Close Menu
SK Media NewsSK Media News
    What's Hot

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಸಂಭ್ರಮ : 108 ತೆಂಗಿನಕಾಯಿಗಳ ಮಹಾಗಣಪತಿ ಹೋಮ, ವೈಭವದ ಸಾಮೂಹಿಕ ರಂಗಪೂಜೆ

    September 11, 2026

    ಡಿ.ಫಾರ್ಮಾ, ಬಿ.ಫಾರ್ಮಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉದ್ಯೋಗಾವಕಾಶ : ಸೆ.15 ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    September 11, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಫ್ರೀಡಂ ಹಬ್ಬದಲ್ಲಿ ತುಳುನಾಡಿನ ಹೆಮ್ಮೆಯ ಮಗಳು ಪಂಚಮಿ ಮಾರೂರು ನೇತೃತ್ವದಲ್ಲಿ ಯಕ್ಷಗಾನ ಮತ್ತು ಭರತನಾಟ್ಯ ಪ್ರದರ್ಶನ
    ಕರಾವಳಿ

    ಫ್ರೀಡಂ ಹಬ್ಬದಲ್ಲಿ ತುಳುನಾಡಿನ ಹೆಮ್ಮೆಯ ಮಗಳು ಪಂಚಮಿ ಮಾರೂರು ನೇತೃತ್ವದಲ್ಲಿ ಯಕ್ಷಗಾನ ಮತ್ತು ಭರತನಾಟ್ಯ ಪ್ರದರ್ಶನ

    August 16, 20262 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಬೆಂಗಳೂರು / ಮಂಗಳೂರು ಫ್ರೀಡಂ ಹಬ್ಬದ ಅಂಗವಾಗಿ ನಡೆದ ಫ್ರೀಡಂ ಪರೇಡ್‌ನಲ್ಲಿ ತುಳುನಾಡಿನ ಹೆಮ್ಮೆಯ ಮಗಳು ಪಂಚಮಿ ಮಾರೂರು ಅವರ ನೇತೃತ್ವದಲ್ಲಿ ಯಕ್ಷ ತರಂಗ ತಂಡವು ಯಕ್ಷಗಾನ ಪ್ರದರ್ಶನ ನೀಡಿ ತುಳುನಾಡಿನ ಶ್ರೀಮಂತ ಕಲಾ ಪರಂಪರೆಯನ್ನು ಅನಾವರಣಗೊಳಿಸಿತು.

    ಅದರಲ್ಲೂ ವಿಶೇಷವಾಗಿ, ನಾಡಿನ ಶಕ್ತಿ ಕೇಂದ್ರವಾದ ವಿಧಾನಸೌಧದ ಮುಂಭಾಗದಲ್ಲಿ ನಿರ್ಮಿಸಲಾಗಿದ್ದ ಭವ್ಯ ವೇದಿಕೆಯಲ್ಲಿ ಯಕ್ಷಗಾನ ಪ್ರದರ್ಶನ ನೀಡಿದ್ದು ತುಳುನಾಡಿನ ಜನತೆಗೆ ಹೆಮ್ಮೆಯ ಕ್ಷಣವಾಯಿತು. ಇದೇ ಭವ್ಯ ವೇದಿಕೆಯಲ್ಲಿ ಪಂಚಮಿ ಮಾರೂರು ಅವರ ಶ್ರೀ ಪರಂಪರಾ ಹೆಜ್ಜೆಗಜ್ಜೆ ವೈ.ಪಿ. ಆರ್ಟ್ ಫೌಂಡೇಶನ್ (ರಿ.), ಬೆಂಗಳೂರು ತಂಡವು ತುಳು ಹಾಡಿಗೆ ಮನಮೋಹಕ ಭರತನಾಟ್ಯ ಪ್ರದರ್ಶನ ನೀಡಿ ಕಾರ್ಯಕ್ರಮದ ಸಾಂಸ್ಕೃತಿಕ ವೈಭವವನ್ನು ಮತ್ತಷ್ಟು ಹೆಚ್ಚಿಸಿತು.

    ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಬೃಹತ್ ಬೆಂಗಳೂರು ಅಭಿವೃದ್ಧಿ ಸಚಿವ- ಕೃಷ್ಣ ಬೈರೇಗೌಡ ಸೇರಿದಂತೆ ಹಲವು ಗಣ್ಯರು ಹಾಗೂ ಅಪಾರ ಸಂಖ್ಯೆಯ ಪ್ರೇಕ್ಷಕರ ಸಮ್ಮುಖದಲ್ಲಿ ಈ ಕಲಾ ಪ್ರದರ್ಶನಗಳು ನಡೆದವು. ನಾಡಿನ ಗಣ್ಯರ ಮುಂದೆ ತುಳುನಾಡಿನ ಯಕ್ಷಗಾನ ಕಲೆಯನ್ನು ಹೆಮ್ಮೆಯಿಂದ ಪ್ರಸ್ತುತಪಡಿಸಿದ ಪಂಚಮಿ ಮಾರೂರು ಮತ್ತು ಯಕ್ಷ ತರಂಗ ತಂಡದ ಸಾಧನೆ ವಿಶೇಷ ಮೆಚ್ಚುಗೆಗೆ ಪಾತ್ರವಾಯಿತು.

