Close Menu
SK Media NewsSK Media News
    What's Hot

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಸಂಭ್ರಮ : 108 ತೆಂಗಿನಕಾಯಿಗಳ ಮಹಾಗಣಪತಿ ಹೋಮ, ವೈಭವದ ಸಾಮೂಹಿಕ ರಂಗಪೂಜೆ

    September 11, 2026

    ಡಿ.ಫಾರ್ಮಾ, ಬಿ.ಫಾರ್ಮಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉದ್ಯೋಗಾವಕಾಶ : ಸೆ.15 ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    September 11, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಬಂಟ್ಸ್ ಹಾಸ್ಟೆಲ್ ನಲ್ಲಿ ಸೆ. 14ರಿಂದ 16ರವರೆಗೆ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ – ತೆನೆಹಬ್ಬ, ಅಷ್ಟೋತ್ತರ ಸಹಸ್ರ ನಾರಿಕೇಳ ಮಹಾಗಣಯಾಗ – ಸಾಧಕರಿಗೆ ಸನ್ಮಾನ
    ಕರಾವಳಿ

    ಬಂಟ್ಸ್ ಹಾಸ್ಟೆಲ್ ನಲ್ಲಿ ಸೆ. 14ರಿಂದ 16ರವರೆಗೆ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ – ತೆನೆಹಬ್ಬ, ಅಷ್ಟೋತ್ತರ ಸಹಸ್ರ ನಾರಿಕೇಳ ಮಹಾಗಣಯಾಗ – ಸಾಧಕರಿಗೆ ಸನ್ಮಾನ

    September 8, 20262 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು, ಸೆಪ್ಟೆಂಬರ್.08: ಬಂಟರ ಯಾನೆ ನಾಡವರ ಮಾತೃಸಂಘ, ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಬಂಟರ ಸಂಘಗಳ ಹಾಗೂ ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ, ತೆನೆಹಬ್ಬ, ಅಷ್ಟೋತ್ತರ ಸಹಸ್ರ ನಾರಿಕೇಳ, ಮಹಾಗಣಯಾಗವು ಸೆಪ್ಟೆಂಬರ್ ತಿಂಗಳ ತಾರೀಕು 14ರಿಂದ 16ರವರೆಗೆ ಮಂಗಳೂರಿನ “ಓಂಕಾರ ನಗರ” ಬಂಟ್ಸ್ ಹಾಸ್ಟೇಲ್‌ನಲ್ಲಿ ಜರಗಲಿದೆ ಎಂದು ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನದ ಮೇನೇಜಿಂಗ್ ಟ್ರಸ್ಟಿ ಶ್ರೀ ಅಜಿತ್ ಕುಮಾರ್ ರೈ ಮಾಲಾಡಿ ತಿಳಿಸಿದರು.

    ನಗರದಲ್ಲಿಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ದಿನಾಂಕ 13.09.2026ನೇ ಆದಿತ್ಯವಾರ ಸಾಯಂಕಾಲ 5.00 ಗಂಟೆಗೆ ಶರವು ದೇವಸ್ಥಾನದ ಬಳಿಯಿರುವ ರಾಧಾಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಿ ಶ್ರೀ ರಾಮದಾಸ್ ಆಚಾರ್ಯರ ಶಿಷ್ಯರಿಂದ ರಚಿಸಲ್ಪಟ್ಟ ಶ್ರೀ ಸಿದ್ಧಿವಿನಾಯಕ ದೇವರ ವಿಗ್ರಹವನ್ನು ಬಂಟ್ಸ್ ಹಾಸ್ಟೇಲಿನ ಓಂಕಾರ ನಗರಕ್ಕೆ ಬರಮಾಡಿಕೊಳ್ಳುವುದು.

    ದಿನಾಂಕ 14.09.2026ನೇ ಸೋಮವಾರ ಬೆಳಿಗ್ಗೆ 8.00 ಗಂಟೆಗೆ ಸ್ಥಳ ಶುದ್ಧಿ ಮೂರ್ತಿ ಪ್ರತಿಷ್ಠೆ ನಡೆದು, 9.00 ಗಂಟೆಗೆ ಧ್ವಜಾರೋಹಣ, ಗಣೇಶೋತ್ಸವ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ತೆನೆ ವಿತರಣೆ ಕಾರ್ಯಕ್ರಮ ನಡೆಯಲಿರುವುದು ಎಂದರು.

    ಸಾಯಂಕಾಲ ಗಂಟೆ 3.00ರಿಂದ ಪಾಂಚಜನ್ಯ ಪ್ರತಿಷ್ಠಾನ ಕುಡ್ಲ ಇದರ ಕಲಾವಿದರಿಂದ ‘ಶ್ರೀ ಮಂಗಳಪುರದ ಮಂಗಳಾಂಬಿಕೆ’ ಪೌರಾಣಿಕ ನೃತ್ಯ ನಾಟಕ ನಡೆಯಲಿರುವುದು.

