Close Menu
SK Media NewsSK Media News
    What's Hot

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026

    ಮಂಗಳ ಕ್ರೀಡಾಂಗಣಕ್ಕೆ 20 ಕೋಟಿ ಅನುದಾನ : ಅಭಿವೃದ್ಧಿ ಯೋಜನೆ ಅನುಷ್ಠಾನದ ಬಗ್ಗೆ ಮೂಡಾ ಅಧ್ಯಕ್ಷರ ನೇತೃತ್ವದಲ್ಲಿ ಸಭೆ 

    October 25, 2026

    ಪೋಲಿಯೋ ಮುಕ್ತ ಸಮಾಜ ನಿರ್ಮಾಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸೇವೆ ಅನನ್ಯ: ರೋಟರಿ ಜಿಲ್ಲಾ ಗವರ್ನರ್ ಸತೀಶ್ ಬೋಳಾರ್

    October 25, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಮಂಗಳೂರಿನಲ್ಲಿ ಅ.4ರಂದು ನಾದ ನಂದನಂ’ ಭಜನಾ ಸಂಕೀರ್ತನೋತ್ಸವ :ಕರ್ನಾಟಕದಲ್ಲಿ ಪ್ರಪ್ರಥಮ ಬಾರಿಗೆ ಸಂಗೀತದ ವಿಭಿನ್ನ ಪ್ರಸ್ತುತಿ 
    ಕರಾವಳಿ

    ಮಂಗಳೂರಿನಲ್ಲಿ ಅ.4ರಂದು ನಾದ ನಂದನಂ’ ಭಜನಾ ಸಂಕೀರ್ತನೋತ್ಸವ :ಕರ್ನಾಟಕದಲ್ಲಿ ಪ್ರಪ್ರಥಮ ಬಾರಿಗೆ ಸಂಗೀತದ ವಿಭಿನ್ನ ಪ್ರಸ್ತುತಿ 

    September 28, 20262 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ‘ನಾದ ನಂದನಂ’ ಭಜನಾ ಸಂಕೀರ್ತನೋತ್ಸವ ಪಾಸ್ ಗಳನ್ನೂ ಪ್ರದೀಪ್ ಕುಮಾರ್ ಕಲ್ಕೂರ, ಮುಲ್ಕಿ ರವೀಂದ್ರ ಪ್ರಭು, ರಮೇಶ್ ಚಂದ್ರ, ಜಗನ್ನಾಥ್ ಶಿರ್ಲಾಲು ಹಾಗೂ ಎಸ್.ಎಲ್. ಭಾರದ್ವಾಜ್ ಪತ್ರಿಕಾ ಭವನದಲ್ಲಿ ಬಿಡುಗಡೆ ಗೊಳಿಸಿದರು.

    ಮಂಗಳೂರು, ಸೆ. 28: ಕನ್ನಡ ನಾಡು-ನುಡಿ, ಸಂಸ್ಕೃತಿ ಹಾಗೂ ಸಾಹಿತ್ಯವನ್ನು ಸಂಗೀತದ ಮೂಲಕ ಜನರಿಗೆ ತಲುಪಿಸುವ ಉದ್ದೇಶದಿಂದ ಮಂಗಳೂರಿನಲ್ಲಿ ನೋಂದಾಯಿತವಾಗಿರುವ ‘ನಾದ ನಂದನಂ’ (ರಿ.) ಸಂಸ್ಥೆಯ ಪ್ರಥಮ ಭಜನಾ-ಸಂಕೀರ್ತನೋತ್ಸವ ಹಾಗೂ ಉದ್ಘಾಟನಾ ಸಮಾರಂಭ ಅಕ್ಟೋಬರ್ 4ರಂದು ಸಂಜೆ 5 ಗಂಟೆಗೆ ಉರ್ವಾ ಸ್ಟೋರ್‌ನ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ.

    ಕಾರ್ಯಕ್ರಮದ ಕುರಿತು ಸೋಮವಾರ ಮಂಗಳೂರಿನ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ಮಾರ್ಗದರ್ಶಕ ಪ್ರದೀಪ್ ಕುಮಾರ್ ಕಲ್ಕೂರ ಮಾಹಿತಿ ನೀಡಿದರು.

    ಕರ್ನಾಟಕವನ್ನು ಕೇಂದ್ರವಾಗಿರಿಸಿಕೊಂಡು ರೂಪುಗೊಂಡಿರುವ ‘ನಾದ ನಂದನಂ’ ಸಂಸ್ಥೆಯು ಸಂಗೀತದ ಮೂಲಕ ಕನ್ನಡ ನಾಡು-ನುಡಿ, ಸಂಸ್ಕೃತಿ ಹಾಗೂ ಸಾಹಿತ್ಯವನ್ನು ಜನರಿಗೆ ಪರಿಚಯಿಸುವ ಉದ್ದೇಶ ಹೊಂದಿದೆ.

