
ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮೂಡ) ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಸನ್ಮಾನ್ಯ ಶ್ರೀ ಸಂತೋಷ್ ಕುಮಾರ್ ಶೆಟ್ಟಿ ಅವರು, ಕಾವೂರ್ ಕುಂಜಾತ್ ಬೈಲ್ ವ್ಯಾಪ್ತಿಯ ಮೂಡ ನಿವೇಶನಗಳ ಪ್ರಸ್ತುತ ಸ್ಥಿತಿಗತಿ, ಅಭಿವೃದ್ಧಿ ಕಾಮಗಾರಿಗಳು ಹಾಗೂ ಸಾರ್ವಜನಿಕರಿಗೆ ನಿವೇಶನ ಹಂಚಿಕೆ/ಬಳಕೆಗೆ ಸಂಬಂಧಿಸಿದ ವಿಚಾರಗಳನ್ನು ಪರಿಶೀಲಿಸುವ ಉದ್ದೇಶದಿಂದ ಮೂಡ ಆಯುಕ್ತರು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ, ಸ್ಥಳ ವೀಕ್ಷಣೆ ನಡೆಸಿದರು.




ಈ ಸಂದರ್ಭದಲ್ಲಿ ನಿವೇಶನಗಳ ಅಭಿವೃದ್ಧಿ, ಮೂಲಸೌಕರ್ಯ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
_Sathish Kapikad


