Close Menu
SK Media NewsSK Media News
    What's Hot

    ಕ್ರೀಡಾಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಎಂ.ಆರ್. ಪೂವಮ್ಮ ಅವರು ಪ್ರತಿಷ್ಠಿತ ರಾಜ್ಯಮಟ್ಟದ ‘ವಂದನಾ ಪ್ರಶಸ್ತಿ’ಗೆ ಆಯ್ಕೆ

    October 28, 2026

    ನ.3ರಿಂದ 15 : ಮಾಂಡ್ ಸೊಭಾಣ್ ಸಂಘಟನೆಯ ವತಿಯಿಂದ ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮ್ಮೇಳನ -ಸತತ 12 ದಿನ, 12 ಗಂಟೆ ಹಾಗೂ 12 ನಿಮಿಷಗಳ ನಿರಂತರ ಗಾಯನದ ಮೂಲಕ ಗಿನ್ನೆಸ್ ದಾಖಲೆಗೆ ಪ್ರಯತ್ನ

    October 28, 2026

    ಸತತ ಸೋಲುಗಳ ಹತಾಶೆಯಿಂದ ಪ್ರಧಾನಿಗಳ ತಂದೆಯವರನ್ನು ನಿಂದನೆ ಮಾಡಿರುವ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆ ಅವರ ಹಿರಿತನಕ್ಕೆ ಶೋಭೆಯಲ್ಲ: ಶಾಸಕ ಕಾಮತ್ 

    October 27, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ನಮ್ಮ ರಾಷ್ಟ್ರದ ಹಿರಿಮೆ, ಭಾರತಕ್ಕಾಗಿ ನಡಿಗೆ ಸಂಪನ್ನ : ಯುವಪೀಳಿಗೆಯಿಂದ ಉತ್ಸಾಹದೊಂದಿಗೆ ವಾಕಥಾನ್ 
    ಕರಾವಳಿ

    ನಮ್ಮ ರಾಷ್ಟ್ರದ ಹಿರಿಮೆ, ಭಾರತಕ್ಕಾಗಿ ನಡಿಗೆ ಸಂಪನ್ನ : ಯುವಪೀಳಿಗೆಯಿಂದ ಉತ್ಸಾಹದೊಂದಿಗೆ ವಾಕಥಾನ್ 

    August 8, 20262 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು :ನಮ್ಮ ರಾಷ್ಟ್ರದ ಹಿರಿಮೆ, ಗರಿಮೆಗಳ ಪುಸ್ತಕಗಳನ್ನು ಯುವಪೀಳಿಗೆ ಓದಬೇಕಾಗಿದೆ. ಆಗ ನಮ್ಮ ದೇಶದ ಸೈನಿಕರ ತ್ಯಾಗ, ಪರಿಶ್ರಮದ ಬಗ್ಗೆ ಅಭಿಮಾನ ಮೂಡುತ್ತದೆ. ನಮ್ಮ ವೀರ ಯೋಧರು ಗಡಿಯಲ್ಲಿ ಪ್ರಾಣದ ಹಂಗು ತೊರೆದು ನಮ್ಮನ್ನು ರಕ್ಷಿಸುವ ಕಾರಣ ನಾವೆಲ್ಲರೂ ನೆಮ್ಮದಿಯಾಗಿದ್ದೇವೆ. ಆದರೆ ಸೈನಿಕರ ಮಹತ್ವ ಗೊತ್ತಿಲ್ಲದವರು ಇತ್ತೀಚೆಗೆ ಜಂತರ್ ಮಂಥರ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಸೈನಿಕರನ್ನು ಅವಹೇಳನ ಮಾಡುತ್ತಾ ವಿಡಿಯೋ ಮಾಡಿದ್ದಾರೆ. ಅದನ್ನು ನೋಡಿದಾಗ ನಮ್ಮ ಯುವಜನಾಂಗ ಎತ್ತ ಸಾಗುತ್ತಿದೆ ಎನ್ನುವ ಆತಂಕ ಉಂಟಾಗುತ್ತದೆ ಎಂದು ಅಖಿಲ ಭಾರತೀಯ ಸಾಹಿತ್ಯ ಪರಿಷತ್ ನ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಲತೇಶ್ ಬಾಕ್ರಬೈಲ್ ಹೇಳಿದ್ದಾರೆ.

    ಅವರು ದಿಶಾ ಭಾರತ್, ಕೆನರಾ ಕಾಲೇಜು (ಸ್ವಾಯತ್ತ), ಎನ್ ಎಸ್ ಎಸ್ ಮಂಗಳೂರು ವಿಶ್ವವಿದ್ಯಾನಿಲಯ ಸಹಭಾಗಿತ್ವದಲ್ಲಿ ನಡೆದ ವಾಕಥಾನ್-ಭಾರತಕ್ಕಾಗಿ ನಡಿಗೆ ಕಾರ್ಯಕ್ರಮದ ಅಂಗವಾಗಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡುತ್ತಿದ್ದರು.

