Close Menu
SK Media NewsSK Media News
    What's Hot

    ಸತತ ಸೋಲುಗಳ ಹತಾಶೆಯಿಂದ ಪ್ರಧಾನಿಗಳ ತಂದೆಯವರನ್ನು ನಿಂದನೆ ಮಾಡಿರುವ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆ ಅವರ ಹಿರಿತನಕ್ಕೆ ಶೋಭೆಯಲ್ಲ: ಶಾಸಕ ಕಾಮತ್ 

    October 27, 2026

    ನವಂಬರ್ 1ರಂದು ಸುರತ್ಕಲ್ ಬಂಟರ ಭವನದಲ್ಲಿ ರಂಗುರಂಗಿನ ರಂಗೋತ್ಸವ – ಸಂಗೀತ ಗಾನಸುಧೆ – ಶ್ರೀಮತಿ ಸತ್ಯಭಾಮ ನಾಟಕ : ಲಕ್ಷ್ಮಣ್ ಕುಮಾರ್ ಮಲ್ಲೂರ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ

    October 27, 2026

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಸುರತ್ಕಲ್ ಬಂಟರ ಭವನದಲ್ಲಿ ಪ್ರಪ್ರಥಮ ಬಾರಿಗೆ ಸಸ್ಯೋತ್ಸವ, ಆಹಾರ ಮೇಳ ಹಾಗೂ ಹೋಳಿಗೆ ಹಬ್ಬ ಕಾರ್ಯಕ್ರಮಕ್ಕೆ ಚಾಲನೆ 
    ಕರಾವಳಿ

    ಸುರತ್ಕಲ್ ಬಂಟರ ಭವನದಲ್ಲಿ ಪ್ರಪ್ರಥಮ ಬಾರಿಗೆ ಸಸ್ಯೋತ್ಸವ, ಆಹಾರ ಮೇಳ ಹಾಗೂ ಹೋಳಿಗೆ ಹಬ್ಬ ಕಾರ್ಯಕ್ರಮಕ್ಕೆ ಚಾಲನೆ 

    September 25, 20262 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಸುರತ್ಕಲ್: ರೈತ ಕುಡ್ಲ ಪ್ರತಿಷ್ಠಾನ ನೇತೃತ್ವದಲ್ಲಿ ಬಂಟರ ಸಂಘ (ರಿ) ಸುರತ್ಕಲ್ ಮತ್ತು ಲಯನ್ಸ್ ಕ್ಲಬ್ ಸುರತ್ಕಲ್ ಇವುಗಳ ಸಹಯೋಗದೊಂದಿಗೆ

    ಪ್ರಪ್ರಥಮ ಬಾರಿಗೆ ಸಸ್ಯೋತ್ಸವ, ಆಹಾರ ಮೇಳ ಹಾಗೂ ಹೋಳಿಗೆ ಹಬ್ಬ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ಬೆಳಗ್ಗೆ ಸುರತ್ಕಲ್ ಬಂಟರ ಭವನದಲ್ಲಿ ಜರುಗಿತು.

    ಕಾರ್ಯಕ್ರಮವನ್ನು ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ ನ ಅಧ್ಯಕ್ಷ ರಮೇಶ್ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿ ಬಂಟರ ಭವನದಲ್ಲಿ ಪ್ರಫ್ರಥಮ ಬಾರಿಗೆ ನಡೆಯುವ ಸಸ್ಯೋತ್ಸವ, ಆಹಾರ ಮೇಳಕ್ಕೆ ಜನತೆಯ ಪ್ರೋತ್ಸಾಹ ಹೆಚ್ಚು ಬೇಕು ಎಂದು ಕಾರ್ಯಕ್ರಮಕ್ಕೆ ಶುಭಹಾರೈಸಿದರು.

    ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಬಾಳ ಜಗನ್ನಾಥ ಶೆಟ್ಟಿ ಅವರು, “ರೈತ ಕುಡ್ಲ ಪ್ರತಿಷ್ಠಾನ,ಬಂಟರ ಸಂಘ, ಲಯನ್ಸ್ ಕ್ಲಬ್ ಇದರ ಸಹಯೋಗದಲ್ಲಿ ಆಯೋಜನೆ ಮಾಡಿರುವ ಈ ಕಾರ್ಯಕ್ರಮಕ್ಕೆ ಒಳ್ಳೆಯ ರೆಸ್ಪಾನ್ಸ್ ಸಿಗುತ್ತಿದೆ. ಇಲ್ಲಿ ಜನರಿಗೆ ಕೈಗೆಟುಕುವ ಬೆಲೆಯಲ್ಲಿ ಬಟ್ಟೆಬರೆ, ಹೂವು ತರಕಾರಿ ಸಸ್ಯಗಳು, ತಿಂಡಿ ತಿನಿಸು, ನಾನಾ ಬಗೆಯ ಆಹಾರ ಖಾದ್ಯಗಳು ಸಿಗುತ್ತಿದೆ. ಎಲ್ಲರೂ ಆಗಮಿಸುವ ಮೂಲಕ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಬೇಕು“ ಎಂದರು.

