Close Menu
SK Media NewsSK Media News
    What's Hot

    ಯುಪಿಎಸ್‌ಸಿ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 42ನೇ ರ‍್ಯಾಂಕ್ ಗಳಿಸಿದ ರಫೇಲ್ ಯುದ್ಧವಿಮಾನದ ಪೈಲಟ್ ಫ್ಲೈಟ್ ಲೆಫ್ಟಿನೆಂಟ್ ಪ್ರಜ್ವಲ್ ಆರ್. ಶೆಟ್ಟಿ ಅವರ ಪಯಣ

    October 28, 2026

    ಮಂಗಳೂರಿನ ಅಭಿವೃದ್ಧಿಗೆ ನಿಮ್ಮ ಕೊಡುಗೆ ಏನು? ಎಷ್ಟು ಅನುದಾನ ತಂದಿದ್ದೀರಿ? ಶ್ವೇತಪತ್ರ ಹೊರಡಿಸಿ ನೇರಾನೇರ ಚರ್ಚೆಗೆ ಸಿದ್ಧ : ಶಾಸಕ ಕಾಮತ್ ಅವರಿಗೆ ಕಾಂಗ್ರೆಸ್ ಮುಖಂಡ ಎಸಿ ವಿನಯ್ ರಾಜ್ ಸವಾಲು 

    October 28, 2026

    ಕ್ರೀಡಾಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಎಂ.ಆರ್. ಪೂವಮ್ಮ ಅವರು ಪ್ರತಿಷ್ಠಿತ ರಾಜ್ಯಮಟ್ಟದ ‘ವಂದನಾ ಪ್ರಶಸ್ತಿ’ಗೆ ಆಯ್ಕೆ

    October 28, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಭೂ ಕುಸಿತ ಮತ್ತು ಮಳೆಹಾನಿ ಸೇರಿದಂತೆ ಪ್ರಾಕೃತಿಕ ವಿಕೋಪ : ಸಂತ್ರಸ್ತರಿಗೆ ತ್ವರಿತ ಪರಿಹಾರ ವಿತರಿಸಲು ಸಚಿವ ಯು.ಟಿ ಖಾದರ್ ಸೂಚನೆ
    ಕರಾವಳಿ

    ಭೂ ಕುಸಿತ ಮತ್ತು ಮಳೆಹಾನಿ ಸೇರಿದಂತೆ ಪ್ರಾಕೃತಿಕ ವಿಕೋಪ : ಸಂತ್ರಸ್ತರಿಗೆ ತ್ವರಿತ ಪರಿಹಾರ ವಿತರಿಸಲು ಸಚಿವ ಯು.ಟಿ ಖಾದರ್ ಸೂಚನೆ

    August 5, 20262 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು,ಆ.5(ಕ.ವಾ): ಭೂ ಕುಸಿತ ಮತ್ತು ಮಳೆಹಾನಿ ಸೇರಿದಂತೆ ಪ್ರಾಕೃತಿಕ ವಿಕೋಪಗಳ ಸಂತ್ರಸ್ತರಿಗೆ ಪರಿಹಾರ ಮೊತ್ತವನ್ನು ತ್ವರಿತವಾಗಿ ಮಂಜೂರು ಮಾಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಯು.ಟಿ ಖಾದರ್ ಸೂಚಿಸಿದ್ದಾರೆ.

    ಅವರು ಬುಧವಾರ ಬೆಳ್ತಂಗಡಿ ತಾಲೂಕಿನಲ್ಲಿ ವಿವಿಧ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸಭೆ ನಡೆಸಿ ಮಾತನಾಡಿದರು.

    ಮಳೆಯಿಂದ ಮನೆಕುಸಿತ ಹಾಗೂ ಜೀವಹಾನಿ ನಡೆದ ಘಟನೆಗಳಿಗೆ ಸರಕಾರದ ನಿಯಮಾನುಸಾರ ಪರಿಹಾರ ಮಂಜೂರು ಮಾಡಬೇಕು. ಮನೆಯೊಳಗೆ ನೀರು ನುಗ್ಗಿದ ಪ್ರಕರಣಗಳ ಸಂತ್ರಸ್ತರಿಗೂ ತುರ್ತು ಪರಿಹಾರವನ್ನು ಮಂಜೂರು ಮಾಡಬೇಕು. ಈ ವಿಷಯದಲ್ಲಿ ವಿಳಂಬವನ್ನು ಸಹಿಸಲಾಗುವುದಿಲ್ಲ ಎಂದು ಸಚಿವರು ತಿಳಿಸಿದರು.

