Close Menu
SK Media NewsSK Media News
    What's Hot

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಸಂಭ್ರಮ : 108 ತೆಂಗಿನಕಾಯಿಗಳ ಮಹಾಗಣಪತಿ ಹೋಮ, ವೈಭವದ ಸಾಮೂಹಿಕ ರಂಗಪೂಜೆ

    September 11, 2026

    ಡಿ.ಫಾರ್ಮಾ, ಬಿ.ಫಾರ್ಮಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉದ್ಯೋಗಾವಕಾಶ : ಸೆ.15 ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    September 11, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » 21 ವರ್ಷದೊಳಗಿನವರಿಗೆ ಸಿಗರೇಟ್ ಮಾರಾಟ ನಿಷೇಧ : ಸಿಂಗಲ್ ಮಾರಾಟಕ್ಕೂ ಬ್ರೇಕ್ – ನಿರಂತರ ತಪಾಸಣೆಗೆ ಎಡಿಸಿ ಸೂಚನೆ
    ಕರಾವಳಿ

    21 ವರ್ಷದೊಳಗಿನವರಿಗೆ ಸಿಗರೇಟ್ ಮಾರಾಟ ನಿಷೇಧ : ಸಿಂಗಲ್ ಮಾರಾಟಕ್ಕೂ ಬ್ರೇಕ್ – ನಿರಂತರ ತಪಾಸಣೆಗೆ ಎಡಿಸಿ ಸೂಚನೆ

    August 28, 20262 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು,ಆ.28 (ಕ.ವಾ) : 21 ವರ್ಷದ ಒಳಗಿನ ವ್ಯಕ್ತಿಗಳಿಗೆ ಸಿಗರೇಟ್ ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲ ಎಂದು ಅಪರ ಜಿಲ್ಲಾಧಿಕಾರಿ ರಾಜು ಕೆ. ತಿಳಿಸಿದ್ದಾರೆ.

    ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯಿದೆ 2024ಕ್ಕೆ ತಂದಿರುವ ತಿದ್ದುಪಡಿ ಅನ್ವಯ 21 ವರ್ಷದೊಳಗಿನ ಯಾವುದೇ ವ್ಯಕ್ತಿಗಳಿಗೆ ಸಿಗರೇಟ್ ಅಥವಾ ತಂಬಾಕು ಉತ್ಪನ್ನಗಳನ್ನು ಮಾರುವುದನ್ನು ನಿಷೇಧಿಸಲಾಗಿದೆ. ಇದಲ್ಲದೆ, ಸಿಗರೇಟ್ ಚಿಲ್ಲರೆಯಾಗಿ ಮಾರುವುದನ್ನೂ ಹಾಗೂ ಶಾಲಾ-ಕಾಲೇಜುಗಳ 100 ಮೀಟರ್ ಅಂತರದಲ್ಲಿ ಇವುಗಳ ಮಾರಾಟ ನಿಷೇಧಿಸಲಾಗಿದೆ. ಅಂಗಡಿಗಳಲ್ಲಿ ಇವುಗಳನ್ನು ಮಾರಾಟ ಮಾಡುವವರಿಗೂ 21 ವರ್ಷ ಆಗಿರಬೇಕು ಎಂದು ಅವರು ತಿಳಿಸಿದರು.

    ಈ ಕಾಯಿದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಎಲ್ಲ ನಗರ ಸ್ಥಳೀಯ ಸಂಸ್ಥೆ, ಗ್ರಾಮ ಪಂಚಾಯತ್‍ಗಳು ಅಂಗಡಿ, ಹೋಟೆಲ್, ಕೆಫೆಗಳಲ್ಲಿ ನಿರಂತರ ತಪಾಸಣೆ ನಡೆಸಬೇಕು. ಅಪ್ರಾಪ್ತರಿಗೆ ಸಿಗರೇಟ್ ಮಾರಾಟ ಕಂಡುಬಂದರೆ, ಅವುಗಳ ಲೈಸನ್ಸ್ ರದ್ದು ಮಾಡಬೇಕು. ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಆರೋಗ್ಯ ಇಲಾಖೆ, ನಗರ ಸ್ಥಳೀಯ ಸಂಸ್ಥೆ/ಗ್ರಾಮ ಪಂಚಾಯತ್ ಮತ್ತು ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಲು ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

