ಮಂಗಳೂರು, ಸೆಪ್ಟೆಂಬರ್.19: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಹಿರಿಯ ಮಾರ್ಗದರ್ಶಕರಾದ ಶ್ರೀ ಬಿ. ಜನಾರ್ಧನ ಪೂಜಾರಿ ಅವರ ನೇತೃತ್ವದಲ್ಲಿ ಅಕ್ಟೋಬ‌ರ್ 11ರಿಂದ 21ರವರೆಗೆ ಅತ್ಯಂತ ವೈಭವದಿಂದ ಜರುಗಲಿರುವ ‘ಮಂಗಳೂರು ದಸರಾ ಮಹೋತ್ಸವ’ವನ್ನು ಸುವ್ಯವಸ್ಥಿತವಾಗಿ ಆಚರಿಸುವ ಸಲುವಾಗಿ, *ಸೆಪ್ಟೆಂಬರ್ 20ರ ಭಾನುವಾರ ಬೆಳಗ್ಗೆ 11:00 ಗಂಟೆಗೆ ಕುದ್ರೋಳಿ ಶ್ರೀ ಕ್ಷೇತ್ರದ ಸಭಾಂಗಣದಲ್ಲಿ* ಪೂರ್ವಭಾವಿ ಸಮಾಲೋಚನಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.

ದಸರಾ ಸಂಭ್ರಮವನ್ನು ಯಶಸ್ವಿಗೊಳಿಸುವ ಪವಿತ್ರ ಕೈಂಕರ್ಯದಲ್ಲಿ ಸಮಸ್ತ ಭಕ್ತಾದಿಗಳು, ಊರ-ಪರವೂರ ಹಿತೈಷಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ತಮ್ಮ ಅಮೂಲ್ಯ ಸಲಹೆ-ಸಹಕಾರಗಳನ್ನು ನೀಡಿ ಈ ಸಭೆಯನ್ನು ಯಶಸ್ವಿಗೊಳಿಸಬೇಕಾಗಿ ಭಕ್ತಿಪೂರ್ವಕವಾಗಿ ವಿನಂತಿಸುತ್ತಿದ್ದೇವೆ ಎಂದು ಅಧ್ಯಕ್ಷರು ಮತ್ತು ಸದಸ್ಯರು
ಆಡಳಿತ ಮಂಡಳಿ, ಅಭಿವೃದ್ಧಿ ಸಮಿತಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಇವರ ಪ್ರಕಟಣೆ ತಿಳಿಸಿದೆ.

_Sathish Kapikad 

Share.
Leave A Reply

Exit mobile version