
ಮಂಗಳೂರು, ಸೆ.04(ಕ.ವಾ):- ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸೆಪ್ಟೆಂಬರ್ 4 ರಿಂದ 6 ರವರೆಗೆ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸಾರ್ವಜನಿಕ ಮೊಸರುಕುಡಿಕೆ, ಮೆರವಣಿಗೆ ಮತ್ತು ಕಾರ್ಯಕ್ರಮಗಳು ನಡೆಯಲಿದೆ.
ಈ ಸಮಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಈ ಸಮಯದಲ್ಲಿ ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿ ಅಹಿತಕರ ಘಟನೆಗಳಿಗೆ ಕಾರಣರಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಸಾಧ್ಯತೆಗಳಿರುತ್ತದೆ.
ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಸೆಪ್ಟೆಂಬರ್ 4ರಿಂದ 6ರ ವರೆಗೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಅಧೀಕ್ಷಕರ ವ್ಯಾಪ್ತಿಯಲ್ಲಿ ಬರುವ ಬಾರ್ ಮತ್ತು ವೈನ್ ಶಾಪ್‍ಗಳಲ್ಲಿ, ಮದ್ಯದಂಗಡಿಗಳಲ್ಲಿ ಮತ್ತು ಯಾವುದೇ ರೀತಿಯ ಮದ್ಯವನ್ನು ಮಾರಾಟ ಮಾಡದಂತೆ ಎಲ್ಲಾ ರೀತಿಯ ಮದ್ಯದಂಗಡಿಗಳನ್ನು ಬಂದ್ ಮಾಡಲು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶಿಸಿದ್ದಾರೆ.
_Sathish Kapikad