    ಸಿಗರೇಟ್‍ಗಳನ್ನು ಇಡೀ ಪ್ಯಾಕ್‍ನಲ್ಲಿ ಮಾರಾಟ ಮಾಡಬೇಕು. ಪ್ಯಾಕ್ ತೆರೆದು ಸಿಂಗಲ್ ಆಗಿ ಸಿಗರೇಟ್ ಮಾರಲು ಕಾನೂನಿನಲ್ಲಿ ಅವಕಾಶ ಇಲ್ಲ. ಸಿಗರೇಟ್ ಸೇದುವವರಿಗೆ ಅನುಕೂಲವಾಗಲು ಲೈಟರ್ ಅಥವಾ ಬೆಂಕಿಪೆಟ್ಟಿಗೆ ಇಡುವವವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಎಳೆಯುವುದು, ತಂಬಾಕು ತಿಂದು ಉಗಿಯುವುದು ಕಂಡುಬಂದರೆ ಅವರಿಗೆ ನಿಯಮಾನುಸಾರ ರೂ.1000 ದಂಡ ವಿಧಿಸಿ, ಎಚ್ಚರಿಕೆ ನೀಡಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಆಗಿಂದಾಗ್ಗೆ ಕಾರ್ಯಾಚರಣೆ ನಡೆಸಿ ತಪಾಸಣೆ ನಡೆಸಬೇಕು. ಈ ಬಗ್ಗೆ ಮುಂದಿನ ಸಭೆಯಲ್ಲಿ ವರದಿ ನೀಡುವಂತೆ ಅಪರ ಜಿಲ್ಲಾಧಿಕಾರಿಗಳು ನಿರ್ದೇಶಿಸಿದರು.

    ಶಾಲೆ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಬ್ಯಾಗ್‍ಗಳನ್ನು ಆಗಿಂದಾಗ್ಗೆ ಪರಿಶೀಲಿಸುವಂತೆ ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆಗೆ ಸೂಚಿಸಿದ ಅವರು, ಶಿಕ್ಷಣ ಸಂಸ್ಥೆಗಳ 100 ಮೀಟರ್ ವ್ಯಾಪ್ತಿಯೊಳಗಿರುವ ಅಂಗಡಿಗಳಲ್ಲಿ ಸಿಗರೇಟ್-ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡದಂತೆ ನಿಗಾ ವಹಿಸಬೇಕು. ಈ ಬಗ್ಗೆ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಎಸ್‍ಡಿಎಂಸಿಗಳು ‘ತಂಬಾಕು ಮುಕ್ತ ಶಾಲೆ’ಗಳೆಂದು ಪ್ರತಿ ತಿಂಗಳು ದೃಢಢೀಕರಣ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿ ರಾಜು ತಿಳಿಸಿದರು.

    ನಗರ ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯತ್‍ಗಳು ಧೂಮಪಾನ ವಿರುದ್ಧ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಸಬೇಕು. ಅಂಗಡಿ, ಹೋಟೆಲ್‍ಗಳಿಗೆ ಲೈಸನ್ಸ್ ನೀಡುವಾಗ ತಂಬಾಕು ನಿಯಂತ್ರಣ ಕಾಯಿದೆಯ ಷರತ್ತು ಮತ್ತು ನಿಬಂಧನೆಗಳನ್ನು ನಮೂದಿಸಬೇಕು ಎಂದು ಅವರು ತಿಳಿಸಿದರು.

    ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಆರ್.ತಿಮ್ಮಯ್ಯ, ಅಪರ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಭೂಮಿರೆಡ್ಡಿ, ಎಸಿಪಿ ನಝ್ಮಾ ಫಾರೂಖಿ, ವೆನ್‍ಲಾಕ್ ಆಧೀಕ್ಷಕ ಡಾ. ಶಿವಪ್ರಕಾಶ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಅಧಿಕಾರಿ ಡಾ.ನವೀನ್‍ಚಂದ್ರ ಕುಲಾಲ್ ಮತ್ತಿತರರು ಉಪಸ್ಥಿತರಿದ್ದರು.

    _Sathish Kapikad

    Share. Facebook Twitter Pinterest LinkedIn Email WhatsApp
    Previous Articleಮಾತಾ ಅಮೃತಾನಂದಮಯಿ ಮಠದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ
    Next Article ರಾಷ್ಟ್ರೀಯ ಮಕ್ಕಳ ಉತ್ಸವ : ಸೆ. 4ರಂದು ಶ್ರೀ ಕ್ಷೇತ್ರ ಕದ್ರಿಯಲ್ಲಿ 44ನೇ ವರ್ಷದ ಶ್ರೀಕೃಷ್ಣ ವೇಷ ಸ್ಪರ್ಧೆ – 44 ವಿಭಾಗಗಳು, 12 ವೇದಿಕೆಗಳು, ಏಕಕಾಲದಲ್ಲಿ ಸ್ಪರ್ಧೆ

    Related Posts

    ಕರಾವಳಿ

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026
    ಕರಾವಳಿ

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಸಂಭ್ರಮ : 108 ತೆಂಗಿನಕಾಯಿಗಳ ಮಹಾಗಣಪತಿ ಹೋಮ, ವೈಭವದ ಸಾಮೂಹಿಕ ರಂಗಪೂಜೆ

    September 11, 2026
    ಕರಾವಳಿ

    ಡಿ.ಫಾರ್ಮಾ, ಬಿ.ಫಾರ್ಮಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉದ್ಯೋಗಾವಕಾಶ : ಸೆ.15 ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    September 11, 2026
    Add A Comment
    Leave A Reply Cancel Reply

    Top Posts

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.