    ಸಂಜೆ 5.00 ರಿಂದ 7.00 ರ ತನಕ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿರುವುದು. ಈ ಸಂದರ್ಭದಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಯನ್ನು ಮಾಡಿದ ಸಾಧಕರನ್ನು ಸನ್ಮಾನಿಸಲಾಗುವುದು.

    ರಾತ್ರಿ 7.30ರಿಂದ ರಂಗಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ 8.00ರಿಂದ ‘ಬಂಟಕಲಾ ಸಂಗಮ-2026’, ವಿವಿಧ ಬಂಟರ ಸಂಘಗಳಿಂದ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ಜರಗಲಿರುವುದು.

    ದಿನಾಂಕ 15.09.2026ನೇ ಮಂಗಳವಾರ ಬೆಳಿಗ್ಗೆ 11.30ರಿಂದ ಮೂಡಪ್ಪ ಸೇವೆ, ಮಹಾಪೂಜೆ, ಪ್ರಸಾದ ವಿತರಣೆ ನಡೆದು, ಸಾಯಂಕಾಲ 4.00ರಿಂದ ಅಷ್ಟೋತ್ತರ ಸಹಸ್ರನಾರಿಕೇಳ ಮಹಾಗಣಯಾಗದ ಯಾಗ ಶಾಲಾ ಪ್ರವೇಶ, ಗಣಪತಿ ಪೂಜೆ, ಪುಣ್ಯಾಹ, ಭೂಶುದ್ಧಿ, ವಾಸ್ತು ರಾಕ್ಷೋಘ್ನ ಹವನ, ಮಹಾಪೀಠದಲ್ಲಿ ಕಲಶ ಸ್ಥಾಪನೆ, ಮಹಾಗಣಯಾಗದ ಸೇವಾರ್ಥಿಗಳಿಂದ ಸಂಕಲ್ಪ. ಸಂಜೆ 5.00ರಿಂದ 7.00ರವರೆಗೆ ಧಾರ್ಮಿಕ ಸಭೆ. ಈ ಸಭೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಯನ್ನು ಮಾಡಿದ ಸಾಧಕರನ್ನು ಸನ್ಮಾನಿಸಲಾಗುವುದು.

    ರಾತ್ರಿ 7.30ರಿಂದ ಹೂವಿನ ಪೂಜೆ, ರಂಗಪೂಜೆ, ಮಹಾಪೂಜೆ ನಡೆದು ಪ್ರಸಾದ ವಿತರಣೆ ನಡೆಯುವುದು. 8.00ರಿಂದ ಸ್ವರಲಯ ಸಿಂಪೋನಿ ಕಲಾಶಾಲೆಯ ಸಂಗೀತ ಸಂಜೆ ಕಾರ್ಯಕ್ರಮ ಜರುಗಲಿರುವುದು.

    ದಿನಾಂಕ 16.09.2026ನೇ ಬುಧವಾರ ಬೆಳಿಗ್ಗೆ 8.30ರಿಂದ ಅಷ್ಟೋತ್ತರ ಸಹಸ್ರ ನಾರಿಕೇಳ ಮಹಾಗಣಯಾಗ ಆರಂಭಗೊಂಡು 11.00 ಗಂಟೆಗೆ ಯಾಗದ ಪೂರ್ಣಾಹುತಿ, ಮಹಾಪೂಜೆ, ಪ್ರಸಾದ ವಿತರಣೆ ನಡೆದು ಮಧ್ಯಾಹ್ನ 12.30ಕ್ಕೆ ಮಹಾ ಅನ್ನಸಂತರ್ಪಣೆ ನಡೆಯಲಿರುವುದು ಎಂದು ಶ್ರೀ ಅಜಿತ್ ಕುಮಾರ್ ರೈ ಮಾಲಾಡಿಯವರು ವಿವರ ನೀಡಿದರು.

    ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನದ ಟ್ರಸ್ಟಿ ಡಾ. ಆಶಾಜ್ಯೋತಿ ರೈ ಬಂಬ್ರಾಣ ಅವರು ಮಾತನಾಡಿ, ಸಂಜೆ 3.30ಕ್ಕೆ ಗಣ್ಯರ ಉಪಸ್ಥಿತಿಯಲ್ಲಿ ವಿಸರ್ಜನ ಪೂರ್ವ ಪೂಜೆ ನಡೆದು ಗಣ್ಯರ ಉಪಸ್ಥಿತಿಯಲ್ಲಿ ಶೋಭಾಯಾತ್ರೆಗೆ ಚಾಲನೆ ನೀಡಲಾಗುವುದು.

