Close Menu
SK Media NewsSK Media News
    What's Hot

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಸಂಭ್ರಮ : 108 ತೆಂಗಿನಕಾಯಿಗಳ ಮಹಾಗಣಪತಿ ಹೋಮ, ವೈಭವದ ಸಾಮೂಹಿಕ ರಂಗಪೂಜೆ

    September 11, 2026

    ಡಿ.ಫಾರ್ಮಾ, ಬಿ.ಫಾರ್ಮಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉದ್ಯೋಗಾವಕಾಶ : ಸೆ.15 ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    September 11, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಮಂಗಳೂರು ವಿವಿಯ ನಿವೃತ್ತ ಪ್ರೊಫೆಸರ್ ಡಾ.ವಹೀದಾ ಸುಲ್ತಾನ ನಿಧನ
    ಕರಾವಳಿ

    ಮಂಗಳೂರು ವಿವಿಯ ನಿವೃತ್ತ ಪ್ರೊಫೆಸರ್ ಡಾ.ವಹೀದಾ ಸುಲ್ತಾನ ನಿಧನ

    August 6, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರೊಫೆಸರ್‌, ಮೈಸೂರು ಕಲ್ಯಾಣಗಿರಿ ನಿವಾಸಿ ಡಾ.ವಹೀದಾ ಸುಲ್ತಾನಾ (70) ಹೃದಯಾಘಾತದಿಂದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಅಪರಾಹ್ನ ನಿಧನರಾದರು.

    ಅವರು ಸುಮಾರು 3 ದಶಕಗಳ ಕಾಲ ಮಂಗಳೂರು ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕರಾಗಿದ್ದು, ವಿಭಾಗ ಮುಖ್ಯಸ್ಥರಾಗಿ ನಿವೃತ್ತಿ ಹೊಂದಿದ್ದರು. ಅವರು ಪತಿ, ಇಬ್ಬರು ಸಹೋದರರು, ಮೂವರು ಸಹೋದರಿಯರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಶುಕ್ರವಾರ ಅಪರಾಹ್ನ ಮೈಸೂರಿನಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

    ಅ‍‍‍‍ವರು ಮಂಗಳೂರು ವಿವಿ ಮಹಿಳಾ ಹಾಸ್ಟೆಲ್‌ ವಾರ್ಡನ್‌ ಆಗಿ, ಅಲ್ಪಸಂಖ್ಯಾತರು, ಇತರ ಒಬಿಸಿ ವಿದ್ಯಾರ್ಥಿಗಳ ಐಎಎಸ್‌ ಕೆಎಎಸ್‌ ಕೋಚಿಂಗ್‌ ಕೋಆರ್ಡಿನೇಟರ್‌ ಆಗಿ ಸೇವೆ ಸಲ್ಲಿಸಿದ್ದರು. ಮಾಧ್ಯಮ, ಆರೋಗ್ಯ, ತಂತ್ರಜ್ಞಾನ, ಮಹಿಳಾ ವಿಚಾರಗಳು ಸೇರಿದಂತೆ ಹಲವು ವಿಷಯಗಳಲ್ಲಿ ಅವರು ಲೇಖನಗಳನ್ನು ಬರೆದಿರುವುದಲ್ಲದೆ, ರಾಷ್ಟ್ರೀಯ, ಅಂತಾರಾಷ್ಟ್ರೀಯ ನಿಯತಕಾಲಿಕಗಳಲ್ಲಿ ಸಂಶೋಧನಾ ಪ್ರಬಂಧಗಳನ್ನು ಪ್ರಸ್ತುತಪಡಿಸಿದ್ದಾರೆ.

    ಬಾಂಗ್ಲಾದೇಶ, ಮಲೇಶ್ಯ, ಶ್ರೀಲಂಕಾ, ಹಾಂಗ್‌ ಕಾಂಗ್‌ ಗಳಲ್ಲಿ ನಡೆದ ಅಂತಾರಾಷ್ಟ್ರೀಯ ಸಮ್ಮೇಳನಗಳಲ್ಲಿ ಭಾಗಿಯಾಗಿ ಪ್ರಬಂಧಗಳನ್ನು ಮಂಡಿಸಿದ್ದಾರೆ. ಕಾರ್ಪೊರೇಟ್‌ ಕಮ್ಯುನಿಕೇಶನ್ಸ್‌, ಮಹಿಳೆ ಮತ್ತು ಮೀಡಿಯಾ, ಆರೋಗ್ಯ ಸಂವಹನ ಮತ್ತು ಮಹಿಳೆ ಇತ್ಯಾದಿ ವಿಚಾರಗಳಲ್ಲಿ ಅವರು ಹೆಚ್ಚಿನ ಆಸಕ್ತಿ ಹೊಂದಿದ್ದರು.

    ಏಷ್ಯನ್‌ ಕಾಂಗ್ರೆಸ್‌ ಫಾರ್‌ ಮೀಡಿಯಾ ಆ್ಯಂಡ್ ಕಮ್ಯುನಿಕೇಶನ್‌ ಇದರ ರಾಷ್ಟ್ರೀಯ ಸಮಿತಿಯ ಉಪ ನಿರ್ದೇಶಕರಾಗಿಯೂ ಕಾರ್ಯ ನಿರ್ವಹಿಸಿದ್ದರು. ಅವರ ನಿಧನಕ್ಕೆ ಮಂಗಳೂರು ವಿ.ವಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಹಳೆ ವಿದ್ಯಾರ್ಥಿಗಳ ಸಂಘ ಮಾಮ್ ತೀವ್ರ ಸಂತಾಪ ವ್ಯಕ್ತಪಡಿಸಿದೆ.

    _Sathish Kapikad

    Share. Facebook Twitter Pinterest LinkedIn Email WhatsApp
    Previous Articleಮಂಗಳೂರಿನ ಕೆಲವು ಬಾರ್ ಗಳ ಮೇಲೆ ಅಬಕಾರಿ ಅಧಿಕಾರಿಗಳ ದಿಢೀರ್ ದಾಳಿ
    Next Article ಐ ಓ ಸಿ ಎಲ್ ಎನ್ ಎಂ ಡಿ ಸಿ ವಿಲೀನಕ್ಕೆ ಆಗ್ರಹಿಸಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕುದುರೆಮುಖ ಶ್ರಮಶಕ್ತಿ ಸಂಘಟನೆ ಮನವಿ

    Related Posts

    ಕರಾವಳಿ

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026
    ಕರಾವಳಿ

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಸಂಭ್ರಮ : 108 ತೆಂಗಿನಕಾಯಿಗಳ ಮಹಾಗಣಪತಿ ಹೋಮ, ವೈಭವದ ಸಾಮೂಹಿಕ ರಂಗಪೂಜೆ

    September 11, 2026
    ಕರಾವಳಿ

    ಡಿ.ಫಾರ್ಮಾ, ಬಿ.ಫಾರ್ಮಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉದ್ಯೋಗಾವಕಾಶ : ಸೆ.15 ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    September 11, 2026
    Add A Comment
    Leave A Reply Cancel Reply

    Top Posts

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.