Close Menu
SK Media NewsSK Media News
    What's Hot

    ಸತತ ಸೋಲುಗಳ ಹತಾಶೆಯಿಂದ ಪ್ರಧಾನಿಗಳ ತಂದೆಯವರನ್ನು ನಿಂದನೆ ಮಾಡಿರುವ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆ ಅವರ ಹಿರಿತನಕ್ಕೆ ಶೋಭೆಯಲ್ಲ: ಶಾಸಕ ಕಾಮತ್ 

    October 27, 2026

    ನವಂಬರ್ 1ರಂದು ಸುರತ್ಕಲ್ ಬಂಟರ ಭವನದಲ್ಲಿ ರಂಗುರಂಗಿನ ರಂಗೋತ್ಸವ – ಸಂಗೀತ ಗಾನಸುಧೆ – ಶ್ರೀಮತಿ ಸತ್ಯಭಾಮ ನಾಟಕ : ಲಕ್ಷ್ಮಣ್ ಕುಮಾರ್ ಮಲ್ಲೂರ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ

    October 27, 2026

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಜುಲೈ 19ರಂದು ಮಂಗಳೂರಿನಲ್ಲಿ ‘ಕರ್ಂಗೋಲ್‌ – ಕಂಗುಲು’ ಪ್ರದರ್ಶನ ಹಾಗೂ ‘ಕುದ್ಕ ಬಚ್ಚಿರೆ’ ಬಿಡುಗಡೆ
    ಕರಾವಳಿ

    ಜುಲೈ 19ರಂದು ಮಂಗಳೂರಿನಲ್ಲಿ ‘ಕರ್ಂಗೋಲ್‌ – ಕಂಗುಲು’ ಪ್ರದರ್ಶನ ಹಾಗೂ ‘ಕುದ್ಕ ಬಚ್ಚಿರೆ’ ಬಿಡುಗಡೆ

    July 14, 20262 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು, ಜುಲೈ .14: ತುಳುನಾಡಿನ ಸಾಂಸ್ಕೃತಿಕ ಆಸ್ಮಿತೆ, ಮೌಖಿಕ ಇತಿಹಾಸ ಹಾಗೂ ಸಾಹಿತ್ಯ ಪರಂಪರೆಯನ್ನು ಬಿಂಬಿಸುವ ಎರಡು ವಿಶೇಷ ಕಾರ್ಯಕ್ರಮಗಳಿಗೆ ಮಂಗಳೂರು ಸಾಕ್ಷಿಯಾಗಲಿದೆ.

    ಹೌದು ಇದೇ ಜುಲೈ 19ರಂದು ಮಂಗಳೂರಿನ ನಂತೂರಿನಲ್ಲಿರುವ ಸಂದೇಶ ಫೌಂಡೇಶನ್‌ನಲ್ಲಿ ತುಳುನಾಡಿನ ಮೂಲನಿವಾಸಿಗಳ ಕಲಾಪ್ರಕಾರಗಳ ಕುರಿತ ಡಾಕ್ಯುಮೆಂಟರಿ ಪ್ರದರ್ಶನ ಹಾಗೂ ವಿಶಿಷ್ಟ ತುಳು ಸಣ್ಣ ಕತೆಗಳ ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿದೆ.

    ‘ಕರ್ಂಗೋಲ್‌ – ಕಂಗುಲು’ ಸಾಕ್ಷ್ಯಚಿತ್ರ ಪ್ರದರ್ಶನ ಮತ್ತು ಸಂವಾದ :

    ತುಳುನಾಡಿನ ಮೂಲ ನಿವಾಸಿ ಸಮುದಾಯದ ಅತ್ಯಂತ ಪ್ರಮುಖ ಹಾಗೂ ಸಾಂಪ್ರದಾಯಿಕ ಕಲಾಪ್ರಕಾರಗಳಾದ ‘ಕರ್ಂಗೋಲ್‌’ ಮತ್ತು ‘ಕಂಗೀಲು’ ಕುರಿತು ಸಿದ್ಧಪಡಿಸಲಾದ ವಿಶೇಷ ಸಾಕ್ಷ್ಯಚಿತ್ರ (ಡಾಕ್ಯುಮೆಂಟರಿ) ಅಂದು ಬೆಳಿಗ್ಗೆ 10:00 ಗಂಟೆಗೆ ಪ್ರದರ್ಶನಗೊಳ್ಳಲಿದೆ.ಮಾಯಿಲು ಫಿಲ್ಮ್ಸ್‌ ಮತ್ತು ಕಡಲ್‌ ಸ್ಟುಡಿಯೋಸ್ ಜಂಟಿಯಾಗಿ ನಿರ್ಮಿಸಿರುವ ಈ ಚಿತ್ರವು 108 ನಿಮಿಷಗಳ ಕಾಲಾವಧಿಯನ್ನು ಹೊಂದಿದೆ.

    ಏನಿದರ ವಿಶೇಷತೆ :

    ತುಳುನಾಡಿನ ಮೌಖಿಕ ಇತಿಹಾಸ, ಸಾಂಸ್ಕೃತಿಕ ಅವಳಿ ವೀರರ ಚರಿತ್ರೆ, ಮೂಲನಿವಾಸಿ ಸಮುದಾಯಗಳ ಆಚರಣೆಗಳು ಹಾಗೂ ಅವರ ಸಾಂಸ್ಕೃತಿಕ ಆಸ್ಮಿತೆಯನ್ನು ಈ ಚಿತ್ರವು ವಿವರಿಸುತ್ತದೆ. ಈ ಸಾಕ್ಷ್ಯಚಿತ್ರವನ್ನು ಜಯಂತ್‌ ನಿಟ್ಟಡೆ ಮತ್ತು ಸಾಗರ್‌ ಬನ್ನಂಜೆ ಜಂಟಿಯಾಗಿ ನಿರ್ದೇಶಿಸಿದ್ದು, ಶಿವಪ್ರಸಾದ್‌ ಮತ್ತು ಪ್ರದೀಪ್‌ ಗರ್ಡಾಡಿ ಅವರು ಛಾಯಾಗ್ರಹಣ ಹಾಗೂ ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ. ಚಿತ್ರ ಪ್ರದರ್ಶನದ ನಂತರ ಚಿತ್ರತಂಡದೊಂದಿಗೆ ಮುಕ್ತ ಸಂವಾದ ಕಾರ್ಯಕ್ರಮ ನಡೆಯಲಿದೆ.