    ಮಳೆಯಿಂದ ಹಾನಿಗೊಳಗಾದ ಶಾಲೆ ಮತ್ತು ಅಂಗನವಾಡಿಗಳಿಗೆ ಲಭ್ಯ ಅನುದಾನದಲ್ಲಿ ಪ್ರಗತಿ ಕಾರ್ಯನಿರ್ವಹಿಸಬೇಕು. ಅರಣ್ಯ ಇಲಾಖೆ, ಮೆಸ್ಕಾಂ ಹಾಗೂ ಸ್ಥಳೀಯ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ ಸಂಭಾವ್ಯ ದುರ್ಘಟನೆಗಳನ್ನು ತಪ್ಪಿಸಬೇಕು ಎಂದು ಯು.ಟಿ ಖಾದರ್ ಸೂಚಿಸಿದರು.

    ಮಳೆಗಾಲದಲ್ಲಿ ಅಧಿಕಾರಿಗಳು ಪೂರ್ತಿ ಸನ್ನದ್ಧರಾಗಿ ಕಾರ್ಯನಿರ್ವಹಿಸಬೇಕು. 24 ಗಂಟೆಯೂ ಸಾರ್ವಜನಿಕರ ಸೇವೆಗೆ ಲಭ್ಯರಾಗಬೇಕು. ಕಂಟ್ರೋಲ್ ರೂಂ ಸದಾ ಸನ್ನದ್ದ ಸ್ಥಿತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಸಚಿವರು ತಿಳಿಸಿದರು.

    ಬೆಳ್ತಂಗಡಿ ತಾಲೂಕಿನ ಪೂಂಜಾಲಕಟ್ಟೆಯಿಂದ ಚಾರ್ಮಾಡಿವರೆಗೆ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಅಲ್ಲಲ್ಲಿ ನೀರು ನಿಲ್ಲುತ್ತಿರುವ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬಂದಿವೆ. ಈ ಹೆದ್ದಾರಿ ಸಮಸ್ಯೆಗಳನ್ನು ಪಟ್ಟಿ ಮಾಡಿ ಹಂತ ಹಂತವಾಗಿ ಬಗೆಹರಿಸಲು ಅವರು ತಿಳಿಸಿದರು.

    ಕೃಷಿ ಮತ್ತು ತೋಟಗಾರಿಕೆ ಇಲಾಖೆ ರೈತರಿಗೆ ಬೆಳೆ ವಿಮೆಯನ್ನು ತ್ವರಿತವಾಗಿ ಮಂಜೂರು ಮಾಡಬೇಕು ಎಂದು ಯು.ಟಿ ಖಾದರ್ ತಿಳಿಸಿದರು.
    ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆ ಅಭಿವೃದ್ಧಿಗೆ 12 ಕೋಟಿ ರೂ. ಅನುಮೋದನೆಯಾಗಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ಪಿಡಬ್ಲ್ಯೂಡಿ ಅಧಿಕಾರಿಗಳು ಸಭೆಗೆ ತಿಳಿಸಿದರು.

    ಬೆಳ್ತಂಗಡಿ ನಗರ ಯೋಜನಾ ಪ್ರಾಧಿಕಾರ ಸ್ಥಾಪನೆ ಮಾಡುವ ಸಂಬಂಧ ಪರಿಶೀಲಿಸಲಾಗುವುದು. ಗ್ರಾಮ ಪಂಚಾಯತ್‍ಗಳಲ್ಲಿ ಸಾರ್ವಜನಿಕರ ಕೆಲಸಕ್ಕೆ ಆದ್ಯತೆ ನೀಡಬೇಕು ಎಂದು ಸಚಿವರು ತಿಳಿಸಿದರು.
    ಇದೇ ಸಂದರ್ಭದಲ್ಲಿ ಸಚಿವ ಯು.ಟಿ ಖಾದರ್ ನೆಲ್ಯಾಡಿ ರೆಖ್ಯಾ ಕಾಡಾನೆ ದಾಳಿಯಲ್ಲಿ ಸಾವನ್ನಪ್ಪಿದ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ಮಂಜೂರಾತಿ ಪತ್ರ ನೀಡಿದರು.

