Close Menu
SK Media NewsSK Media News
    What's Hot

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026

    ಮಂಗಳ ಕ್ರೀಡಾಂಗಣಕ್ಕೆ 20 ಕೋಟಿ ಅನುದಾನ : ಅಭಿವೃದ್ಧಿ ಯೋಜನೆ ಅನುಷ್ಠಾನದ ಬಗ್ಗೆ ಮೂಡಾ ಅಧ್ಯಕ್ಷರ ನೇತೃತ್ವದಲ್ಲಿ ಸಭೆ 

    October 25, 2026

    ಪೋಲಿಯೋ ಮುಕ್ತ ಸಮಾಜ ನಿರ್ಮಾಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸೇವೆ ಅನನ್ಯ: ರೋಟರಿ ಜಿಲ್ಲಾ ಗವರ್ನರ್ ಸತೀಶ್ ಬೋಳಾರ್

    October 25, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಬಂಟ ಕಲಾ ಸಂಗಮ: “ದಿನಪತ್ರಿಕೆ” ಕಥಾವಸ್ತು ಮೂಲಕ “ಸುರತ್ಕಲ್ ಬಂಟರ ಸಂಘ” ಪ್ರಸ್ತುತ ಪಡಿಸಿದ “ಉಳುವವನೇ ಭೂಮಿಯ ಒಡೆಯ” ರನ್ನರ್ಸ್ ಅಪ್
    ಕರಾವಳಿ

    ಬಂಟ ಕಲಾ ಸಂಗಮ: “ದಿನಪತ್ರಿಕೆ” ಕಥಾವಸ್ತು ಮೂಲಕ “ಸುರತ್ಕಲ್ ಬಂಟರ ಸಂಘ” ಪ್ರಸ್ತುತ ಪಡಿಸಿದ “ಉಳುವವನೇ ಭೂಮಿಯ ಒಡೆಯ” ರನ್ನರ್ಸ್ ಅಪ್

    September 27, 20262 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಸುರತ್ಕಲ್ : ಬಂಟರ ಯಾನೆ ನಾಡವರ ಮಾತೃಸಂಘ, ಶ್ರೀ ಸಿದ್ದಿ ವಿನಾಯಕ ಪ್ರತಿಷ್ಠಾನ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೇಲ್ ನಲ್ಲಿ ನಡೆದ “ಬಂಟ ಕಲಾ ಸಂಗಮ” ಸ್ಪರ್ಧೆಯಲ್ಲಿ ಸುರತ್ಕಲ್ ಬಂಟರ ಸಂಘ 75 ಸಾವಿರ ರೂಪಾಯಿ ನಗದಿನೊಂದಿಗೆ ದ್ವಿತೀಯ ಪ್ರಶಸ್ತಿಯನ್ನು ಪಡೆದುಕೊಂಡಿದೆ.

    ಸುರತ್ಕಲ್ ಬಂಟರ ಸಂಘವು ಪ್ರಸ್ತುತ ಪಡಿಸಿದ ವಿಷಯ “ದಿನಪತ್ರಿಕೆ”. 1942 ಜುಲೈ 1 ರಂದು ಮಂಗಳೂರಿನಲ್ಲಿ ಹುಟ್ಟಿಕೊಂಡ ಮಂಗಳೂರ ಸಮಾಚಾರ ಪತ್ರಿಕೆಯ ಮೂಲಕ ಕತೆ ತೆರೆದುಕೊಳ್ಳುತ್ತದೆ. ನಿರೂಪಕರು ಪತ್ರಿಕೆಯ ಪಾತ್ರಧಾರಿಯಾಗಿ 20 ನಿಮಿಷಗಳ ಕಾಲ ಪತ್ರಿಕೆ ಆಯಾಯ ಕಾಲಘಟ್ಟದಲ್ಲಿ ನಡೆದುಕೊಂಡು ಬಂದಿರುವ ವಿಚಾರವನ್ನು ಪ್ರೇಕ್ಷಕರ ಮುಂದಿಡುತ್ತಾರೆ.

    1974 ರಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿ ಜಾರಿಗೆ ತಂದ ಕಾನೂನು ಉಳುವವನೇ ಭೂಮಿಯ ಒಡೆಯ, ಈ ವಿಚಾರವನ್ನು ಇಟ್ಟುಕೊಂಡು ಕತೆಗೆ ಸ್ಪರ್ಷ ನೀಡಿದರು.

