
ಮಂಗಳೂರು, ಜುಲೈ.01: ಮಂಗಳವಾರ ರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಗೆ ಮಂಗಳೂರಿನ ಕಂಕನಾಡಿ ಸಮೀಪದ ನಾಗೋರಿ ಸಮೀಪ ತಡೆಗೋಡೆ ಕುಸಿದು ಮನೆ ಮೇಲ್ಛಾವಣಿಗೆ ಬಿದ್ದ ಪರಿಣಾಮ ಓರ್ವ ಮಹಿಳೆ ಇಬ್ಬರು ಮಕ್ಕಳು ಸೇರಿದಂತೆ ಮೂವರು ಮೃತಪಟ್ಟ ದುರ್ಘಟನೆ ಸಂಭವಿಸಿದೆ
ಇವರು ಮೂಲತಃ ಬಿಹಾರ ರಾಜ್ಯದವರಾಗಿದ್ದು, ಪ್ರಸ್ತುತ ಕಂಕನಾಡಿ ಗ್ರಾಮದ, ಕಂಕನಾಡಿ ಪೊಲೀಸ್ ಠಾಣಾ ಹಿಂಬಾಗದಲ್ಲಿ ಕಳೆದ 20 ವರ್ಷಗಳಿಂದ ವಾಸ ಮಾಡಿಕೊಂಡಿರುತ್ತಾರೆ.
ದ.ಕ ಜಿಲ್ಲೆಯಾದ್ಯಂತ ಮಂಗಳವಾರ ರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ತಡೆಗೋಡೆ ಕುಸಿದು ಹಳೆಯ ಹಂಚಿನ ಮನೆಯ ಮೇಲ್ಛಾವಣಿಗೆ ಬಿದ್ದ ಪರಿಣಾಮ ನಿದ್ರೆ ಮಂಪರಿನಲ್ಲಿದ್ದ ಓರ್ವ ಮಹಿಳೆ ಇಬ್ಬರು ಮಕ್ಕಳು ಸೇರಿದಂತೆ ಮೂವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.

ಘಟನೆಯ ನಡೆದ ತಕ್ಷಣ ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಮೇಲ್ಚಾವಣಿಯ ಅವಶೇಷಗಳ ಅಡಿಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಒಬ್ಬ ಪುರುಷ ಹಾಗೂ ಇಬ್ಬರು ಬಾಲಕಿಯರನ್ನು ಪ್ರಾಣಾಪಾಯದಿಂದ ರಕ್ಷಿಸಲಾಗಿದೆ.
ಇವರು ಮೂಲತಃ ಬಿಹಾರ ರಾಜ್ಯದವರಾಗಿದ್ದು, ಪ್ರಸ್ತುತ ಕಂಕನಾಡಿ ಗ್ರಾಮದ, ಕಂಕನಾಡಿ ಪೊಲೀಸ್ ಠಾಣಾ ಹಿಂಬಾಗದಲ್ಲಿ ಕಳೆದ 20 ವರ್ಷಗಳಿಂದ ವಾಸ ಮಾಡಿಕೊಂಡಿರುತ್ತಾರೆ.

ಘಟನೆಯ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಬಳಿ ಮಾತನಾಡಿರುವ ಸಚಿವ ಖಾದರ್ ಗಾಯಾಳುಗಳ ಚಿಕಿತ್ಸೆಗೆ ಸರಕಾರದಿಂದಲೇ ವೆಚ್ಚ ಭರಿಸಲು,ಮೃತಪಟ್ಟ ಕುಟುಂಬದವರಿಗೆ ಇಂದೇ ಪರಿಹಾರ ಮೊತ್ತ ನೀಡಲು ಸೂಚನೆ ನೀಡಿದ್ದಾರ.

ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ಹಾಗೂ ತುರ್ತು ಸೇವಾ ದಳದ ಸಿಬ್ಬಂದಿಗಳು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದ್ದು, ಸಿಲುಕಿದ್ದವರನ್ನು ಹೊರತೆಗೆದಿದ್ದಾರೆ. ಮನೆಯಲ್ಲಿ ಸಿಲುಕಿರುವ ಮೃತದೇಹಗಳನ್ನು ಮೇಲಕ್ಕೆತ್ತುವ ಕಾರ್ಯವೂ ಮುಂದುವರಿದಿದೆ.
ಮೃತ ಪಟ್ಟವರು
1)ಹೆಸರು :ಅನಾಮಿಕ ಚೌರಾಸಿಯ
ಹೆಣ್ಣು
ಪ್ರಾಯ :8 ವರ್ಷ
2)ಹೆಸರು :ಪರಿ
ಹೆಣ್ಣು
ಪ್ರಾಯ :04 ವರ್ಷ
3) ಶಾಂತ
ಹೆಂಗಸು
ಪ್ರಾಯ :46 ವರ್ಷ
ರಕ್ಷಣಾ ಕಾರ್ಯದಲ್ಲಿ ಬದುಕಿ ಉಳಿದವರು
1)ಹೆಸರು : ಅಲ್ಕಾ
ಪ್ರಾಯ :14 ವರ್ಷ
ಹೆಣ್ಣು
2)ಅನುಷಾ
ಪ್ರಾಯ 11 ವರ್ಷ
ಹೆಣ್ಣು
3)ಬಾಲಕೃಷ್ಣ
ಪ್ರಾಯ :48
ಗಂಡು
ವಾಸ: ಮೂಲತ ಬಿಹಾರ ರಾಜ್ಯದವರಾಗಿದ್ದು, ಪ್ರಸ್ತುತ ಕಂಕನಾಡಿ ಗ್ರಾಮದ, ಕಂಕನಾಡಿ ಪೊಲೀಸ್ ಠಾಣಾ ಹಿಂಬಾಗದಲ್ಲಿ ಕಳೆದ 20 ವರ್ಷಗಳಿಂದ ವಾಸ ಮಾಡಿಕೊಂಡಿರುತ್ತಾರೆ.
_Sathish Kapikad