    ಸಭೆಯಲ್ಲಿ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ, ಡಿಸಿಪಿ ರವಿಶಂಕರ್ ಮತ್ತಿತರರು ಉಪಸ್ಥಿತರಿದ್ದರು.
    ಇದಕ್ಕೂ ಮೊದಲು ಸಚಿವ ಯು.ಟಿ ಖಾದರ್ ಮಳೆಯಿಂದ ಹಾನಿಗೊಳಗಾದ ಬೆಳ್ತಂಗಡಿ ತಾಲೂಕಿನ ಗುರಿಂಗಾನ, ಪುತ್ರಬೈಲು, ಲಾಯಿಲ ಮತ್ತಿತರ ಕಡೆಗೆ ಭೇಟಿ ನೀಡಿ ಮಳೆ ಅನಾಹುತ ವೀಕ್ಷಿಸಿದರು.

    ಸಾರ್ವಜನಿಕರನ್ನು ಭೇಟಿಯಾಗಿ ಅವರ ಅಹವಾಲುಗಳನ್ನು ಆಲಿಸಿದರು.

    _Sathish Kapikad

     

    Share. Facebook Twitter Pinterest LinkedIn Email WhatsApp
    Previous Articleಗೋಲ್ಡನ್ ಮೂವೀಸ್‌ನ ಪ್ರಥಮ ತುಳು ಚಿತ್ರ “ಪಿಕ್ಚರ್” ಆಗಸ್ಟ್ 7ರಂದು ರಾಜ್ಯಾದ್ಯಂತ ಬಿಡುಗಡೆ : ಶಿಲ್ಪಾ ಗಣೇಶ್
    Next Article ಮಹಾನಗರಪಾಲಿಕೆಯಿಂದ ಮಂಗಳೂರಿನ ಹಸಿರೀಕರಣಕ್ಕಾಗಿ ಮತ್ತು ಅಳಿದು ಹೋದ ಪಕ್ಷಿ ಸಂಕುಲ ಮರಳಿ ಕರೆ ತರಲು ಹಣ್ಣಿನ ಗಿಡ ನೆಡುವ ಚಳುವಳಿ

    Related Posts

    ಕರಾವಳಿ

    ಯುಪಿಎಸ್‌ಸಿ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 42ನೇ ರ‍್ಯಾಂಕ್ ಗಳಿಸಿದ ರಫೇಲ್ ಯುದ್ಧವಿಮಾನದ ಪೈಲಟ್ ಫ್ಲೈಟ್ ಲೆಫ್ಟಿನೆಂಟ್ ಪ್ರಜ್ವಲ್ ಆರ್. ಶೆಟ್ಟಿ ಅವರ ಪಯಣ

    October 28, 2026
    ಕರಾವಳಿ

    ಮಂಗಳೂರಿನ ಅಭಿವೃದ್ಧಿಗೆ ನಿಮ್ಮ ಕೊಡುಗೆ ಏನು? ಎಷ್ಟು ಅನುದಾನ ತಂದಿದ್ದೀರಿ? ಶ್ವೇತಪತ್ರ ಹೊರಡಿಸಿ ನೇರಾನೇರ ಚರ್ಚೆಗೆ ಸಿದ್ಧ : ಶಾಸಕ ಕಾಮತ್ ಅವರಿಗೆ ಕಾಂಗ್ರೆಸ್ ಮುಖಂಡ ಎಸಿ ವಿನಯ್ ರಾಜ್ ಸವಾಲು 

    October 28, 2026
    ಕರಾವಳಿ

    ಕ್ರೀಡಾಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಎಂ.ಆರ್. ಪೂವಮ್ಮ ಅವರು ಪ್ರತಿಷ್ಠಿತ ರಾಜ್ಯಮಟ್ಟದ ‘ವಂದನಾ ಪ್ರಶಸ್ತಿ’ಗೆ ಆಯ್ಕೆ

    October 28, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.