    ಭೂಮಿಯ ಒಡೆಯ ಇಂದಿರಾಗಾಂಧಿ ತಂದ ಕಾನೂನಿಂದ ಹೇಗೆ ಹತಾಶನಾಗುತ್ತಾನೆ ಮತ್ತೆ ಹೇಗೆ ಮೈಗೆಡವಿ ನಿಲ್ಲುತ್ತಾನೆ ಎನ್ನುವ ಸಂದೇಶ, ಸ್ವಾತಂತ್ರ ಪೂರ್ವದಲ್ಲಿ ಬ್ರಿಟಿಷರ ದಬ್ಬಾಳಿಕೆ, ಬಳಿಕ ಪತ್ರಿಕೆ ಕಪ್ಪು ಬಿಳುಪಿನಿಂದ ವರ್ಣರಂಜಿತವಾದದ್ದು, ಜನವರಿ 26 ಗಣರಾಜ್ಯೋತ್ಸವದ ಸಂಭ್ರಮ, ಯುವ ಸಮುದಾಯದ ದುಖ ದುಮ್ಮಾನ, ಕೊರೊನಾದಿಂದ ಹೈರಾಣಾಗುವ ಜನರು, ಬದಲಾಗುತ್ತಿರುವ ಕಾಲ ಘಟ್ಟದಲ್ಲಿ ಸೋಷಿಯಲ್ ಮೀಡಿಯಾಗಳಿಂದಾಗುವ ಪರಿಣಾಮ ಹೀಗೆ ಎಲ್ಲವನ್ನೂ ಪತ್ರಿಕೆ ಪಾತ್ರಧಾರಿಯ ಮೂಲಕ ಕತೆ ಹೇಳಿರುವುದು, ಇದೊಂದು ವಿಭಿನ್ನ ಕಥಾವಸ್ತು ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು.

    ಕಥಾವಸ್ತುವಿಗೆ ಪೂರಕವಾಗಿ ನೃತ್ಯ ಸಂಯೋಜನೆ, ಮೈಮ್ ಎಲ್ಲವೂ ಒಂದಕ್ಕೊಂದು ಜೋಡಣೆಯಾಯಿತು. ಕಥಾವಸ್ತುವಿನ ನಿರ್ದೇಶಕಿ ರಾಜೇಶ್ವರಿ ಡಿ ಶೆಟ್ಟಿ ಪತ್ರಿಕೆಯ ಪಾತ್ರಧಾರಿಯಾಗಿ ಗಮನ ಸೆಳೆದರು.

    ಸಂಘದ ಮಾಜಿ ಅಧ್ಯಕ್ಷರಾದ ಉಲ್ಲಾಸ್ ಆರ್ ಶೆಟ್ಟಿ ಪೆರ್ಮುದೆ ಅವರ ಮಾರ್ಗದರ್ಶನದಲ್ಲಿ ರಾಜೇಶ್ವರಿ ಡಿ ಶೆಟ್ಟಿ ಕತೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ.

    ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಸಿದ್ದಿವಿನಾಯಕ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ಕೆ ಅಜಿತ್ ಕುಮಾರ್ ರೈ ಮಾಲಾಡಿ, ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಜಯಶೀಲ ಅಡ್ಯಂತಾಯ ಅಡ್ಯಾರ್ ಗುತ್ತು, ಪ್ರಶಸ್ತಿ ವಿತರಿಸಿದರು.

    ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಬಾಳ ಜಗನ್ನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ, ಉಪಾಧ್ಯಕ್ಷ ಪ್ರವೀಣ್ ಶೆಟ್ಟಿ, ಕೋಶಾಧಿಕಾರಿ ರತ್ನಾಕರ ಶೆಟ್ಟಿ, ಮಹಿಳಾ ವೇದಿಕೆಯ ಅಧ್ಯೆಕ್ಷೆ ಸರೋಜ ಟಿ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿ ದೇವೇಂದ್ರ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಪುಷ್ಪರಾಜ್ ಶೆಟ್ಟಿ ಕುಡುಂಬೂರು, ಮಹಿಳಾ ವಿಭಾಗದ ಸಾಂಸ್ಕೃತಿಕ ಕಾರ್ಯದರ್ಶಿ ಆಶಾಕಿರಣ್ ಪ್ರಸಾದ್ ರೈ, ನಿರ್ದೇಶಕಿ ರಾಜೇಶ್ವರಿ ಡಿ ಶೆಟ್ಟಿ ಪ್ರಶಸ್ತಿ ಸ್ವೀಕರಿಸಿದರು.

    _Sathish Kapikad 

    Share. Facebook Twitter Pinterest LinkedIn Email WhatsApp
    Previous Articleವಾಮಂಜೂರು: 5ನೇ ವರ್ಷದ ಶಾರದಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
    Next Article   ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    Related Posts

    ಕರಾವಳಿ

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026
    ಕರಾವಳಿ

    ಮಂಗಳ ಕ್ರೀಡಾಂಗಣಕ್ಕೆ 20 ಕೋಟಿ ಅನುದಾನ : ಅಭಿವೃದ್ಧಿ ಯೋಜನೆ ಅನುಷ್ಠಾನದ ಬಗ್ಗೆ ಮೂಡಾ ಅಧ್ಯಕ್ಷರ ನೇತೃತ್ವದಲ್ಲಿ ಸಭೆ 

    October 25, 2026
    ಕರಾವಳಿ

    ಪೋಲಿಯೋ ಮುಕ್ತ ಸಮಾಜ ನಿರ್ಮಾಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸೇವೆ ಅನನ್ಯ: ರೋಟರಿ ಜಿಲ್ಲಾ ಗವರ್ನರ್ ಸತೀಶ್ ಬೋಳಾರ್

    October 25, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.