    ಸಂಸ್ಥೆಯ ಮೊದಲ ಕಾರ್ಯಕ್ರಮದಲ್ಲಿ ಭಕ್ತಿ ಗೀತೆ, ಭಾವಗೀತೆ, ಜಾನಪದ ಗೀತೆ, ಚಲನಚಿತ್ರ ಗೀತೆಗಳೊಂದಿಗೆ ಪುರಂದರದಾಸ, ಕನಕದಾಸ, ಬಸವಣ್ಣ ಹಾಗೂ ಶರಣರ ತತ್ವಪದಗಳನ್ನು ವಿವಿಧ ಸಂಗೀತ ಪ್ರಕಾರಗಳಲ್ಲಿ ಪ್ರಸ್ತುತಪಡಿಸಲಾಗುವುದು.

    ಖ್ಯಾತ ಚಲನಚಿತ್ರ ಹಿನ್ನೆಲೆ ಗಾಯಕರಾದ ಶಂಕರ ಶ್ಯಾನುಭೋಗ್ ಹಾಗೂ ಮೂರು ಬಾರಿ ರಾಜ್ಯ ಪ್ರಶಸ್ತಿ ಪಡೆದಿರುವ ರಮೇಶ್ ಚಂದ್ರ, ಬೆಂಗಳೂರು ಅವರ ನೇತೃತ್ವದಲ್ಲಿ 19 ಕಲಾವಿದರ ತಂಡ ಕಾರ್ಯಕ್ರಮವನ್ನು ಪ್ರಸ್ತುತಪಡಿಸಲಿದೆ.

    ‘ನಾದ ನಂದನಂ’ ಸಂಸ್ಥೆಯನ್ನು ಖ್ಯಾತ ಗಾಯಕ ಶಂಕರ ಶ್ಯಾನುಭೋಗ್ ಅವರು ನಂದಾದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಿದ್ದಾರೆ. ಮುಂದಿನ ದಿನಗಳಲ್ಲಿ ಸಂಸ್ಥೆಯ ನೇತೃತ್ವದಲ್ಲಿ ದೇಶ-ವಿದೇಶಗಳಲ್ಲಿಯೂ ಭಜನಾ-ಸಂಕೀರ್ತನೋತ್ಸವ ಹಾಗೂ ವಿವಿಧ ಸಂಗೀತ ಕಾರ್ಯಕ್ರಮಗಳನ್ನು ಆಯೋಜಿಸುವ ಉದ್ದೇಶವಿದೆ ಎಂದು ಸಂಘಟಕ ಎಸ್.ಎಲ್. ಭಾರದ್ವಾಜ್ ತಿಳಿಸಿದರು.

    ಭಕ್ತಿ, ಭಾವ, ಜಾನಪದ ಹಾಗೂ ಚಿತ್ರಗೀತೆಗಳ ಸಂಗಮದೊಂದಿಗೆ ಬಹುಭಾಷಾ ಹಾಡುಗಳನ್ನು ಪ್ರಸ್ತುತಪಡಿಸುವುದು ಕಾರ್ಯಕ್ರಮದ ವಿಶೇಷತೆಯಾಗಿದೆ. ಪಕ್ವ ಹಾಡುಗಾರರು, ನುರಿತ ಸಂಗೀತಗಾರರು, ಎಲ್‌ಇಡಿ ಪರದೆ, ವಿಶೇಷ ಧ್ವನಿ ಮತ್ತು ಬೆಳಕಿನ ರಂಗ ವಿನ್ಯಾಸದೊಂದಿಗೆ ಕಾರ್ಯಕ್ರಮ ನಡೆಯಲಿದೆ.

    ‘ನಾದ ನಂದನಂ’ ಸಂಸ್ಥೆಯ ಉದ್ಘಾಟನಾ ಸಮಾರಂಭದಲ್ಲಿ ಮೂಡುಬಿದಿರೆಯ ಆಳ್ವಾಸ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ಉಡುಪಿಯ ಶ್ಯಾಮಿಲಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ. ಜಿ. ಶಂಕರ್, ಕರ್ನಾಟಕ ಬ್ಯಾಂಕ್‌ನ ಆಡಳಿತ ನಿರ್ದೇಶಕ ರಾಘವೇಂದ್ರ ಭಟ್, ಅಬುಧಾಬಿ ಕರ್ನಾಟಕ ಸಂಘದ ಅಧ್ಯಕ್ಷ ಬಿ. ಸರ್ವೋತ್ತಮ ಶೆಟ್ಟಿ ಸೇರಿದಂತೆ ಬ್ಯಾಂಕಿಂಗ್, ಸಾಂಸ್ಕೃತಿಕ ಹಾಗೂ ಉದ್ಯಮ ಕ್ಷೇತ್ರಗಳ ಗಣ್ಯರು ಭಾಗವಹಿಸಲಿದ್ದಾರೆ.

