ಮಂಗಳೂರು : ಬಹು ನಿರೀಕ್ಷಿತ ವಿವಿಧ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರುಗಳ ಪಟ್ಟಿ ಬಿಡುಗಡೆಯಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಗೆ ಪದ್ಮರಾಜ್ ರಾಮಯ್ಯ ರವರನ್ನು ನೂತನ ಅಧ್ಯಕ್ಷರಾಗಿ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಜಿ ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ.

ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರು ನೇಮಕವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯ ಹೊಸ ನಾಯಕತ್ವಕ್ಕೆ ಮಣೆ ನೀಡಿದ್ದು, ಕಳೆದ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿಲ್ಲವ ಸಮಾಜದ ನಾಯಕ ಪದ್ಮರಾಜ್ ರಾಮಯ್ಯ ರವರನ್ನು ಆಯ್ಕೆ ಮಾಡಿದೆ.

ದ. ಕ. ಜಿಲ್ಲೆ ಹಾಗೂ ಉಡುಪಿ ಜಿಲ್ಲೆಗಳಲ್ಲಿ 20ಕ್ಕೂ ಅಧಿಕ ಮಂದಿ ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಗಳಿದ್ದರೂ, ಇದೀಗ ನೂತನ ಅಧ್ಯಕ್ಷರ ನೇಮಕದೊಂದಿಗೆ, ಕಾರ್ಯಕರ್ತರ ಕುತೂಹಲಕ್ಕೆ ತೆರೆ ಬಿದ್ದಿದೆ.

_Sathish Kapikad 

Share.
Leave A Reply

Exit mobile version