    ನಾವು ಆಧುನಿಕತೆಯ ಕಾಲಘಟ್ಟದಲ್ಲಿದ್ದೇವೆ. ಜಗತ್ತಿನ ವಿವಿಧ ರಾಷ್ಟ್ರಗಳೊಂದಿಗೆ ಸ್ಪರ್ಧಾತ್ಮಕವಾಗಿ ಇರುವುದು ತಪ್ಪಲ್ಲ. ಆದರೆ ನಮ್ಮತನವನ್ನು, ನಮ್ಮ ಸಂಸ್ಕೃತಿಯನ್ನು ಮರೆಯುವುದು ಸರಿಯಲ್ಲ. ವಿಶ್ವಗುರು ಭಾರತದ ಉತ್ತಮ ಶಿಷ್ಯರಾಗಿ, ಈ ದೇಶದಲ್ಲಿ ಹುಟ್ಟಿರುವ ಭಾಗ್ಯಪಡೆದಿರುವುದಕ್ಕಾಗಿ, ಅದನ್ನು ವ್ಯರ್ಥ ಮಾಡದೇ, ಭಾರತೀಯರಾಗಿ ಬದುಕೋಣ ಎಂದು ಹೇಳಿದರು.

    ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ನಟ, ನಿರ್ದೇಶಕ ಸ್ವರಾಜ್ ಶೆಟ್ಟಿ, ನಾವು ಯಾರನ್ನೂ ದ್ವೇಷಿಸದೇ ಎಲ್ಲರನ್ನೂ ಪ್ರೀತಿಸುವುದನ್ನು ಕಲಿಯಬೇಕಿದೆ. ಸ್ವಚ್ಚ ಭಾರತದ ಕನಸು ಈಡೇರಬೇಕಾದರೆ ನಾವು ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯದೇ, ನಮ್ಮ ಪರಿಸರವನ್ನು ಹಾಳು ಮಾಡದೇ ಬದುಕಬೇಕಾಗಿದೆ.

    ಅನೇಕ ಸಂಘ ಸಂಸ್ಥೆಗಳು ಸ್ವಚ್ಚತೆಯ ಅಭಿಯಾನದಲ್ಲಿ ತೊಡಗಿ ಮಾದರಿ ಕಾರ್ಯ ಮಾಡುತ್ತಿದ್ದಾರೆ. ಆದರೆ ಪರಿಸರ ಹಾಳಾಗಲು ಕೂಡ ನಾವೇ ಕಾರಣರಾಗಿದ್ದೇವೆ, ಅದನ್ನು ನಾವು ಅರ್ಥ ಮಾಡಿಕೊಳ್ಳಬೇಕಿದೆ ಎಂದು ಹೇಳಿದರು. ಸ್ವರಾಜ್ ಶೆಟ್ಟಿಯವರನ್ನು ಆಯೋಜಕರ ಪರವಾಗಿ ಸನ್ಮಾನಿಸಲಾಯಿತು.

    700 ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕೊಡಿಯಾಲ್ ಬೈಲ್ ನಲ್ಲಿರುವ ಕೆನರಾ ಕಾಲೇಜು ಆವರಣದಿಂದ ಹೊರಟು ಪಿವಿಎಸ್ ವೃತ್ತದ ಸಮೀಪದಿಂದ ಹಾದು ಟಿವಿ ರಮಣ್ ಪೈ ಸಭಾಂಗಣದ ತನಕ ವಾಕಥಾನ್ ಮಾಡಿ 80 ನೇ ಸ್ವಾತಂತ್ರ್ಯೋತ್ಸವ ಸಂಭ್ರಮಕ್ಕೆ ಪೂರ್ವಭಾವಿಯಾಗಿ ನಡೆದ ಈ ಕಾರ್ಯಕ್ರಮವನ್ನು ಸಾರ್ಥಕಗೊಳಿಸಿದರು.

    _Sathish Kapikad

    Share. Facebook Twitter Pinterest LinkedIn Email WhatsApp
    Previous Articleಐ ಓ ಸಿ ಎಲ್ ಎನ್ ಎಂ ಡಿ ಸಿ ವಿಲೀನಕ್ಕೆ ಆಗ್ರಹಿಸಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕುದುರೆಮುಖ ಶ್ರಮಶಕ್ತಿ ಸಂಘಟನೆ ಮನವಿ
    Next Article ಮಂಗಳೂರಿನಲ್ಲಿ ನಟ ಚೇತನ್ ಅಹಿಂಸಾ ಅವರಿಂದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚೆ 

    Related Posts

    ಕರಾವಳಿ

    ಕ್ರೀಡಾಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಎಂ.ಆರ್. ಪೂವಮ್ಮ ಅವರು ಪ್ರತಿಷ್ಠಿತ ರಾಜ್ಯಮಟ್ಟದ ‘ವಂದನಾ ಪ್ರಶಸ್ತಿ’ಗೆ ಆಯ್ಕೆ

    October 28, 2026
    ಕರಾವಳಿ

    ನ.3ರಿಂದ 15 : ಮಾಂಡ್ ಸೊಭಾಣ್ ಸಂಘಟನೆಯ ವತಿಯಿಂದ ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮ್ಮೇಳನ -ಸತತ 12 ದಿನ, 12 ಗಂಟೆ ಹಾಗೂ 12 ನಿಮಿಷಗಳ ನಿರಂತರ ಗಾಯನದ ಮೂಲಕ ಗಿನ್ನೆಸ್ ದಾಖಲೆಗೆ ಪ್ರಯತ್ನ

    October 28, 2026
    ಕರಾವಳಿ

    ಸತತ ಸೋಲುಗಳ ಹತಾಶೆಯಿಂದ ಪ್ರಧಾನಿಗಳ ತಂದೆಯವರನ್ನು ನಿಂದನೆ ಮಾಡಿರುವ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆ ಅವರ ಹಿರಿತನಕ್ಕೆ ಶೋಭೆಯಲ್ಲ: ಶಾಸಕ ಕಾಮತ್ 

    October 27, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.