
(ಕಡತ ಚಿತ್ರ)
ಮಂಗಳೂರು, ಸೆ.06(ಕ.ವಾ):- ಸಹಯೋಗ್ ಮಲ್ಟಿಸ್ಟೇಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಕಂಪೆನಿಯ ವತಿಯಿಂದ ಮಂಗಳೂರಿನಲ್ಲಿ ಖಾಲಿ ಇರುವ ಬಿಸಿನೆಸ್ ಡೆವಲಪ್‍ಮೆಂಟ್ ಎಕ್ಸಿಕ್ಯೂಟಿವ್ ಹಾಗೂ ಬ್ಲಾಕ್ ಡೆವಲಪ್‍ಮೆಂಟ್ ಆಫೀಸರ್ ಹುದ್ದೆಗಳಿಗೆ ನೇರ ಸಂದರ್ಶನವನ್ನು ಸೆಪ್ಟೆಂಬರ್ 9ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1:30 ರವರೆಗೆ ಪಡೀಲ್ ಜಿಲ್ಲಾಡಳಿತ ಕಟ್ಟಡದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ.
ನೇರ ಸಂದರ್ಶನದಲ್ಲಿ ಪಿ.ಯು.ಸಿ. ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿರುವ ದಕ್ಷಿಣ ಕನ್ನಡ ಜಿಲ್ಲೆಯ ಅಭ್ಯರ್ಥಿಗಳು ಸ್ವ-ವಿವರವುಳ್ಳ ಬಯೋಡೇಟಾ ದೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಂಗಳೂರು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
_Sathish Kapikad