    ಶೋಭಾಯಾತ್ರೆಯು ‘ಓಂಕಾರನಗರ’ದಿಂದ ಶ್ರದ್ಧಾಭಕ್ತಿಯಿಂದ ಜಿಲ್ಲೆಯ ವಿವಿಧ ಭಜನಾ ತಂಡಗಳ ಸೇವೆಯೊಂದಿಗೆ ಬಂಟ್ಸ್ ಹಾಸ್ಟೇಲ್ ಸರ್ಕಲ್, ಪಿ.ವಿ.ಎಸ್ ವೃತ್ತ, ನ್ಯೂಚಿತ್ರಾ ಟಾಕೀಸ್, ರಥಬೀದಿ, ವೆಂಕಟರಮಣ ದೇವಸ್ಥಾನದ ರಸ್ತೆಯಲ್ಲಿ ಸಾಗಿ ಶ್ರೀ ಮಹಾಮ್ಮಾಯಿ ದೇವಸ್ಥಾನದ ಕೆರೆಯಲ್ಲಿ ವಿಸರ್ಜಿಸಲಾಗುವುದು.

    ಈ ಮೂರು ದಿನಗಳಲ್ಲಿ ಗಣೇಶೋತ್ಸವದ ವೇದಿಕೆಯಲ್ಲಿ ವಿವಿಧ ಭಜನಾ ತಂಡಗಳಿಂದ ಭಜನ ಸೇವೆ ನಡೆಯಲಿರುವುದು.

    ಸಾರ್ವಜನಿಕರು ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಶ್ರೀ ದೇವರ ಪ್ರಸಾದವನ್ನು ಸ್ವೀಕರಿಸುವಂತೆ ವಿನಂತಿಸುತ್ತಿದ್ದೇವೆ ಎಂದು ತಿಳಿಸಿದರು.

    ಪತ್ರಿಕಾ ಗೋಷ್ಠಿಯಲ್ಲಿ  ಶ್ರೀ ಹೇಮನಾಥ ಶೆಟ್ಟಿ ಕಾವು, ಉಪಾಧ್ಯಕ್ಷರು, ಬಂಟರ ಯಾನೆ ನಾಡವರ ಮಾತೃಸಂಘ,  ಶ್ರೀ ಎಮ್. ಕರುಣಾಕರ ಶೆಟ್ಟಿ, ಪ್ರಧಾನ ಕಾರ್ಯದರ್ಶಿ, ಬಂಟರ ಯಾನೆ ನಾಡವರ ಮಾತೃಸಂಘ, ಶ್ರೀ ಪದ್ಮನಾಭ ಶೆಟ್ಟಿ ಪುಂಚಮೆ, ಜೊತೆ ಕಾರ್ಯದರ್ಶಿ, ಬಂಟರ ಯಾನೆ ನಾಡವರ ಮಾತೃಸಂಘ,  ಶ್ರೀ ರವಿರಾಜ್ ಶೆಟ್ಟಿ, ಟ್ರಸ್ಟಿ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ,  ಶ್ರೀ ಜಯಶೀಲ ಅಡ್ಯಂತಾಯ, ಅಧ್ಯಕ್ಷರು, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ,  ಶ್ರೀ ಸದಾಶಿವ ಶೆಟ್ಟಿ ಬಿಜೈ, ಪ್ರಧಾನ ಕಾರ್ಯದರ್ಶಿ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮುಂತಾದವರು ಉಪಸ್ಥಿತರಿದ್ದರು.

    _ Sathish Kapikad 

    Share. Facebook Twitter Pinterest LinkedIn Email WhatsApp
    Previous ArticleGulf Medical University Commences 2026–2027 Academic Year, Reinforcing Its Commitment to Excellence in Health Professions Education
    Next Article ಲಿಯೋ ಮಾರ್ಟ್, ಸ್ವಿಗ್ಗಿ, ಇನ್ಸ್ಟಾ ಮಾರ್ಟ್ ಸೇರಿದಂತೆ ಬೆಂಗಳೂರಿನ ಹಲವು ಆಹಾರ ಮಳಿಗೆಗಳ ಮೇಲೆ ದಾಳಿ : ಕಳಪೆ ವಸ್ತುಗಳ ವಶ 

    Related Posts

    ಕರಾವಳಿ

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026
    ಕರಾವಳಿ

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಸಂಭ್ರಮ : 108 ತೆಂಗಿನಕಾಯಿಗಳ ಮಹಾಗಣಪತಿ ಹೋಮ, ವೈಭವದ ಸಾಮೂಹಿಕ ರಂಗಪೂಜೆ

    September 11, 2026
    ಕರಾವಳಿ

    ಡಿ.ಫಾರ್ಮಾ, ಬಿ.ಫಾರ್ಮಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉದ್ಯೋಗಾವಕಾಶ : ಸೆ.15 ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    September 11, 2026
    Add A Comment
    Leave A Reply Cancel Reply

    Top Posts

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.