
ಮಂಗಳೂರು ಜುಲೈ.25: ಮಂಗಳೂರು ಮಹಾನಗರ ಪಾಲಿಕೆಗೆ ನೂತನ ಆಯುಕ್ತರನ್ನು ರಾಜ್ಯ ಸರಕಾರ ನೇಮಕ ಮಾಡಿದೆ.
ಈ ಹಿಂದೆ ಆಯುಕ್ತರಾಗಿದ್ದ ರವಿಚಂದ್ರ ನಾಯಕ್ (ಕೆಎಎಸ್) ಅವರನ್ನು ವರ್ಗಾವಣೆ ಮಾಡಲಾಗಿದೆ.
2018ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ರಾಹುಲ್ ರತ್ನಂ ಪಾಂಡೆ ಅವರನ್ನು ನೂತನ ಆಯುಕ್ತರನ್ನಾಗಿ ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.
ಈವರೆಗೆ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಿತ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ರಾಹುಲ್ ರತ್ನಂ ಪಾಂಡೆ ಅವರು ತಕ್ಷಣದಿಂದಲೇ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಸಂಬಂಧ ಆದೇಶ ಹೊರಡಿಸಿದ್ದು, ಹೊಸ ಆಯುಕ್ತರ ನೇಮಕದಿಂದ ನಗರದ ನಾಗರಿಕ ಸೌಲಭ್ಯಗಳು, ಮೂಲಸೌಕರ್ಯ ಅಭಿವೃದ್ಧಿ, ಸ್ವಚ್ಛತೆ ಹಾಗೂ ನಗರಾಭಿವೃದ್ಧಿ ಯೋಜನೆಗಳಿಗೆ ಮತ್ತಷ್ಟು ವೇಗ ಸಿಗುವ ನಿರೀಕ್ಷೆ ವ್ಯಕ್ತವಾಗಿದೆ.
_Sathish Kapikad