    ವಿಧಾನಸೌಧದ ಮುಂಭಾಗದ ಭವ್ಯ ವೇದಿಕೆಯಲ್ಲಿ ಒಂದೆಡೆ ತುಳುನಾಡಿನ ಹೆಮ್ಮೆಯ ಯಕ್ಷಗಾನ, ಮತ್ತೊಂದೆಡೆ ಭಾರತೀಯ ಶಾಸ್ತ್ರೀಯ ನೃತ್ಯ ಪರಂಪರೆಯ ಭರತನಾಟ್ಯ ಪ್ರದರ್ಶನಗೊಂಡಿದ್ದು ಕಲಾಭಿಮಾನಿಗಳಿಗೆ ಮತ್ತಷ್ಟು ಸಂತಸ ತಂದಿತು. ಪಂಚಮಿ ಮಾರೂರು ಅವರ ನೇತೃತ್ವದಲ್ಲಿ ಎರಡೂ ಕಲಾ ಪ್ರಕಾರಗಳು ಪ್ರತಿಷ್ಠಿತ ವೇದಿಕೆಯಲ್ಲಿ ಪ್ರದರ್ಶನಗೊಂಡಿರುವುದು ತುಳುನಾಡಿನ ಪಾಲಿಗೆ ಹೆಮ್ಮೆಯ ಸಂಗತಿಯಾಗಿದೆ.

    ಈ ಪ್ರತಿಷ್ಠಿತ ಅವಕಾಶವನ್ನು ಕಲಾವಿದರಿಗೆ ಒದಗಿಸಿ, ತುಳುನಾಡಿನ ಕಲೆ ಮತ್ತು ಸಂಸ್ಕೃತಿಯನ್ನು ರಾಜ್ಯಮಟ್ಟದ ಭವ್ಯ ವೇದಿಕೆಯಲ್ಲಿ ಪರಿಚಯಿಸಲು ಸಹಕರಿಸಿದ ಜೈ ತುಳುನಾಡು ಬೆಂಗಳೂರು (ರಿ.)ತಂಡ, ನಿಧೀಶ್ ಶೆಟ್ಟಿ ಹಾಗೂ ಯತೀಶ್ ಎಂ – (ಡಿಜಿಟಲ್ ಪಿ ಆರ್‌ ಓ) ಅವರಿಗೆ ಹೃದಯಪೂರ್ವಕ ಅಭಿನಂದನೆಗಳು ಹಾಗೂ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ಸಂಘಟಕರು ತಿಳಿಸಿದ್ದಾರೆ.

    ತುಳುನಾಡಿನ ಕಲೆ, ಸಂಸ್ಕೃತಿ ಮತ್ತು ಯಕ್ಷಗಾನದ ಹಿರಿಮೆಯನ್ನು ರಾಜ್ಯದ ರಾಜಧಾನಿಯಲ್ಲಿ ಎತ್ತಿಹಿಡಿದ ತುಳುನಾಡಿನ ಹೆಮ್ಮೆಯ ಮಗಳು ಪಂಚಮಿ ಮಾರೂರು ಅವರಿಗೆ ತುಳುನಾಡಿನ ಸಮಸ್ತ ಜನತೆಯ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳು ಹಾಗೂ ಶುಭಾಶಯಗಳು.

    _Sathish Kapikad

    Share. Facebook Twitter Pinterest LinkedIn Email WhatsApp
    Previous Articleಮಕ್ಕಳಲ್ಲಿ ಏಕಾಗ್ರತೆ ಬೆಳೆಸಲು ಚೆಸ್ ಸಹಕಾರಿ: ಕಿಂಗ್ಸ್ ಚೆಸ್ ಅಕಾಡೆಮಿಯಿಂದ ನಡೆದ ಫಿಡೆ ರೇಟಿಂಗ್ ಟೂರ್ನಿಗೆ ಚಾಲನೆ ನೀಡಿ ವಕೀಲ ರಾಘವೇಂದ್ರ ರಾವ್
    Next Article Dr. Thumbay Moideen Wins Global Leadership Award 2026, Gives Away ₹1.5 Crore Thumbay International Pathway Program  a 6-year MD pathway where students complete 3 years at Gulf Medical University in Ajman, followed by 3 years at a partner medical university in Uzbekistan, graduating with a full MD degree.

    Related Posts

    ಕರಾವಳಿ

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026
    ಕರಾವಳಿ

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಸಂಭ್ರಮ : 108 ತೆಂಗಿನಕಾಯಿಗಳ ಮಹಾಗಣಪತಿ ಹೋಮ, ವೈಭವದ ಸಾಮೂಹಿಕ ರಂಗಪೂಜೆ

    September 11, 2026
    ಕರಾವಳಿ

    ಡಿ.ಫಾರ್ಮಾ, ಬಿ.ಫಾರ್ಮಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉದ್ಯೋಗಾವಕಾಶ : ಸೆ.15 ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    September 11, 2026
    Add A Comment
    Leave A Reply Cancel Reply

    Top Posts

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.