    ಉಚಿತ ಪಾಸ್ ಲಭ್ಯ:

    ಕಾರ್ಯಕ್ರಮದ ಉಚಿತ ಪಾಸ್‌ಗಳು ಮಂಗಳೂರಿನ ಓಷನ್ ಪರ್ಲ್ (ನವಭಾರತ್ ಸರ್ಕಲ್), ತಾಜ್ ಮಹಲ್, ಪತ್ತುಮುಡಿ (ಲಾಲ್‌ಬಾಗ್), ಅಯೋಧ್ಯಾ (ಕೊಡಿಯಾಲ್‌ಬೈಲ್) ಹಾಗೂ ಪದ್ಮಶ್ರೀ (ಪಂಪ್‌ವೆಲ್) ಹೋಟೆಲ್‌ಗಳ ಕೌಂಟರ್‌ಗಳಲ್ಲಿ ಲಭ್ಯವಿರುತ್ತವೆ. ಪಾಸ್ ಪಡೆಯಲು ಹೆಸರು ಹಾಗೂ ಮೊಬೈಲ್ ಸಂಖ್ಯೆಯನ್ನು ನೋಂದಾಯಿಸಬೇಕಾಗಿದೆ.

    ಸಂಗೀತಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ‘ನಾದ ನಂದನಂ’ ಸಂಸ್ಥೆಯ ಈ ಹೊಸ ಪ್ರಯತ್ನಕ್ಕೆ ಪ್ರೋತ್ಸಾಹ ನೀಡುವಂತೆ ಎಸ್.ಎಲ್. ಭಾರದ್ವಾಜ್ ಮನವಿ ಮಾಡಿದ್ದಾರೆ.

    ಪತ್ರಿಕಾಗೋಷ್ಠಿಯಲ್ಲಿ ಖ್ಯಾತ ಗಾಯಕ ಮುಲ್ಕಿ ರವೀಂದ್ರ ಪ್ರಭು, ಖ್ಯಾತ ಹಿನ್ನೆಲೆ ಗಾಯಕ ರಮೇಶ್ ಚಂದ್ರ, ಜಗನ್ನಾಥ್ ಶಿರ್ಲಾಲು ಹಾಗೂ ಎಸ್.ಎಲ್. ಭಾರದ್ವಾಜ್ ಉಪಸ್ಥಿತರಿದ್ದರು.

    ಸಂಪರ್ಕ:
    ಎಸ್.ಎಲ್. ಭಾರದ್ವಾಜ್
    ನಾದ ನಂದನಂ (ರಿ.), ಮಂಗಳೂರು
    ಮೊಬೈಲ್: 9880924411

     

    _Sathish Kapikad 

    Share. Facebook Twitter Pinterest LinkedIn Email WhatsApp
    Previous Articleಮಂಗಳೂರಿನಲ್ಲಿ ಸುಸಜ್ಜಿತ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ : ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಶ್ರೀ ವೆಂಕಟೇಶ್ ಪ್ರಸಾದ್ ರವರೊಂದಿಗೆ ಮೂಡ ಅಧ್ಯಕ್ಷ ಶ್ರೀ ಸಂತೋಷ್ ಕುಮಾರ್ ಶೆಟ್ಟಿ ಮಹತ್ವದ ಚರ್ಚೆ
    Next Article ಚರಣ್ ಜೆ ಶೆಟ್ಟಿ ಕುಳಾಯಿಗುತ್ತು. ಅವರು ಸುರತ್ಕಲ್ ಅಗರಮೇಲು ಜಾರಂದಾಯ ದೈವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ ಆಯ್ಕೆ 

    Related Posts

    ಕರಾವಳಿ

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026
    ಕರಾವಳಿ

    ಮಂಗಳ ಕ್ರೀಡಾಂಗಣಕ್ಕೆ 20 ಕೋಟಿ ಅನುದಾನ : ಅಭಿವೃದ್ಧಿ ಯೋಜನೆ ಅನುಷ್ಠಾನದ ಬಗ್ಗೆ ಮೂಡಾ ಅಧ್ಯಕ್ಷರ ನೇತೃತ್ವದಲ್ಲಿ ಸಭೆ 

    October 25, 2026
    ಕರಾವಳಿ

    ಪೋಲಿಯೋ ಮುಕ್ತ ಸಮಾಜ ನಿರ್ಮಾಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸೇವೆ ಅನನ್ಯ: ರೋಟರಿ ಜಿಲ್ಲಾ ಗವರ್ನರ್ ಸತೀಶ್ ಬೋಳಾರ್

    October 25, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.