
ಮಂಗಳೂರು, ಜುಲೈ.7: ಭಾರತದ “ಬ್ರಿಡ್ಜ್ ಮ್ಯಾನ್” ಎಂದೇ ಖ್ಯಾತಿ ಪಡೆದಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರ ನಿಧನವು ರಾಜ್ಯ ಹಾಗೂ ರಾಷ್ಟ್ರಕ್ಕೆ ತುಂಬಲಾರದ ನಷ್ಟವಾಗಿದೆ.
ಕಡಿಮೆ ವೆಚ್ಚದಲ್ಲಿ ನೂರಾರು ತೂಗು ಸೇತುವೆಗಳನ್ನು ನಿರ್ಮಿಸಿ, ಗ್ರಾಮೀಣ ಹಾಗೂ ದುರ್ಗಮ ಪ್ರದೇಶಗಳ ಸಾವಿರಾರು ಜನರ ಬದುಕಿಗೆ ಹೊಸ ದಾರಿಯನ್ನು ನಿರ್ಮಿಸಿದ ಅವರ ಸೇವೆ ಸದಾ ಸ್ಮರಣೀಯ. ಇಂಜಿನಿಯರಿಂಗ್ ಪರಿಣತಿಯನ್ನು ಸಮಾಜಸೇವೆಯೊಂದಿಗೆ ಸಂಯೋಜಿಸಿ ಮಾನವೀಯತೆಯ ಜೀವಂತ ಉದಾಹರಣೆಯಾಗಿದ್ದ ಅವರು ಮುಂದಿನ ಪೀಳಿಗೆಗೆ ಶಾಶ್ವತ ಪ್ರೇರಣೆಯಾಗಿದ್ದಾರೆ.
ದಿವಂಗತ ಆತ್ಮಕ್ಕೆ ಭಗವಂತನು ಸದ್ಗತಿ ಕರುಣಿಸಲಿ ಹಾಗೂ ಅವರ ಕುಟುಂಬದವರಿಗೆ ಮತ್ತು ಅಪಾರ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇವೆ ಎಂದು ದ. ಕ. ಜಿಲ್ಲಾ ಬಿಜೆಪಿ ವಕ್ತಾರರು ಅರುಣ್ ಜಿ. ಶೇಟ್ ತಮ್ಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
_Sathish Kapikad



