
ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ವೇಣೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ರಿಕ್ಷಾದಲ್ಲಿ ಸ್ಕೂಲ್ ಟ್ರಿಪ್ ಮಾಡುತ್ತಿದ್ದ ಆರೋಪಿ ಜಲಾಲ್ ಅಲಿಯಾಸ್ ಜಲಾಲುದ್ದೀನ್ (35) ಎಂಬಾತನನ್ನು ಬಂಧಿಸಿರುವ ಪೊಲೀಸರು ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.
4 ಮಕ್ಕಳ ತಂದೆಯಾಗಿರುವ ಆರೋಪಿ ಜಲಾಲ್ ಬೆಳ್ತಂಗಡಿ ತಾಲೂಕಿನ ವೇಣೂರು ಠಾಣಾ ವ್ಯಾಪ್ತಿಯಲ್ಲಿ ಮನೆಯಲ್ಲಿ ಯಾರು ಇಲ್ಲದ ವೇಳೆ ತನ್ನದೇ ಮಗಳ ವಯಸ್ಸಿನ (14ರ ಹರೆಯದ) ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ವೇಣೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
_Sathish Kapikad