    ‘ಕುದ್ಕ ಬಚ್ಚಿರೆ’ ಪುಸ್ತಕ ಬಿಡುಗಡೆ ಮತ್ತು ಪ್ರಶಸ್ತಿ ಪ್ರದಾನ :

    ತುಳು ಸಾಹಿತ್ಯ ಪರಂಪರೆಯಲ್ಲಿಯೇ ಮೊದಲ ಬಾರಿಗೆ ಆಯೋಜಿಸಲಾಗಿದ್ದ ವಿಶಿಷ್ಟ ತುಳು ಸಣ್ಣ ಕಥೆ ಬರೆಯುವ ಸ್ಪರ್ಧೆ “ಕುದ್ಕ ಬಚ್ಚಿರೆ”ಯ ಪುಸ್ತಕ ಬಿಡುಗಡೆ ಕಾರ್ಯಕ್ರಮ ಅಂದು ಬೆಳಿಗ್ಗೆ 9:30ಕ್ಕೆ ನೆರವೇರಲಿದೆ. ಸ್ಪರ್ಧೆಯಲ್ಲಿ ವಿಜೇತರಾದ ಬರಹಗಾರರಿಗೆ ಈ ಸಂದರ್ಭದಲ್ಲಿ ಬಹುಮಾನ ವಿತರಣೆ ಮಾಡಲಾಗುವುದು. ಸ್ಪರ್ಧೆಗೆ ಬಂದ ಕಥೆಗಳಲ್ಲಿ ಅತ್ಯುತ್ತಮವಾದವುಗಳನ್ನು ಆಯ್ದು ಸಿದ್ಧಪಡಿಸಲಾದ “ಕುದ್ಕ-ಬಚ್ಚಿರೆ” ಪುಸ್ತಕವನ್ನು ಇದೇ ವೇದಿಕೆಯಲ್ಲಿ ಲೋಕಾರ್ಪಣೆಗೊಳಿಸಲಾಗುವುದು.

    ಎಲ್ಲರಿಗೂ ಮುಕ್ತ ಅವಕಾಶ :

    ಈ ವಿಶಿಷ್ಟ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಪ್ರವೇಶ ಸಂಪೂರ್ಣ ಉಚಿತವಾಗಿದ್ದು, ಆಸಕ್ತರಿಗೆ ಮುಕ್ತ ಅವಕಾಶವಿದೆ. ತುಳು ಸಾಹಿತಿಗಳು, ಸಂಶೋಧಕರು, ವಿದ್ಯಾರ್ಥಿಗಳು, ಸಿನಿಮಾದ ರಂಗದ ಗಣ್ಯರು, ಕಲಾ ಪ್ರೇಮಿಗಳು ಹಾಗೂ ಸಮುದಾಯದ ಹಿರಿಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ತುಳು ಸಾಹಿತ್ಯ ಮತ್ತು ಕಲೆಯ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಸಂಘಟಕರು ವಿನಂತಿಸಿದ್ದಾರೆ. ಸಂಪರ್ಕಕ್ಕಾಗಿ 7795529458, 8870358703

    _Sathish Kapikad

    Share. Facebook Twitter Pinterest LinkedIn Email WhatsApp
    Previous ArticleThumbay to Launch UAE’s First-of-Its-Kind Academic Programs in Longevity Medicine in Partnership with Switzerland’s Geneva College of Longevity Science
    Next Article ಮಂಗಳೂರಿನಲ್ಲಿ ಕರಾವಳಿ ಕರ್ನಾಟಕ ಇತಿಹಾಸ ಸಮ್ಮೇಳನ ಯಶಸ್ವಿ : ಸಂಶೋಧಕರು, ಶಿಕ್ಷಣ ತಜ್ಞರು, ಪತ್ರಕರ್ತರು,ಸಮಾಜಮುಖಿ ಚಿಂತಕರು ಒಂದೇ ವೇದಿಕೆಯಲ್ಲಿ..

    Related Posts

    ಕರಾವಳಿ

    ಸತತ ಸೋಲುಗಳ ಹತಾಶೆಯಿಂದ ಪ್ರಧಾನಿಗಳ ತಂದೆಯವರನ್ನು ನಿಂದನೆ ಮಾಡಿರುವ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆ ಅವರ ಹಿರಿತನಕ್ಕೆ ಶೋಭೆಯಲ್ಲ: ಶಾಸಕ ಕಾಮತ್ 

    October 27, 2026
    ಕರಾವಳಿ

    ನವಂಬರ್ 1ರಂದು ಸುರತ್ಕಲ್ ಬಂಟರ ಭವನದಲ್ಲಿ ರಂಗುರಂಗಿನ ರಂಗೋತ್ಸವ – ಸಂಗೀತ ಗಾನಸುಧೆ – ಶ್ರೀಮತಿ ಸತ್ಯಭಾಮ ನಾಟಕ : ಲಕ್ಷ್ಮಣ್ ಕುಮಾರ್ ಮಲ್ಲೂರ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ

    October 27, 2026
    ಕರಾವಳಿ

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.