    ಬಳಿಕ ಮಾತಾಡಿದ ಸುರತ್ಕಲ್ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಅಶೋಕ್ ಶೆಟ್ಟಿ ತಡಂಬೈಲ್ ಅವರು, “ರೈತ ಕುಡ್ಲ ಪ್ರತಿಷ್ಠಾನ ಒಂದು ಒಳ್ಳೆಯ ಕಾರ್ಯಕ್ರಮ ಹಮ್ಮಿಕೊಂಡಿದೆ. ಕಾರ್ಯಕ್ರಮ ಯಶಸ್ವಿಯಾಗಲು ಎಲ್ಲರ ಸಹಕಾರ ಬೇಕಿದೆ” ಎಂದರು.

    ಎಲ್ಲರ ಸಹಕಾರದಿಂದ ಕಾರ್ಯಕ್ರಮ ಯಶಸ್ಸು ಕಾಣಲಿ” ಎಂದು ಶುಭ ಹಾರೈಸಿದರು.

    ವೇದಿಕೆಯಲ್ಲಿ ಲಯನ್ಸ್ ಕ್ಲಬ್ ಸುರತ್ಕಲ್ ಇದರ ಅಧ್ಯಕ್ಷ ಜಯೇಶ್ ಗೋವಿಂದ್, ಸುರತ್ಕಲ್ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ, ಬಂಟರ ಸಂಘ ಸುರತ್ಕಲ್ ಮಹಿಳಾ ವೇದಿಕೆ ಅಧ್ಯಕ್ಷೆ ಸರೋಜಾ ಟಿ. ಶೆಟ್ಟಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಆಪದ್ಭಾಂಧವ ಸಂಘಟನೆಯ ಉಮೇಶ್ ಇಡ್ಯಾ, ರೈತಕುಡ್ಲ ಪ್ರತಿಷ್ಠಾನದ ಕಾರ್ಯದರ್ಶಿ ಲತೀಶ್ ಮಳಲಿ ಮತ್ತಿತರರು ಉಪಸ್ಥಿತರಿದ್ದರು.

    ಬಂಟರ ಸಂಘದ ಕೃಷಿ ಸಮಿತಿಯ ಸಂಚಾಲಕ ಸುಧಾಕರ ಶೆಟ್ಟಿ ಖಂಡಿಗೆ ಇವರನ್ನು ಸನ್ಮಾನಿಸಲಾಯಿತು.

    ರಾಜೇಶ್ವರಿ ಡಿ. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಲಯನ್ ರಾಜಯ್ಯ ವಂದಿಸಿದರು. ರೈತಕುಡ್ಲ ಪ್ರತಿಷ್ಠಾನದ ಅಧ್ಯಕ್ಷ ಭರತ್ ರಾಜ್ ಸೊರಕೆ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

    _Sathish Kapikad 

    Share. Facebook Twitter Pinterest LinkedIn Email WhatsApp
    Previous Articleಸೆಪ್ಟೆಂಬರ್ 27 ರಂದು ಕೇರಳದ ಕೊಚ್ಚಿಯಲ್ಲಿ ಕೇರಳ ಕರ್ನಾಟಕ ಜಾನಪದ ಉತ್ಸವ : ಕ್ರೀಡಾ ಅಂಕಣಕಾರ ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ಅವರಿಗೆ ಸಾಧಕ ರತ್ನ ಪ್ರಶಸ್ತಿ 
    Next Article ಸಮಾನತೆ ಸಂವಿಧಾನದ ಮೂಲ ಆಶಯ : ಭಾರತ ಸಂವಿಧಾನದ ಪೀಠಿಕೆ ಫಲಕ ಅನಾವರಣಗೊಳಿಸಿ ಶಾಸಕ ಅಶೋಕ್ ಕುಮಾರ್ ರೈ

    Related Posts

    ಕರಾವಳಿ

    ಸತತ ಸೋಲುಗಳ ಹತಾಶೆಯಿಂದ ಪ್ರಧಾನಿಗಳ ತಂದೆಯವರನ್ನು ನಿಂದನೆ ಮಾಡಿರುವ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆ ಅವರ ಹಿರಿತನಕ್ಕೆ ಶೋಭೆಯಲ್ಲ: ಶಾಸಕ ಕಾಮತ್ 

    October 27, 2026
    ಕರಾವಳಿ

    ನವಂಬರ್ 1ರಂದು ಸುರತ್ಕಲ್ ಬಂಟರ ಭವನದಲ್ಲಿ ರಂಗುರಂಗಿನ ರಂಗೋತ್ಸವ – ಸಂಗೀತ ಗಾನಸುಧೆ – ಶ್ರೀಮತಿ ಸತ್ಯಭಾಮ ನಾಟಕ : ಲಕ್ಷ್ಮಣ್ ಕುಮಾರ್ ಮಲ್ಲೂರ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ

    October 27, 2026
    ಕರಾವಳಿ

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.