
ಮಂಗಳೂರು, ಸೆಪ್ಟೆಂಬರ್.19: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಇಂದು ಬೆಳಗ್ಗೆ ಮಂಗಳೂರು ಮೀನುಗಾರಿಕಾ ಧಕ್ಕೆಗೆ ಹಠಾತ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಮಂಗಳೂರು ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಬೆಳಗ್ಗೆ ನಗರದ ಮೀನುಗಾರಿಕಾ ಧಕ್ಕೆಗೆ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಗಳು ಹಾಗೂ ಮೀನುಗಾರಿಕಾ ಚಟುವಟಿಕೆಗಳನ್ನು ಪರಿಶೀಲಿಸಿದರು.


ಈ ಸಂದರ್ಭ ಮೀನುಗಾರಿಕಾ ಧಕ್ಕೆಯಲ್ಲಿನ ಮೂಲಸೌಕರ್ಯ, ಮೀನುಗಾರರ ಸಮಸ್ಯೆಗಳು ಹಾಗೂ ಬಂದರು ಪ್ರದೇಶದ ಪರಿಸ್ಥಿತಿಯ ಕುರಿತು ಮುಖ್ಯಮಂತ್ರಿಗಳು ಮಾಹಿತಿ ಪಡೆದುಕೊಂಡರು.



ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಸೇರಿದಂತೆ ಕಾಂಗ್ರೆಸ್ ಮುಖಂಡರು, ಸ್ಥಳೀಯ ಮೀನುಗಾರರ ಮುಖಂಡರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
_Sathish Kapikad


