕಡ್ಡಾಯವಾಗಿದ್ದು, ಅಧಿಕೃತವಾಗಿ ನೋಂದಾಯಿತ ಪಾಸ್‌ ಹೊಂದಿರುವವರಿಗೆ ಮಾತ್ರ ಪ್ರವೇಶ ಅವಕಾಶ ಕಲ್ಪಿಸಲಾಗುತ್ತದೆ ಎಂದು ಸಂಸ್ಥೆ ಸ್ಪಷ್ಟಪಡಿಸಿದೆ.

    ಶಾರುಖ್ ಖಾನ್ ಅವರ ಮಂಗಳೂರು ಭೇಟಿ ಘೋಷಣೆಯಾಗುತ್ತಿದ್ದಂತೆ ಕರಾವಳಿ ಭಾಗದಲ್ಲಿ ಅಪಾರ ಕುತೂಹಲ ಮತ್ತು ನಿರೀಕ್ಷೆ ಮೂಡಿದ್ದು, ಈ ಕಾರ್ಯಕ್ರಮವು ಮಂಗಳೂರಿನ ಕಾರ್ಪೊರೇಟ್ ಹಾಗೂ ಸಾಮಾಜಿಕ ವಲಯದಲ್ಲಿ ವಿಶೇಷ ಗಮನ ಸೆಳೆಯುವ ನಿರೀಕ್ಷೆಯಿದೆ.

    ಕರಾವಳಿ ಕರ್ನಾಟಕದ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆ:

    ರೋಹನ್ ಕಾರ್ಪೊರೇಶನ್ ಕರಾವಳಿ ಕರ್ನಾಟಕದ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆಗಳಲ್ಲಿ ಒಂದಾಗಿದ್ದು, ಗುಣಮಟ್ಟ, ವಿಶ್ವಾಸಾರ್ಹತೆ ಮತ್ತು ಗ್ರಾಹಕರ ವಿಶ್ವಾಸವನ್ನು ತನ್ನ ಪ್ರಮುಖ ಮೌಲ್ಯಗಳಾಗಿ ಹೊಂದಿದೆ. ಸಂಸ್ಥೆಯು ಹಲವು ವಸತಿ ಹಾಗೂ ವಾಣಿಜ್ಯ ಯೋಜನೆಗಳ ಮೂಲಕ ತನ್ನದೇ ಆದ ಗುರುತನ್ನು ನಿರ್ಮಿಸಿಕೊಂಡಿದೆ.

    _Sathish Kapikad 

    Share. Facebook Twitter Pinterest LinkedIn Email WhatsApp
    Previous Articleಅಂತರರಾಷ್ಟ್ರೀಯ ಯೋಗ ದಿನ :ಬ್ರಹ್ಮಕುಮಾರೀಸ್ ಮಂಗಳೂರಿನಲ್ಲಿ ಅರ್ಥಪೂರ್ಣ ಅಂತರರಾಷ್ಟ್ರೀಯ ಯೋಗ ದಿನಾಚರಣೆ
    Next Article ಮಂಗಳೂರಿನ ಖಾಝಿ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನಕ್ಕೆ ಸಚಿವ ಯು.ಟಿ. ಖಾದರ್ ಹಾಗೂ ಜೆಡಿಎಸ್ ಜಿಲ್ಲಾಧ್ಯಕ್ಷೆ ರಮೀಜಾ ನಾಸೀರ್ ಸಂತಾಪ

    Related Posts

    ಕರಾವಳಿ

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026
    ಕರಾವಳಿ

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಸಂಭ್ರಮ : 108 ತೆಂಗಿನಕಾಯಿಗಳ ಮಹಾಗಣಪತಿ ಹೋಮ, ವೈಭವದ ಸಾಮೂಹಿಕ ರಂಗಪೂಜೆ

    September 11, 2026
    ಕರಾವಳಿ

    ಡಿ.ಫಾರ್ಮಾ, ಬಿ.ಫಾರ್ಮಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉದ್ಯೋಗಾವಕಾಶ : ಸೆ.15 ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    September 11, 2026
    Add A Comment
    Leave A Reply Cancel Reply

    Top Posts

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.